Breaking News

ರಾಜ್ಯ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ

ಹೈದರಾಬಾದ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಯೆರ್ರಪಹಾದ್ ಗ್ರಾಮದಲ್ಲಿ ನಡೆದಿದೆ. ಲಿಂಗಮಣಿ (40) ಮತ್ತು ಸಿರೀಶಾ (18) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಲಿಂಗಮಣಿ ಪತಿ ಲಕ್ಷ್ಮರೆಡ್ಡಿ ಮತ್ತು ಮಗ ರಣ್‍ದೀಪ್ ರೆಡ್ಡಿ ಇಬ್ಬರು ಮನೆಯಿಂದ ಹೊರಗೆ ಹೋದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಮೃತ ಲಿಂಗಮಣಿ ಕುಟುಂಬ ಹೊಸ …

Read More »

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪ್ರಯೋಗಕ್ಕೆ ತಾತ್ಕಾಲಿಕ ಸ್ಥಗಿತ

ಜಿನಿವಾ: ಕೊರೊನಾ ಜ್ವರಕ್ಕೆ ತಕ್ಷಣದ ಔಷಧಿ ಎಂದೇ ಪರಿಗಣಿಸಲಾಗಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯ ಮೇಲಿನ ಪ್ರಯೋಗಾರ್ಥ ಪರೀಕ್ಷೆಯನ್ನು ವಿಶ್ವ ಆರೋಗ್ಯ ಸಂಸ್ಥೆ ತಾತ್ಕಾಲಿಕವಾಗಿ ಕೈಬಿಟ್ಟಿದೆ. ವೈದ್ಯಕೀಯ ಅಧ್ಯಯನಕ್ಕಾಗಿರುವ ಜಗತ್ತಿನ ಅತೀ ಶ್ರೇಷ್ಠ ನಿಯತಕಾಲಿಕೆ ಲ್ಯಾಸೆಟ್ ‘ಕೊರೊನಾ ಪೀಡಿತ ರೋಗಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಿದ್ರೆ ಸಾಯುವ ಸಾಧ್ಯತೆ ಹೆಚ್ಚಿದೆ’ ಎಂದು ಅಧ್ಯಯನ ವರದಿ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ರೋಗಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ಬಳಸುವ ಸಂಬಂಧ ಆರಂಭಿಸಿದ್ದ …

Read More »

ಕೊರೋನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್, ಸ್ಯಾನಿಟೇಜರ್, ಕೊಡೆ (ಛತ್ರಿ) ವಿತರಣೆ ಮಾಡಿದರು.

ಮಂಡ್ಯ.ಜೆ ಡಿ ಎಸ್ ಪಕ್ಷದ ಯುವ ನಾಯಕರಾದ ಬಿ.ಎಂ ಕಿರಣ್ ರವರು ಚೌಡೇನಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ‌ ಕೊರೋನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್, ಸ್ಯಾನಿಟೇಜರ್, ಕೊಡೆ (ಛತ್ರಿ) ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣದ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿ.ಎನ್ ಪುಟ್ಟಸ್ವಾಮಿ ಗೌಡ್ರು ಮಾತನಾಡಿ ಸಮಾಜ ಸೇವಕ ಬಿ.ಎಂ ಕಿರಣ್ ರವರು ತಮ್ಮ ಸ್ವಂತ ಹಣದಲ್ಲಿ ಸಾವಿರಾರು ಜನರಿಗೆ ಆಸರೆಯಾಗಿದ್ದಾರೆ ಕಳೆದ ಎರಡು ತಿಂಗಳಿದ ಆರೋಗ್ಯ ಮೇಳ ಸೇರಿದಂತೆ …

Read More »

ವೃತ್ತಿ ರಂಗಭೂಮಿ ಕಲಾವಿದರಿಗೆ ನೆರವು.

  ಮಂಡ್ಯ ನಾಗಮಂಗಲ: ತಾಲ್ಲೂಕಿನ ವೃತ್ತಿ ರಂಗಭೂಮಿ ಕಲಾವಿದರಿಗೆ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರಿಂದ ಫುಡ್ ಕಿಟ್ ವಿತರಣೆ. ಕೋವಿಡ್-19 ಸೋಂಕು ಹೆಚ್ಚಾಗುವ ಹಿನ್ನೆಲೆಯಲ್ಲಿ. ದೇಶದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ವೃತ್ತಿ ಭೂಮಿ ಕಲಾವಿದರಿಗೆ ಆಹಾರದ ಸಮಸ್ಯೆಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರವರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಮ್ಮ ತಾಲೂಕಿನಲ್ಲಿರುವ ಜನ ನಾಟಕದ ಗೀಳಿಗೆ ಬಿದ್ದು ಅವರು …

Read More »

ಇಂದು ಸಂಜೆ ದಿಢೀರ್ ಭೇಟಿ ನೀಡಿ, ಕೊರೊನಾ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ವ್ಯವಸ್ಥೆಯನ್ನ ಪರಿಶೀಲಿಸಿದ್ರು.

ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು.  ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ …

Read More »

ಪೋಲಿಸ್ ಸ್ಟೇಷನ್ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಸೋಂಕು ಪತ್ತೆ.ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆ ಸೀಲ್ ಡೌನ್.

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣ ಪೋಲಿಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು ವಿವರಿಸಿದ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು …

Read More »

“ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್” ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಮಾಧುಸ್ವಾಮಿ

ಬೆಂಗಳೂರು: ಕಾನೂನು ಸಚಿವ ಮಾಧುಸ್ವಾಮಿ ಬುಧವಾರ ಕೋಲಾರದಲ್ಲಿ ರೈತ ಮಹಿಳೆಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಇಂದು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ಗೆ ದುರು ನೀಡಿದ್ದಾರೆ. ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ನಿನ್ನೆ ಕೋಲಾರಕ್ಕೆ ಆಗಮಿಸಿದ್ದರು.  ಇದೇ ವೇಳೆ ಅವರು ಅಗ್ರಹಾರ ಕೆರೆ ವೀಕ್ಷಣೆಗಾಗಿಯೂ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಕರ್ನಾಟಕ ರಾಜ್ಯ ರೈತ …

Read More »

ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿ

ಉಡುಪಿ: ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ. ಅಜೆಕಾರು ಕೈಕಂಬ ನಿವಾಸಿ ಮುನ್ಶಿರಾ ಮೆಹಮೂಬ್(ಹೆಸರು ಬದಲಾಯಿಸಲಾಗಿದೆ) ಪರಾರಿಯಾದ ಮಹಿಳೆ. ಮದುವೆಗೆಂದು ಮಂಗಳೂರಿಗೆ ಹೋದ ಕಾರಣಕ್ಕೆ ಈ ಮಹಿಳೆ, ತಾಯಿ ಮತ್ತು ಸಹೋದರನ ಜೊತೆ ಹೋಂ ಕ್ವಾರಂಟೈನ್ ಆಗಿದ್ದಳು. ಹೋಂ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ತನ್ನ ಹಳೆಯ ಪ್ರಿಯಕರನ ಜೊತೆ ಮಹಿಳೆ ಪರಾರಿಯಾಗಿದ್ದಾಳೆ. …

Read More »

ರಾಜ್ಯದಲ್ಲಿ 1578ಕ್ಕೇರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು: ಕೊರೊನಾ ವೈರಸ್ ಇಂದು ಬೆಳಗ್ಗೆ ಶತಕ ಬಾರಿಸಿದ್ದು, ಒಂದೇ ದಿನ 116 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಗುಣಮುಖರಾಗಿ 14 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1578 ಸೋಂಕಿರ ಪೈಕಿ 612 ಜನ ಗುಣಮುಖರಾಗಿದ್ದು, 966 ಮಂದಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿತರ ವಿವರ: 1. ರೋಗಿ- 1463: ಬೆಂಗಳೂರಿನ 40 ವರ್ಷದ ಮಹಿಳೆ- ರೋಗಿ 1208ರ ಸಂಪರ್ಕ 2. …

Read More »

ಇನ್ನು ಕೆಲವು ರಾಜ್ಯಗಳ ಗಡಿ ಬಂದ್ ಮಾಡಲು ಮುಂದಾದ ರಾಜ್ಯ ಸರ್ಕಾರ ……….

ಬೆಂಗಳೂರು, ಮೇ 20- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆಸ್ಪೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಕೆಲವು ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕಲು ಮುಂದಾಗಿದೆ. ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತು ಕೇರಳ ರಾಜ್ಯಗಳ ಪ್ರವೇಶಕ್ಕೆ ಕರ್ನಾಟಕದಲ್ಲಿ ನಿರ್ಬಂಧವಿಧಿಸಲಾಗಿದೆ. ಈ ರಾಜ್ಯಗಳಿಂದ ಯಾರೇ ಬಂದರೂ ಕಡ್ಡಾಯವಾಗಿ ಕ್ವಾರಂಟೈನ್ ಒಳಗಾಗಬೇಕೆಂದು ಸೂಚನೆ ಕೊಡಲಾಗಿದೆ. ಇದರ ನಡುವೆ ಸೋಂಕು ಹೆಚ್ಚಿರುವ ಕೆಲ ರಾಜ್ಯಗಳಿಗೆ ಕರ್ನಾಟಕದಲ್ಲಿ ಕೆಲ ದಿನಗಳ ಮಟ್ಟಿಗೆ ಪ್ರವೇಶ …

Read More »