ರಾಜ್ಯ

ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಚಾಲಕನ ಎರಡೂ ಕಾಲು ಕಟ್

ಧಾರವಾಡ: ಸರ್ಕಾರಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಎರಡೂ ಕಾಲು ಕಟ್ ಆಗಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಲಘಟಗಿಯ ರಾಮನಾಳ ಕ್ರಾಸ್ ಬಳಿ ಬಸ್ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಬಸ್ ಚಾಲಕನ ಎರಡೂ ಕಾಲುಗಳು ಕಟ್ ಆಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಕುಮಟಾಗೆ …

Read More »

ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು

ಬೆಳಗಾವಿ : ಹಳ್ಳಿ ಕಡೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಸಾಮಾನ್ಯವಾಗಿ ಸಿಡಿಮದ್ದು ಸಿಡಿಸುವ ಸಾಂಪ್ರದಾಯವಿದೆ. ಇದೀಗ ಬೆಳಗಾವಿಯಲ್ಲಿ ಈ ಒಂದು ಸಿಡಿಮದ್ದುನಿಂದ ಓರ್ವ ಬಲಿಯಾಗಿದ್ದು, ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡಿದ್ದರಿಂದ ಮದ್ದು ತಯಾರಿಕ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಪಂಚಮಿ ಹಬ್ಬದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಮಲ್ಲಪ್ಪ ಈ ಒಂದು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮದ್ದು ತಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟಗೊಂಡು ಮಲ್ಲಪ್ಪ …

Read More »

ಧಾರಾಕಾರ ಮಳೆಗೆ ಧರೆಗುರುಳಿದ ಮನೆಗಳು

ಬೆಂಗಳೂರು,ಜು.20- ಕಳೆದ 15 ದಿನಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಹುಬ್ಬಳ್ಳಿ, ಬೆಳಗಾವಿ, ಹಾಸನ, ಶಿವಮೊಗ್ಗ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮನೆಗಳು ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿದೆ. ಬೆಳಗಾವಿಯಲ್ಲಿ ಮಳೆಯಿಂದಾಗಿ ಅನಾಹುತಗಳು ಹೆಚ್ಚಾಗಿವೆ. ಎರಡು ಗ್ರಾಮಗಳಲ್ಲಿ ಮನೆ ಕುಸಿದು ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹೊಸಟ್ಟಿಯಲ್ಲಿ ಮನೆ ಕುಸಿಯುವ ಮುನ್ನ 2 ಇಟ್ಟಿಗೆಗಳು ಬಿದ್ದಿದ್ದು ಎಚ್ಚೆತ್ತ ಕುಟುಂಬಸ್ಥರು ಓಡಿ ಆಚೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. …

Read More »

ವಿಟಿಯು: 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಗುರುವಾರ ನಡೆದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ‘ಡಾಕ್ಟರ್‌ ಆಫ್‌ ಸೈನ್ಸ್‌’ ಹಾಗೂ 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌ ಅವರು ಚಿಕ್ಕಬಳ್ಳಾಪುರದ ಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸದ್ಗುರು ಮಧುಸೂದನ್‌ ಸಾಯಿ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ.ಮರಾರ್‌ ಅವರಿಗೆ ‘ಡಾಕ್ಟರ್‌ ಆಫ್‌ ಸೈನ್ಸ್‌’ ಪ್ರದಾನ ಮಾಡಿದರು.ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಎಂ.ಎಸ್‌.ಶೇಷಗಿರಿ ಎಂಜಿನಿಯರಿಂಗ್‌ ಕಾಲೇಜಿನ …

Read More »

ರಾಕಸಕೊಪ್ಪ ಜಲಾಶಯದ ನೀರು ಹೊರಕ್ಕೆ

ಬೆಳಗಾವಿ: ತಾಲ್ಲೂಕಿನ ರಾಕಸಕೊಪ್ಪ ಜಲಾಶಯ ಭರ್ತಿಯಾಗಲು ಒಂದು ಅಡಿ ಮಾತ್ರ ಬಾಕಿ ಉಳಿದಿದೆ. ಹಾಗಾಗಿ, ಶುಕ್ರವಾರದಿಂದಲೇ ಎರಡು ಕ್ರಸ್ಟ್‌ಗೇಟ್‌ಗಳನ್ನು ತೆರೆದು ಆರು ಇಂಚು ಅಂತರದಿಂದ ನೀರು ಹೊರ ಹರಿಸಲಾಗುತ್ತಿದೆ. ಪಶ್ಚಿಮ ಘಟ್ಟ ಪ್ರದೇಶ ಮತ್ತು ಮಾರ್ಕೆಂಡೇಯ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಮಾರ್ಕೆಂಡೇಯ ನದಿಗೆ ಕಟ್ಟಿರುವ ರಾಕಸಕೊಪ್ಪ ಅಣೆಕಟ್ಟೆ ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಭರ್ತಿಯಾಗಿದೆ. ಜಲಾಶಯದ ಕೆಳಹಂತದ ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು …

Read More »

ಖಾನಾಪುರ | ಮುಂದುವರಿದ ಮಳೆ: ಪ್ರವಾಹ ಪರಿಸ್ಥಿತಿ

ಖಾನಾಪುರ: ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಳೆರಾಯನ ಅಬ್ಬರ ಮುಂದುವರೆದಿದೆ. ಗುರುವಾರ ಇಡೀ ರಾತ್ರಿ ಮತ್ತು ಶುಕ್ರವಾರ ಇಡೀ ದಿನ ಪಟ್ಟಣ ಸೇರಿದಂತೆ ತಾಲ್ಲೂಕಿನ ಲೋಂಡಾ, ಕಣಕುಂಬಿ, ಹೆಮ್ಮಡಗಾ, ಜಾಂಬೋಟಿ, ಶಿರೋಲಿ, ಗುಂಜಿ ಅರಣ್ಯದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಮುಳುಗಿದ್ದ ಸೇತುವೆಗಳು ಶುಕ್ರವಾರವೂ ಸಂಚಾರಕ್ಕೆ ತೆರೆದುಕೊಳ್ಳಲಿಲ್ಲ. ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇಟಗಿ, ಗಂದಿಗವಾಡ, ಬೀಡಿ, ಪಾರಿಶ್ವಾಡ, ದೇವಲತ್ತಿ ಸುತ್ತಮುತ್ತ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದು, ತಾಲ್ಲೂಕಿನಾದ್ಯಂತ ಮೋಡ ಮುಸುಕಿದ ಶೀತ ವಾತಾವರಣ …

Read More »

ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ

ಗೋಕಾಕ: ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದಲ್ಲಿ ಏರಿಕೆ ಉಂಟಾಗುತ್ತಿರುವ ಪರಿಣಾಮ ಗೋಕಾಕ-ಶಿಂಗಳಾಪುರ ಸೇತುವೆ ಶುಕ್ರವಾರ ಸಂಜೆ ಪ್ರವಾಹದಲ್ಲಿ ಮುಳುಗಡೆ ಆಗಿದೆ. ಬ್ರಿಜ್‌ ಕಂ ಬ್ಯಾರೇಜ್ ಪ್ರವಾಹದಲ್ಲಿ ಮುಳುಗಿದ್ದರಿಂದ ಶಿಂಗಳಾಪುರ ಮತ್ತು ಟಕ್ಕೆ ನಿವಾಸಿಗಳು ಅಪಾಯವನ್ನೂ ಲೆಕ್ಕಿಸದೇ ಪ್ರವಾಹದ ಮಧ್ಯೆಯೇ ಸೇತುವೆ ದಾಟುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ ಮೋಹನ ಭಸ್ಮೆ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸ್ ಬಂದೋಬಸ್ತ್‌ ಕಲ್ಪಿಸಲು ಗೋಕಾಕ ಶಹರ ಮತ್ತು …

Read More »

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ

ಬೆಂಗಳೂರು, ಜುಲೈ20: ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ …

Read More »

ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ.   ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ …

Read More »

ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ರೂ.300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ …

Read More »