Home / ರಾಜ್ಯ (page 451)

ರಾಜ್ಯ

ಗಡಿ ಜಿಲ್ಲೆಯಲ್ಲಿ ಮಕ್ಕಳಿಗೆ ಮತ್ತೆ ಬಂತು ವಿಚಿತ್ರ ಚುಕ್ಕಿ ರೋಗ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ವಿಚಿತ್ರ ಕಾಯಿಲೆಯೊಂದು ಮತ್ತೆ ಬೆಳಕಿಗೆ ಬಂದಿದ್ದು, ವೈದ್ಯಲೋಕಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಕಾಯಿಲೆಗೆ ತುತ್ತಾಗಿರುವ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.   ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವ ರೋಗಕ್ಕೆ ಚುಕ್ಕಿ ಚರ್ಮರೋಗ ಎಂದು ಕರೆಯಲಾಗುತ್ತದೆ. ಇದು ಒಂದು ಬಾರಿ ಮಕ್ಕಳಿಗೆ ಅಂಟಿಕೊಂಡರೆ ಸಾವು ಖಚಿತ ಎಂಬ ಮಾತಿದ್ದು, ಈ ರೀತಿ ಮಾರಕ‌ ಕಾಯಿಲೆ ಹನೂರು ತಾಲೂಕಿನ ಕುರಟ್ಟಿ ಹೊಸೂರು, …

Read More »

ಎರಡು ಟ್ರಾವೆಲ್​ ಬಸ್​ಗಳ ಮಧ್ಯೆ ಅಪಘಾತ

ಬುಲ್ದಾನ(ಮಹರಾಷ್ಟ್ರ): ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.ಎರಡು ಟ್ರಾವೆಲ್​ ಬಸ್​ಗಳ ಮಧ್ಯೆ ಅಪಘಾತ ನಡೆದು 6 ಜನ ಪ್ರಯಾಣಿಕರು ಸಾವನ್ನಪ್ಪಿ, 25 ಪ್ರಯಾಣಿಕರು ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಫ್ಲೈಓವರ್ ಮೇಲೆ ಸಂಭವಿಸಿದೆ.   ಅಪಘಾತವಾದ ಬಸ್​ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ ಹಿಂಗೋಲಿಗೆ ಹೋಗುತ್ತಿತ್ತು. ಈ …

Read More »

ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರದಿಂದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ವೃಂದದ ಕಲ್ಯಾಣ ಸಂಘಟಕರ ಹುದ್ದೆ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ …

Read More »

ಆರೋಗ್ಯ ಸೌಧದಲ್ಲಿವಿಶ್ವ ಹೆಪಟೈಟಿಸ್ ದಿನಾಚರಣೆ ಕಾರ್ಯಕ್ರಮ

ಬೆಂಗಳೂರು: ”ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ ನೀಡುವ ಮೂಲಕ ಯುವಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅತಿ ಅವಶ್ಯವಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಶುಕ್ರವಾರ ವಿಶ್ವ ಹೆಪಟೈಟಿಸ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಪಟೈಟಿಸ್ ಸೋಂಕು ಆಹಾರ ಮತ್ತು ಜೀವನಶೈಲಿಯಲ್ಲಿ ಆಗುವ ಬದಲಾವಣೆಗಳಿಂದ ಬರುತ್ತದೆ. ಮಾನವನ ಅಂಗಾಂಗದಲ್ಲಿ ಲಿವರ್​ಗೆ ನಾವು ಹೆಚ್ಚು ಪ್ರಾಮುಖ್ಯತೆ ನೀಡಬೇಕಾಗಿದೆ. ಲಿವರ್​ನ್ನು ನಾವು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೋ, ಅದು ನಮಗೆ …

Read More »

ಶಾಲಾ ವಿದ್ಯಾರ್ಥಿನಿಗೆ ಬಸ್​ ಹತ್ತಲು ಅಡ್ಡಿಪಡಿಸಿದ ಆರೋಪದ ಮೇಲೆ ಬಸ್ ಚಾಲಕನ ಅಮಾನತುಗೊಳಿಸಿ ಆದೇಶಿ

ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಾರಿಗೆ ಬಸ್ ಹತ್ತಲು ಶಾಲಾ ವಿದ್ಯಾರ್ಥಿನಿಯರಿಗೆ ಅಡ್ಡಿಪಡಿಸಿದ್ದಲ್ಲದೇ, ಬುರ್ಖಾ ಧರಿಸಿ ಮಾತನಾಡು ಎಂದು ಹೇಳಿ ಅನುಚಿತವಾಗಿ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ.   ಕಲಬುರಗಿ ಬಸ್ ಡಿಪೋ 3 ರ ಚಾಲಕ ಮೆಹಬೂಬ್ ಪಟೇಲ್ ಅಮಾನತುಗೊಂಡ ಚಾಲಕ. ಜುಲೈ 26ರಂದು ಬಸವಕಲ್ಯಾಣ – ಕಲಬುರಗಿ ಮಧ್ಯೆ ಸಂಚರಿಸುವ ಬಸ್ ಕಮಲಾಪುರ ನಿಲ್ದಾಣದಲ್ಲಿ ನಿಂತಾಗ ಕಮಲಾಪುರದಿಂದ ಓಕಳಿ ಗ್ರಾಮಕ್ಕೆ …

Read More »

ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಐಪಿಎಸ್ ಅಧಿಕಾರಿ ಹಿಲೋರಿಗೆ ಬಿಗ್​ ರಿಲೀಫ್

ಬೆಂಗಳೂರು : ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ನೀಡಿದೆ. ಇದರಿಂದಾಗಿ ಬಹುಕೋಟಿ ಹಗರಣದಲ್ಲಿ ಸಿಲುಕಿದ್ದ ಹಿಲೋರಿ ಅವರಿಗೆ ಬಿಗ್ ರಿಲೀಫ್​ ಸಿಕ್ಕಂತಾಗಿದೆ. ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು …

Read More »

ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ :C.M. ಪರಿಶೀಲನೆ

ಬೆಂಗಳೂರು: ಉದ್ಘಾಟನೆ ಆದಾಗಿನಿಂದ ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್​ನಂತಹ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು. ಇಲ್ಲಿನ ಅಪಘಾತ ಸ್ಥಳಗಳ ವೀಕ್ಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಸಲಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ನಡೆಯುವ ಸ್ಥಳಗಳು, ರಸ್ತೆ ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಹೆದ್ದಾರಿ ನಿರ್ಮಾಣದಲ್ಲಿ ಕಳಪೆ …

Read More »

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ

ಬೆಂಗಳೂರು : ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.   15ನೇ ಆಗಸ್ಟ್, 2023ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ – ತುಮಕೂರು. …

Read More »

ನಮ್ಮ ನಾಯಕ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರ ಜೊತೆ ಸೇರಿ ಪಕ್ಷ ಕಟ್ಟಿದ್ದರಿಂದ ಇಂದು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 2024ರ ಚುನಾವಣೆ ನಮ್ಮ ಮುಂದಿನ ಗುರಿಯಾಗಿದ್ದು, ಈ ಗುರಿ ತಲುಪಬೇಕಿದೆ ಎಂದರು. ಭವಿಷ್ಯದ ನಾಯಕರನ್ನು ರೂಪಿಸಲು ಯುವ ಘಟಕಗಳು ಪ್ರಮುಖ ಪಾತ್ರ …

Read More »

ತಡವಾಗಿಯಾದರೂ ಭೋರ್ಗರೆಯುತ್ತ ಮುಂಗಾರು ಮಳೆ ದೇಶಾದ್ಯಂತ ಹೆಚ್ಚಿನ ಅನಾಹುತ ಸೃಷ್ಟಿಸುತ್ತಿದೆ.

ಏತೂರುನಗರ (ತೆಲಂಗಾಣ): ತಡವಾಗಿಯಾದರೂ ಭೋರ್ಗರೆಯುತ್ತ ಮುಂಗಾರು ಮಳೆ ದೇಶಾದ್ಯಂತ ಹೆಚ್ಚಿನ ಅನಾಹುತ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. 3 ದಿನಗಳಿಂದ ಸತತ ಮಳೆಯಾಗಿದ್ದು ಪ್ರವಾಹ ಉಂಟಾಗಿದೆ. ಹೈದರಾಬಾದ್​ಗೆ ಸಮೀಪವಿರುವ ಏರೂತುನಗರ ಮಂಡಲದ ಕೊಂಡಾಯಿ ಗ್ರಾಮ ದಿಢೀರ್​ ಮಳೆಗೆ ಮುಳುಗಡೆಯಾಗಿದ್ದು, 8 ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋದ ರ್ದುರ್ಘಟನೆ ನಡೆದಿದೆ. ತೀವ್ರ ಮಳೆ ಸುರಿದ ಕಾರಣ ಕೊಂಡಾಯಿ ಗ್ರಾಮದ ಕೆಲ ಮನೆಗಳು ಮುಳುಗಡೆಯಾಗಿವೆ. ಪ್ರಾಣ ರಕ್ಷಣೆಗೆಂದು 8 ಮಂದಿ …

Read More »