Breaking News

ರಾಜ್ಯ

ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ರಾಜೇಗೆ ಕೊರೊನಾ ಸೋಂಕು…….

ಭೋಪಾಲ್: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಐದು ದಿನಗಳ ಹಿಂದೆ ಗ್ವಾಲಿಯರ್ ನಲ್ಲಿ ಸಿಂಧಿಯಾ, ತಾಯಿ ಮಾಧವಿ ರಾಜೇ, ಪತ್ನಿ ಪ್ರಿಯದರ್ಶಿನಿ, ಮಗಳು ಅನನ್ಯಾ …

Read More »

10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ

ಹೈದರಾಬಾದ್​: ದೇಶಾದ್ಯಂತ ಕೊರೊನಾ ವೈರಸ್​ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ. ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ನಿರ್ಧರಿಸಿದ್ದಾಗಿ ಇಲ್ಲಿನ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಸಿನಿಮಾ, …

Read More »

ಶಿವಮೊಗ್ಗಕ್ಕೆ ಬಿಎಸ್‍ವೈಯಿಂದ ಸಿಹಿಸುದ್ದಿ- ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾರ್ಖಾನೆಗೆ ಹೊಸ ಕಾಯಕಲ್ಪ

ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, …

Read More »

ಕೊರೊನಾ ಅಲ್ಲ, ಇದು ಪ್ರೀತಿಯ ಸೋಂಕು- ವಿಭಿನ್ನ ಲಗ್ನ ಪತ್ರಿಕೆ .. ವೈರಲ್

ಶಿವಮೊಗ್ಗ: ಕೊರೊನಾ ಸೋಂಕಲ್ಲ, ಇದು ಪ್ರೀತಿಯ ಸೋಂಕು ಎಂದು ವರನೋರ್ವ ವಿಶೇಷವಾಗಿ ಲಗ್ನ ಪತ್ರಿಕೆಯೊಂದನ್ನು ಮುದ್ರಿಸಿದ್ದು, ಈ ಪತ್ರಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯುವಕ ವಿನೋದ್ ಇದೇ ತಿಂಗಳ ಜೂ. 15ರಂದು ಚಂದನಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಇವರ ವಿವಾಹಕ್ಕೆ ವರ ವಿನೋದ್ ವಿಭಿನ್ನವಾದ ಲಗ್ನ ಪತ್ರಿಕೆ ಮಾಡಿಸಿದ್ದು, ಇದರಲ್ಲಿ ನಿಶ್ಚಿತಾರ್ಥವನ್ನು ಲಾಕ್‍ಡೌನ್‍ಗೆ ಮತ್ತು ಮದುವೆಯನ್ನು ಸೀಲ್‍ಡೌನ್‍ಗೆ ಹೋಲಿಸಲಾಗಿದೆ. ಈ ಪತ್ರಿಕೆಯ …

Read More »

ಮಹಾರಾಷ್ಟ್ರದಲ್ಲಿ ಮಳೆ ಆರಂಭ ; ಜೂನ್ ಮೊದಲ ವಾರದಲ್ಲಿಯೇ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ದಾಖಲು

ವಿಜಯಪುರ(ಜೂ. 06): ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ನೀರಿನ ಒಳಹರಿವು ಆರಂಭವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಜೂನ್ ಮೊದಲ ವಾರದಲ್ಲಿ ನೀರಿನ ಒಳಹರಿವು ಆರಂಭವಾಗಿದ್ದು ಗಮನಾರ್ಹವಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ನಿನ್ನೆಯಿಂದಲೇ ನೀರಿನ ಒಳಹರಿವು ಆರಂಭವಾಗಿದೆ. ನಿನ್ನೆ 12,761 ಕ್ಯೂಸೆಕ್ಸ್ ನೀರಿನ ಒಳಹರಿವು …

Read More »

ಗೋಕಾಕ ನಗರದಲ್ಲಿ ರಮೇಶ್ ಜಾರಕಿಹೊಳಿಕೆಲವು ಮಹತ್ವ ವಿಷಯ ಗಳ ಬಗ್ಗೆ ಚರ್ಚೆ…………….

    ಗೋಕಾಕ :ಇಂದು ಗೋಕಾಕ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ನಗರ ಅಭಿವೃದ್ಧಿಗೆ ಹೆಚ್ಚಿನ್ ಒತ್ತು: ಈಗಾಗಲೇ ನಗರಸಭೆ ಅಧಿಕಾರಿಗಳ ಮತ್ತು ಸದಸ್ಯರ ಸಭೆ ನಡೆಯಿಸಿ ನಗರದ ಸಮಗ್ರ ಅಭಿವೃದ್ಧಿಯನ್ನು ತ್ವರಿತವಾಗಿ ಮುಗಿಸಲು ಸೂಚಿಸಲಾಗಿದೆ ಆದಷ್ಟು ಬೇಗ ನಗಯದಲ್ಲಿ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವದು ಎಂದು ರಮೇಶ ಜಾರಕಿಹೊಳಿ ಹೇಳಿದರು ನಗರಸಭೆ ಅಧಿಕಾರಿಗಳು ಕಛೇರಿಗೆ ಬಂದ ಸಾರ್ವಜನಿಕ ರೊಂದಿಗೆ ಸರಿಯಾಗಿ ವರ್ತಿಸದೆ ಸತಾಯಿಸುತ್ತಿದ್ದಾರೆ ಎಂದು ಪತ್ರಕರ್ತರು …

Read More »

ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿ, ಬೆಳಗಾವಿ 36,….ಪಾಸಿಟಿವ್ ಪ್ರಕರಣಗಳು…..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಕಬಂಧಬಾಹುಗಳನ್ನು ವಿಸ್ತರಗೊಳಿಸುತ್ತಿದ್ದು, ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿಯಾಗಿದೆ. ಅದರಲ್ಲೂ ಕಳೆದ 3 ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಉಡುಪಿಯಲ್ಲಿ ಇಂದು ಕೂಡ 204 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 4835ಕ್ಕೇರಿದೆ. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ ಕಲಬುರಗಿ 42, ಬೆಂಗಳೂರು ನಗರ 10, ಯಾದಗಿರಿ 74, ಮಂಡ್ಯ …

Read More »

ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ಪೊಲೀಸರ ಮೇಲೆ ಹಲ್ಲೆ…….

ಜೈಪುರ್: ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ. ಜೋಧ್‍ಪುರದ ಬಾಲ್‍ದೇವ್ ನಗರ ನಿವಾಸಿ ಮುಖೇಶ್ ಕುಮಾರ್ ಪ್ರಜಾಪತ್ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ. ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮುಖೇಶ್ ಕುಮಾರ್ ಮಾಸ್ಕ್ ಧರಿಸದೆ ಸಾರ್ವಜನಿಕ ಪ್ರದೇಶದಲ್ಲಿ ಕುಳಿತ್ತಿದ್ದ. ಆತನನ್ನು ಗಮನಿಸಿದ ಪೊಲೀಸರು ಮಾಸ್ಕ್ ಧರಿಸು ಹಾಗೂ ದಂಡ ಪಾವತಿಸು …

Read More »

ಶಂಕರ ಬಿದರಿಗೆ ಪರಿಷತ್ ಟಿಕೆಟ್ ನೀಡಲು ಮನವಿ

ಬೆಂಗಳೂರು, ಜೂ.4- ನಿವೃತ್ತ ಡಿಜಿಪಿ ಶಂಕರ ಬಿದರಿ ಅವರನ್ನು ರಾಜ್ಯಸಭೆ ಹಾಗೂ ವಿಧಾನ ಪರಿಷತ್‍ಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ. ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಶಂಕರ ಬಿದರಿಯವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸುಮಾರು …

Read More »

ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಕೊರೊನಾ ಪಾಸಿಟಿವ್..!

ನವದೆಹಲಿ, ಜೂ.4- ಭಾರತದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್‌ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಜಯ್ ಕುಮಾರ್ ವರದಿ ನೆಗೆಟಿವ್ ಬರುವವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇದರ ಬಗ್ಗೆ ಮಾಹಿತಿ ನೀಡಿಲು ಕೇಂದ್ರ …

Read More »