Breaking News

ರಾಜ್ಯ

ಕೊಪ್ಪಳದಿಂದ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್​ನಲ್ಲಿ ಹಸುಗೂಸು ರವಾನೆ

ಕೊಪ್ಪಳ: ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹಸುಗೂಸನ್ನು ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್​ನಲ್ಲಿ ಹುಬ್ಬಳ್ಳಿ ಕಿಮ್ಸ್​ಗೆ ಕರೆದೊಯ್ಯಲಾಗಿದೆ. ಕುಕನೂರ ತಾಲೂಕಿನ ಗುತ್ತೂರ ನಿವಾಸಿಗಳಾದ ಮಲ್ಲಪ್ಪ ವಿಜಯಲಕ್ಷ್ಮೀ ದಂಪತಿಗೆ ಹತ್ತು ಗಂಟೆಗಳ ಹಿಂದೆ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ನವಜಾತ ಶಿಶುವನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಜಿಲ್ಲಾ ಆಸ್ಪತ್ರೆಯಲ್ಲಿ ಮಗು ತಪಾಸಣೆ ಮಾಡಿದ ಬಳಿಕ ಮಗುವಿನ ಕರಳುಗಳು ಹೊರಗಡೆ ಬಂದಿರುವ ಕಾರಣ ಮಗುವಿಗೆ …

Read More »

ಹಿರೇಕೊಡಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ

ಚಿಕ್ಕೋಡಿ:ಹಿರೇಕೊಡಿ ಗ್ರಾಮದ ಟಾಂಗ್ಯಾನಕೋಡಿ–ಚಿಕ್ಕೋಡಿ ಮುಖ್ಯ ರಸ್ತೆಯಿಂದ ಕಮ್ಮಾರ, ಸನದಿ, ಮಾಳಿ, ದೇವಡಕರ, ಕಾಗಲೆ, ಕರಗಾಂವೆ ಹಾಗೂ ಬಂಡಗರ ತೋಟದವರೆಗೆ ಸಂಪರ್ಕ ಕಲ್ಪಿಸುವ 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಇಂದು ಗ್ರಾಮಸ್ಥರು ಹಾಗೂ ಗ್ರಾಮ ಮುಖಂಡರು ಅಧಿಕೃತವಾಗಿ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಹುಕ್ಕೇರಿ ಅವರ ಸತತ ಪ್ರಯತ್ನದಿಂದ ಈ …

Read More »

ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ:ಸಚಿವ ಸಂತೋಷ ಲಾಡ್

ಚಿಕ್ಕೋಡಿ-“ಮರಾಠಾ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಿದೆ. ದೇಶದಲ್ಲಿ ಅತ್ಯಂತ ಕಟ್ಟ ಕಡೆಯ ಸ್ಥಾನದಲ್ಲಿ ಮರಾಠಾ ಸಮುದಾಯವಿದ್ದು, ಇದನ್ನು ಮೇಲೆತ್ತಲು ಸಂಘಟನೆ ಅತ್ಯವಶ್ಯಕವಾಗಿದೆ” ಎಂದು ಕಾರ್ಮಿಕ ಸಚಿವ, ಮರಾಠಾ ಸಮಾಜದ ಮುಖಂಡ ಸಂತೋಷ ಲಾಡ್ ಹೇಳಿದರು. ಚಿಕ್ಕೋಡಿ ಪಟ್ಟಣದ ಪದ್ಮಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ಚಿಕ್ಕೋಡಿ ತಾಲ್ಲೂಕು ಮರಾಠಾ ಸಮಾಜ ಬಾಂಧವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಛತ್ರಪತಿ ಶಿವಾಜಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಮೈಸೂರು ಹೀಲಿಯಂ ಸಿಲಿಂಡರ್​ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು

ಮೈಸೂರು ಹೀಲಿಯಂ ಸಿಲಿಂಡರ್​ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು ಮೈಸೂರು: ಅರಮನೆಯ ಬಳಿ ಹೀಲಿಯಂ ತುಂಬಿದ ಗ್ಯಾಸ್ ಸಿಲಿಂಡರ್​ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ನಂಜನಗೂಡಿನ ಚಾಮಲಾಪುರದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮಿ (29) ಮೃತ ಮಹಿಳೆಯರು‌. ಗುರುವಾರ (ಡಿ.25) ರಾತ್ರಿ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್​ಗೆ ಹೀಲಿಯಂ ತುಂಬುತ್ತಿದ್ದ ವೇಳೆ ಗ್ಯಾಸ್ …

Read More »

ಶಾಮನೂರು ಶಿವಶಂಕರಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕು: ರಂಭಾಪುರಿ ಶ್ರೀ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕೆಂದು ರಂಭಾಪುರಿ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಸಿದ್ದರಾಮಯ್ಯರನ್ನು ಕಂಡ್ರೆ ಶಾಮನೂರು ಶಿವಶಂಕರಪ್ಪ ಅವರಿಗೆ ಬಹಳ ಪ್ರೀತಿ. ಅವರಿಲ್ಲದೆ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಹಾಗಾಗಿ, ಸಿಎಂ ಇಲ್ಲೇ ಬಂದು ಸಿಎಂ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು. ಇಂದು ದಾವಣಗೆರೆಯಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಹಾಗೂ ಶಿವಗಣಾರಾಧನೆ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು. ಇದಕ್ಕೂ …

Read More »

ಚಿತ್ರದುರ್ಗ ಬಸ್​ ದುರಂತ: ಗಾಯಗೊಂಡಿದ್ದ ಬಸ್​ ಚಾಲಕ ಸಾವು

ಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್​ ​ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ ರಫೀಕ್​ (35) ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೆಎಂಸಿಆರ್‌ಐನಲ್ಲಿ ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ಲಾರಿಯೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವೇಳೆ ಬಸ್ಸಿನ ಚಾಲಕ ಮೊಹಮ್ಮದ್ ರಫೀಕ್ ಗಾಯಗೊಂಡು, ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. …

Read More »

ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ,

ಮೈಸೂರು: “ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ​ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಹೇಳಿದರು. “ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ಘಟನೆ ನಡೆದಿದೆ. ಸಿಲಿಂಡರ್​ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಐವರಿಗೆ ಗಾಯವಾಗಿದೆ. ಇಬ್ಬರ ಸ್ಥಿತಿ (ಲಕ್ಷ್ಮಿ ಹಾಗೂ ಮಂಜುಳ) ಗಂಭೀರವಾಗಿದೆ. ಮೃತಪಟ್ಟ ವ್ಯಕ್ತಿ ಉತ್ತರ ಪ್ರದೇಶದವರಾಗಿದ್ದು ಸೀಸನಲ್​ ವ್ಯಾಪಾರಿ. ಈ ಬಾರಿ ಬಲೂನ್​ ಮಾರಾಟ ಮಾಡುತ್ತಿದ್ದರು. ಹೊರಗಡೆಯಿಂದ ಗ್ಯಾಸ್​ ಸಿಲಿಂಡರ್​ …

Read More »

ಜಾರಕಿಹೊಳಿ ಕುಟುಂಬದ ಹಿರಿಯರಾದ ಪೂಜ್ಯ ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯಸ್ಮರಣೆ

ಜಾರಕಿಹೊಳಿ ಕುಟುಂಬದ ಹಿರಿಯರಾದ ಪೂಜ್ಯ ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯಸ್ಮರಣೆಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿಯವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರ ಸಮಾಧಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಪುಷ್ಪಾರ್ಚನೆ ಸಲ್ಲಿಸಿ ಭಕ್ತಿಪೂರ್ವಕ ನಮನಗಳನ್ನು ಅರ್ಪಿಸಿದರು.

Read More »

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, ಸುಗಮ ಸಂಗೀತ, ಹಿಂದೂಸ್ತಾನಿ ವಾದ್ಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಅಶುಭಾಷನ, ಶಾಸ್ತ್ರೀಯ ನೃತ್ಯ, ನಾಟಕ ಕಲಾ ಪ್ರಕಾರಗಳಲ್ಲಿ ಎರಡು ದಿನಗಳ ಕಾಲ ಸ್ಪರ್ಧಾ ಕಾರ್ಯಕ್ರಮಗಳಿಗೆ ಚಾಲನೇ ನೀಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವತಿಯಿಂದ ಮಂಗಳವಾರ (ಡಿ.26) ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜರುಗಿದ ವಲಯ ಮಟ್ಟದ ಕಲಾ …

Read More »