Breaking News

ರಾಜ್ಯ

ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ: ಸಚಿವ ಮಹದೇವಪ್ಪ

ಮೈಸೂರು: ಸಮಾಜಕ್ಕೆ ಮಾರ್ಗದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ. ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನು ಮತ್ತೆ ಯಾಕೆ ನೋಯಿಸುತ್ತೀರಿ. ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಸಿ.ಮಹದೇವಪ್ಪ ಹೇಳಿದರು. ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಟ ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ. ಅವರಾಡಿದ ಮಾತಿನಿಂದ ಇಡೀ ಸಮಾಜಕ್ಕೆ ನೋವಾಗಿದೆ. ಅವರ ವಿರುದ್ಧ …

Read More »

ಮಾನಸಿಕ ಖಿನ್ನತೆಯಲ್ಲಿ ಅಶ್ವತ್ಥನಾರಾಯಣ್​ ಅವರಿದ್ದಾರೆ ಎಂದ ಡಿ ಕೆ ಶಿವಕುಮಾರ್

ಬೆಂಗಳೂರು : ಇವರು ಅಶ್ವತ್ಥನಾರಾಯಣ್​ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದವರು, ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು. ಆ ಮಾನಸಿಕ ಖಿನ್ನತೆಯಲ್ಲಿ ಅವರಿದ್ದಾರೆ. ಅಶ್ವತ್ಥನಾರಾಯಣ್ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ …

Read More »

ಲೋಕಸಭೆಗೆ ಶೀಘ್ರದಲ್ಲೇ ಬಿಜೆಪಿ ಆಕಾಂಕ್ಷಿಗಳ ಪಟ್ಟಿ:B.S.Y.

ಶಿವಮೊಗ್ಗ : “ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುವುದು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ವಿನೋಬ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಶುರುವಾಗಿಲ್ಲ. ಆದಷ್ಟು ಬೇಗ ಸ್ಪರ್ಧಿಸುವ ಆಕಾಂಕ್ಷಿಗಳ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ 25ಕ್ಕೆ 25 ಕ್ಷೇತ್ರವನ್ನೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” …

Read More »

ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ,: ಸಿದ್ದರಾಮಯ್ಯ

ಬೆಂಗಳೂರು: ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಪೆನ್​ಡ್ರೈವ್ ಇಟ್ಟುಕೊಂಡಿದ್ದೇನೆ ಅನ್ನೋದು‌ ಸುಮ್ಮನೆ ಜೋಬಲ್ಲಿ ಇಟ್ಕೊಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಬರೀ ಸುಳ್ಳು ಆರೋಪ ಮಾಡ್ತಾರೆ ಎಂದಿದ್ದಾರೆ. ಇವರ ಕಾಲದಲ್ಲಿ ವರ್ಗಾವಣೆ ಆಗಿಲ್ಲವಾ?. ಹೊಸ ಸರ್ಕಾರ ಬಂದಾಗ ಸಹಜವಾಗಿನೇ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತದೆ. ಪೆನ್​ಡ್ರೈವ್ ಇಟ್ಟುಕೊಂಡಿದ್ದೇನೆ …

Read More »

ವೆಸ್ಟ್​ ಇಂಡೀಸ್​ ವಿರುದ್ಧ ಸರಣಿ ಕೈಚೆಲ್ಲಿದ ಭಾರತ.. ಹಾರ್ದಿಕ್​ ಬಗ್ಗೆ ವೆಂಕಟೇಶ್​ ಪ್ರಸಾದ್​ ಬೇಸರ

ಮಾಜಿ ಬೌಲರ್ ವೆಂಕಟೇಶ್​ ಪ್ರಸಾದ್​ ಅವರು ಭಾರತೀಯ ತಂಡದ ಆಟಗಾರರಿಗೆ ತಮ್ಮ ಕೌಶಲ್ಯವನ್ನು ಸುಧಾರಿಸಲು ಸಲಹೆ ನೀಡಿದ್ದಾರೆ ಮತ್ತು ಕ್ಯಾಪ್ಟನ್ ಹಾರ್ದಿಕ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಲಾಡರ್​ಹಿಲ್​, ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 …

Read More »

ಮೂಲಸೌಕರ್ಯಕ್ಕೆ ಬಂಡವಾಳ ವೆಚ್ಚ ಅತ್ಯಲ್ಪ! ಇದು ಪಂಚ ಗ್ಯಾರಂಟಿ ಪರಿಣಾಮವೇ?

ಬೆಂಗಳೂರು: ಮೂಲಸೌಕರ್ಯ ಅಭಿವೃದ್ಧಿಪಡಿಸುವ ಬಂಡವಾಳ ವೆಚ್ಚಕ್ಕೆ ಮೀಸಲಿರಿಸುವ ಮೊತ್ತದ ಆಧಾರದಲ್ಲಿ ಬಜೆಟ್ ಅಭಿವೃದ್ದಿ ಪೂರಕವೋ ಅಲ್ಲವೋ ಎಂಬುದನ್ನು ವ್ಯಾಖ್ಯಾನಿಸಲಾಗುತ್ತದೆ. ಆದರೆ, ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕರ್ನಾಟಕ ಸರ್ಕಾರ ವ್ಯಯಿಸಿರುವ ಬಂಡವಾಳ ವೆಚ್ಚ ನಿರಾಶಾದಾಯಕವಾಗಿದೆ ಎನ್ನುವುದು ಅಂಕಿಅಂಶಗಳಿಂದ ಗೊತ್ತಾಗುತ್ತಿದೆ. ಬಂಡವಾಳ ವೆಚ್ಚ ಎಂದರೆ ರಾಜ್ಯದ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಅಭಿವೃದ್ಧಿ, ಆಸ್ತಿ ಸೃಜನೆಗಾಗಿ ಮಾಡುವ ಮಹತ್ವದ ವೆಚ್ಚವಾಗಿದೆ. ಬಂಡವಾಳ ವೆಚ್ಚಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಹಣ ಮೀಸಲಿಟ್ಟರೆ, ಅದು ಅಭಿವೃದ್ಧಿಪರ …

Read More »

ಕಾರ್ಮಿಕರಿಲ್ಲದೆ ಲಂಗರು ಹಾಕಿದ ಬೋಟ್​ಗಳು; ಉತ್ತಮ ವಾತಾವರಣವಿದ್ದರೂ ಶುರುವಾಗದ ಮೀನುಗಾರಿಕೆ!

ಕಾರವಾರ (ಉತ್ತರಕನ್ನಡ) : ಉತ್ತಮ ವಾತಾವರಣ ಇರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ನಿರೀಕ್ಷೆಯಲ್ಲಿದ್ದ ಮೀನುಗಾರರಿಗೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ಹೊರರಾಜ್ಯದ ಮೀನುಗಾರರನ್ನು ನಂಬಿದ್ದ ಬೋಟ್‌ಗಳಿಗೆ ಎರಡು ವಾರ ಕಳೆದರೂ ಕಾರ್ಮಿಕರು ಬಾರದೇ ಇರುವುದು ಬೋಟ್‌ಗಳು ಬಂದರುಗಳಲ್ಲಿಯೇ ಲಂಗರು ಹಾಕಿವೆ. ಜಿಲ್ಲೆಯ ಬಹುತೇಕ ಮೀನುಗಾರಿಕಾ ಬೋಟುಗಳು ಒಡಿಶಾ, ಜಾರ್ಖಂಡ್, ಉತ್ತರಪ್ರದೇಶ ಸೇರಿದಂತೆ ಇನ್ನಿತರ ರಾಜ್ಯದ ಕಾರ್ಮಿಕರನ್ನೇ ಹೆಚ್ಚಾಗಿ ನಂಬಿಕೊಂಡಿವೆ. ಈ ಕಾರ್ಮಿಕರ ಮೂಲಕವೇ ವರ್ಷವಿಡೀ ಮೀನುಗಾರಿಕೆ ನಡೆಯುತ್ತದೆ. ಆದರೆ ಈಗ ಮೀನುಗಾರಿಕೆ ಪ್ರಾರಂಭವಾಗಿ ಎರಡು …

Read More »

MSP: 9 ವರ್ಷಗಳಲ್ಲಿ ಜೋಳ, ಸಜ್ಜೆ, ರಾಗಿಯ ಕನಿಷ್ಠ ಬೆಂಬಲ ಬೆಲೆ ಶೇ 100ರಿಂದ 150ರಷ್ಟು ಹೆಚ್ಚಳ

ನವದೆಹಲಿ : ಕಳೆದ ಒಂಬತ್ತು ವರ್ಷಗಳಲ್ಲಿ ಜೋಳ, ಸಜ್ಜೆ ಮತ್ತು ರಾಗಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್​​ಪಿ) ಶೇ 100ರಿಂದ ಶೇ 150ರಷ್ಟು ಹೆಚ್ಚಳವಾಗಿದೆ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2014-15 ಮತ್ತು 2023-24ರ ನಡುವೆ ಜೋಳದ ಎಂಎಸ್​ಪಿ ಶೇಕಡಾ 108 ರಷ್ಟು ಹೆಚ್ಚಾಗಿದೆ. 2014-15ರಲ್ಲಿ ಜೋಳದ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್​ಗೆ 1,550 ರೂ.ಗಳಷ್ಟಿತ್ತು. ಇದು 2023-24ರಲ್ಲಿ ಪ್ರತಿ ಕ್ವಿಂಟಾಲ್​ಗೆ ಶೇ 108ರಷ್ಟು ಏರಿಕೆಯಾಗಿ 3,225 …

Read More »

ಇನ್ನೇನು ಪುರಾವೆ ಬೇಕು ದೀದಿ?: ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ನಡ್ಡಾ ವಾಗ್ದಾಳಿ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮಾಧ್ಯಮದ ಮೂಲಕ ಕೋಲಾಘಾಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಅನೇಕ ಭ್ರಷ್ಟಾಚಾರ ಪ್ರಕರಣಗಳ ಕುರಿತು ಮಾತನಾಡಿದ್ದರು. ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ಪ್ರಧಾನ ಮಂತ್ರಿಗಳ ಆರೋಪಕ್ಕೆ ಆಧಾರ ಅಥವಾ ಪುರಾವೆ ಏನು? ಎಂದು ಆಡಿಯೋ ಸಂದೇಶದ ಮೂಲಕ ತಿರುಗೇಟು ನೀಡಿದ್ದರು. ಇದಕ್ಕೆ ಉತ್ತರಿಸಿದ ನಡ್ಡಾ “ಇನ್ನೆಷ್ಟು ಪುರಾವೆ ಬೇಕು ದೀದಿ(ಮಮತಾ ಬ್ಯಾನರ್ಜಿ)?. ಈ ರಾಜ್ಯದಲ್ಲಿ ಎಲ್ಲಾ …

Read More »

ಸಾಮಾಜಿಕ ಮಾಧ್ಯಮಗಳ ಡಿಪಿ ಬದಲಿಸಿದ ಪ್ರಧಾನಿ ಮೋದಿ.. ಹರ್​ಘರ್​ ತಿರಂಗಾ ಅಭಿಯಾನದಲ್ಲಿ ಭಾಗವಹಿಸಲು ಕರೆ

ನವದೆಹಲಿ (ಭಾರತ) : ದೇಶ ಸ್ವಾತಂತ್ರ್ಯೋತ್ಸವ ಅಮೃತೋತ್ಸವದಲ್ಲಿದ್ದು, ಕಳೆದ ವರ್ಷದಂತೆ ಈ ಬಾರಿಯೂ ‘ಹರ್​ ಘರ್​ ತಿರಂಗಾ ಅಭಿಯಾನ’ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಜನರಲ್ಲಿ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಜಾಗದಲ್ಲಿ (ಡಿಪಿ) ತ್ರಿವರ್ಣ ಧ್ವಜದ ಚಿತ್ರವನ್ನು ಅಳವಡಿಸಲೂ ಕರೆ ನೀಡಿದ್ದು, ಸ್ವತಃ ಅವರು ತಮ್ಮ ಭಾವಚಿತ್ರವನ್ನು ಬದಲಿಸಿದ್ದಾರೆ. #HarGharTiranga ಆಂದೋಲನದ ಭಾಗವಾಗಿ ನಾವು ಬಳಸುವ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ಬದಲಾಯಿಸೋಣ. ಪ್ರೀತಿಯ ದೇಶ ಮತ್ತು ನಮ್ಮ …

Read More »