Breaking News

ರಾಜ್ಯ

ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ.

ಕಾರವಾರ: ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ. ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಲಾಕ್ ಡೌನ್ ಆದ ಹಿನ್ನೆಲೆ ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು …

Read More »

ಕೇವಲ ಹೇಳಿಕೆಗಳಿಗೆ ಸೀಮಿತವಾಗ್ಬೇಡಿ- ಶ್ರೀರಾಮುಲು ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

ರಾಮನಗರ: ಕೊರೊನಾ ತಡೆಗಾಗಿ ದೇಶಾದ್ಯಂತ ವಿಧಿಸಿರುವ ಲಾಕ್‍ಡೌನ್‍ನ 14ಕ್ಕೆ ನಿಲ್ಲಿಸ್ತಾರೋ ಇಲ್ವೋ ನನಗೆ ಗೊತ್ತಿಲ್ಲ. ಏರುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡ್ತಾರೋ ಗೊತ್ತಿಲ್ಲ. ಈ ವಿಚಾರವಾಗಿ ಸರ್ಕಾರದ ಸ್ಪಷ್ಟತೆ ಬಗ್ಗೆ ಗೊತ್ತಿಲ್ಲ. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೆ ಅನ್ನೋದನ್ನ ಗಮನಿಸ್ತಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಕೊರೊನಾ ತಡೆಗಾಗಿ ಜೆಡಿಎಸ್ ಪಕ್ಷದಿಂದ ನಿರ್ಮಿಸಿರುವ ಐದು …

Read More »

ಲಾಕ್‍ಡೌನ್ ಉಲ್ಲಂಘಿಸದವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು: ಮಹೇಶ್ ಕುಮಟಳ್ಳಿ

ಚಿಕ್ಕೋಡಿ(ಬೆಳಗಾವಿ): ಲಾಕ್‍ಡೌನ್ ಉಲ್ಲಂಘಿಸಿದವರಿಗೆ ಪೊಲೀಸರು ಹೊಡೆಯುವ ಬದಲು ಅವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಾಸ್ಯ ಚಟಾಕೆ ಹಾರಿಸಿದ ಕುಮಟಳ್ಳಿ, ನನಗೆ ಒಂದು ವಾಟ್ಸಾಪ್ ಮೆಸೇಜ್ ಬಂದಿತ್ತು. ಅದರಲ್ಲಿ ಮಹಿಳೆಯೋರ್ವಳು ಹೇಳುತ್ತಿದ್ದಳು, ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿದವರನ್ನ ಹಿಡಿದು ಲೂಸ್‍ಮೋಶನ್ ಮಾತ್ರೆ ಕೊಟ್ಟರೆ ಅವರು ಮನೆಯಲ್ಲೂ ಇರುತ್ತಾರೆ. ಮತ್ತೆ ದಿನನಿತ್ಯ ಕೈಗಳನ್ನ ತೊಳೆದುಕೊಳ್ಳುತ್ತಾರೆ ಎಂಬುದಾಗಿತ್ತು ಎಂದು ಶಾಸಕರು …

Read More »

ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

  ಬೆಳಗಾವಿ:ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಅಮಿರ್ ಹಮ್ಜಾ ಬೀಡಿಕರ್ ಬಂಧಿತ ಆರೋಪಿ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏಳು ಕೊರೊನಾ ಸೋಂಕಿತರ ಮೇಲೆ ನಿಗಾ ಇಡಲಾಗಿದೆ. ಮೊದಲು ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂವರ ಬಗ್ಗೆ ಆಡಿಯೋ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಸಮಾಜಕ್ಕೆ ತಪ್ಪು ಸಂದೇಶ ಸಾರುವ …

Read More »

ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ ಮೇಲೆ ಎಫ ಐ ಆರ್ ದಾಖಲು

ಬೆಳಗಾವಿ- ಟೂರಿಸ್ಟ್ ವೀಜಾ ಪಡೆದು ಬೆಳಗಾವಿಯಲ್ಲಿ ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಬೆಳಗಾವಿಗೆ ಬಂದಿದ್ದ ಇಂಡೋನೇಶಿಯಾ ಜಮಾತಿನ ಹತ್ತು ಸದಸ್ಯರ ಮೇಲೆ ಪ್ರತ್ಯೇಕವಾಗಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಇಂಡೋನೇಶಿಯಾ ಮೂಲದ ಹತ್ತು ಜನ ಟೂರಿಸ್ಟ್ ವೀಜಾ ಪಡೆದು,ದೆಹಲಿಯ ಧರ್ಮ ಸಭೆಯಲ್ಲಿ ಭಾಗವಹಿಸಿ,ಬೆಳಗಾವಿಗೆ ಬಂದಿದ್ದರು ಕಾನೂನಿನ ಪ್ರಕಾರ ಅವರು ಮಿಶ್ನರಿ ವೀಸಾ ಪಡೆಯಬೇಕಾಗಿತ್ತು ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ …

Read More »

ಮೈಸೂರಿನಲ್ಲಿ ಮತ್ತೆ 7 ಮಂದಿಗೆ ಕೊರೊನಾ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿದ್ದು, ಕಳೆದ 24 ಗಂಟೆಯಲ್ಲಿ 12 ಹೊಸ ಕೊರೊನಾ ಸೊಂಕಿತ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 12 ಕೊರೊನಾ ಸೋಂಕಿತ ಪ್ರಕರಣದಲ್ಲಿ 7 ಮಂದಿ ಮೈಸೂರು, ಇಬ್ಬರು ಬಾಗಲಕೋಟೆ, ಒಬ್ಬರು ಕೇರಳ, ಒಬ್ಬರು ಬೆಂಗಳೂರು, ಒಬ್ಬರು ಬೆಂಗಳೂರು ಗ್ರಾಮಂತರಕ್ಕೆ ಸೇರಿದವರಾಗಿದ್ದಾರೆ. ಈವರೆಗೆ ದಾಖಲಾದ 163 ಸೊಂಕಿತರಲ್ಲಿ 9 ಮಂದಿ …

Read More »

“ರಾಜ್ಯದಲ್ಲಿ ಮದ್ಯ ಸಂಪೂರ್ಣನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ:ಸಚಿವ ರಮೇಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಬೇಕು. ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. …

Read More »

18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ

ಬೆಳಗಾವಿ: ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಒಟ್ಟು 18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊರೊನಾ ಮೊದಲು ಮೂರು ಬಳಿಕ ನಾಲ್ಕು ಒಟ್ಟು ಏಳು ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಗಂಟಲು ದ್ರವ ಸಂಗ್ರಹಿಸಲಾಗಿದೆ. ಜತೆಗೆ ಇಂದು ಸಹ ಕೆಲವರ ಗಂಟಲು ದ್ರವ ಸಂಗ್ರಹ …

Read More »

ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ :ಬಿ.ಸಿ.‌ಪಾಟೀಲ್‌

ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ರೈತರ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಸಚಿವ ಬಿ.ಸಿ.‌ಪಾಟೀಲ್‌ ಹೇಳಿದ್ರು. ನಗರದ ಪ್ರವಾಸಿ‌ ಮಂದಿರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯದ ಕೊಂಡಿಯಾಗಿರುವ ಗಡಿ‌ ಜಿಲ್ಲೆಯಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು.‌ ರೈತರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಸಮಸ್ಯೆ ಬಂದರು …

Read More »

ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜಮಾತಿಗೆ ಹೋದವರಿಂದಲೇ ಕೊರೊನಾ ಹಬ್ಬತ್ತಿದೆ ಅನ್ನೋ ಚರ್ಚೆ, ಒಂದು ಸಮುದಾಯ ಗುರಿಯಾಗಿಸಿರುವ ವಿಚಾರವಾಗಿದೆ. ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಕೆಲವರು ಇದೇ ರೀತಿ ವರ್ತನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಈಗಾಗಲೇ ಕಮೀಷನರ್ ಹೇಳಿದ್ದಾರೆ ಎಂದರು. ಅಂತೆಯೇ, ಇಂದಿರಾ ಕ್ಯಾಂಟಿನ್ ನಿಲ್ಲಿಸಬಾರದು, ಉದ್ಯೋಗ ಸಿಗುವವರೆಗೂ …

Read More »