ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ …
Read More »ಇನ್ಮುಂದೆ ಸೀಲ್‍ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಸುಧಾಕರ್
ಉಡುಪಿ: ಸೀಲ್‍ಡೌನ್, ಕಂಟೈನ್ಮೆಂಟ್ ಝೋನ್ ಅನ್ನು ರದ್ದು ಮಾಡಿ, ಇನ್ನು ಮುಂದೆ ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ ಪ್ಲಾನ್ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಉಡುಪಿಯಲ್ಲಿ ಜಿಲ್ಲಾಮಟ್ಟದ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಅವಧಿ 7 ದಿನಕ್ಕೆ ಮೊಟಕು ಮಾಡಲಾಗಿದೆ. ಸಾವಿರಾರು ಜನರನ್ನು ಕ್ವಾರಂಟೈನ್ ಮಾಡುವುದು ಕಷ್ಟ. ಕಂಟೈನ್ಮೆಂಟ್ ಝೋನ್‍ನ …
Read More »ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಕಣ್ಸನ್ನೆ ಬೆಡಗಿ-
ಚೆನ್ನೈ: ತನ್ನ ಕಣ್ಸನ್ನೆ ಮೂಲಕವೇ ಇಡೀ ದೇಶದಲ್ಲಿ ತಲ್ಲಣ ಸೃಷ್ಟಿಸಿ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ದಿಢೀರನೇ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಿದ್ದರು. ಇದೀಗ ಪ್ರಿಯಾ ವಾರಿಯರ್ ಮತ್ತೆ ಇನ್ಸ್ಟಾಗ್ರಾಮ್ ಖಾತೆಯನ್ನು ಆಕ್ವೀವ್ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಪ್ರಿಯಾ ಕಣ್ಸನ್ನೆ ಮೂಲಕವೇ ಬಾಲಿವುಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಆಫರ್ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ ನಟಿಯಾಗಿದ್ದರು. ಆದ್ರೆ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಿಂದ ಅಂತರ …
Read More »ಜೀವದ ಹಂಗು ತೊರೆಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ……….
ಮೂಡಲಗಿ : ದು ಜನರಿಕೊರೊನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ನೀಡುವುದು ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು …
Read More »ನಾನು ನನ್ನ ಮಕ್ಕಳನ್ನು ಶಾಲೆಗೆ ಕಳಿಸಲ್ಲ’- ಪೋಷಕರಿಂದ ಅಭಿಯಾನ…..
ಬೆಂಗಳೂರು: ಕೊರೊನಾ ಸ್ಫೋಟದ ನಡುವೆ ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ಇದೀಗ ಮಕ್ಕಳ ಪೋಷಕರು ಆಭಿಯಾನ ಆರಂಭಿಸಿದ್ದಾರೆ. ನನಗೆ ನನ್ನ ಮಕ್ಕಳ ಶಿಕ್ಷಣಕ್ಕಿಂತ ಆರೋಗ್ಯ ಮುಖ್ಯ. ನನ್ನ ಮಕ್ಕಳನ್ನು ನಾನು ಶಾಲೆಗೆ ಕಳುಹಿಸಲ್ಲ. ಈ ಶೈಕ್ಷಣಿಕ ವರ್ಷ 2020 -21 ರಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಲ್ಲ ಎಂದು ಅಭಿಯಾನದ ಮೂಲಕ ಪೋಷಕರು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ವಾಟ್ಸಾಪ್ ಸ್ಟೇಟಸ್ …
Read More »ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ
ತಿರುವನಂತಪುರಂ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಿಂದ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಹೀಗಾಗಿ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಆದರೆ ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ವಾಲಂಚೇರಿ ಪಟ್ಟಣದ ನಿವಾಸಿ 14 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೃತ ವಿದ್ಯಾರ್ಥಿನಿ ಕುಟುಂಬದವರು ಬಡವರಾಗಿದ್ದು, ಯಾವುದೇ ಟಿವಿ ಅಥವಾ ಸ್ಮಾರ್ಟ್ ಫೋನ್ …
Read More »ಗೋವಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ತಗ್ಗು ಪ್ರದೇಶಗಳು ಜಲಾವೃತ..!
ಪಣಜಿ, ಜೂ.3-ಅರಬ್ಬೀ ಸಮುದ್ರದಲ್ಲಿ ನಿಸರ್ಗ ಚಂಡಮಾರುತದ ಆರ್ಭಟದಿಂದ ವಾಯುಭಾರ ಕುಸಿತವಾಗಿದ್ದು, ಗೋವಾದಲ್ಲಿ ಇಂದು ಮುಂಜಾನೆಯಿಂದಲೇ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಹಸ್ರಾರು ಮಂದಿ ಸಂತ್ರಸ್ತರಾಗಿದ್ದಾರೆ. ಗೋವಾ ಕರಾವಳಿ ಪ್ರದೇಶದ ಸಮುದ್ರ ಭಾಗವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಸಾಗರಕ್ಕೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸ್ಪಷ್ಟ ಸೂಚನೆ ನೀಡಿದೆ.ಪ್ರಬಲ ಗಾಳಿಯಿಂದ ಕೂಡಿದ ಧಾರಾಕಾರ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ತೀವ್ರ ತೊಂದರೆಗೆ …
Read More »ಕರಾವಳಿಯಲ್ಲಿ ಕೆರಳಿ ಕನಲಿದ ನಿಸರ್ಗ ಚಂಡಮಾರುತ………….
ಬೆಂಗಳೂರು: ನಿಸರ್ಗ ಚಂಡಮಾರುತದ ಎಫೆಕ್ಟ್ ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲೆಯಲ್ಲಿ ಇಂದು ಸಹ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಮಂಗಳೂರಿಗೆ ಆಗಮಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದ ಎಫೆಕ್ಟ್ ರಾಜ್ಯದ ಕರಾವಳಿಗೂ ತಟ್ಟಿದೆ. ಸಮುದ್ರದಲ್ಲಿ ಗಂಟೆಗೆ 70ರಿಂದ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ …
Read More »ಜೂನ್ 8ರಿಂದ ತಿರುಪತಿ ತಿಮ್ಮಪ್ಪನ ದರ್ಶನ!……….
ಹೈದರಾಬಾದ್: ಕೊರೊನಾ ಹಿನ್ನೆಲೆಯಲ್ಲಿ ಕಳೆದ 70 ದಿನಗಳಿಂದ ಬಂದ್ ಆಗಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನವನ್ನು ಓಪನ್ ಮಾಡಲು ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ. ಜೂನ್ 8ರಿಂದ ದೇವಾಲಯದಲ್ಲಿ ದರ್ಶನ ಆರಂಭವಾಗಲಿದ್ದು, ಆದರೆ ಟಿಟಿಡಿ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ಪ್ರಯೋಗಾತ್ಮಕವಾಗಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಸಿಗಲಿದೆ. ಸಾಮಾನ್ಯ ಭಕ್ತರಿಗೆ ಯಾವಾಗ ಅವಕಾಶ ನೀಡಲಾಗುತ್ತದೆ ಎಂಬ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ. ತಿಮ್ಮಪ್ಪನ ದರ್ಶನ ವೇಳೆ ಸಾಮಾಜಿಕ ಅಂತರ …
Read More »ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ……….
ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, …
Read More »
Laxmi News 24×7