ಹುಬ್ಬಳ್ಳಿ: ಐವರು ಮಾಧ್ಯಮ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹುಬ್ಬಳ್ಳಿಯಲ್ಲಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಇವರು ಏಪ್ರಿಲ್ 9ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾರಿಕೆಗಾಗಿ ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು. ಈ ಸ್ಮಶಾನದ ಕಾವಲುಗಾರನಿಗೆ (ಪಿ- 363) ಕೊರೊನಾ …
Read More »ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್‍ಗೊಂಡ ವ್ಯಕ್ತಿಯ ಕಣ್ಣೀರ ಸಂದೇಶ
ಮಂಗಳೂರು: ಕೊರೊನಾದಿಂದ ಗುಣಮುಖರಾದ ಮಂಗಳೂರಿನ ವ್ಯಕ್ತಿಯೊಬ್ಬರು ಕಣ್ಣೀರಿನ ಮೂಲಕ ತಮ್ಮ ಜೀವ ಉಳಿಸಿದ ವಾರಿಯರ್ಸ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಬಂದ ವ್ಯಕ್ತಿಯನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ಚಪ್ಪಾಳೆ ಮೂಲಕ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ವ್ಯಕ್ತಿ, ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಅತ್ಯಂತ ಚೆನ್ನಾಗಿ ನೋಡಿಕೊಂಡರು. ಕುಡಿಯಲು ತಣ್ಣೀರು ಬೇಕಾ ಅಥವಾ ಬಿಸಿ ನೀರು ಬೇಕಾ ಎಂದು ಕೇಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಎಷ್ಟು ಕಷ್ಟಪಡುತ್ತಾರೆ ಎಂಬುವುದು …
Read More »ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್‍ಗೆ ಶಿಫ್ಟ್……..
ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಗದಗ ಜಿಲ್ಲೆಯಿಂದ ಮಡಿಕೇರಿಯ ಕುಶಾಲನಗರಕ್ಕೆ ಬಂದಿದ್ದ ಕಾರ್ಮಿಕರು ಕೆಲಸ ಇಲ್ಲವೆಂದು ಗೂಡ್ಸ್ ವಾಹನದಲ್ಲಿ ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ನಗರ ಪೊಲೀಸರು ರಕ್ಷಿಸಿ ನಗರದ ನರಿಗುಡ್ಡನಹಳ್ಳಿ ಸರ್ಕಲ್‍ನಲ್ಲಿರುವ ಬಿಸಿಎಂ ಹಾಸ್ಟೆಲ್ಲಿನ ಕ್ವಾರಂಟೈನ್‍ಗೆ ದಾಖಲಿಸಿದ್ದಾರೆ. ಹಾಸನ ಮಾರ್ಗದಿಂದ ಬಂದ ವಾಹನವನ್ನು ಹಿರೇಮಗಳೂರು ಚೆಕ್‍ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸರು ಚೆಕ್ ಮಾಡಿದ್ದು, ಗಾಡಿಯಲ್ಲಿ ಆರು ಜನ ಇದ್ದರು. ಎಲ್ಲರೂ ಗದಗ …
Read More »ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿದೆ:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಬೆಳಗಾವಿ: ಕೋವಿಡ್-19 ವೈರಾಣು ಜಿಲ್ಲೆಯ ಸಾರ್ವಜನಿಕರನ್ನು ಕಂಗೆಡಿಸಿದ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಪಡಿತರ ದೊರೆಯಲಿ ಎಂಬ ಸದುದ್ದೇಶದಿಂದ ಏ.14 , 2020 ರಿಂದ ಪಡಿತರವನ್ನು ವಿತರಿಸಲು ಪ್ರಾರಂಭಿಸಿದೆ. ಈ ಯೋಜನೆಯಡಿ ಅರ್ಜಿದಾರರು ಏಪ್ರಿಲ್ 24, 2020 ರ ರಾತ್ರಿ 8-00 ಗಂಟೆಯವರೆಗೆ ತಮ್ಮ ಪಾಲಿನ ಪಡಿತರ ಧಾನ್ಯವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಆನ್ಲೈನ್‌ದಲ್ಲಿ ಸಲ್ಲಿಸಿದ ಪ್ರತಿ ಬಿ.ಪಿ.ಎಲ್(ಆದ್ಯತಾ) ಪಡಿತರ …
Read More »ನಮ್ಮಲ್ಲಿ ಅಜ್ಞಾನವಿದೆ, ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ – ಸಿಎಂ ಇಬ್ರಾಹಿಂ
ಬೆಂಗಳೂರು: ಪಾದರಾಯನಪುರದ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಿ. ಘಟನೆಗೆ ಏನು ಕಾರಣ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.ಹೃದಯ ಸೀಳಿದ್ರೆ ಅಕ್ಷರವಿಲ್ಲ ಅಂತ ತೇಜಸ್ವಿ ಸೂರ್ಯ ಹೇಳಿದ್ದರು. ನಮ್ಮಲ್ಲಿ ಶಿಕ್ಷಣ ಇಲ್ಲ. ಪೊಲೀಸರು ಬಂದರೆ ಬಂಧಿಸುತ್ತಾರೆ ಎಂಬ ಅಜ್ಞಾನವಿದೆ. ಮುಸ್ಲಿಮರು ಅನಕ್ಷರಸ್ಥರು. ಹೀಗಾಗಿ ಕೆಲ ಗೊಂದಲ ಆಗಿರಬಹುದು. ಮುಸ್ಲಿಮರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮನವೊಲಿಸಿ ಕ್ವಾರಂಟೈನ್ ಮಾಡಬೇಕು ಎಂದು ಅವರು …
Read More »ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ
ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್‍ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್‍ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …
Read More »ಪಾದರಾಯನಪುರದ ಪುಂಡರು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್
ರಾಮನಗರ: ಪಾದರಾಯನಪುರ ಗಲಾಟೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ 54 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲು ಆದೇಶಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಶಿಫ್ಟ್ ಮಾಡಲು ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹಾಗೆಯೇ ರಾಮನಗರ ಜೈಲಿನಲ್ಲಿರುವ 177 ಮಂದಿ ಖೈದಿಗಳು, ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವಂತೆ ಕೂಡಾ ಆದೇಶದಲ್ಲಿ ತಿಳಿಸಲಾಗಿದೆ. ಕೊರೊನಾ ಗ್ರೀನ್ ಜೋನ್‍ನಲ್ಲಿರುವ ರಾಮನಗರ ಜಿಲ್ಲೆಯಲ್ಲಿ ಇಲ್ಲಿಯ ತನಕ ಯಾವುದೇ …
Read More »ಸೈಕಲ್‍ಗಾಗಿ ಕೂಡಿಟ್ಟ ಹಣವನ್ನು ಸಿಎಂ ಕೊರೊನಾ ನಿಧಿಗೆ ಕೊಟ್ಟ ಬಾಲಕಿ
ಚಿಕ್ಕಮಗಳೂರು: ಅಪ್ಪ-ಅಮ್ಮ ಕೊಟ್ಟ ಹಣವನ್ನು ಸೈಕಲ್ ತೆಗೆದುಕೊಳ್ಳಲು ಕೂಡಿಟ್ಟಿದ್ದ ಐದನೇ ತರಗತಿ ವಿದ್ಯಾರ್ಥಿನಿಯೋರ್ವಳು ಆ ಹಣವನ್ನ ಸಿಎಂ ಕೊರೊನಾ ನಿಧಿಗೆ ನೀಡಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರದೀಪ್ ಹಾಗೂ ಸುಮಿತ್ರ ಪುತ್ರಿ ಪ್ರಣತಿ ತನ್ನ ಹುಂಡಿಯ ಐದು ಸಾವಿರ ಹಣವನ್ನು ಕೊರೊನಾ ನಿಧಿಗೆ ನೀಡಿದ್ದಾರೆ. ಆರಂಭದಲ್ಲಿ ಈ ಹಣವನ್ನು ಪಿಎಂ ನಿಧಿಗೆ ನೀಡಬೇಕೆಂದು ಬಾಲಕಿಯ ಆಸೆ ಇತ್ತು. ಆದರೆ ಪಿಎಂ …
Read More »ಪಾದರಾಯನಪುರವೇನು ಜಮೀರ್ ಅಜ್ಜನಾ ಆಸ್ತಿನಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ: ಪಾದರಾಯನಪುರವೇನು ಜಮೀರ್ ಅಜ್ಜನಾ ಆಸ್ತಿನಾ? ಶಾಸಕರಾದ ತಕ್ಷಣ ಪಾಳೆಗಾರಿಕೇನಾ? ಶಾಸಕ ಜಮೀರ್ ಅಹ್ಮದ್ ಚಾಮರಾಜ್ ಪೇಟೆಯ ಶಾಸಕ ಅಷ್ಟೇ, ಚಾಮರಾಜ್ ಕೋಟೆಯ ಶಾಸಕ ಅಲ್ಲ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಪಾದರಾಯನಪುರದಂತ ಘಟನೆಗಳು ಪದೇ ಪದೇ ನಡೆದಿರುವುದು ಖಂಡನೀಯ. ಇದರ ಹಿಂದೆ ಒಂದು ಕೈವಾಡವಿದೆ ಎಂದು ಸಂಶಯ ವ್ಯಕ್ತಪಡಿಸಿದರು. ಪಾದರಾಯನಪುರ ಪಾಕಿಸ್ತಾನದಲ್ಲಿ ಇಲ್ಲ, ನಮ್ಮ ದೇಶದಲ್ಲೇ ಇದೆ. …
Read More »ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ
ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಹಾಗೂ ದುಪದಾಳ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ಕರ್ತವ್ಯ ನಿರತ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಮತ್ತು ಆಶಾ ಕಾರ್ಯಕರ್ತೆಯರಿಗೆ ಅಲ್ಪೋಪಹಾರ ವ್ಯವಸ್ಥೆ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೋನಾವನ್ನು ನಿಯಂತ್ರಿಸುವ. ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೋಲಿಸ,ಪಂಚಾಯತ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು,ಪೌರಕಾರ್ಮಿಕರಿಗೆ ಕನ್ನಡ ಸೇನೆ ಸಂಘಟನೆಯ ವತಿಯಿಂದ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ರಾಘವೇಂದ್ರ ಪತ್ತಾರ. ಗೋಕಾಕ ತಾಲೂಕಾಧ್ಯಕ್ಷರಾದ. ಅಪ್ಪಾಸಾಬ ಮುಲ್ಲಾ. …
Read More »
Laxmi News 24×7