ಚಿಕ್ಕಬಳ್ಳಾಪುರ: ತಹಶೀಲ್ದಾರ್ ದ್ವಿತೀಯ ದರ್ಜೆಯ ಸಹಾಯಕನಿಗೆ ಕರೆ ಮಾಡಿ ಮನೆಗೆ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಹಶೀಲ್ದಾರ್ ರಾಜಣ್ಣ, ದ್ವೀತಿಯ ದರ್ಜೆ ಸಹಾಯಕ ಮಹಮದ್ ಹಸನ್ ಮುಲ್ಲಾ ಅವರಿಗೆ ಕರೆ ಮಾಡಿದ್ದು, ಮನೆಗೆ ಎಸಿ ವ್ಯವಸ್ಥೆ ಮಾಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಮಾರ್ಚ್ 23ರಂದು ಕರೆ ಮಾಡಿ, ಏನು ಕೆಲಸ ಮಾಡದೆ ನಿನಗೆ ಸಂಬಳ ಮಾಡಿಕೊಟ್ಟಿದ್ದೇನೆ. ಹಾಗಾಗಿ ನೀನು ನನ್ನ ಮನೆಗೆ …
Read More »ಕೇರಳ ಮೂಲದ ಬಡ ವ್ಯಕ್ತಿಯೊಬ್ಬ ಪೊಲೀಸರಿಗೆ ನೀರು ಮತ್ತು ಊಟ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.
ತಿರುವನಂತಪುರಂ: ಲಾಕ್‍ಡೌನ್ ಆದಾಗಿನಿಂದ ಪೊಲೀಸರು ಹಗಲು-ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲಾಕ್‍ಡೌನ್‍ನಿಂದಾಗಿ ಹೊಟೇಲ್ ಮುಚ್ಚಿರುವ ಕಾರಣ ಪೊಲೀಸರಿಗೆ ಸರಿಯಾಗಿ ಆಹಾರ ಸಿಗುತ್ತಿಲ್ಲ. ಈ ವೇಳೆ ಕೇರಳ ಮೂಲದ ಬಡ ವ್ಯಕ್ತಿಯೊಬ್ಬ ಪೊಲೀಸರಿಗೆ ನೀರು ಮತ್ತು ಊಟ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಗಿರೀಶ್ ಕೇರಳದ ಅಲಪ್ಪಿ ಜಿಲ್ಲೆಯ ಕಲವೂರ್ ಗ್ರಾಮದಲ್ಲಿ ಪೊಲೀಸರಿಗೆ ನೀರು ಹಾಗೂ ಆಹಾರ ಸರಬರಾಜು ಮಾಡಿ ಗಮನ ಸೆಳೆಯುತ್ತಿದ್ದಾರೆ. ಗಿರೀಶ್ ತೆಂಗಿನ ಮರ ಹತ್ತಿ ಕಾಯಿಕೀಳುವ …
Read More »ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 119 ಪುಂಡರು ವಶಕ್ಕೆ
ಬೆಂಗಳೂರು, ಏ.21- ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇದುವರೆಗೆ 119 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಅರಮನೆ ಮೈದಾನದಲ್ಲಿರುವ ಇಸ್ಕಾನ್ ಅಕ್ಷಯ ಪಾತ್ರೆ ಪ್ರತಿಷ್ಠಾನ ಹಾಗೂ ರಾಜ್ಯ ಸರ್ಕಾರದ ಉಚಿತ ಆಹಾರ ಪದಾರ್ಥಗಳ ವಿತರಣಾ ವಿಭಾಗಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಪರಿಶೀಲಿಸಿದರಲ್ಲದೆ, ಸಿವಿಲ್ ಡಿಫೆನ್ಸ್ ಕಾರ್ಯಕರ್ತರ ಮೂಲಕ ಮನೆಮನೆಗೆ ದಿನಸಿ ಪದಾರ್ಥಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ …
Read More »ಹಾವೇರಿ, :ಅಧಿನಿಯಮ ಉಲ್ಲಂಘಿಸಿ ಬೀಜ ಮಾರಾಟ ಮಾಡುತ್ತಿದ್ದ ಕಂಪೆನಿಯ ಪರವಾನಿಗೆ ರದ್ದು
ಹಾವೇರಿ, ಏ.21:ಬೀಜ ಅಧಿನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕಾಗಿ ಬೀಜ ಮಾರಾಟ ಮಾಡುತ್ತಿದ್ದ ಖಾಸಗಿ ಕಂಪೆನಿಯ ಪರವಾನಿಗೆಯನ್ನು ಅಮಾನತು ಮಾಡಿ ಆದೇಶಿಸಲಾಗಿದೆ.ರಾಣೆಬೆನ್ನೂರಿನ “ವೆಂಕಟೇಶ್ವರ ಆಗ್ರೋ ಟ್ರೇಡರ್ಸ್” ಖಾಸಗಿ ಕಂಪೆನಿಯಾಗಿದ್ದು ಈ ಖಾಸಗಿ ಟ್ರೇಡರ್ಸ್ ಸುಮಾರು 12 ವರ್ಷಗಳಿಂದ ರೈತರ ಬೀಜ ಮಾರಾಟ ಮಾಡಿಕೊಂಡು ಬಂದಿರುತ್ತದೆ. ಇತ್ತೀಚೆಗೆ ರಾಣೆಬೆನ್ನೂರಿನಲ್ಲಿ ಕಳಪೆ ಬೀಜ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಏಪ್ರಿಲ್ 20 ರಂದು ಈ ಟ್ರೆಡರ್ಸ್ ಮಳಿಗೆಗೆ ವಿಚಕ್ಷಣಾ ತಂಡ ಭೇಟಿ …
Read More »ಬುಧವಾರ ವಾರ್ ರೂಂ ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ.
ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿಯ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಕೊರೋನಾ ವಾರ್ ರೂಂ ಆಗಿ ಪರಿವರ್ತನೆಯಾಗಿದೆ. ಬುಧವಾರ ವಾರ್ ರೂಂ ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ. ಕೊರೋನಾ ಸಂಬಂಧಿಸಿದ ಎಲ್ಲ ನಿಯಂತ್ರಣ ಇನ್ನು ಮುಂದೆ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಿಂದ ನಡೆಯಲಿದೆ. 14 ದ್ರೋಣ್ ಕ್ಯಾಮೆರಾ ಸಹಾಯದಿಂದ ಇಡೀ ನಗರದ ಆಗು ಹೋಗುಗಳ ಮೇಲೆ ನಿಗಾ ಇಡಲಿದೆ. ಎಷ್ಟು ಜನ ಹೊರಗೆ …
Read More »ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತ:BSY
ಬೆಂಗಳೂರು: ದೇಶಾದ್ಯಂತ ಲಾಕ್‍ಡೌನ್ ಜಾರಿಯಾಗಿರುವ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬಡವರು, ನಿರ್ಗತಿಕರ ಸ್ಥಿತಿ ಅಯೋಮಯವಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಜನರಿಗೆ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ಅಡುಗೆ ಅನೀಲ ವಿತರಿಸಲು ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಬಡವರಿಗೆ 2 ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡಲು ಆದೇಶ ನೀಡಿದೆ. ಇದೀಗ …
Read More »ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….
ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾದರಾಯನಪುರದಲ್ಲಿ …
Read More »ಭಾರತದಲ್ಲಿ 18,601ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, 590 ಜನ ಸಾವು..!
ನವದೆಹಲಿ/ಮುಂಬೈ,ಏ.21- ದೇಶಾದ್ಯಂತ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕಂಗೆಡಿಸಿದೆ. ಭಾರತದಲ್ಲಿ ಮೃತರ ಸಂಖ್ಯೆ 590ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 18,600ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ರಾತ್ರಿವರೆಗಿನ ಅಧಿಕೃತ ವರದಿ ಪ್ರಕಾರ, ಡೆಡ್ಲಿ ವೈರಸ್ ಈವರೆಗೆ ದೇಶಾದ್ಯಂತ 590 ಜನರನ್ನು ಬಲಿ …
Read More »ಮೈಸೂರಲ್ಲಿ ಕೊರೊನಾ ಸರ್ವೇಗೆ ಬಂದ ಆಶಾ ಕಾರ್ಯಕರ್ತೆಗೆ ಬೆದರಿಕೆ
ಮೈಸೂರು, ಏ.21- ಕೊರೊನಾ ಸರ್ವೇ ಮಾಡಲು ಬಂದ ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ಅಲೀಂ ನಗರದಲ್ಲಿ ನಡೆದಿದೆ.ಸುಮಯಾ ಫಿರ್ದೋಷಿ ಎಂಬ ಆಶಾ ಕಾರ್ಯಕರ್ತೆ ನಿನ್ನೆ ಸಂಜೆ ಅಲೀಂ ನಗರಕ್ಕೆ ಸರ್ವೆ ಮಾಡಲು ಬಂದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರು ಹಿರಿಯ ಅಧಿಕಾರಿಗಳಿಗೆ …
Read More »BIG BREAKING : ಕೊನೆಗೂ ಕೊರೋನಾ ಚಿಕಿತ್ಸೆಗೆ ಸಿಕ್ಕೇ ಬಿಡ್ತು ಬ್ರಹ್ಮಾಸ್ತ್ರ..!?
ನವದೆಹಲಿ, ಏ.21- ವಿಶ್ವಾದ್ಯಂತ 1.70 ಲಕ್ಷ ಜನರನ್ನು ತಿಂದು ತೇಗಿರುವ ಕಿಲ್ಲರ್ ಕೊರೊನಾ ವೈರಸ್ ನಿಗ್ರಹಕ್ಕೆ ಜಗತ್ತಿನೆಲ್ಲೆಡೆ ವೈದ್ಯಕೀಯ ಪ್ರಯೋಗಗಳು ನಡೆಯುತ್ತಿರುವಾಗಲೇ ಪ್ಲಾಸ್ಮಾ ಚಿಕಿತ್ಸೆ ಭರವಸೆಯ ಆಶಾ ಕಿರಣ ಮೂಡಿಸಿದೆ. ದೆಹಲಿಯಲ್ಲಿ ನಿನ್ನೆ 45 ವರ್ಷದ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾದ ಬಳಿಕ ಈ ವಿಧಾನವನ್ನು ಭಾರತದಲ್ಲಿ ಅತ್ಯಂತ ಜಾಗ್ರತೆಯಿಂದ ಬಳಸುವುದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಡ್ರಗ್ ಕಂಟ್ರೋಲರ್ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ …
Read More »
Laxmi News 24×7