Breaking News

ರಾಜ್ಯ

ಆರ್​ಜೆಡಿ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅಪರಾಧಿ; ಸುಪ್ರೀಂ ಕೋರ್ಟ್​ ತೀರ್ಪು

ನವದೆಹಲಿ : 1995 ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖಂಡ ಮತ್ತು ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅಪರಾಧಿ ಎಂದು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತೀರ್ಪು ನೀಡಿದೆ. ಸಿಂಗ್ ಅವರನ್ನು ಖುಲಾಸೆಗೊಳಿಸಿದ ಪಾಟ್ನಾ ಹೈಕೋರ್ಟ್ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿತು. ಜೋಡಿ ಕೊಲೆ ಪ್ರಕರಣದಲ್ಲಿ ಪ್ರಭುನಾಥ್ ಸಿಂಗ್ ದೋಷಿ ಎಂದು ತೀರ್ಪು ನೀಡಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎ.ಎಸ್. ಓಕಾ ಮತ್ತು ವಿಕ್ರಮ್ …

Read More »

ಯಾವ ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ.

ಬೆಳಗಾವಿ: ಯಾವ ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ. ಕೇವಲ ಮಾಧ್ಯಮಗಳಲ್ಲಿ ಊಹಾಪೋಹಗಳು ಸೃಷ್ಟಿ ಆಗುತ್ತಿವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ‌. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನನ್ನ ಮಾಹಿತಿ ಪ್ರಕಾರ ಯಾರು ಪಕ್ಷ ಬಿಟ್ಟು ಹೋಗುವವರಿಲ್ಲ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ಬಿಜೆಪಿ ಬಿಟ್ಟು ಯಾಕೆ ಹೋಗುತ್ತಾರೆ ಎಂದು …

Read More »

ಬಂಡೀಪುರದಲ್ಲಿ ನಟ ಗಣೇಶ್ ಕಾಂಪೌಂಡ್ ಕಾಮಗಾರಿಗೆ ಆಕ್ಷೇಪ; ನೊಟೀಸ್ ಜಾರಿ

ಚಾಮರಾಜನಗರ : ಬಂಡೀಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡಕ್ಕೆ ಅಡಿಪಾಯ ಹಾಕಿದ್ದಾರೆ ಎಂಬ ಪರಿಸರವಾದಿಗಳ ಆಕ್ಷೇಪದ ಹಿನ್ನೆಲೆಯಲ್ಲಿ ನಟ ಗಣೇಶ್​ ಅವರಿಗೆ ಬಂಡೀಪುರ ಸೂಕ್ಷ್ಮ ವಲಯ ಪರಿಸರ ಸಮಿತಿ ಸದಸ್ಯ ಕಾರ್ಯದರ್ಶಿ ನೊಟೀಸ್​ ನೀಡಿದ್ದಾರೆ. ಮುಂದಿನ 7 ದಿನಗಳೊಳಗೆ ಸೂಕ್ತ ದಾಖಲಾತಿ ಒದಗಿಸಬೇಕು. ಅಲ್ಲಿಯವರೆಗೂ ಕಾಮಗಾರಿ ನಿಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ. ಪರಿಸರವಾದಿಗಳ ಆಕ್ಷೇಪ: ಅಭಯಾರಣ್ಯಕ್ಕೆ ಹೊಂದಿಕೊಂಡಂತಿರುವ ಜಕ್ಕಳ್ಳಿ ಗ್ರಾಮದ ಸರ್ವೇ ನಂ. 105ರಲ್ಲಿ 1.24 ಎಕರೆ ಜಮೀನು ಖರೀದಿಸಿರುವ …

Read More »

ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಖಂಡಿಸಿ ರೈತರ ಪ್ರತಿಭಟನೆ; ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಥ್‌

ಮಂಡ್ಯ : ತಮಿಳುನಾಡಿಗೆ ಕಾವೇರಿಯಿಂದ ಹೆಚ್ಚುವರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಜಿಲ್ಲೆಯಲ್ಲಿ ರೈತರು ಪ್ರತಿಭಟಿಸಿದ್ದಾರೆ. ಕಾವೇರಿಯಿಂದ ತಮ್ಮ ಪಾಲಿಗೆ ಬರಬೇಕಾದ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಕಳೆದ ಹಲವು ದಿನಗಳಿಂದ ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ 5 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಈ ಮಧ್ಯೆ ತಮಿಳುನಾಡು ಸರ್ಕಾರ ತಗಾದೆ ತೆಗೆದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೀಗಾಗಿ ಜಲಾಶಯದಿಂದ ಕಾವೇರಿಯ …

Read More »

ಮೂಲಸೌಕರ್ಯದ ಕೊರತೆಯಿಂದಾಗಿ 13 ಸರ್ಕಾರಿ ಶಾಲೆಗಳಿಗೆ ಬೀಗ

ಚಾಮರಾಜನಗರ: ಮೂಲಸೌಕರ್ಯದ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಲವು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿವೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳಿಂದ ಆತಂಕಗೊಂಡು ಮಕ್ಕಳ ಶೂನ್ಯ ದಾಖಲಾತಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ. ಈ ಪೈಕಿ ಒಂದು ಉರ್ದು ಮಾಧ್ಯಮದ ಶಾಲೆಯೂ ಸೇರಿದೆ. ಕೋವಿಡ್ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ದಿಢೀರ್ ಏರಿಕೆ ಆಗಿತ್ತು. ಆದರೆ …

Read More »

ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಕೆಜಿಗೆ 100 ರಿಂದ 140 ರೂ ತಲುಪಿದೆ.

ಬೆಂಗಳೂರು: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ. ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ. …

Read More »

ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಪುನರ್‌ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ

ಬೆಂಗಳೂರು : ಪ್ರತಿನಿತ್ಯ 10,000 ಕ್ಯೂಸೆಕ್‌​ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರವನ್ನು ಪುನರ್‌ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾ ಬಳಿ ಮಾತನಾಡಿದ ಅವರು, ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಹೀಗಿದ್ದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ …

Read More »

ಶ್ರಾವಣ ಮಾಸ ಇಂದಿನಿಂದ ಆರಂಭವಾಗಿದೆ. ಎಲ್ಲೆಲ್ಲೂ ದೇವರ ಸ್ಮರಣೆ, ಧ್ಯಾನ

ಬೆಳಗಾವಿ: ಶ್ರಾವಣ ಮಾಸ ಇಂದಿನಿಂದ ಆರಂಭವಾಗಿದೆ. ಎಲ್ಲೆಲ್ಲೂ ದೇವರ ಸ್ಮರಣೆ, ಧ್ಯಾನ ನಡೆಯುತ್ತಿದೆ. ಇನ್ನು ಎಲ್ಲ ಊರುಗಳಲ್ಲಿ ವರ್ಷದಲ್ಲಿ ಒಂದು ತಿಂಗಳು ಮಾತ್ರ ಶ್ರಾವಣ ಇದ್ದರೆ ಈ ಊರಲ್ಲಿ ಮಾತ್ರ ಪ್ರತಿದಿನವೂ ಶ್ರಾವಣ. ಮಾಂಸಾಹಾರ ಸೇವನೆ ನಿಷಿದ್ಧ.‌ ಇಂತಹ ಅಪರೂಪದ‌ ಊರಿನ ಪರಿಚಯ ನಿಮಗಾಗಿ. ಕುಂದಾನಗರಿ ಬೆಳಗಾವಿಗೆ ಹೊಂದಿಕೊಂಡಿರುವ ಹಲವು ಐತಿಹಾಸಿಕ ಹಿನ್ನೆಲೆ ಇರುವ ಬಸವನಕುಡಚಿ ಗ್ರಾಮದಲ್ಲಿಯೇ ನಿತ್ಯ ಶ್ರಾವಣ ಸಂಭ್ರಮ ಮೇಳೈಸಿದೆ. ಇಂದಿನಿಂದ ಎಲ್ಲೆಡೆ ಶ್ರಾವಣ ಆರಂಭವಾಗಿದ್ದರಿಂದ ಶ್ರಾವಣ ಪಾಲಿಸುವವರು …

Read More »

ಶ್ರಾವಣ ಮಾಸದ ನಿಮಿತ್ತ ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮನ ಗುಡ್ಡದಲ್ಲಿ‌ ವಿಶೇಷ ಪೂಜೆ

ಬೆಳಗಾವಿ: ಉತ್ತರ ಕರ್ನಾಟಕ‌ದ ಶಕ್ತಿದೇವತೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಶ್ರಾವಣ ಮಾಸದ ಮೊದಲ ದಿನ ಭಕ್ತಸಾಗರವೇ ಹರಿದುಬಂತು. ಬೆಳಗ್ಗೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮಗುಡ್ಡದಲ್ಲಿ‌ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಇಂದು ರಾತ್ರಿ 2 ಗಂಟೆಗೆ ವಿಶೇಷ ಪೂಜೆ ನೆರವೇರಿದ್ದು, ಬೆಳಗ್ಗೆ 4 ಗಂಟೆಯಿಂದ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಯಿತು. ಬೆಳಗ್ಗೆ ಸಾವಿರಾರು …

Read More »

ರಾಜ್ಯದ 9 ಜಿಲ್ಲೆಯ 14 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಯಾರ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆ?

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ ಹೆಚ್ಚು …

Read More »