Home / ರಾಜ್ಯ (page 410)

ರಾಜ್ಯ

ಯೋಗಿ ಆದಿತ್ಯನಾಥ್ ಪಾದ ಸ್ಪರ್ಶಿಸಿ ಸಮಸ್ಕರಿಸಿದ ‘ಜೈಲರ್​’ ಸ್ಟಾರ್​ ರಜನಿಕಾಂತ್

ರಜನಿಕಾಂತ್​ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಶನಿವಾರ ಭೇಟಿಯಾದರು. ಕಾಲಿವುಡ್​ ಸೂಪರ್​ ಸ್ಟಾರ್​ ‘ತಲೈವಾ’ ರಜನಿಕಾಂತ್​ ಅವರ ಜೈಲರ್​ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ಸು ಕಂಡಿದೆ. ನಿನ್ನೆ (ಶನಿವಾರ) ರಜನಿಕಾಂತ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಲಕ್ನೋದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.     ಸಿಎಂ ಪಾದ ಸ್ಪರ್ಶಿಸಿದ ರಜನಿಕಾಂತ್: ಶುಕ್ರವಾರ ಲಕ್ನೋದಲ್ಲಿ ಜೈಲರ್​ ಸ್ಪೆಷಲ್​ ಸ್ಕ್ರೀನಿಂಗ್​ ಆಯೋಜಿಸಲಾಗಿತ್ತು. ಈವೆಂಟ್​ನಲ್ಲಿ ಡಿಸಿಎಂ …

Read More »

ಚಂದ್ರಯಾನ-3: ಲ್ಯಾಂಡರ್‌ನ ವೇಗ ತಗ್ಗಿಸುವ ಅಂತಿಮ ಹಂತದ ಪ್ರಕ್ರಿಯೆ ಯಶಸ್ವಿ

Chandrayaan-3: ‘ಚಂದ್ರಯಾನ-3’ ಯೋಜನೆಯ ಲ್ಯಾಂಡರ್‌ ಘಟಕವನ್ನು ಆಗಸ್ಟ್‌ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ (South Pole) ಇಸ್ರೋ ಸಾಫ್ಟ್‌ ಲ್ಯಾಂಡಿಂಗ್ ಮಾಡಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಈ ನಿಟ್ಟಿನಲ್ಲಿ ಡೀಬೂಸ್ಟ್‌ (ಲ್ಯಾಂಡರ್‌ನ ವೇಗ ತಗ್ಗಿಸುವುದು) ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸುತ್ತಿದೆ. ಬೆಂಗಳೂರು/ನವದೆಹಲಿ : ಚಂದ್ರಯಾನ-3 ಗಗನನೌಕೆಯು ಭೂಮಿಯ ಏಕೈಕ ಉಪಗ್ರಹ ಚಂದ್ರನಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಇಂದು …

Read More »

ಈರುಳ್ಳಿ ರಫ್ತು ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ : ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಅಭಾವ ತಗ್ಗಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ ರಫ್ತಾಗುವ ಈರುಳ್ಳಿಗೆ ಶೇ.40ರಷ್ಟು ಸುಂಕ ವಿಧಿಸಿದೆ. ರಫ್ತು ಸುಂಕವನ್ನು ಡಿಸೆಂಬರ್ 31ರ ವರೆಗೆ ವಿಧಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ನವದೆಹಲಿಯಲ್ಲಿ ಶನಿವಾರ ಈರುಳ್ಳಿ ಚಿಲ್ಲರೆ ಮಾರಾಟ ದರ ಕೆ.ಜಿಗೆ 37 ರೂ ಇತ್ತು. ಈ ದರವು ಸೆಪ್ಟೆಂಬರ್​ದಲ್ಲಿ ಏರಿಕೆ ಆಗುವ ಸಾಧ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ …

Read More »

ಹಿಂದಿ ಪ್ರಚಾರ ಸಭಾದಲ್ಲಿ ಅನುದಾನ ದುರ್ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆರಂಭಿಸಿದೆ.

ಧಾರವಾಡ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಕರ್ನಾಟಕ ಪ್ರಾಂತದ ಕಚೇರಿಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಶುರು ಮಾಡಿದೆ. ಕಳೆದೊಂದು ವಾರದಿಂದ ಬೀಡುಬಿಟ್ಟಿರುವ ತನಿಖಾಧಿಕಾರಿಗಳು ಧಾರವಾಡದ ಹಿಂದಿ ಪ್ರಚಾರ ಸಭಾದ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕೇಂದ್ರ‌ ಸರ್ಕಾರದ 22 ಕೋಟಿ ರೂ.ಗೂ ಹೆಚ್ಚು ಹಣ ದುರ್ಬಳಕೆ ಮಾಡಿರುವ ಆರೋಪವನ್ನು ಪ್ರಚಾರ ಸಭಾ ಎದುರಿಸುತ್ತಿದೆ. ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಸಿಬಿಐ ತಂಡವು ಸಭಾದ …

Read More »

ಉತ್ತರ ಕನ್ನಡದಲ್ಲಿ ಗೋವಾ ಸರ್ಕಾರದ ‘ಮಿಷನ್ ರೇಬೀಸ್’ ಯೋಜನೆ ಅನುಷ್ಠಾನ

ಕಾರವಾರ (ಉತ್ತರಕನ್ನಡ) : ಗೋವಾ-ಕರ್ನಾಟಕ ಗಡಿ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಇದರ ನಡುವೆ ಗಡಿ ಹಂಚಿಕೊಂಡಿರುವ ಕರ್ನಾಟಕದ ತಾಲೂಕುಗಳಿಗೆ ಅಲ್ಲಿನ ಸರ್ಕಾರ ತನ್ನ ಯೊಜನೆಯೊಂದನ್ನು ವಿಸ್ತರಿಸಿದೆ. ಗಡಿ ತಾಲೂಕುಗಳಲ್ಲಿ ಮಿಷನ್ ರೇಬೀಸ್ ಅನುಷ್ಠಾನ ಮಾಡುತ್ತಿದೆ. ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳದಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆಯೊಂದಿಗೆ ರೇಬೀಸ್ ಚುಚ್ಚುಮದ್ದು ನೀಡುವಂತೆ ಅನೇಕ ವರ್ಷಗಳಿಂದ ಜನರು ಆಗ್ರಹಿಸುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಷ್ಟೇ ಕರ್ನಾಟಕ ಸರ್ಕಾರ ಈ …

Read More »

ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ”: ಸಿ.ಟಿ.ರವಿ

ಬೆಂಗಳೂರು: “ರಾಜ್ಯ ಕಾಂಗ್ರೆಸ್ ಸರ್ಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ” ಎಂದು ಬಿಜೆಪಿ ಮಾಜಿ ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿತ್ತು. ಯಾರಿಗೂ ಬಹುಮತ ಇರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸೇರಿ ಸರ್ಕಾರ ನಡೆಸಿದ್ದವು. 3 …

Read More »

ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು: ವಿನಯ ಕುಲಕರ್ಣಿ

ವಿಜಯಪುರ: ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಾಕಷ್ಟು ಜನರು ಇದ್ದಾರೆ. ಎರಡುವರೆ ವರ್ಷದಲ್ಲಿ ಪೂರ್ಣ ಟೀಂ ಬದಲಾಗಲಿದೆ. ಆಗ ಉಳಿದವರಿಗೂ ಸಚಿವ ಸ್ಥಾನದ ಭಾಗ್ಯ ದೊರೆಯಲಿದೆ. 135 ಜನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಕೇವಲ 34 ಶಾಸಕರಿಗೆ ಸಚಿವ ಸ್ಥಾನ ದೊರೆಯುತ್ತದೆ. ಹೀಗಾಗಿ ಎಲ್ಲರಿಗೂ …

Read More »

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಹಾವೇರಿ ನ್ಯಾಯಾಲಯ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನ ಅನುಭವಿಸಿದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 19 ಸಾವಿರ ರೂಪಾಯಿ ದಂಡ ಮತ್ತು 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.   ಹಾವೇರಿ ಜಿಲ್ಲಾ ಶಿಗ್ಗಾಂವಿ ತಾಲೂಕಿನ ವನಹಳ್ಳಿ ಲಕ್ಷ್ಮಿ ಕಬ್ಬೇರ ಶಿಕ್ಷೆಗೆ ಒಳಗಾದ ಮಹಿಳೆ. ಇವರು ಮೂಲತಃ ಗಂಗಾಮತಕ್ಕೆ ಸೇರಿದವರು. ಈ ಮಹಿಳೆ ಶಿಗ್ಗಾಂವಿ …

Read More »

ಸವದತ್ತಿ ನಗರದ ಹೊರವಲಯದಲ್ಲಿರುವ ಜೋಗುಳಭಾವಿಯಲ್ಲಿ ನೀರುಪಾಲಾದ ವ್ಯಕ್ತಿ ಶವವಾಗಿ ಇಂದು ಪತ್ತೆ

ಸವದತ್ತಿ ನಗರದ ಹೊರವಲಯದಲ್ಲಿರುವ ಜೋಗುಳಭಾವಿಯಲ್ಲಿ ನೀರುಪಾಲಾದ ವ್ಯಕ್ತಿ ಶವವಾಗಿ ಇಂದು ಪತ್ತೆಯಾಗಿದ್ದಾನೆ. ಶ್ರಾವಣ ಮಾಸದ ನಿಮಿತ್ಯವಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಡ ಗ್ರಾಮದ ರಜಪೂತ ಕುಟುಂಬದವರು ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ಆಗಮಿಸಿದ್ದರು. ನಿನ್ನೆಯ ದಿನ ಸ್ನಾನಕ್ಕೆಂದು ಜೋಗುಳಭಾವಿಗೆ ಇಳಿದಾಗ ಮೃತ 35 ವರ್ಷದ ವಿನಾಯಕ್ ಸಿಂಗ್ ರಜಪೂತ್ ನಿಶಕ್ತಿಯಿಂದ ಈಜಲಾಗದೇ ಬಾವಿಯಲ್ಲಿ ಮುಳುಗಿ ಮತ್ತೆ ಮೇಲೆ ಬರಲಿಲ್ಲ. ಘಟನೆಯ ಮಾಹಿತಿ ಪಡೆದಂತಹ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ …

Read More »

ಮಹದಾಯಿ ವಿಚಾರ ಮತ್ತೆ ಗರಿಗೆದರುವ ಸಾಧ್ಯತೆ

ಮಹದಾಯಿ ವಿಚಾರ ಮತ್ತೆ ಗರಿಗೆದರುವ ಸಾಧ್ಯತೆ ಇದೆ. . ಉತ್ತರ ಕರ್ನಾಟಕದಲ್ಲಿ ಜಲ ಹೋರಾಟ ಮತ್ತೊಮ್ಮೆ ತೀವ್ರ ಸ್ವರೂಪ ಪಡೆಯಲಿದೆ. ಹೀಗಾದರೆ ಈ ಬಾರಿಯ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ. ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಮಹದಾಯಿ ಮತ್ತು ಕಳಸಾ ಭಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರಕಾರ ಬಂದರೂ ಈ ಭಾಗದ ಪ್ರತಿಭಟನಾಕಾರರ ಹಾಗೂ ಜನರ ಬೇಡಿಕೆಗಳನ್ನು ಕಡೆಗಣಿಸುವ ಪ್ರಯತ್ನಗಳು ನಡೆಯುತ್ತಿದ್ದರೂ ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಲ್ಲಿ …

Read More »