Home / ರಾಜ್ಯ (page 441)

ರಾಜ್ಯ

ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್​ನಲ್ಲಿ ಹೆಂಡತಿ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒಂದೇ‌ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಆಂಧ್ರ ಮೂಲದ ವಿರಾರ್ಜುನ (31), ಪತ್ನಿ ಹೇಮಾವತಿ (29), ಒಂದೂವರೆ ವರ್ಷದ ಹಾಗೂ 8 ತಿಂಗಳ ಮಕ್ಕಳು …

Read More »

ಹೈಕಮಾಂಡ್​ ಮುಂದೆ ತಲೆಬಾಗುವ ಮೂಲಕ ಸಿಎಂ ಸಿದ್ದರಾಮಯ್ಯ ಬಹಳ ವೀಕ್​ ಆಗಿದ್ದಾರೆ: ಬೊಮ್ಮಾಯಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಆಡಳಿತ ಸಂಪೂರ್ಣವಾಗಿ ದೆಹಲಿಯಿಂದ ನಡೆಯುತ್ತಿದೆ. ಇಡೀ ಸಚಿವ ಸಂಪುಟವೇ ಎಐಸಿಸಿ ಕಚೇರಿ ಸಭೆಯಲ್ಲಿ ಭಾಗಿಯಾಗಿರುವುದೇ ಇದಕ್ಕೆ ನಿದರ್ಶನ. ರಾಜ್ಯದಲ್ಲಿ ಸಚಿವ ಸಂಪುಟವೇ ಸುಪ್ರೀಂ, ಅಂತಹ ಸಂಪುಟವನ್ನೇ ಎಐಸಿಸಿ ಅಡಿಯಾಳಾಗಿಸಿ ರಾಜ್ಯದ ಜನತೆಗೆ ಸಿದ್ದರಾಮಯ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಆರ್.ಟಿ ನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಡಳಿತಾರೂಢ ಪಕ್ಷವೊಂದು ಇಡೀ …

Read More »

ನೇಣು ಬಿಗಿದುಕೊಂಡು ಕಲಾ ನಿರ್ದೇಶಕ ​ದೇಸಾಯಿ ಆತ್ಮಹತ್ಯೆ

ರಾಯಗಡ(ಮಹಾರಾಷ್ಟ್ರ) : ಸೂಪರ್​ಹಿಟ್​​ ಚಿತ್ರಗಳನ್ನು ನೀಡಿದ್ದ ಕಲಾ ನಿರ್ದೇಶಕ ನಿತಿನ್​ ಚಂದ್ರಕಾಂತ್​ ದೇಸಾಯಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲಿಸರು, ನೇಣು ಬಿಗಿದುಕೊಂಡಿದ್ದೇ ಕಾರಣ ಎಂದಿದ್ದಾರೆ. ಇತ್ತ ಅವರ ಕುಟುಂಬಸ್ಥರು ದೇಸಾಯಿ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಟುಡಿಯೋದಲ್ಲೇ ಅಂತ್ಯಕ್ರಿಯೆ ನಡೆಸುವುದಾಗಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಖ್ಯಾತ ಕಲಾ ನಿರ್ದೇಶಕ ದೇಸಾಯಿ ಅವರು ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅವರು ಆಗಸ್ಟ್​ 2 ರಂದು ಬುಧವಾರ ಬೆಳಗಿನ ಜಾವ …

Read More »

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉಗ್ರಪ್ಪ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿಯಿಂದ ಖಂಡನೆ

ಬೆಂಗಳೂರು: ”ಇಡೀ ಜಗತ್ತೇ ಒಪ್ಪಿರುವ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕೆಪಿಸಿಸಿ ವಕ್ತಾರ ವಿ ಎಸ್ ಉಗ್ರಪ್ಪ ಆಡಿರುವ ಮಾತು ಆ ಪಕ್ಷದ ಗುಣ ಮತ್ತು ಅವರ ಚಾರಿತ್ರ್ಯದ ಮೇಲೆ ಬೆಳಕು ಚೆಲ್ಲಲಿದೆ” ಎಂದು ಬಿಜೆಪಿ ವಕ್ತಾರ ಎಂ‌ ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ”ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೆಪಿಸಿಸಿ ವಕ್ತಾರ ವಿ ಎಸ್ …

Read More »

ಕಲಚೇತನರ ಸಿಟ್ಟಿಂಗ್​ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ, ಪುರುಷ ತಂಡಗಳ ಗೆಲುವು

ಹಾವೇರಿ : ಮಲೇಶಿಯಾದ ಕ್ವಾಲಾಲಂಪುರದಲ್ಲಿ ಜುಲೈ 29 ಮತ್ತು 30 ರಂದು ನಡೆದ ವಿಕಲಚೇತನರ ಸಿಟ್ಟಿಂಗ್​ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ಮತ್ತು ಪುರುಷ ತಂಡಗಳು ಗೆಲ್ಲುವ ಮೂಲಕ ಚಿನ್ನದ ಪದಕ ಬೇಟೆಯಾಡಿದ್ದಾರೆ. ಈ ಇಬ್ಬರು ಆಟಗಾರರು ಹಾವೇರಿ ಜಿಲ್ಲೆಯವರಾಗಿದ್ದು, ಮಹಿಳಾ ತಂಡವನ್ನು ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದ ಮಂಜುಳಾ ಲಮಾಣಿ ಹಾಗು ಪುರುಷ ತಂಡವನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಹರೀಶ್ ಶಿವಣ್ಣನವರ್ ಮುನ್ನಡಿಸಿದ್ದರು. ಮುಂಬರುವ ಪ್ಯಾರಾ ಏಷ್ಯನ್​ ಗೇಮ್ಸ್ …

Read More »

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ.

ಚಿಕ್ಕಮಗಳೂರು: ರಾಜ್ಯದ ಪ್ರವಾಸಿಗರ ಸ್ವರ್ಗವೆಂದೇ ಹೇಳಲಾಗುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಬಂದು ಹೋಗಲಷ್ಟೇ ಸ್ವರ್ಗವೆನಿಸುತ್ತದೆ. ಆದರೆ, ಇಲ್ಲಿ ನೆಲೆಗೊಂಡು ಜೀವನ ಮಾಡುವವರಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗತೊಡಗಿದೆ. ಮೂಡಿಗೆರೆಯ ಒಂದೇ ಕಾಫಿ ಎಸ್ಟೇಟ್‌ನಲ್ಲಿ 16 ಕಾಡಾನೆಗಳು ಒಂದು ವಾರದಿಂದ ಬೀಡು ಬಿಟ್ಟಿದ್ದು, ಎಲಿಫ್ಯಾಂಟ್‌ ಟಾಸ್ಕ್‌ ಫೋರ್ಸ್‌ನ ಆನೆ ಓಡಿಸುವ ಪ್ರಯತ್ನ ಸಂಪೂರ್ಣ ವ್ಯರ್ಥವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳು ಹಾಗೂ ಮಾನವನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕಾಡಾನೆಗಳು ಪದೇ ಪದೆ ದಾಳಿ …

Read More »

2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರೊಂದಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್​ ಗಾಂಧಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ಖರ್ಗೆ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಹೈಕಮಾಂಡ್ ಕರೆದ ಸಭೆಯಲ್ಲಿ ರಾಜ್ಯದ ಹಲವು ನಾಯಕರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, …

Read More »

ರಾಜ್ಯ ಕಾಂಗ್ರೆಸ್​ ಸರ್ಕಾರದ ಶಕ್ತಿ ಯೋಜನೆ ಫಲಶೃತಿಯಿಂದ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ದೊರೆತಿದೆ” ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ”ರಾಜ್ಯ ಸರ್ಕಾರದ ಗ್ಯಾರೆಂಟೆ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಫಲಶೃತಿಯಿಂದ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ಗ್ಯಾರಂಟಿ ಲಭಿಸಿದೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ಅವರು, ”ಶಕ್ತಿ ಯೋಜನೆ ಜಾರಿಯಾದ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಗ್ಯಾರೆಂಟಿ ಯೋಜನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ” …

Read More »

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ 20-24 ಸ್ಥಾನಗಳಲ್ಲಿ ಜಯಗಳಿಸುವ ಭರವಸೆ:C .M.

ನವದೆಹಲಿ/ಬೆಂಗಳೂರು: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು, ಕಾಂಗ್ರೆಸ್​ 20-24 ಸ್ಥಾನಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.   2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರೊಂದಿಗೆ ಹೈಕಮಾಂಡ್ ಬುಧವಾರ ಮಹತ್ವದ ಸಭೆ ನಡೆಯಿತು. ಈ ಸಭೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಮ್ಮ …

Read More »

ಖಾಸಗಿ ಕಂಪೆನಿಯ ಕ್ರಿಮಿನಾಶಕ ಸಿಂಪಡಣೆಯಿಂದ ರೈತರೊಬ್ಬರ ಟೊಮೆಟೊ ಬೆಳೆ ಸಂಪೂರ್ಣ ನಾಶ

ದೊಡ್ಡಬಳ್ಳಾಪುರ : ಟೊಮೆಟೊಗೆ ಇವತ್ತು ಚಿನ್ನದ ಬೆಲೆ. ಉತ್ತಮ ಬೆಲೆ ಸಿಗುವ ಸಮಯಕ್ಕೆ ಟೊಮೆಟೊ ಬೆಳೆಯ ಭರ್ಜರಿ ಫಸಲು ಬಂದಿತ್ತು. ಆದರೆ, ಕಂಪನಿಯೊಂದರ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಿದ್ದರಿಂದ ತಾಲೂಕಿನಲ್ಲಿ ಇಡೀ ಟೊಮೆಟೊ ಬೆಳೆ ಒಣಗಿನಿಂತಿದೆ ಎಂದು ರೈತರು ಆರೋಪಿಸಿದ್ದಾರೆ. ರೈತನ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಅಡುಗೆ ಮನೆಯ ರಾಣಿ, ಕೆಂಪು ಸುಂದರಿ ಎಂದೇ ಟೊಮೆಟೊ ಪ್ರಸಿದ್ಧಿ ಪಡೆದಿದೆ. ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆಗೆ ಬಂಗಾರದ ಬೆಲೆ ಇದೆ. ಇವತ್ತು …

Read More »