Breaking News

ರಾಜ್ಯ

ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ …

Read More »

ಮಹಾಮಾರಿ ಕೊರೊನಾ ವೈರಸ್‍ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು,…..

 ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು, ಇದರ ಹಿಂದಿನ ಅಸಲಿಯತ್ತು ಇದೀಗ ಬಯಲಾಗಿದೆ. ವಯಸ್ಸಾಗಿದೆ ಅಂತ ವೃದ್ಧರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಐಸೂಲೇಷನ್ ವಾರ್ಡಿನಲ್ಲಿ ವೃದ್ಧರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾಗೆ ಹೆಚ್ಚಾಗಿ ವೃದ್ಧರೇ ಬಲಿಯಾಗಿತ್ತಿದ್ದಾರೆ ಎಂಬ ಎಕ್ಸ್ ಕ್ಲೂಸೀವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾಯುವುದಕ್ಕೂ ಮುನ್ನ ಕುಟುಂಬಸ್ಥರ ಜೊತೆ ಚಿಕ್ಕಬಾಣಾವರದ ವೃದ್ಧೆಯೊಬ್ಬರು ತನ್ನ ಅಳಲು ತೋಡಿಕೊಂಡಿದ್ದಾರೆ. ಕುಟುಂಬದ ಮಗಳು, ಮೊಕ್ಕಳಿಗೆ …

Read More »

ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …

Read More »

ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು

ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ   ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ …

Read More »

ವಿಶ್ವನಾಥ್ ತಾಳ್ಮೆಯಿಂದ ಇದ್ದರೆ ಮುಂದೆ ಒಳ್ಳೆಯ ಭವಿಷ್ಯವಿದೆ: ನಾಗೇಶ್

ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು …

Read More »

ಬೆಳಗಾವಿಯಲ್ಲಿ ಮಾಸ್ಕ್ ಡೇ ಆಚರಣೆ

ಮಾಸ್ಕ್ ಧರಿಸಿ ಕರೋನಾದಿಂದ ದೂರವಿರಿ! ಇಂದು ಬೆಳಗಾವಿಯ ಅಶೋಕ ಸರ್ಕಲ್ ನಿಂದ ರಾಣಿ ಚೆನ್ನಮ್ಮ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಕೊವಿಡ್ 19 ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಜನರಿಗೆ ಮಾಸ್ಕ್ ವಿತರಿಸಲಾಯಿತು. ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿನ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ! ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ ಬಿ ಬೊಮ್ಮನಹಳ್ಳಿ, ಕೊವಿಡ್ 19 ವಿಶೇಷ …

Read More »

ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…

; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …

Read More »

ಜಿಂದಾಲ್ ಕಾರ್ಖಾನೆಯಲ್ಲಿ ಕೊರೊನಾ ರಣಕೇಕೆ – ಸೋಂಕು ತಡೆಗೆ ಸಪ್ತ ಸೂತ್ರ………

ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …

Read More »

ಖಾಲಿ ಕಪ್‍ನಿಂದ ಏನೂ ಆಗಲ್ಲ, ಮೊದ್ಲು ನೀವ್ ಚೆನ್ನಾಗಿರಿ- ನಿತ್ಯಾ ಮೆನನ್

ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಲಾಕ್‍ಡೌನ್ ದಿನಗಳನ್ನು ಫೋಟೋ ಶೂಟ್ ಮೂಲಕ ಕಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಅಪ್‍ಡೇಟ್ ನೀಡುತ್ತಿದ್ದಾರೆ. ಇದೀಗ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್‍ವುಡ್‍ನಲ್ಲಿ ನಟಿಸಿದ್ದು ಕೆಲವೇ ಚಿತ್ರಗಳಾದರೂ ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುತ್ತಾರೆ. ಕೇರಳ ಮೂಲದವರಾದರೂ ಕನ್ನಡದ ನಟಿಯರನ್ನೇ ನಾಚಿಸುವಂತೆ ಮಾತನಾಡುತ್ತಾರೆ, ಹಾಡು ಹೇಳುತ್ತಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿರುವ ನಿತ್ಯಾ …

Read More »

ಯುಟ್ಯೂಬ್‍ನಿಂದ ದಿಢೀರ್ ಡಿಲೀಟ್ ಆಯ್ತು ಚಂದನವನ ತಾರೆಯರೆಲ್ಲ ಅಭಿನಯಿಸಿದ್ದ ಹಾಡು

ಬೆಂಗಳೂರು: ಇತ್ತೀಚೆಗೆ ಬದಲಾಗು ನೀನು ಬದಲಾಯಿಸು ನೀನು ಹಾಡಿನ ಮೂಲಕ ಸ್ಯಾಂಡಲ್‍ವುಡ್ ಎಲ್ಲ ತಾರೆಯರು ಸೇರಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ್ದ ಹಾಡನ್ನು ಪವರ್ ಓಡೆಯರ್ ನಿರ್ದೇಶನ ಮಾಡಿದ್ದರು. ಎಲ್ಲ ಕಲಾವಿದರ ಮನೆಗೆ ಹೋಗಿ ಹಾಡನ್ನು ಚಿತ್ರೀಕರಣ ಮಾಡಿದ್ದರು. ಅಂತಯೇ ಜೂನ್ 5ರಂದು ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ದಿ ಬೀಟ್ ಆಡಿಯೋದಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಆದರೆ ಈಗ ಏಕಾಏಕಿ ಬದಲಾಗು …

Read More »