Home / ರಾಜ್ಯ (page 434)

ರಾಜ್ಯ

ಹಿಂಡಲಗಾ ಕೈದಿಗಳ ಮಾರಾಮಾರಿ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರು ಹೊಡೆದಾಡಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಉತ್ತರ ವಲಯದ ಕಾರಾಗೃಹಗಳ ಉಪಮಹಾನಿರೀಕ್ಷಕ ಟಿ.ಪಿ.ಶೇಷ ಆದೇಶ ಹೊರಡಿಸಿದ್ದಾರೆ. ಹಿರಿಯ ವೀಕ್ಷಕ ಬಿ.ಎಲ್‌.ಮೆಳವಂಕಿ, ವೀಕ್ಷಕ ವಿ.ಟಿ.ವಾಘಮೋರೆ ಅಮಾನತುಗೊಂಡವರು. ಇಬ್ಬರು ಕೈದಿಗಳ ಮಧ್ಯೆ ಗಲಾಟೆ ನಡೆಯದಂತೆ ನೋಡಿಕೊಳ್ಳುವಲ್ಲಿ ಸಿಬ್ಬಂದಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಹಾಗಾಗಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಹಿನ್ನೆಲೆ: ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಸಾಯಿಕುಮಾರ್‌ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ …

Read More »

5 ವರ್ಷ ಸಮಯ ಕೊಟ್ಟೆ ಆದರೂ ಪ್ರತಿಪಕ್ಷಗಳೂ ಸಿದ್ಧತೆ ನಡೆಸಿಲ್ಲ: ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಮಣಿಪುರ ಹಿಂಸಾಚಾರ ವಿಷಯವಾಗಿ ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿಲುವಳಿಗೆ ಗುರುವಾರ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಂಸತ್ತಿಗೆ ಬರುವಾಗ ವಿಶೇಷವಾಗಿ ಅವಿಶ್ವಾಸ ನಿರ್ಣಯವನ್ನು ತಂದಾಗಲೂ ಪ್ರತಿಪಕ್ಷಗಳು ಪೂರ್ವತಯಾರಿ ನಡೆಸಿ ಬರುವುದಿಲ್ಲ ಎಂದು ಕುಟುಕಿದರು. ”2018ರಲ್ಲಿ ಪ್ರತಿಪಕ್ಷಗಳಿಗೆ ಸ್ವಲ್ಪ ತಯಾರಾಗಿ ಬನ್ನಿ ಎಂದು ಹೇಳಿದ್ದೆ. 2023ರಲ್ಲಿ ಬಂದರೂ ಪ್ರತಿಪಕ್ಷಗಳು ತಯಾರಿ ಮಾಡಿಕೊಂಡಿಲ್ಲ. ಕಳೆದ ಐದು ವರ್ಷಗಳ ಸಮಯ ಸಿಕ್ಕರೂ ಸಿದ್ಧತೆ ಮಾಡಿಕೊಳ್ಳುತ್ತಿಲ್ಲ. ಅವರ ನಾಯಕರಿಗೆ …

Read More »

ಸಿಎಂ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಚಿಕ್ಕೋಡಿ : ನಾಳೆ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವರು ಆಗಮಿಸಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು.   ಬೆಳಗಾವಿ ಜಿಲ್ಲೆಯ ಕೋಕಟನೂರ ಗ್ರಾಮದಲ್ಲಿಂದು ಕಾರ್ಯಕ್ರಮದ ರೂಪುರೇಷೆ ಹಾಗೂ ವೇದಿಕೆ ನಿರ್ಮಾಣ ಕಾರ್ಯ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್ 11ರಂದು 10:30ಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ …

Read More »

ಲೋಕಸಭೆ ಅಧಿವೇಶನದ ನಂತರ ರಾಜ್ಯಾಧ್ಯಕ್ಷ ಪ್ರತಿಪಕ್ಷ ನಾಯಕರ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಆಗಸ್ಟ್ 15 ರ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಮತ್ತು ಉಭಯ ಸದನಗಳ ಪ್ರತಿಪಕ್ಷಗಳ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ಹೈಕಮಾಂಡ್ ನಾಯಕರು ಭರವಸೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.   ಮೂರು ದಿನಗಳ ನವದೆಹಲಿ ಪ್ರವಾಸ ಮುಗಿಸಿ ವಾಪಸಾದ ನಂತರ ಆರ್.ಟಿ ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಂಸದರು ಅಧಿವೇಶನ ನಡೆಯುವಾಗ ಬರುವಂತೆ ಮನವಿ ಮಾಡಿದ್ದರು. ಅದಕ್ಕಾಗಿ ದೆಹಲಿಗೆ …

Read More »

ಕೌಟುಂಬಿಕ ಕಲಹ.. ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ರಾಯಚೂರು : ಕೌಟುಂಬಿಕ ಕಲಹದಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಮ್ಯಾಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಚೌಡಮ್ಮ(26), 4 ಹಾಗೂ 2 ವರ್ಷದ ಕಂದಮ್ಮಗಳು ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಮುದಗಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತಿ ಹುಲಿಗೆಪ್ಪ ಹಾಗೂ ಪತ್ನಿ ಚೌಡಮ್ಮ ಇಬ್ಬರ ಮಧ್ಯೆ ಮನೆಯಲ್ಲಿ ಜಗಳ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

Read More »

ಬೆಂಗಳೂರಲ್ಲಿ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಯ್ಯ ಎಂಬುವವರ ಪುತ್ರ ಗೌತಮ (29) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಗೌತಮ್ ಮನೆಯಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.‌ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಚಂದ್ರಾಲೇಔಟ್ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗೌತಮ್​​ಗೆ‌ ಮದುವೆ ಮಾಡಲು ಇತ್ತೀಚೆಗೆ ಪೋಷಕರು ಕನ್ಯೆ ಹುಡುಕುತ್ತಿದ್ದರು. ಇವರ ತಂದೆ ದೊಡ್ಡಯ್ಯ ಕಾಂಗ್ರೆಸ್​​ನಲ್ಲಿ ಗುರುತಿಸಿಕೊಂಡಿದ್ದು, ಅತ್ತಿಗುಪ್ಪೆ ವಾರ್ಡ್​​ನ ಮಾಜಿ ಕಾರ್ಪೋರೇಟರ್ ಆಗಿದ್ದಾರೆ. ಗೌತಮ್ ತಂದೆ ದೊಡ್ಡಣ್ಣ …

Read More »

ವೃತ್ತಿಪರ ಕೋರ್ಸ್​ ಪ್ರವೇಶಕ್ಕೆ 62 ಲಕ್ಷ ಆಪ್ಷನ್ ಎಂಟ್ರಿ: ಪರಿಷ್ಕರಣೆಗೆ ನಾಳೆಯಿಂದ ಅವಕಾಶ

ಬೆಂಗಳೂರು : ನಾನಾ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ಸಾಮಾನ್ಯ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಭರ್ತಿ ಮಾಡಿಕೊಳ್ಳಲು ನೀಡಿದ್ದ ಅವಕಾಶ ಮುಕ್ತಾಯವಾಗಿದೆ. ಈವರೆಗೆ 62 ಲಕ್ಷ ಸಂಯೋಜಿತವಾಗಿ ಐಚ್ಛಿಕಗಳನ್ನು ದಾಖಲಿಸಲಾಗಿದೆ. ಆಗಸ್ಟ್ 5ರ ಸಂಜೆಯಿಂದ ಆಗಸ್ಟ್ 8ರವರೆಗೆ ನೀಡಲಾಗಿದ್ದ ಸಂಯೋಜಿತ ಐಚ್ಛಿಕ ದಾಖಲೆ (ಕಂಬೈನ್ಡ್ ಆಪ್ಷನ್ ಎಂಟ್ರಿ) ಮೂಲಕ 1.2 ಲಕ್ಷ ಆಕಾಂಕ್ಷಿಗಳಿಂದ 62 ಲಕ್ಷ ಎಂಟ್ರಿ ದಾಖಲಿಸಿದೆ. ಇದರಲ್ಲಿ …

Read More »

ಕ ಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ತೀವ್ರ ಅಸಮಾಧಾನಗೊಂಡಿದ್ದರು. ಈ ಸಂಬಂಧ ಕೆಲ ದಿನಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. …

Read More »

ರಾಜ್ಯಾದ್ಯಂತ ಆಗಸ್ಟ್ 27ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್​ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

Read More »

ನಿರ್ಮಾಪಕರ ವಿರುದ್ಧ ಮಾನಹಾನಿ ಆರೋಪ ಕೇಸ್; ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ ನಟ ಸುದೀಪ್

ಬೆಂಗಳೂರು : ಚಿತ್ರ ನಿರ್ಮಾಪಕ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರ ವಿರುದ್ಧ ಮಾನಹಾನಿ ದಾವೆ ದಾಖಲಿಸಬೇಕು ಹಾಗೂ 10 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ನಟ ಸುದೀಪ್ ಅವರ ಪ್ರಮಾಣೀಕೃತ ಹೇಳಿಕೆಯನ್ನು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ.   ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರು ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ …

Read More »