Home / ರಾಜ್ಯ (page 456)

ರಾಜ್ಯ

B.S.F. ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ

ಪಲಾಮು (ಜಾರ್ಖಂಡ್): ಬಿಎಸ್‌ಎಫ್ ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಪಿಡಿಎಸ್ ಡೀಲರ್ (ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಯವ) ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮೇದಿನಿ ರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿವಾದದ ಹಿನ್ನೆಲೆ ಕತ್ತಿಯಿಂದ ಹಲ್ಲೆ: ಇಡೀ ಘಟನೆಯು ಪಲಮುವಿನ ಪಾಡ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲ್ಹಾನಾದಲ್ಲಿ ನಡೆದಿದೆ. …

Read More »

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು

ಬೆಂಗಳೂರು : ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಪ್ರಕರಣಕ್ಕೆ 10 ಕೋಟಿ ರೂ. ನಷ್ಟ ಪರಿಹಾರ ನೀಡಲು ಆದೇಶಿಸುವಂತೆ ಕೋರಿ ಮೃತ ಮಹಿಳೆಯ ಪತಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಲೋಹಿತ್ ಕುಮಾರ್ ವಿ. ಸುಲಾಖೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಮೆಟ್ರೋ ರೈಲು …

Read More »

ಬೆಂಗಳೂರು ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ತಮಿಳುನಾಡಿನ ಧರ್ಮಪುರಿಯಿಂದ ಬೆಂಗಳೂರು ನಗರಕ್ಕೆ ಬಸ್​ನಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿ. ಈತನಿಂದ 30 ಲಕ್ಷ ರೂ ಮೌಲ್ಯದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಕಳೆದ 25 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಬನಶಂಕರಿ, ಸಿ.ಕೆ.ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ ಹಾಗು ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರದ ವಿವಿಧ ಪೊಲೀಸ್ …

Read More »

ಆರು ತಾಲೂಕೂಗಳ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದ ಡಿಸಿ

ಬೆಳಗಾವಿ: ನಗರದ ವಡಗಾವಿ ಸಫಾರ ಗಲ್ಲಿಯಲ್ಲಿ ಮಳೆಯು ಅವಾಂತರ ಸೃಷ್ಟಿಸಿದೆ. ಮನೆಗಳಿಗೆ, ವಿದ್ಯುತ್ ಮಗ್ಗದ ಕಾರ್ಖಾನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೀರು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಹೌದು.. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಫಾರ ಗಲ್ಲಿಯಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ನೀರು ನುಗ್ಗುತ್ತಿದೆ. ಹಗಲು ರಾತ್ರಿ ಎನ್ನದೇ ಇಲ್ಲಿನ ಜನ, ಚಿಕ್ಕ ಮಕ್ಕಳು, ವಯೋವೃದ್ಧರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಮೊಣಕಾಲುದ್ದ ನಿಂತಿದ್ದ ನೀರನ್ನು ಹೊರ ಹಾಕುವಲ್ಲಿ …

Read More »

ಸರ್ವರ್ ಸ್ಲೋ ಆಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆ ನೋಂದಣಿ ವಿಳಂಬ.

ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಸುರಿಯುವ ಮಳೆಯಲ್ಲೇ ಮಹಿಳೆಯರು ಗಂಟೆಗಟ್ಟಲೇ ನಿಂತಿರುವುದು ನಗರದ ರಿಸಾಲ್ದಾರ್ ಗಲ್ಲಿಯ ಬೆಳಗಾವಿ ಒನ್ ಕೇಂದ್ರದಲ್ಲಿ ಕಂಡು ಬಂತು. ಗೃಹ ಲಕ್ಷ್ಮಿ ಯೋಜನೆ ನೋಂದಣಿಗೆ ಚಾಲನೆ ಸಿಕ್ಕ ದಿನದಿಂದಲೂ ಇಲ್ಲಿನ ಬೆಳಗಾವಿ ಒನ್ ಕೇಂದ್ರದಲ್ಲಿ ಮಹಿಳೆಯರ ದಟ್ಟಣೆ ನಿತ್ಯವೂ ಇದ್ದು, ಮಂಗಳವಾರ ಸಹ ಸುರಿವ ಮಳೆ ಲೆಕ್ಕಿಸದೇ ಛತ್ರಿ ಹಿಡಿದುಕೊಂಡು ಸಾಲಿನಲ್ಲಿ ನಿಂತ ಮಹಿಳೆಯರು ತಮ್ಮ ಸರದಿ ಯಾವಾಗ ಬರುತ್ತೊ ಎಂದು ಕಾಯುತ್ತಾ ನಿಂತಿದ್ದರು. …

Read More »

ಜೈನಮುನಿ ಹತ್ಯೆ ಪ್ರಕರಣ ಸಂಬಂಧ ಸಿಐಡಿ ಉನ್ನತಾಧಿಕಾರಿಗಳ ತಂಡ ಹಿರೇಕೋಡಿ ನಂದಿ ಪರ್ವತ ಆಶ್ರಮಕ್ಕೆ ಭೇಟಿ

ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನಮುನಿ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಚಿಕ್ಕೋಡಿಯಲ್ಲಿ ತನಿಖೆಯನ್ನು ಚುರುಕು ಗೊಳಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಸಿಐಡಿ ಉನ್ನತಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಿಐಡಿ ಐಜಿ ಪ್ರವೀಣ ಮಧುಕರ್​ ಪವಾರ್ ಹಾಗೂ ಎಫ್‌ಎಸ್‌ಎಲ್ ನಿರ್ದೇಶಕ ಧರ್ಮೇಂದ್ರ ಕುಮಾರ್ ಮೀನಾ ಸೇರಿ ಇತರ ಹಿರಿಯ ಅಧಿಕಾರಿಗಳು ಜೈನಮುನಿಗಳು ಇದ್ದ ಕೊಠಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ. ಬೆಳಗಾವಿ …

Read More »

ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಜನರಿಂದ ಹಣ ಪಡೆದರೆ ಕ್ರಿಮಿನಲ್​ ಪ್ರಕರಣ:ಹೆಬ್ಬಾಳ್ಕರ್

ಬೆಳಗಾವಿ: “ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರಾದರು ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ಈಗಾಗಲೇ ಮೂವರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ. ಸರಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” …

Read More »

ಐವರು I.A.S. ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ವೆಂಕಟೇಶ್ ಎಂ.ವಿ.- ಜಿಲ್ಲಾಧಿಕಾರಿ ದಾವಣಗೆರೆ ಜಿಲ್ಲೆ. ಗಂಗೂಬಾಯಿ ರಮೇಶ್ ಮಾನಕರ- ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ. ಗಂಗಾಧರಸ್ವಾಮಿ ಜಿ.ಎಂ- ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ, ಬೆಂಗಳೂರು ಎಂದು ಪೋಸ್ಟ್ ಮಾಡಲಾಗಿದೆ. ಶ್ರೀ ನಾಗೇಂದ್ರ ಪ್ರಸಾದ್ ಕೆ.- ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ. ಅಶ್ವಿಜಾ ಬಿ. ವಿ- ಆಯುಕ್ತರು, ತುಮಕೂರು …

Read More »

ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಪತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಕಥೆ ಸೃಷ್ಟಿಸಿ ಕಣ್ಣೀರು ಹಾಕಿದ್ದ ಹಂತಕಿ ಪತ್ನಿ ಜೈಲು ಪಾಲಾಗಿರುವ ಘಟನೆ ನಡೆದಿದೆ. ಕಳೆದ ಜೂ. 15 ರಂದು ಕಾಶೆಪ್ಪ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಕೊಂಕಲ್ ಗ್ರಾಮದ ಜಮೀನಿನ ಮರವೊಂದಕ್ಕೆ ನೇಣು ಬೀಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಕಾಶೆಪ್ಪ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಹೀಗಾಗಿ, ಸಾವಿನ ಬಗ್ಗೆ …

Read More »

ಜೆಡಿಎಸ್​ – ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ H.D.D.

ಬೆಂಗಳೂರು: ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯದಲ್ಲಿ ಎದ್ದಿದ್ದ ಊಹಾಪೋಹಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​ ಡಿ ದೇವೇಗೌಡ ಅವರು ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿಂದು ಪಕ್ಷದ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಶಾಸಕ ಜಿ ಟಿ ದೇವೇಗೌಡ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 28 ಕ್ಷೇತ್ರಗಳಲ್ಲಿ ಎಲ್ಲೆಲ್ಲಿ ಗೆಲ್ಲುವ ಸಾಮರ್ಥ್ಯ ಇದೆಯೋ ಅಲ್ಲಿ ನಿಲ್ಲುತ್ತೇವೆ. ಅಧಿಕೃತ ವಿರೋಧ ಪಕ್ಷ ಬಿಜೆಪಿ, ಅನಧಿಕೃತ …

Read More »