Breaking News

ರಾಜ್ಯ

ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು

ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ಧೇಶದಿಂದ ಹೊರದೇಶಗಳಲ್ಲಿ ಇರುವರ ಬಗ್ಗೆ ಸಂಬಂಧಿಸಿದ ‌ಕುಟುಂಬದವರು ಮಾಹಿತಿಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಕೋವಿಡ್ ೧೯ ಹರಡದಂತೆ …

Read More »

ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ

2 ವಾರ ಸವದತ್ತಿ ಯಲ್ಲಮ್ಮ ದರ್ಶನವಿಲ್ಲ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ತೀರ್ಮಾನ ಸವದತ್ತಿ: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಣಾಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಬುಧವಾರದಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸಮಿತಿಯು ತೀರ್ಮಾನ ತೆಗೆದುಕೊಂಡಿದೆ. …

Read More »

ನಾನ್​ವೆಜ್ ಪ್ರಿಯರಿಗೆ ಶಾಕ್​; ಯುಗಾದಿ ಹಬ್ಬದ ಹೊಸತೊಡುಕು ದಿನ ಮಾಂಸ‌ ಮಾರಾಟ ನಿಷೇಧ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಹಕ್ಕಿಜ್ವರದ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಂಸ ಪ್ರಿಯರಿಗೆ ಬಿಗ್​ ಶಾಕ್​ ನೀಡಿದೆ.ಯುಗಾದಿ ಹಬ್ಬದ ಹೊಸತಡುಕು ದಿನ ಮಾಂಸ‌ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿ ಬಲಿ‌ ಕೊಡುವಂತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಅಂತಾ ಆದೇಶ ಹೊರಡಿಸಿದ್ದಾರೆ.ಕೊರೊನಾ ವೈರಸ್​ ಹರಡಿದಾಗಿನಿಂದ ಈಗಾಗಲೇ ಕುಕ್ಕುಟೋದ್ಯಮ ನೆಲ ಕಚ್ಚಿದ. ನಮ್ಮ ರಾಜ್ಯದಲ್ಲೇ ಲಕ್ಷಾಂತರ ಕೋಳಿಗಳನ್ನು …

Read More »

ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ : ಬಾಲಚಂದ್ರ ಜಾರಕಿಹೊಳಿ

ಕೆಎಮ್‍ಎಫ್ ಬಲವರ್ಧನೆಗೆ ವಿನೂತನ ಯೋಜನೆ ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು: ಮುಂದಿನ ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳು ಶಕ್ತಿ ಮೀರಿ ದುಡಿದು ಕೆಎಮ್‍ಎಫ್ ಬಲವರ್ಧನೆಗೆ ಶ್ರಮಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ಬೆಂಗಳೂರಿನಲ್ಲಿ 14 ಜಿಲ್ಲಾ ಹಾಲು …

Read More »

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಸಿದ್ದಾಪುರದ ಕೆಲವು ಭಾಗ, ಶಿರಸಿ ಸೇರಿದಂತೆ ಹಲವಡೆ ಮಳೆಯಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಉತ್ತರ ಒಳನಾಡು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ …

Read More »

ಇಟಲಿಯಲ್ಲಿ ಸಿಲುಕಿಕೊಂಡಿದ್ದ ಸಚಿವ ಆನಂದ್ ಸಿಂಗ್ ಪುತ್ರಿ ಆಗಮನ

ಬಳ್ಳಾರಿ, ಮಾರ್ಚ್ 18: ಇಟಲಿಯ ರೋಮ್ ನಗರದಲ್ಲಿ ಸಿಲುಕಿಕೊಂಡಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಪುತ್ರಿ ಇಂದು ಬೆಳಗಿನ ಜಾವ ಬೆಂಗಳೂರಿಗೆ ಆಗಮಿಸಿದ್ದಾಳೆ. ಕರ್ನಾಟಕದ 150 ವಿದ್ಯಾರ್ಥಿಗಳು ಸೇರಿದಂತೆ 445 ಜನರು ಇಟಲಿಯಲ್ಲಿ ಸಿಲುಕಿಕೊಂಡಿದ್ದರು. ಕೊರೊನಾ ಪರೀಕ್ಷೆಯ ನೆಗಟಿವ್ ಸರ್ಟಿಫಿಕೇಟ್ ಕೊಡದೇ ಏರ್ ಇಂಡಿಯಾದವರು ವಿಮಾನ ಹತ್ತಿಸಿಕೊಳ್ಳಲು ಬಿಟ್ಟಿರಲಿಲ್ಲ. ಇಂದು ಅಗಮಿಸಿದ ಆನಂದ್ ಸಿಂಗ್ ಪುತ್ರಿಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆನಂದ್ ಸಿಂಗ್ ಪುತ್ರಿಯ ಜೊತೆಯಲ್ಲಿ …

Read More »

6 ಕಿ.ಮೀ ರಸ್ತೆಗೆ 6 ಕೋಟಿ- ರಾತ್ರಿ ಹಾಕಿದ್ದ ಡಾಂಬರ್ ಬೆಳಗ್ಗೆ ಕೈಯಲ್ಲಿ

ಚಿಕ್ಕಮಗಳೂರು: 6 ಕಿ.ಮೀ. ರಸ್ತೆಗೆ 6 ಕೋಟಿ ರೂ. ಒಂದು ವರ್ಷದ ಹಿಂದೆ ಬಿಡುಗಡೆಯಾಗಿತ್ತು. ಆದರೆ ಒಂದು ವರ್ಷದಿಂದ ಕಾಮಗಾರಿ ಮಾಡಿದ ಗುತ್ತಿಗೆದಾರ ಹಾಗೂ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಮಾಡಿದ್ದು ಮೂರೇ ಮೂರು ಕಿ.ಮೀ. ರಸ್ತೆ. ಅದು ರಾತ್ರಿ ಹಾಕಿದ ಡಾಂಬರ್ ಬೆಳಗ್ಗೆ ಕೈಗೆ ಬರುವಂತೆ ಎಂದು ಆರೋಪಿಸಿರೋ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿಕ್ಕನಕೂಡಿಗೆ ಗ್ರಾಮಸ್ಥರು ಗುತ್ತಿಗೆದಾರ ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನೇರ ರಸ್ತೆಗೆ ಡಾಂಬರ್ …

Read More »

ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ. ಮೃತ ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೊನೊ ಸೋಂಕು ತಗುಲಿದೆ. ಮೃತ ವೃದ್ಧನಿಗೆ ವೈದ್ಯರು ಆತನ ಮನೆಯಲ್ಲಿ ಚಿಕಿತ್ಸೆ ನೀಡಿದ್ದರು ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮತ್ತೆರಡು ಕೋವಿಡ್- 19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ …

Read More »

ಕೊರೊನಾ ಭೀತಿ ನಡುವೆಯೇ ಅದ್ದೂರಿ ಮದ್ವೆಯಲ್ಲಿ ಎಚ್‍ಡಿಡಿ ಭಾಗಿ:ಸಿಎಂ ಆದೇಶಕ್ಕೆ ಕ್ಯಾರೇ ಎನ್ನದ ಜೆಡಿಎಸ್ ಜಿಲ್ಲಾಧ್ಯಕ್ಷ

ಚಿತ್ರದುರ್ಗ: ಸ್ವತಃ ತಾವೇ ಆದೇಶ ಹೊರಡಿಸಿ ಇಂದು ಬೆಳಗಾವಿಯಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಂಡರೆ, ಇತ್ತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ತಮ್ಮ ಪಕ್ಷದ ಜಿಲ್ಲಾಧ್ಯಕ್ಷನ ಮಗನ ಮದುವೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ರಾಜ್ಯಾದ್ಯಂತ ಹಬ್ಬ ಹರಿದಿನಗಳು ಹಾಗೂ ಮದುವೆ, ಸಮಾರಂಭಗಳು ಸೇರಿದಂತೆ ಜಾತ್ರೆಯನ್ನು ಸಹ ನಡೆಸದಂತೆ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಅದ್ದೂರಿಯಾಗಿ ಸಾವಿರಾರು ಜನರನ್ನು …

Read More »

ಗದಗದಲ್ಲಿ ಮೂರುವರೆ ವರ್ಷದ ಕಂದಮ್ಮನಿಗೆ ಕೊರೊನಾ ಸೋಂಕಿರುವ ಶಂಕೆ…….,

ಗದಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕಿತ ಪ್ರಕರಣ ವರಿದಿಯಾಗಿದ್ದು, ಲಂಡನ್‍ನಿಂದ ಗದಗಕ್ಕೆ ಬಂದ ಮೂರುವರೆ ವರ್ಷದ ಮಗುವಿಗೆ ಸೋಂಕು ತಟ್ಟಿರುವ ಶಂಕೆ ವ್ಯಕ್ತವಾಗಿದೆ. ಲಂಡನ್‍ನಿಂದ ಜಿಲ್ಲೆಗೆ ಬಂದಿದ್ದ ಕುಟುಂಬಕ್ಕೆ ಕೊರೊನಾ ಸೋಂಕಿರುವ ಶಂಕೆ ವ್ಯಕ್ತವಾಗಿದೆ. ಸೋಂಕು ಶಂಕಿತ ವ್ಯಕ್ತಿಗಳನ್ನ ಗದಗ ಜಿಮ್ಸ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಮೂಲದ ಕುಟುಂಬ ಲಂಡನ್‍ನಲ್ಲಿ ನೆಲೆಸಿತ್ತು. ಆದರೆ ತಂದೆ, ತಾಯಿ ಮಗುವಿನೊಂದಿಗೆ ಮಾರ್ಚ್ 9ರಂದು …

Read More »