Home / ರಾಜ್ಯ (page 448)

ರಾಜ್ಯ

ಭಾರಿ ಮಳೆಯಿಂದ 283 ಮನೆಗಳು ಭಾಗಶಃ ಹಾನಿ

ಕಲಬುರಗಿ: ಕಳೆದ ಜೂ.1 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ 283 ಮನೆಗಳು ಭಾಗಶಃ ಹಾನಿಗೊಂಡಿದ್ದು, ಹಾನಿಯಾದ ಮನೆಗಳ ಕುರಿತು ಜಂಟಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಇದಲ್ಲದೇ 20 ಕಿಮೀ ರಾಜ್ಯ ಹೆದ್ದಾರಿ, 27.50 ಕಿಮೀ ಜಿಲ್ಲಾ ಹೆದ್ದಾರಿ, 100 ಕಿಮೀ ಗ್ರಾಮೀಣ ರಸ್ತೆಗಳು ಸೇರಿದಂತೆ ಒಟ್ಟು 147.50 ಕಿಮೀ ರಸ್ತೆ, 84 ಸೇತುವೆಗಳು, 89 ಶಾಲಾ ಕೊಠಡಿಗಳು ಹಾಗೂ 38 ಅಂಗನವಾಡಿ …

Read More »

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು, ಎಂಟು ಮಂದಿ ಗಂಭೀರವಾಗಿ ಗಾಯ

ಕಲಬುರಗಿ: ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬದ ದಿನದಂದೇ, ಹಳೆ ದ್ವೇಷಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ಉಂಟಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಒಂದೇ ಸಮುದಾಯಕ್ಕೆ ಸೇರಿದ ಹೊನಗುಂಟಾ ಮತ್ತು ಗೋಟಾಳ್ ಕುಟುಂಬಗಳು ಹಳೆ ವೈಷಮ್ಯದ ಹಿನ್ನೆಲೆ ಪರಸ್ಪರ ಕಲ್ಲು ಹಾಗೂ ಕಟ್ಟಿಗೆಯಿಂದ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಎಂಟು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೇಮ ವಿವಾಹಕ್ಕೆ ಸಂಬಂಧಿಸಿ ಈ ಎರಡು …

Read More »

15 ವರ್ಷಗಳಿಂದ ನಕ್ಸಲ್​ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಮಹಿಳೆ ಪೊಲೀಸರಿಗೆ ಶರಣು

ಸುಕ್ಮಾ (ಛತ್ತೀಸ್‌ಗಢ): ಛತ್ತೀಸ್‌ಗಢದ ಬಸ್ತಾರ್ ವಿಭಾಗದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್​ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಮಹಿಳೆಯೊಬ್ಬಳು ಪೊಲೀಸರಿಗೆ ಶರಣಾಗಿದ್ದಾಳೆ. ಈಕೆ ಬಂಧನಕ್ಕಾಗಿ ಛತ್ತೀಸ್‌ಗಢ ಸರ್ಕಾರ ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ವೆಕೊ ಹಿಡಮೆನ್ ಎಂಬ ಮಹಿಳಾ ನಕ್ಸಲ್ ಶನಿವಾರ​ ಪೊಲೀಸರಿಗೆ ಶರಣಾಗಿದ್ದು, ಈಕೆ ನಕ್ಸಲ್​ ಪೀಡಿತ ದಾಂತೇವಾಡ ಮತ್ತು ಸುಕ್ಮಾ ಗಡಿ ಪ್ರದೇಶಗಳಲ್ಲಿ 15 ವರ್ಷಗಳ ಕಾಲ ನಕ್ಸಲ್​ ಸಂಘಟನೆಯಲ್ಲಿ ಸಕ್ರಿಯಳಾಗಿದ್ದಳು. ಛತ್ತೀಸ್‌ಗಢ ಸರ್ಕಾರದ ಪುನರ್ವಸತಿ ನೀತಿಗೆ ಅನುಗುಣವಾಗಿ ಪೊಲೀಸರು ನಡೆಸುತ್ತಿರುವ …

Read More »

ಗರಗ ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದದ ನಡುವೆಯೂ ಪ್ರಶಾಂತ ದೇವರ ಪುರಪ್ರವೇಶ

ಧಾರವಾಡ: ಗರಗ ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದದ ನಡುವೆಯೂ ಪ್ರಶಾಂತ ದೇವರ ಪುರಪ್ರವೇಶ ಮಾಡಿದ್ದಾರೆ. ಪ್ರಶಾಂತ ದೇವರ ಜಂಗಮರಾಗಿರುವುದರಿಂದ ಅವರನ್ನು ಪೀಠಾಧಿಪತಿಯನ್ನಾಗಿ ನೇಮಕ ಮಾಡುವುದಕ್ಕೆ ವೀರಶೈವ ಪಂಚಮಸಾಲಿ ಲಿಂಗಾಯತ ಒಕ್ಕೂಟದ ವಿವಿಧ ಮಠಾಧೀಶರಿಂದ ವಿರೋಧ ವ್ಯಕ್ತವಾಗಿತ್ತು‌. ಶನಿವಾರ ಮಠದ ಬಳಿ‌ 25ಕ್ಕೂ ಹೆಚ್ಚು ಮಠಾಧೀಶರು ಪ್ರತಿಭಟನೆ ನಡೆಸಿದ್ದರು. ಬಳಿಕ ಮಠದ ಆಡಳಿತ ಮಂಡಳಿ ಗರಗ ಹಂಗರಕಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಭೆ ಮಾಡಲಾಗಿತ್ತು. ಸಭೆಯಲ್ಲಿ ಒಮ್ಮತದ ನಿರ್ಧಾರವಾಗದ ಹಿನ್ನೆಲೆಯಲ್ಲಿ ವಿರೋಧ …

Read More »

ಗೃಹ ಜ್ಯೋತಿ ಜುಲೈನಿಂದಲೇ ಪ್ರಾರಂಭ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್​ನಲ್ಲಿ ಬರಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್

ಜುಲೈ ತಿಂಗಳ ಬಿಲ್ ಆಗಸ್ಟ್​ನಲ್ಲಿ ಬರಲಿದೆ: ಗೃಹ ಜ್ಯೋತಿ ಜುಲೈನಿಂದಲೇ ಪ್ರಾರಂಭ ಆಗಿದೆ. ಜುಲೈ ತಿಂಗಳ ಬಿಲ್ ಆಗಸ್ಟ್​ನಲ್ಲಿ ಬರಲಿದೆ. ಆಗ ಎಲ್ಲರಿಗೂ ಉಚಿತವಾಗಿ ಕೊಡುತ್ತೇವೆ ಎಂದರು. ರಾಜ್ಯದಲ್ಲಿ ಮತ್ತೆ ಕಸ್ತೂರಿ ರಂಗನ್ ವರದಿ ಹಿನ್ನೆಲೆ ಪ್ರತಿಕ್ರಿಯಿಸಿದ ಸಚಿವರು, ಯಾವ ಮಂತ್ರಿ ಮಂಡಲದಲ್ಲೂ ಸೂಕ್ಷ್ಮ ವಲಯದ ಬಗ್ಗೆ ತೀರ್ಮಾನ ಆಗಿರಲಿಲ್ಲ. ಸೆನ್ಸಿಟೀವ್ ಝೋನ್ ಮಾಡಲು ಕ್ಯಾಬಿನೆಟ್​ ಉಪ ಸಮಿತಿಗೆ ರಚನೆಗೆ ಅಧಿಕಾರ ಕೊಟ್ಟಿದ್ದೇವೆ. ಸಬ್ ಕಮಿಟಿಯಲ್ಲಿ ಚರ್ಚೆಯಾಗಿ ಕ್ಯಾಬಿನೆಟ್​ನಲ್ಲಿ ತೀರ್ಮಾನವಾಗಲಿದೆ ಎಂದು …

Read More »

ಆಗಸ್ಟ್ 1ರಂದು ಕೇರಳ, ಆಗಸ್ಟ್ 2ರಂದು ಕರ್ನಾಟಕ ಮತ್ತು ಆಗಸ್ಟ್ 3ರಂದು ತಮಿಳುನಾಡು ಎಐಸಿಸಿ ಮತ್ತು ರಾಜ್ಯ ತಂಡಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ

ತಮಿಳುನಾಡು ಎಐಸಿಸಿ ಮತ್ತು ರಾಜ್ಯ ತಂಡಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಲಿದ್ದಾರೆ. ನವದೆಹಲಿ: ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಗದ್ದಲದ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಆಗಸ್ಟ್​ 1 ರಿಂದ 129 ಸದಸ್ಯರನ್ನು ಲೋಕಸಭೆಗೆ ಕಳುಹಿಸುವ ದಕ್ಷಿಣ ಭಾರತದ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿನ ಪಕ್ಷದ ಸಿದ್ಧತೆಗಳನ್ನು ಖರ್ಗೆ ಅವಲೋಕನ ಮಾಡಲಿದ್ದಾರೆ.   2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು …

Read More »

ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ

ನೊಣಗಳ ಉಪಟಳದಿಂದ ಬೇಸತ್ತಿರುವ ದಾವಣಗೆರೆ ತಾಲೂಕಿನ ಹತ್ತೂರು ಗ್ರಾಮಕ್ಕೆ ತಕ್ಕಮಟ್ಟಿಗೆ ಮುಕ್ತಿ ಸಿಕ್ಕಂತಾಗಿದೆ.‌ ‘ದಾವಣಗೆರೆಯ ಗ್ರಾಮಗಳಲ್ಲಿ ಹೆಚ್ಚಾಯಿತು ನೊಣಗಳ ಉಪಟಳ ಆತಂಕದಲ್ಲಿ ಜನ’ ಶೀರ್ಷಿಕೆಯಡಿಯಲ್ಲಿ ಈಟಿವಿ ಭಾರತ್ ಜುಲೈ 29 ರಂದು ವರದಿ ಮಾಡಿತ್ತು. ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಬ್ಬಾಳು ಗ್ರಾಮ ಪಂಚಾಯತಿ ಸಿಬ್ಬಂದಿ ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ ಮಾಡಿದ್ದಾರೆ. ಔಷಧಿ ಸಿಂಪಡಣೆ ಮಾಡಿದ್ರೆ ಕೆಲ ಹೊತ್ತು ಮಾತ್ರ ನೊಣಗಳ ಕಾಟ ದೂರವಾಗ್ಬಹುದು. …

Read More »

ಕಳೆದ 15 ದಿನಗಳಿಂದ ಉತ್ತಮ ಮಳೆ ಬಿತ್ತನೆ ಕಾರ್ಯ ಚುರುಕು

ಬೆಳಗಾವಿ: ಕಳೆದ 15 ದಿನಗಳಿಂದ ಉತ್ತಮ ಮಳೆಯಾಗಿರುವ ಹಿನ್ನೆಲೆ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ರೈತರು ಭೂಮಿ ಹದಗೊಳಿಸುವಲ್ಲಿ ನಿರತರಾಗಿದ್ದಾರೆ. . ಈ ಬಾರಿ ಮುಂಗಾರು ಮಳೆ ಎರಡು ತಿಂಗಳು ವಿಳಂಬವಾಗಿದ್ದರಿಂದ ಸವದತ್ತಿ ತಾಲೂಕಿನ ಕರಿಕಟ್ಟಿ ಸೇರಿ ಸುತ್ತಲಿನ ಹಲವಾರು ಗ್ರಾಮದ ರೈತರು ಬಿತ್ತನೆ ಮಾಡಿರಲಿಲ್ಲ. ಇತ್ತೀಚೆಗೆ ನಿರಂತರವಾಗಿ ಮಳೆಯಾಗಿದ್ದು, ಮಳೆರಾಯ ಈಗ ಒಂದಿಷ್ಟು ವಿರಾಮ ಕೊಟ್ಟಿದ್ದಾನೆ. ಹೀಗಾಗಿ ಬೀಜ, ಗೊಬ್ಬರ ತಂದು ಮನೆಯಲ್ಲಿ ಸಂಗ್ರಹ ಮಾಡಿದ್ದ ರೈತರು …

Read More »

ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ: ಬೊಮ್ಮಾಯಿ

ಬೆಳಗಾವಿ : “ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಅಧಿಕಾರಿಗಳ ವರ್ಗಾವಣೆಗಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲರೂ ವರ್ಗಾವಣೆ ದಂಧೆಯಲ್ಲಿದ್ದಾರೆ. ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ. ಇದೀಗ ವರ್ಗಾವಣೆ ದಂಧೆಯಲ್ಲಿ ಚೌಕಾಸಿ ನಡೆಯುತ್ತಿದೆ” ಎಂದು ಹೇಳಿದರು. “ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ …

Read More »

ಲಂಚ: ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಸೇರಿ ನಾಲ್ವರ ಬಂಧಿಸಿದ ಸಿಬಿಐ

ನವದೆಹಲಿ: ಲಂಚ ಪಡೆದ ಗಂಭೀರ ಆರೋಪದಡಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಇಬ್ಬರು ಜಂಟಿ ನಿರ್ದೇಶಕ ಶ್ರೇಣಿಯ ಅಧಿಕಾರಿಗಳು, ಹಿರಿಯ ತಾಂತ್ರಿಕ ಸಹಾಯಕ ಮತ್ತು ಅಲೋಕ್ ಇಂಡಸ್ಟ್ರೀಸ್‌ನ ಸಹವರ್ತಿ ಸೇರಿದಂತೆ ಒಟ್ಟು ನಾಲ್ವರನ್ನು ಶನಿವಾರ ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ತನಿಖೆಯ ವೇಳೆ ಅಧಿಕಾರಿಗಳಿಂದ ಸುಮಾರು 59.80 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ. ನವದೆಹಲಿಯಲ್ಲಿರುವ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಜಂಟಿ ನಿರ್ದೇಶಕ, ಹಿರಿಯ …

Read More »