Home / ರಾಜ್ಯ (page 392)

ರಾಜ್ಯ

ಲೋಕಸಭಾ ಚುನಾವಣೆ 2024: ಬಾಗಲಕೋಟೆ ಟಿಕೆಟ್ ಆಕಾಂಕ್ಷಿಗಳ‌ ಪಟ್ಟಿ ಹೀಗಿದೆ

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಇನ್ನು 9 ತಿಂಗಳು ಬಾಕಿ ಇರುವಾಗಲೇ ‌ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನಮಂತನ ಬಾಲದಂತೆ ಬೆಳೆಯುತ್ತಿದ್ದು, ನಾನಾ..ನೀನಾ ಎಂಬ ಸ್ಪರ್ಧೆ ಏರ್ಪಟ್ಟಿದೆ. ಕಳೆದ‌ ಲೋಕಸಭಾ‌ ಚುನಾವಣೆಗೆ ಕಾಂಗ್ರೆಸ್ ‌ಪಕ್ಷದಿಂದ‌ ಸ್ಪರ್ಧೆ ಮಾಡಿ ಸೋಲು ಕಂಡಿರುವ ವೀಣಾ ಕಾಶಪ್ಪನವರ ಮತ್ತೆ ಅಖಾಡಕ್ಕಿಳಿಯುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಹಲವರು ತಾವೂ ಕೂಡ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಮೂಲಕ‌ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗೆ …

Read More »

ಮಂಗಸೂಳಿ ಗ್ರಾಮದ ಆರಾಧ್ಯ ದೈವ ಶ್ರೀ ಮಲ್ಲಯ್ಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾವಿರಾರು ಭಕ್ತರ ವಿಶೇಷ ಪೂಜೆ

ಕಾಗವಾಡದ ತಾಲೂಕಿನ ಮಂಗಸೂಳಿ ಗ್ರಾಮದ ಆರಾಧ್ಯ ದೈವ ಶ್ರೀ ಮಲ್ಲಯ್ಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾವಿರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಶ್ರಾವಣ ಮಾಸದ ನಾಲ್ಕನೇ ಭಾನುವಾರದಂದು ಎರಡೂ ರಾಜ್ಯಗಳ ಗಡಿ ಗ್ರಾಮಗಳ ಭಕ್ತರು ಆಗಮಿಸಿ ದೇವರಿಗೆ ಹರಕೆ ತೀರಿಸಿದರು.   ದೇವಸ್ಥಾನದ ಅರ್ಚಕ ಪ್ರಭು ಪೂಜಾರಿ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಮಂಗಸೂಳಿ ದಕ್ಷಿಣ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಮಲ್ಲಯ್ಯನ ದೇಗುಲಕ್ಕೆ ಹೆಸರುವಾಸಿಯಾಗಿದೆ. ಮಂಗಸೂಳಿ ಎಂಬ …

Read More »

ಬೆಳಗಾವಿ ಜಿಲ್ಲೆಯಲ್ಲಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ಬೆಳಗಾವಿ : ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಬೆಳಗಾವಿ: ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ನಾಗರಿಕ, ಬ್ಯಾಂಕಿಂಗ್ ಸೇವೆಗಳು, ಆರ್ ಟಿಐ ಸೇರಿದಂತೆ ಗ್ರಾಮ ಮಟ್ಟದಲ್ಲಿಯೇ ಎಲ್ಲಾ ನಾಗರಿಕ ಕೇಂದ್ರೀತ ಚಟುವಟಿಕೆಗಳಿಗಾಗಿ ನೆರವು …

Read More »

ಮಾಜಿ ಸಚಿವರು, ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕೊಡಬೇಡಿ.. ಕಾರ್ಯಕರ್ತರನ್ನೇ ಪರಿಗಣಿಸಿ- ಕೈ ಮುಖಂಡರ ಆಗ್ರಹ

ಬೆಂಗಳೂರು: ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪ್ರಚಾರ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಕೈ ಕಾರ್ಯಕರ್ತರು ನಿಗಮ‌ ಮಂಡಳಿಗೆ ಶಾಸಕರನ್ನು ನೇಮಕ ಮಾಡದಂತೆ ಒಕ್ಕೋರಲಿನ ಆಗ್ರಹ ಮಾಡಿದರು.‌ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್, ನಿಗಮ ಮಂಡಳಿಗಳ ಅಧ್ಯಕ್ಷ, ಸದಸ್ಯ ಸ್ಥಾನವನ್ನು ಈ ತಿಂಗಳಾತ್ಯಕ್ಕೆ ನೇಮಿಸುವಂತೆ ಸಲಹೆ ನೀಡಿದರು.   ಎಲ್ಲರಿಗೂ ಅವಾಕಶ ಸಿಗುವ ನಿಟ್ಟಿನಲ್ಲಿ …

Read More »

ದೆಹಲಿಯ ಸರ್​ ಗಂಗಾರಾಮ್​ ಆಸ್ಪತ್ರೆಗೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ದಾಖಲ!

ನವದೆಹಲಿ: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಸರ್​ ಗಂಗಾರಾಮ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೌಮ್ಯ ಜ್ವರದಿಂದ (Mild Fever) ಅವರು ಬಳಲುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ತಜ್ಞ ವೈದ್ಯರು ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ”ಸೋನಿಯಾ ಗಾಂಧಿ ಶನಿವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೆನ್ನಾಗಿಯೇ ಇದ್ದಾರೆ. ವೈದ್ಯರ ತಂಡ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ” ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ …

Read More »

ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಕೇಸ್: ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಇಲ್ಲಿನ ಶಿವಬಸವ ನಗರದಲ್ಲಿ ಆ.30ರಂದು ರಾತ್ರಿ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಾಳಮಾರುತಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ರಾಜಾರಾಮಪುರಿ ಬಾಯಪಾಸ್ ಚಾಳ ಗಲ್ಲಿಯ ಪ್ರಥಮೇಶ ಧರ್ಮೇಂದ್ರ ಕಸಬೇಕರ್ (20) ಹಾಗೂ ಆಕಾಶ ಕಾಡಪ್ಪಾ ಪವಾರ್(21) ಬಂಧಿತ ಆರೋಪಿಗಳು. ಆ.30ರ ರಾತ್ರಿ ಶಿವಬಸವ ನಗರದ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ನಾಗರಾಜ ಈರಪ್ಪ ಗಾಡಿವಡ್ಡರ್ (26) ಎಂಬ ಯುವಕನನ್ನು ಬೈಕ್‍ನಲ್ಲಿ …

Read More »

Bigg Boss season 10: ಬಿಗ್​ ಬಾಸ್​ ಸೀಸನ್​ 10 ಶೀಘ್ರವೇ ಪ್ರಾರಂಭವಾಗಲಿದೆ.

Bigg Boss season 10: ಬಿಗ್​ ಬಾಸ್​ ಸೀಸನ್​ 10 ಶೀಘ್ರವೇ ಪ್ರಾರಂಭವಾಗಲಿದೆ. ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ‘ಬಿಗ್​ ಬಾಸ್’​ ಕೂಡ ಒಂದು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಡೆಸಿಕೊಡುವ ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಈವರೆಗೆ ಒಂಬತ್ತು ಸೀಸನ್​ಗಳನ್ನು ಯಶಸ್ವಿಯಾಗಿ ಮುಗಿಸಿರುವ ಬಿಗ್​ ಬಾಸ್​ ಇದೀಗ ಮತ್ತೆ ಬಂದಿದೆ. ಬಿಗ್​ ಬಾಸ್​ 10ನೇ ಸೀಸನ್​ ಶೀಘ್ರವೇ ಪ್ರಾರಂಭವಾಗಲಿದೆ. ನಿನ್ನೆ ಕಿಚ್ಚನ ಹುಟ್ಟುಹಬ್ಬದಂದು ಹೊಸ ಸೀಸನ್​ನ ಪ್ರೋಮೋ …

Read More »

ಇಂಡಿಯಾ ಮೈತ್ರಿಕೂಟದಿಂದ ಸನಾತನ ಧರ್ಮಕ್ಕೆ ಅವಮಾನ; ಗೃಹ ಸಚಿವ ಅಮಿತ್​ ಶಾ

ಜೈಪುರ (ರಾಜಸ್ಥಾನ): ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್​ ‘ಸನಾತನ ಧರ್ಮ ಸೊಳ್ಳೆ, ಡೆಂಗ್ಯೂ, ಪ್ಲೂ, ಮಲೇರಿಯಾ ಇದ್ದ ಹಾಗೆ’ ಎಂದು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಬಿಜೆಪಿಗೆ ಪ್ರಬಲ ಟೀಕಾಸ್ತ್ರ ನೀಡಿದಂತಾಗಿದ್ದು, ಇಂಡಿಯಾ ಮೈತ್ರಿಕೂಟ ಸನಾತನ ಧರ್ಮದ ವಿರುದ್ಧವಾಗಿದೆ. ಕಾಂಗ್ರೆಸ್​ ಸೇರಿದಂತೆ ಅದರ ಮಿತ್ರ ಪಕ್ಷಗಳು ಹಿಂದು ಧರ್ಮವನ್ನು ಪದೆ ಪದೇ ಅವಮಾನಿಸುತ್ತಿವೆ ಎಂದು ಕಿಡಿಕಾರಿದೆ. ಚುನಾವಣಾ ರಾಜ್ಯವಾದ ರಾಜಸ್ಥಾನದಲ್ಲಿ ಪ್ರಚಾರ ಸಭೆಯಲ್ಲಿ …

Read More »

ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕೈದಿ ಕಾರಾಗೃಹದಿಂದ ಪರಾರಿ

ರಾಯಚೂರು : ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕೈದಿ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಜಿಲ್ಲೆಯ ದೇವದುರ್ಗದ ಉಪಕಾರಾಗೃಹದಲ್ಲಿ ನಡೆದಿದೆ. ವಿಚಾರಣಾಧೀನ ಕೈದಿ ಅನ್ವರ‌ಬಾಷಾ ಪರಾರಿಯಾಗಿರುವ ಕೈದಿ.   ವಿಜಯನಗರ ಜಿಲ್ಲೆಯ ರಾಮನಗರ ನಿವಾಸಿಯಾಗಿದ್ದ ಅನ್ವರಬಾಷಾ ಪೇಂಟಿಂಗ್​ ಕೆಲಸ ಮಾಡುತ್ತಿದ್ದ. ಕಳೆದ ಮೇ ತಿಂಗಳಲ್ಲಿ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಾಶಾಳ ಹತ್ತಿರ ನಡೆದ ಕೊಲೆ ಪ್ರಕರಣ ಸಂಬಂಧ ಅನ್ವರಬಾಷಾನನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿತ್ತು. ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದ ಆರೋಪಿ, …

Read More »

ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ: ದೇವೇಗೌಡ

ಹಾಸನ: ಪ್ರಜ್ವಲ್ ರೇವಣ್ಣರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, “ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ” ಎಂದು ತಿಳಿಸಿದ್ದಾರೆ. ಹಾಸನದ ಮಾವಿನಕೆರೆ ಬೆಟ್ಟದಲ್ಲಿ ಶನಿವಾರ ಈ ಕುರಿತು ಅವರು ಮಾತನಾಡಿದರು. “ಮುಚ್ಚಿಡಲು ಇಲ್ಲಿ ಏನೂ ಇಲ್ಲ. ಕೆಳ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದಿದ್ದರೆ ಜನರು ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತಾರೆ. ಅಂತೆಯೇ ಪ್ರಜ್ವಲ್ ಕೂಡ ಸುಪ್ರೀಂ ಕೋರ್ಟ್‌ …

Read More »