Home / ರಾಜ್ಯ (page 479)

ರಾಜ್ಯ

‘ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ”: ಶುಭಕೋರಿದ ಸಿಎಂ

ಬೆಂಗಳೂರು: ”ಚಂದ್ರಯಾನ-3ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲಿಗಲ್ಲನ್ನು ಇಸ್ರೋ ಸಾಧಿಸಿದೆ” ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಹರ್ಷ ವ್ಯಕ್ತಪಡಿಸಿದರು.   ಚಂದ್ರಯಾನ-3ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ”ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೇ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ …

Read More »

ಭೀಮಾತೀರದಲ್ಲಿ ರೌಡಿಶೀಟರ್ ಬರ್ಬರ​ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ರೌಡಿಶೀಟರ್​ವೋರ್ವನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಹಾಡಹಗಲೇ ನಡುರಸ್ತೆಯಲ್ಲಿ ಈ ಘಟನೆ‌ ನಡೆದಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಜಿಲ್ಲೆಯ ಆಲಮೇಲ ಸಮೀಪದ ದೇವರನಾವದಗಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೊಲೆಯಾದ ರೌಡಿಶೀಟರ್​ನನ್ನು ಮಾಳಪ್ಪ ಯಮನಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಈತನನ್ನು ದುರ್ಷ್ಕಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಯಾದ ಮಾಳಪ್ಪ ಮೇತ್ರಿ ಮೇಲೆ ಶಸ್ತ್ರಾಸ್ತ್ರ ಕಾಯ್ದೆ, ಕಂಟ್ರಿ …

Read More »

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ

ವಿಜಯಪುರ: ಖಾಲಿ ಖಾಲಿಯಾಗಿ ಕಾಣುತ್ತಿದ್ದ ಜಿಲ್ಲೆಯ ಜೀವಜಲ ಆಲಮಟ್ಟಿ‌ ಜಲಾಶಯಕ್ಕೆ ಕೊನೆಗೂ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಡ್ಯಾಂನಲ್ಲಿ ನೀರಿಲ್ಲದಿರುವುದಕ್ಕೆ ಜನರು ಆತಂಕಗೊಂಡಿದ್ದರು. ಅದರಲ್ಲೂ ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ಮಳೆಯಾಗದ ಹಿನ್ನೆಲೆಯಲ್ಲಿ ನದಿತೀರದ ಜನರು ಬರದ ಭೀತಿಯಲ್ಲಿದ್ದರು. ಆದ್ರೆ ಇದೀಗ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾದ್ದರಿಂದ ಕೃಷ್ಣಾ ನದಿಗೆ ನೀರು ಹರಿದುಬರುತ್ತಿದೆ. ನದಿತೀರದ ಜನರ ಮುಖದಲ್ಲಿಯೂ ಮಂದಹಾಸ …

Read More »

ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ  ಸ್ವಾಗತಿಸಿದರು

Read More »

ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ: ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ 6 ತಿಂಗಳಿಂದ 6 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 300 ದಿನಗಳ ಕಾಲ ಪೂರಕ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಪರಿಷತ್ ಕಲಾಪದಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪ್ರತಿದಿನ 8 ರೂಪಾಯಿ ಮೌಲ್ಯದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ ಎಂದರು. ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ …

Read More »

ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ

ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ ನಡೆಯಿತು. ಈ ವಾಹನಗಳನ್ನು ಮಚ್ಚೆ ನಗರ ಪಂಚಾಯಿತಿಗೆ ನೀಡಲಾಯಿತು  15ನೇ ಹಣಕಾಸು ಆಯೋಗ, ಸ್ವಚ್ಛ ಭಾರತ್ ಮಿಷನ್ ಮತ್ತು ರಾಜ್ಯ ಹಣಕಾಸು ಆಯೋಗದ ನಿಧಿಯಲ್ಲಿ ಶಾಸಕ ಅಭಯ ಪಾಟೀಲ ಅವರ ವಿಶೇಷ ಪ್ರಯತ್ನದಿಂದ ಮಚ್ಚೆ ನಗರ ಪಂಚಾಯಿತಿಗೆ ವಿವಿಧ ವಾಹನಗಳನ್ನು ಖರೀದಿಸಲಾಗಿದೆ. ಈ …

Read More »

ಜಿ-20 ಪ್ರತಿನಿಧಿಗಳಿಂದ ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆ

ವಿಜಯನಗರ : ಶೆರ್ಪಾ ಸಭೆಯ ನಂತರ ಶುಕ್ರವಾರ ಸಂಜೆ ಜಿ-20 ಪ್ರತಿನಿಧಿಗಳು ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಪ್ರವಾಸೋದ್ಯಮ ಇಲಾಖೆ, ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಯಿಂದ ಸ್ಮಾರಕ ವೀಕ್ಷಣೆ ವ್ಯವಸ್ಥೆಯನ್ನು ಕಲ್ಪಿಸಲಾಯಿತು. ಹಂಪಿಯ ಮಹಾನವಮಿ ದಿಬ್ಬ, ಹಜಾರರಾಮ, ಕಮಲ ಮಹಲ್ ಹಾಗೂ ಗಜಶಾಲೆ, ರಾಣಿ ಅರಮನೆ ಅಧಿಷ್ಠಾನ ಹಾಗೂ ವಿವಿಧ ಸ್ಮಾರಕಗಳ ಕುರಿತು ಪ್ರವಾಸಿ ಮಾರ್ಗದರ್ಶಿಗಳು ಗೌರವಪೂರಕವಾಗಿ ಸ್ವಾಗತಿಸುತ್ತಾ ಮಾಹಿತಿ ನೀಡಿದರು. ಮಹಾನವಮಿ ದಿಬ್ಬದ ಮೇಲೆ ಹತ್ತಿ ಸುತ್ತಲಿನ …

Read More »

ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್​ಪ್ರೆಸ್​​ ರೈಲಿನ ಮೇಲೆ ಕಲ್ಲು ಎಸೆತ..

ಚೆನ್ನೈ: ಮೈಸೂರು- ಚೆನ್ನೈ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ 4.30ಕ್ಕೆ ಮೈಸೂರಿನಿಂದ ಚೆನ್ನೈಗೆ ಆಗಮಿಸಿದ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಪುರಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ತಲುಪಿದೆ. ಬೇಸಿನ್ ಬ್ರಿಡ್ಜ್ ರೈಲ್ವೇ ಯಾರ್ಡ್ ಅನ್ನು ದಾಟಿ ಸೆಂಟ್ರಲ್ ರೈಲು ನಿಲ್ದಾಣ ತಲುಪುವ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು …

Read More »

ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮ ತಡೆಗೆ ಶಾಸಕರ ಒತ್ತಾಯ

ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡೇರಿ ಸಮೀಪ ಇರುವ ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮಗಳು ನಡೆಯುತ್ತಿದ್ದು, ಅದನ್ನು ತಡೆಗಟ್ಟಬೇಕು ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಆಡಳಿತ ಪಕ್ಷದ ಶಾಸಕ ಶ್ರೀನಿವಾಸಯ್ಯ ಅವರು ಗಣಿ ಮಾಲೀಕರು ತಮಗೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ಆರೋಪಿಸಿದರು. ಇಂದು ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾಪಿಸಿದ ಎಸ್.ಟಿ. ಸೋಮಶೇಖರ್, ಕಲ್ಲು ಗಣಿಗಾರಿಕೆಗಾಗಿ ಪರವಾನಗಿ ಪಡೆದ ಗುತ್ತಿಗೆದಾರರು ಸಂಜೆ 6 ಗಂಟೆ ಮೇಲೆ …

Read More »

ನಟ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಮೋಸದ ಆರೋಪ

ಬೆಂಗಳೂರು : ನಟ ಹಾಗೂ ನಿರೂಪಕ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಹಣ ವಂಚನೆ ಎಸಗಿದ ಆರೋಪದಡಿ ನಿಶಾ ನರಸಿಂಹಪ್ಪ ಎಂಬುವರನ್ನ ಸದಾಶಿವನಗರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿದ್ಯಾರಣ್ಯಪುರ ನಿವಾಸಿಯಾಗಿರುವ ನಿಶಾ ವಿರುದ್ಧ ನಟ ಆನಂದ್ ಪತ್ನಿ ಯಶಸ್ವಿನಿ ದೂರು ನೀಡಿದ ಮೇರೆಗೆ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು‌. ವಿಚಾರಣೆ ವೇಳೆ ವಂಚನೆ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಯನ್ನ …

Read More »