Breaking News
Home / ರಾಜ್ಯ (page 440)

ರಾಜ್ಯ

ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಅಪರಾಧಿಗೆ ಸೂರತ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿ

ಸೂರತ್​(ಗುಜರಾತ್​) : ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಅಪರಾಧಿಗೆ ಗುಜರಾತ್​ನ ಸೂರತ್​ ನ್ಯಾಯಾಲಯವು ಮರಣ ದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ 23 ವರ್ಷದ ಅಪರಾಧಿಯು ಪುಟ್ಟ ಮಗುವನ್ನು ಅತ್ಯಾಚಾರ ಎಸಗಿ ಹತ್ಯೆಗೈದಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ ಸೂರತ್​ ನ್ಯಾಯಾಲಯವು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿದೆ. ಅಪರಾಧಿಯನ್ನು ಸೂರತ್​ನ ಸಚಿನ್ ಪ್ರದೇಶದ ನಿವಾಸಿ ಇಸ್ಮಾಯಿಲ್​ ಯೂಸುಫ್​(23) ಎಂದು ಗುರುತಿಸಲಾಗಿದೆ. ಅತ್ಯಾಚಾರ ಆರೋಪಿಗೆ …

Read More »

ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ.‌ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ಕೊಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್​ ಖಾತೆಯಿಂದ …

Read More »

ಸ್ವಿಚ್​ ​​ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್​ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ

ಕಾರವಾರ(ಉತ್ತರಕನ್ನಡ):ಸ್ವಿಚ್​ ​​ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್​ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಸಿದ್ದರದಲ್ಲಿ ಇಂದು ನಡೆದಿದೆ. ಸಿದ್ದರದ ಸಂತೋಷ ಕಲ್ಗುಟಕರ್, ಸಂಜನಾ ಕಲ್ಗುಟಕರ್ ದಂಪತಿಗೆ ಸೇರಿದ 8 ತಿಂಗಳ ಹೆಣ್ಣು ಮಗು ಸಾನಿಧ್ಯ ಕಲ್ಗುಟಕರ್ ಮೃತಪಟ್ಟಿದೆ. 14 ವರ್ಷದ ಬಳಿಕ ದಂಪತಿಗೆ ಈ ಮಗು ಜನಿಸಿತ್ತು. ಕರುಳ‌ ಕುಡಿ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗ್ಗೆ …

Read More »

ಬಿಸಿಲಿನ ತಾಪಕ್ಕೆ ಹೆಸರುವಾಸಿಯಾದ ಕಲಬುರಗಿ ಜಿಲ್ಲೆ ಈಗ‌ ಅಕ್ಷರಶಃ ಮಲೆ‌ನಾಡಿನ ವಾತಾವರಣದಂತೆ

ಕಲಬುರಗಿ: ಬಿಸಿಲಿನ ತಾಪಕ್ಕೆ ಹೆಸರುವಾಸಿಯಾದ ಕಲಬುರಗಿ ಜಿಲ್ಲೆ ಈಗ‌ ಅಕ್ಷರಶಃ ಮಲೆ‌ನಾಡಿನ ವಾತಾವರಣದಂತೆ ಭಾಸವಾಗುತ್ತಿದೆ. ಕಳೆದೊಂದು ವಾರದಿಂದ‌ ಅಬ್ಬರದ ಮಳೆಯಾಗಿದೆ. ಜೊತೆಗೆ ಮಹಾರಾಷ್ಟ್ರ, ತೆಲಂಗಾಣದಲ್ಲಿ ಸುರಿದಿದ್ದ ಭಾರಿ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ತಂಪಿನ ವಾತಾವರಣ ಕಂಡುಬರುತ್ತಿದೆ. ಚಿಂಚೋಳಿ ತಾಲೂಕಿನ‌ ಎತ್ತಿಪೋತಾ ಜಲಪಾತ ಮೈದುಂಬಿ‌ ಹರಿಯುತ್ತಿದೆ. ಜಲಪಾತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೆರಳೆಣಿಕೆಯಷ್ಟು ಚಿಕ್ಕಪುಟ್ಟ ಜಲಪಾತಗಳು ಇವೆ. ಬೆಸಿಗೆಯಲ್ಲಿ ಇವು‌ ಸೊರಗಿ ಹೋಗುತ್ತವೆ. …

Read More »

15 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳ ಇಲಾಖೆಯಿಂದ ಬಾಡಿಗೆ ಹಣ ಬಂದಿಲ್ಲ.

ಬೆಳಗಾವಿ: 15 ತಿಂಗಳಿನಿಂದ ಬಾಕಿಯಿರುವ ಅಂಗನವಾಡಿ ಕೇಂದ್ರಗಳ ಬಾಡಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. 1975ರಲ್ಲಿ ಪ್ರಾರಂಭವಾದ ICDS ಯೋಜನೆಯಡಿ ಸುಮಾರು 30 ರಿಂದ 40 ವರ್ಷಗಳಿಂದ ಗೌರವಧನದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ನೌಕರರ ಜೀವನ ಕಷ್ಟಕರವಾಗಿದೆ. ಗರ್ಭಿಣಿ, ಬಾಣಂತಿಯರ ಆರೈಕೆ, 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವುದು, ಪೌಷ್ಟಿಕ ಆಹಾರ ನೀಡುವುದಕ್ಕಾಗಿ …

Read More »

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕ ಸದಸ್ಯಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಲವು ಕೇಂದ್ರಗಳಲ್ಲಿ …

Read More »

ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ, ಬಿಜೆಪಿಯಲ್ಲಿ ಹೊಸ ಚರ್ಚೆ ಆರಂಭ

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬಂದಿದ್ದ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೆಸರು ನಿಧಾನಕ್ಕೆ ಮರೆಯಾಗುತ್ತಿದ್ದು, ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೆಸರು ಈಗ ಮುನ್ನಲೆಗೆ ಬಂದಿದೆ. ಬಿಎಸ್​ವೈ ಜೊತೆ ಉತ್ತಮ ಒಡನಾಟ ಹಾಗೂ ದಲಿತರಿಗೆ ಅವಕಾಶ ಎನ್ನುವ ಕಾರಣದಿಂದಾಗಿ ಲಿಂಬಾವಳಿ ಹೆಸರು ಕೇಳಿಬಂದಿದೆ. ಒಂದು ಪಕ್ಷ ನಡೆಸುವ ತಾಕತ್ತು ದಲಿತರಿಗೆ ಇದ್ದರೆ ಯಾಕೆ ಅವಕಾಶ ಕೊಡಬಾರದು? ದಲಿತರೂ ರಾಜ್ಯಾಧ್ಯಕ್ಷ ಆಗಬಹುದು ಎಂದು …

Read More »

ಟೊಮೆಟೊ ಮಾರಾಟ ಮಾಡಿ ಒಂದೇ ದಿನದಲ್ಲಿ 4 ಲಕ್ಷ ರೂ. ಗಳಿಸಿದ ರೈತ

ತಿರುಪುರ್ (ತಮಿಳುನಾಡು) : ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯು ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದ್ದು, ತರಕಾರಿ ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ, ಈ ಮಧ್ಯೆಯೇ ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ. ಇದೀಗ ತಮಿಳುನಾಡಿನ ರೈತರೊಬ್ಬರು ಒಂದೇ ದಿನದಲ್ಲಿ 4 ಲಕ್ಷ ರೂ. ಟೊಮೆಟೊ ಮಾರಾಟ ಮಾಡಿ ಅಧಿಕ ಲಾಭ ಗಳಿಸಿದ್ದಾರೆ. ಇಲ್ಲಿನ ಗುಂಡಂ ಸಮೀಪದ ಜ್ಯೋತಿಯಂಪಟ್ಟಿಯ 27 ವರ್ಷದ ರೈತ ವೆಂಕಟೇಶ್ ಅವರು ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡುವ …

Read More »

ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳ ಹರಡುವಿಕೆಯನ್ನು ತಡೆಯುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುತಿಸಿದೆ.

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರದ ವಿಡಿಯೋಗಳನ್ನು ಹರಡುವುದನ್ನು ನಿಯಂತ್ರಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ನೀಡಿದ ವರದಿಯನ್ನು ನ್ಯಾಯಾಲಯ ಪರಿಶೀಲಿಸಿದೆ. ತಜ್ಞರ ವರದಿ ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​ ತನ್ನ ಆದೇಶದಲ್ಲಿ ತಿಳಿಸಿದೆ. 2015 ರಲ್ಲಿ, ವಾಟ್ಸ್​ಆಯಪ್​ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ …

Read More »

ರಾತ್ರಿ ವೇಳೆ ಬೈಕ್​ ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ದರೋಡೆಕೋರರ ಬಂಧನ

ಬೆಂಗಳೂರು: ಹೊಟ್ಟೆಪಾಡಿಗಾಗಿ ಕೆಲಸ ಮಾಡುವ ಡೆಲಿವರಿಬಾಯ್​​​ಗಳನ್ನು ಗುರಿಯಾಗಿಸಿಕೊಂಡು ರಾತ್ರಿವೇಳೆ ಅವರ ಎಲೆಕ್ಟ್ರಿಕಲ್ ಬೈಕ್​​ ಗಳನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.   ಅಸ್ಸೋಂ ಮೂಲದ ರಾಕೇಶ್ ಹಾಗೂ ಮಲ್ಲಿಕ್ ಬಂಧಿತ ಆರೋಪಿಗಳು. ಈ ಹಿಂದೆ ಸೆಕ್ಯೂರಿಟಿಗಾರ್ಡ್​ಗಳಾಗಿ ಕೆಲಸ ಮಾಡುತ್ತಿದ್ದರು. ಹಣದ ಆಸೆಗಾಗಿ ಅಪರಾಧ ಎಸಗಲು ನಿರ್ಧರಿಸಿದ್ದ ಆರೋಪಿಗಳು, ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಫುಡ್​ ಡೆಲಿವರಿ ಮಾಡುವ ಯುವಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆಗೆ ಇಳಿದಿದ್ದರು‌. …

Read More »