Breaking News

ರಾಜ್ಯ

ವಾಣಿಜ್ಯ ಸಿಲಿಂಡರ್​ ಬೆಲೆ 209 ರೂ ಏರಿಕೆ.. ಹೋಟೆಲ್​ ಉದ್ಯಮಿಗಳಿಗೆ ಶಾಕ್​

ನವದೆಹಲಿ : ವಾಣಿಜ್ಯ ಅಡುಗೆ ಅನಿಲ (ಎಲ್‌ಪಿಜಿ) ದರ 19 ಕೆಜಿ ಸಿಲಿಂಡರ್‌ಗೆ 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಇದರಿಂದ ಹೋಟೆಲ್​ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಸದ್ಯ ಗೃಹಬಳಕೆಯ ಎಲ್‌ಪಿಜಿಯ ಬೆಲೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ. 903 ರಷ್ಟಿದೆ. ಇದೇ ವೇಳೆ ವಿಮಾನಯಾನ ಇಂಧನದ ಬೆಲೆಯನ್ನು ಹೆಚ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ದೇಶದಲ್ಲಿ ದಸರಾ, ದೀಪಾವಳಿ ಸೇರಿದಂತೆ ಹಬ್ಬದ ಸೀಸನ್ …

Read More »

ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿಯವರಿಗೆ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ಪ್ರದಾನ

ಟೊರೊಂಟೊ : ಖ್ಯಾತ ಲೇಖಕಿ, ಸಮಾಜ ಸೇವಕಿ, ಇನ್ಫೊಸಿಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ನೀಡಿ ಗೌರವಿಸಿದೆ. 50,000 ಡಾಲರ್ ಮೌಲ್ಯದ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ಪ್ರತಿ ವರ್ಷ ತಾವು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಪ್ರಮುಖ ಛಾಪು ಮೂಡಿಸಿದ ಭಾರತೀಯರಿಗೆ ನೀಡಲಾಗುತ್ತದೆ. “ಸುಧಾ ಮೂರ್ತಿ ಅವರಿಗೆ ಗ್ಲೋಬಲ್ ಇಂಡಿಯನ್ ಪ್ರಶಸ್ತಿ …

Read More »

ಸಿಎಂ ಸ್ಥಾನದ ಬಯಕೆ ಹೊಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ:ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ರೀತಿ …

Read More »

ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಉತ್ತರಹಳ್ಳಿಯಿಂದ ಕೋಣನಕುಂಟೆ ಕ್ರಾಸ್ ದಾರಿ ಮಧ್ಯೆ ಶನಿವಾರ ತಡರಾತ್ರಿ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ನೇಹಿತರನ್ನು ಭೇಟಿಯಾಗಿ ಜೆ.ಪಿ ನಗರದ ತಮ್ಮ ಮನೆಗೆ ನಟ ನಾಗಭೂಷಣ್ ತೆರಳುತ್ತಿದ್ದರು. ಫುಟ್ ಪಾತ್ ಮೇಲೆ ವಾಕಿಂಗ್ ಮಾಡುತ್ತಿದ್ದ ದಂಪತಿ ರಸ್ತೆಗಿಳಿದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ …

Read More »

ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ. 9ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ಬಾಲಕ ಅರ್ಧ ವಾರ್ಷಿಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಈ ಘಟನೆ ಸಂಭವಿಸಿದೆ. ರಾಹುಲ್​ ಕೋಲಕಾರ (15) ಮೃತ ವಿದ್ಯಾರ್ಥಿ. ಅರ್ಧ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ ಬಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ತೀವ್ರವಾಗಿ ತೊಂದರೆ ಉಂಟಾದಾಗ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ …

Read More »

ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ

ಬೆಳಗಾವಿ: ಯಲ್ಲಮ್ಮದೇವಿ ಉತ್ತರ ಕರ್ನಾಟಕದ ಆರಾಧ್ಯ ದೇವಿ. ಲಕ್ಷಾಂತರ ಸಂಖ್ಯೆಯ ಭಕ್ತರು ಭೇಟಿ ಕೊಡುವ ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು. 40 ದಿನಗಳ ಅವಧಿಯಲ್ಲಿ ಬರೋಬ್ಬರಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಎರಡು ಹಂತದಲ್ಲಿ ಹುಂಡಿ ಎಣಿಕೆ ಕಾರ್ಯ: ಏಳುಕೊಳ್ಳದ ಯಲ್ಲಮ್ಮ ದೇವಿಯ ದರ್ಶನಕ್ಕೆ ಕರ್ನಾಟಕ ಅಷ್ಟೇ ಅಲ್ಲದೇ, ನೆರೆಯ ಮಹಾರಾಷ್ಟ್ರ, ಗೋವಾ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು …

Read More »

ಸತೀಶ ಜಾರಕಿಹೊಳಿ ಸೇರಿ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ: ಒಟ್ಟು 61 ಜನರಿಗೆ ಬೆದರಿಕೆ

ಬೆಳಗಾವಿ: ಚೆನ್ನಮ್ಮ ಕಿತ್ತೂರು ತಾಲ್ಲೂಕಿನ ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರು, ಸಾಹಿತಿಗಳು ಮತ್ತು ಚಿತ್ರ ನಟರಿಗೆ ಜೀವ ಬೆದರಿಕೆ ಹಾಕಿರುವ ಅನಾಮಧೇಯ ಪತ್ರವೊಂದು ಬಂದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪತ್ರದಲ್ಲಿ ಹಲವು ಪ್ರಗತಿಪರರು, ವಿಚಾರವಾದಿಗಳಿಗೂ, ಸಾಹಿತಿಗಳು, ನಟರು, ಸಚಿವರ ಹೆಸರುಗಳನ್ನು ಉಲ್ಲೇಖಿಸಿ ಆರೋಪಿಯು ಜೀವ ಬೆದರಿಕೆ ಹಾಕಿದ್ದಾನೆ ಸೆಪ್ಟೆಂಬರ್​ 20 ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲ ಮಂಟಪ ಆಶ್ರಮಕ್ಕೆ ಬೆದರಿಕೆ …

Read More »

ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಅರೆಸ್ಟ್​

ಬೆಂಗಳೂರು: ರಾಜ್ಯದ ಕೆಲ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಹಿಂದೂ ಸಂಘಟನೆ ಕಾರ್ಯಕರ್ತನಾಗಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಂತೆ ಸಾಹಿತಿಗಳ ನಿಯೋಗ ಇತ್ತೀಚೆಗೆ ಗೃಹ ಸಚಿವರಿಗೆ ಮನವಿ ಸಲ್ಲಿಸಿತ್ತು. ಅದರಂತೆ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಾಹಿತಿಗಳಾದ ಕುಂ. ವೀರಭಧ್ರಪ್ಪ, ಬಿ ಟಿ ಲಲಿತಾ ನಾಯಕ್, …

Read More »

ಬಿಎಸ್​ವೈ ಜೈಲಿಗೆ ಹೋಗಲು ಎಚ್ ಡಿ ಕುಮಾರಸ್ವಾಮಿ ಕಾರಣ: ಶಾಸಕ ಸವದಿ

ಚಿಕ್ಕೋಡಿ: ಮಾಜಿ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರು ಎಂದು ಆರೋಪ ಮಾಡಿ ದ್ವೇಷ ಸಾಧಿಸಲು ಯಡಿಯೂರಪ್ಪ ಹೋಗಿದ್ದವರು. ಅದೇ ಕುಮಾರಸ್ವಾಮಿ ಅವರು ಬಿಎಸ್​ವೈ ಅವರನ್ನು ಭ್ರಷ್ಟಾಚಾರ ಸುಳಿಯಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿದರು. ಆದರೆ, ಇವತ್ತು ಅಧಿಕಾರಿಗೋಸ್ಕರ ಇಬ್ಬರು ನಾಯಕರು ಸ್ವಾಭಿಮಾನ ಬದಿಗೆ ಒತ್ತಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, …

Read More »

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ತಂಬಾಕು ಅಂಗಡಿ ಮೇಲೆ ಪೊಲೀಸರ​ ದಾಳಿ

ಕಡಬ (ದಕ್ಷಿಣಕನ್ನಡ) : ಶಾಲೆ ಬಳಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಕಚೇರಿ ಸ್ಪಂದಿಸಿದೆ. ಈ ಸಂಬಂಧ ಕಡಬ ತಾಲೂಕಿನ ಬಿಳಿನೆಲೆ ಕೈಕಂಬ ಶಾಲೆಯ ಬಳಿ ಇರುವ ಅಂಗಡಿ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂಗಡಿಯಲ್ಲಿ ಮಾರಾಟ ಮಾಡುತ್ತಿದ್ದ ತಂಬಾಕು ಮತ್ತು ಸಿಗರೇಟ್​ ಮುಂತಾದವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ಇಲ್ಲಿನ …

Read More »