ಚಿಕ್ಕೋಡಿ(ಬೆಳಗಾವಿ): “ಅಜ್ಜಯ್ಯನ ಮೇಲಿರುವ ಗುರು ನಿಷ್ಠೆ, ಪಕ್ಷ ನಿಷ್ಠೆ, ಹಿರಿಯರ ಮೇಲಿರುವ ಭಕ್ತಿ ಮತ್ತು ನಾಟಕವಿಲ್ಲದ ಮಾತು ನೋಡಿದಾಗ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಭಗವಂತ ಕೊಡಲಿ. ಅವರ ಗುರುಗಳ ದಯೆಯಿಂದ ಅದು ಖಂಡಿತ ಆಗುತ್ತದೆ ಎಂಬುದು ನನ್ನ ನಂಬಿಕೆ” ಎಂದು ಅವಧೂತ ವಿನಯ್ ಗುರೂಜಿ ಹೇಳಿದರು. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ” ಸಿದ್ದರಾಮಯ್ಯನವರ ನಂತರ ಸಿಎಂ ಆಗುವ ಅವಕಾಶ ಸಿಗುತ್ತದೆ …
Read More »ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ
ದರ ಏರಿಕೆ ಸಮರ್ಥಿಸಿಕೊಂಡ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಥಣಿ: ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಕೇಂದ್ರ ಟ್ಯಾಕ್ಸ್ ಕಡಿಮೆ ಮಾಡಲಿ ಎಂದು ಕೇಂದ್ರದ ಕಡೆಗೆ ಬೊಟ್ಟು ಮಾಡಿದ್ದಾರೆ. ಅಥಣಿ ಪಟ್ಟಣದ ಭೂ ಸುರಕ್ಷಾ ಯೋಜನೆ ಅಡಿಯಲ್ಲಿ ಅಭಿಲೇಖಾಲಯದ ಶಾಖೆಗಳ ಗಣಕೀಕರ ಯಂತ್ರಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಾನು ಬಿಜೆಪಿ ಸರ್ಕಾರದ …
Read More »ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ
ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಅರ್ಬನ್ ನಕ್ಸಲರ ಕುರಿತು ವಾಗ್ದಾಳಿ ನಡೆಸಿದ ಶಾಸಕ ಸಿ.ಟಿ.ರವಿ ರಾಜ್ಯದಲ್ಲಿ ನಕ್ಸಲರ್ ಶರಣಾಗತಿಗೆ ಸಂಬಂಧಿಸಿದಂತೆ ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ನಕ್ಸಲರು ಸರ್ಕಾರಕ್ಕೆ ಕಂಡಿಷನ್ ಹಾಕುತ್ತಿದ್ದಾರೆ. ಶರಣಾಗಿರುವದು ನಕ್ಸಲರೋ ಅಥವಾ ಸರ್ಕಾರವೋ ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ನವರ ಸಾಪ್ಟ್ ವೇ ಯಿಂದ ಅರ್ಬನ್ ನಕ್ಸಲರು ಡಿಪೆಂಡ್ ಮಾಡ್ತಾ ಇದ್ಸಾರೆ . …
Read More »ಪ್ರಧಾನಿ ಮೊದಿಯೊಂದಿಗೆ ನಡೆಯುವ ಸಂವಾಧದಲ್ಲಿ ಪಾಲ್ಗೊಳ್ಳಲು ತೆರಳಿದ ವಿಜಯಪುರದ ಯುವಕ, ಮನೆಯಲ್ಲಿ ಸಂಭ್ರಮಾಚರಣೆ
: ದೇಶದ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ದೆಹಲಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಈ ಕಾರ್ಯಕ್ರಮ ದಲ್ಲಿ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಈ ಸಂವಾದಕ್ಕೆ ಗುಮ್ಮಟ ನಗರಿಯ ಯುವಕ ಸೆಲೆಕ್ಟ್ ಆಗಿದ್ದು ಯುವಕನ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹಾಗಾದರೆ ಅಲ್ಲಿ ನಡೆಯುವ ಕಾರ್ಯಕ್ರಮವಾದರೂ ಏನು ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್… ದೇಶದ ಪ್ರಧಾನಿ ನರೇಂದ್ರ ಮೋದಿ ಇದೇ ಜನವರಿ …
Read More »ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್: ಗ್ರಾಮ ತೊರೆದ ನೂರಾರು ಕುಟುಂಬಗಳು
ಚಾಮರಾಜನಗರ, ಜನವರಿ 10: ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ (Microfinance) ಕಂಪನಿಗಳ ಕಿರುಕುಳ ಮಿತಿ ಮೀರಿದೆ. ಇವರ ಕಿರುಕುಳ ತಾಳಲಾರದೆ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ. ಈ ಫೈನಾನ್ಸ್ಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆ ಮೂಲಕ ಗಡಿ ನಾಡು ಚಾಮರಾಜನಗರದಲ್ಲಿ ಎಗ್ಗಿಲ್ಲದೆ ಕರಾಳ ದಂಧೆ ಸಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.ಹೌದು.. ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ. ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು …
Read More »ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ
ಬೆಂಗಳೂರು, ಜನವರಿ 10: ಅವರೆಲ್ಲ ಕೋವಿಡ್ ಸಮಯದಲ್ಲಿ ಟೊಂಕಕಟ್ಟಿ ದುಡಿದವರು. ಇಡೀ ದೇಶವೇ ಲಾಕ್ ಡೌನ್ನಲ್ಲಿ ಸ್ತಬ್ಧವಾಗಿದ್ದಾಗ ಜೀವದ ಹಂಗು ತೊರೆದು ಫೀಲ್ಡ್ಗಿಳಿದು ದುಡಿದವರು. ಆದರೆ ಇದೀಗ ಸರ್ಕಾರದ ಭರವಸೆಗಳು ಬರೀ ಮಾತಾಗಿ ಉಳಿದಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ಹಾದಿ ಹಿಡಿದಿದ್ದರು. ಇತ್ತ ಆಶಾ ಕಾರ್ಯಕರ್ತೆಯರ (ASHA workers) ಪ್ರತಿಭಟನೆ ಬಗ್ಗೆ ಹಲವು ಭಾರೀ ಸಂಧಾನ ನಡೆಸಿ ಸುಸ್ತಾಗಿದ್ದ ಸರ್ಕಾರ, ಇದೀಗ ಆಶಾಕಾರ್ಯಕರ್ತೆಯರ ಮನವೊಲಿಸುವುದರಲ್ಲಿ ಕೊನೆಗೂ ಸಕ್ಸಸ್ ಆಗಿದೆ. ಇತ್ತ ಮೈಕೊರೆವ ಚಳಿ …
Read More »ಕಾರಾಗೃಹದಲ್ಲಿ ಎಸೆನ್ಸ್ ಸೇವಿಸಿ ಮೂವರು ಕೈದಿಗಳು ಸಾವು ಪ್ರಕರಣದ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಖಡಕ್ ಸೂಚನೆ
ಬೆಂಗಳೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೇಕ್ ತಯಾರಿಕೆಗೆ ಬಳಸಲಾಗುವ ಸುಗಂಧದ್ರವ್ಯ (ಎಸೆನ್ಸ್) ಸೇವಿಸಿ ಮೂವರು ಸಜಾ ಕೈದಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಿರಲು ರಾಜ್ಯದ ಎಲ್ಲಾ ಜೈಲುಗಳಿಗೆ ನಿರ್ದೇಶನ ನೀಡಿದೆ. ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಸೇರಿದಂತೆ ಇತರ ರಾಜ್ಯ ಹಾಗೂ ಜಿಲ್ಲಾ ಕಾರಾಗೃಹಗಳ ಅಧೀಕ್ಷಕರಿಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ನಿರ್ದೇಶನ …
Read More »ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಭಿನ್ನರ ಮಾತಿನ ಕುರಿತು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.
ಬೆಂಗಳೂರು : ಯಾರೋ ಒಂದಿಬ್ಬರು ಹಗುರವಾಗಿ ಮಾತನಾಡುತ್ತಿರಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಹೈಕಮಾಂಡ್ ನಾಯಕರು ಕೈಕಟ್ಟಿ ಕೂತಿದ್ದಾರೆ ಎಂದು ಯಾರೂ ಭಾವಿಸಬೇಡಿ ಎಂದು ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪರೋಕ್ಷವಾಗಿ ಭಿನ್ನರ ಬಗ್ಗೆ ಮಾತನಾಡಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಮಾಜಿ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸುಮ್ಮನೆ ಕುಳಿತಿಲ್ಲ. ಆ ರೀತಿ ನೀವು ಭಾವಿಸಿದರೆ ಅದು ತಪ್ಪು. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದನ್ನು …
Read More »ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ …
Read More »ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,
ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. …
Read More »
Laxmi News 24×7