Breaking News
Home / ರಾಜ್ಯ (page 41)

ರಾಜ್ಯ

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ.

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ. ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಕಲ್ಲಂಗಡಿ, ಅರಿಸಿನ ಮುಂತಾದವುಗಳ ಇಳುವರಿ ಕುಸಿಯಲು ಇದು ಕಾರಣವಾಗಿದೆ. ಅಥಣಿ ತಾಲ್ಲೂಕಿನಲ್ಲಿ ದ್ರಾಕ್ಷಿ, ಚಿಕ್ಕೋಡಿ ತಾಲ್ಲೂಕಿನಲ್ಲಿ ಕಲ್ಲಂಗಡಿ, ಕಾಗವಾಡ ತಾಲ್ಲೂಕಿನಲ್ಲಿ ಹಸಿ ಮೆಣಸಿನಕಾಯಿ, ರಾಯಬಾಗ ತಾಲ್ಲೂಕಿನಲ್ಲಿ ಅರಿಸಿನ, ನಿಪ್ಪಾಣಿ ತಾಲ್ಲೂಕಿನಲ್ಲಿ ತರಕಾರಿ ಹೆಚ್ಚಾಗಿ ಬೆಳೆದಿದ್ದಾರೆ. ನೀರಿಲ್ಲದೇ ತೋಟಗಾರಿಕೆ ಬೆಳೆಯ ಇಳುವರಿ ಈ ಬಾರಿ ಕುಂಠಿತವಾಗಿದೆ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ …

Read More »

ಅನಧಿಕೃತ ಆನ್‌ಲೈನ್ ಕೇಂದ್ರಕ್ಕೆ ಬೀಗ

ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಅನಧಿಕೃತ ಆನ್‌ಲೈನ್ ಕೇಂದ್ರದ ಮೇಲೆ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಹಾಕಿದೆ. ಸರ್ಕಾರದಿಂದ ಅನುಮತಿ ಪಡೆಯದೇ ಅರಭಾವಿ ಗ್ರಾಮದ ಆನಂದ ಕಡ್ಡಿ ಎಂಬುವವರಿಗೆ ಸೇರಿದ ಕೇಂದ್ರ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿತ್ತು. ಆಧಾರ್, ಪಡಿತರ, ಪಾನ್ ತಿದ್ದುಪಡಿ ಹಾಗೂ ಹೊಸ ಅರ್ಜಿಗಳನ್ನು ಪಡೆಯಲು ಸಾರ್ವಜನಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರು ತಹಶೀಲ್ದಾರ್‌ಗೆ ದೂರು …

Read More »

ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ

ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಎಂದು ಸುಳ್ಳು ಹೇಳಿದ್ದಾರೆ. ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Read More »

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

ಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ ಕೆಲಸ ನಡೆಯುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು. ಇಲ್ಲಿ ಬುಧವಾರ ನಡೆದ ಮುಖಂಡರ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮಾಧ್ಯಮವನ್ನೂ ಅವರ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಬಿಜೆಪಿಯವರ ವಿರುದ್ಧ ಮಾತನಾಡಲಾಗದಂತೆ, ಪ್ರಶ್ನಿಸಿ ಬರೆಯಲಾಗದಂತೆ ಮಾಡಿದ್ದಾರೆ. ಭಯದ ವಾತಾವರಣ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದರು.

Read More »

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ:

ಬೆಂಗಳೂರು, ಮಾ.28: ಎಸ್‌ಎಸ್‌ಎಲ್​ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆಬೆಂಗಳೂರಿನರಾಗಿಗುಡ್ಡ(Ragigudda) ಬಳಿ ನಿನ್ನೆ(ಮಾ.27) ನಡೆದಿದೆ. ನಿನ್ನೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ.   …

Read More »

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್‌

ಬೆಂಗಳೂರು, (ಮಾರ್ಚ್ 28): ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ(siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ (DK Shivakumar) ಸಮನ್ಸ್​ ಜಾರಿ ಮಾಡಿದೆ. ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ …

Read More »

ಜನರ ಸಂಚಾರಕ್ಕೆ ಮುಕ್ತವಾಯ್ತು ಹೈಟೆಕ್ ಹೈವೆ

ದೇವನಹಳ್ಳಿ, ಮಾರ್ಚ್​ 28: ಸಿಲಿಕಾನ್ ಸಿಟಿ ಅಂದರೆ ಇತ್ತೀಚೆಗೆ ಟ್ರಾಪಿಕ್​​ನಿಂದಾಗಿ ವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಪೀಕ್ ಅವರ್​​ನಲ್ಲಿ ಪೀಣ್ಯ ಕಡೆಯಿಂದ ಹಾಸನ- ತುಮಕೂರು ಹೆದ್ದಾರಿ(highway)ತಲುಪಲು ಸವಾರರು ಹೈರಣಾಗುತ್ತಿದ್ದರು. ಆದರೆ ಈಗ ಸಿಟಿ ಹೊರ ವಲಯದಲ್ಲಿ ಜನರಿಗೆ ಸಂಚಾರಕ್ಕೆ ಹೈಟೆಕ್ ಹೈವೆ ಮುಕ್ತವಾಗಿದೆ. ಆ ಮೂಲಕ ಹೆದ್ದಾರಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡುವ ಜೊತೆಗೆ ಸುರಕ್ಷತೆಗೂ ಒತ್ತು ನೀಡಲಾಗಿದೆ. ಹೊಸಕೋಟೆಯಿಂದ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ದಾಬಸ್ ಪೇಟೆವರೆಗೂ ಹೆದ್ದಾರಿ …

Read More »

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

 ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ   ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘  ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ’ ಎಂದು ಹೇಳಿದ್ದಾರೆ. ಬೆಳಗಾವಿ, ಮಾರ್ಚ್​ 28: ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ …

Read More »

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ ಪತ್ನಿ ರಿವಾಬ ಗುಜರಾತ್ ನ ಜಾಮ್ನಾನಗರದ ಬಿಜೆಪಿ ಶಾಸಕಿ. ಸಾಮಾನ್ಯವಾಗಿ ರಿವಾಬ ಸಾಂಪ್ರದಾಯಿಕ ಡ್ರೆಸ್ ನಲ್ಲೇ ಕಾಣಿಸಿಕೊಳ್ಳುತ್ತಾರೆ. ಆದರೆ ಅಪರೂಪಕ್ಕೆ ಟಿ-ಶರ್ಟ್ ತೊಟ್ಟುಕೊಂಡಿರುವ ಫೋಟೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಪತಿ ರವೀಂದ್ರ ಜಡೇಜಾ ಫೋಟೋ ಹಿನ್ನಲೆಯಲ್ಲಿತ್ತು. ಅವರು ಧರಿಸಿದ್ದ ಟಿ-ಶರ್ಟ್ ನಲ್ಲಿ ‘ಹುಕುಂ’ (ಆರ್ಡರ್) ಎಂದು ಬರೆದಿತ್ತು. …

Read More »

ಒಳ ರಾಜಕೀಯ, ಕಂತ್ರಿ ಕೆಲಸ ಎಂದಿಗೂ ಮಾಡಿಲ್ಲ; ಟಿಕೆಟ್ ತಪ್ಪಿದ್ದಕ್ಕೆ ನಾರಾಯಣಸ್ವಾಮಿ ಅಸಮಾಧಾನ

ಚಿತ್ರದುರ್ಗ: ಲೋಕಸಭಾ ಚುನಾವಣೆ (Loksabha Election) ಟಿಕೆಟ್ ವಂಚಿತ ಹಾಲಿ ಸಂಸದ, ಕೇಂದ್ರ ಸಚಿವ ನಾರಾಯಣಸ್ವಾಮಿ (Union Minister Narayanaswamy), ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ. ನ್ಯೂಸ್ 18 ಜೊತೆ ಮಾತನಾಡಿದ ನಾರಾಯಣಸ್ವಾಮಿ, ಚಿತ್ರದುರ್ಗ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ಬಹಳ ನೋವಿದೆ. ಅಲ್ಲಿನ ರಾಜಕಾರಣಿಗಳು ಕೇಳಿಲ್ಲ ಅಂತಾನೇ ನಾನು ರಾಜಕಾರಣ ಬಿಟ್ಟಿದ್ದೇನೆ. ಅವರು ಎಲ್ಲಾ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ಮಾಡ್ತಿದ್ದಾರೆ. ನನ್ನ ನಡವಳಿಕೆ ಬಗ್ಗೆ …

Read More »