Breaking News
Home / ರಾಜ್ಯ (page 492)

ರಾಜ್ಯ

ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ವ್ಯವಸ್ಥೆ ಇಲ್ಲದೇ ವನ್ಯಮೃಗಗಳ ಭೀತಿಯಲ್ಲಿ ಓಡಾಡಬೇಕಾದ ದುಸ್ಥಿತಿ

ಬೆಳಗಾವಿ : ಒಂದೆಡೆ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ರಾಜ್ಯ ಸರ್ಕಾರ ಚಾಲನೆ ಕೊಟ್ಟಿದೆ. ಆದರೆ ಇಲ್ಲಿನ ಕಾಡಂಚಿನ ಗ್ರಾಮಗಳಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ವ್ಯವಸ್ಥೆ ಇಲ್ಲದೇ ವನ್ಯಮೃಗಗಳ ಭೀತಿಯಲ್ಲಿ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾದ ದುಸ್ಥಿತಿ ಎದುರಿಸುತ್ತಿದ್ದಾರೆ. ಜಿಲ್ಲೆಯ ಖಾನಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿನ ಜನರು ಸರಿಯಾದ ಬಸ್​ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಇಲ್ಲಿನ ಬಾಲಕೆ ಕೆಎಚ್, ಶಿಂಧೊಳ್ಳಿ, ಹೊನಕಲ್, ಗವ್ವಾಳಿ, ಪಾಸ್ತೊಳಿ, ಅಮಗಾಂವ, ತಳೇವಾಡಿ, …

Read More »

ಮಧ್ಯಪ್ರದೇಶದಲ್ಲೂ ಪೇಸಿಎಂ ಪೋಸ್ಟರ್ ವಾರ್

ಭೋಪಾಲ್ (ಮಧ್ಯ ಪ್ರದೇಶ) : ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದ್ದು, ಇದೀಗ ಪೋಸ್ಟರ್ ವಾರ್​ನಿಂದಾಗಿ ರಾಜ್ಯದ ರಾಜಕೀಯ ಮತ್ತಷ್ಟು ರಂಗೇರುತ್ತಿದೆ. ಮಾಜಿ ಸಿಎಂ ಕಮಲ್ ನಾಥ್ ಮತ್ತು ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಆಕ್ಷೇಪಾರ್ಹ ಪೋಸ್ಟರ್‌ಗಳು ಅಲ್ಲಲ್ಲಿ ಕಾಣಿಸಿಕೊಂಡ ಮೂರು ದಿನಗಳ ನಂತರ, ಈಗ ಮತ್ತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ …

Read More »

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು.   ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.

Read More »

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಬಕಾರಿ ಅಧಿಕಾರಿಗೆ ಖಡಕ್ ಎಚ್ಚರಿಕೆ

ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.   ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ …

Read More »

ಗ್ರಾಮೀಣ ಶಾಲೆಗಳ ಮಕ್ಕಳ ಕೈ, ಪಾದಗಳಲ್ಲಿ ಕಪ್ಪು ಚುಕ್ಕೆಗಳು, ಪೋಷಕರಲ್ಲಿ ಆತಂಕ

ತುಮಕೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಶಾಲಾ ಮಕ್ಕಳ ಕೈ ಹಾಗೂ ಪಾದಗಳಲ್ಲಿ ಇದ್ದಕ್ಕಿದ್ದಂತೆ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿವೆ. ಮಕ್ಕಳಿಗೆ ಅನಾರೋಗ್ಯ ಕಾಡುತ್ತಿದ್ದು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ತುರುವೇಕೆರೆ ಹಾಗೂ ಕೊರಟಗೆರೆ ತಾಲೂಕುಗಳ ಗ್ರಾಮಗಳ ಶಾಲಾ ಮಕ್ಕಳ ಕೈ ಮತ್ತು ಪಾದಗಳಲ್ಲಿ ಚರ್ಮದ ಸೋಂಕು ಕಂಡುಬಂದಿದೆ. ತುರುವೇಕೆರೆ ತಾಲ್ಲೂಕಿನ ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳ ಪಾದಗಳಲ್ಲಿ ಕಪ್ಪು ಚುಕ್ಕೆಗಳು ಕಂಡುಬಂದಿವೆ. ಕೊರಟಗೆರೆ ತಾಲ್ಲೂಕಿನ ಯಲಚೇನಹಳ್ಳಿ ಗ್ರಾಮದ 5 ಮಕ್ಕಳ ಕೈ ಹಾಗೂ ಪಾದಗಳಲ್ಲಿ …

Read More »

ಮಾಜಿ ಸಿಎಂ ಯಡಿಯೂರಪ್ಪ ಪ್ರತಿಭಟನೆ ಹೇಳಿಕೆ ಒಂದು ರಾಜಕೀಯ ಗಿಮಿಕ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಧರಣಿ ಸತ್ಯಾಗ್ರಹ ಒಂದು ರಾಜಕೀಯ ಗಿಮಿಕ್ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್​ವೈ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಯಡಿಯೂರಪ್ಪರಿಗೆ ಪ್ರತಿಭಟನೆ ಮಾಡುವ ಯಾವುದೇ ನೈತಿಕ ಹಕ್ಕು ಇಲ್ಲ. ಯಡಿಯೂರಪ್ಪ ಸರ್ಕಾರದಲ್ಲಿದ್ದಾಗ ಅವರು ತಮ್ಮ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿದ್ದರಾ? ಎಂದು ಪ್ರಶ್ನಿಸಿದರು.   ನಾವು ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು …

Read More »

ಒಂದು ವರ್ಷದಲ್ಲಿ ಬೆಂಗಳೂರು ಪೊಲೀಸರು ವಶಪಡಿಸಿಕೊಂಡ ಮಾದಕ ವಸ್ತುಗಳ ವಿವರ

ಬೆಂಗಳೂರುಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸರು ಮಾದಕ ಸರಬರಾಜುಗಾರರು ಮತ್ತು ಮಾದಕ ವ್ಯಸನಿಗಳ ವಿರುದ್ಧ ಕೈಗೊಳ್ಳಲಾಗಿದ್ದ ವಿಶೇಷ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ಮತ್ತು ನಾಶಪಡಿಸಲಿರುವ ಮಾದಕ ವಸ್ತುಗಳ ವಿವರ ಇಂತಿದೆ..   2022-23ನೇ ಸಾಲಿನಲ್ಲಿ ದಾಖಲಾದ ಪ್ರಕರಣಗಳು: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 2022 ಮತ್ತು 2023ನೇ ಸಾಲಿನಲ್ಲಿ (ಜೂನ್ 22ರವರೆಗೆ) ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಒಟ್ಟು 6,191 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಒಟ್ಟು 7,723 ಭಾರತೀಯರು ಹಾಗೂ 159 …

Read More »

ಚಿಕ್ಕೋಡಿ: ಮದ್ಯ ಅಂಗಡಿ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ): ಗ್ರಾಮದ ಪಕ್ಕದಲ್ಲಿ ಮದ್ಯದ ಅಂಗಡಿ ಇರುವುದರಿಂದ ಗ್ರಾಮದ ಮಹಿಳೆಯರಿಗೆ ಮತ್ತು ಶಾಲಾ ಹೆಣ್ಣು ಮಕ್ಕಳಿಗೆ ಮದ್ಯ ಪ್ರಿಯರು ತೊಂದರೆ ಕೊಡುತ್ತಿದ್ದಾರೆ ಇಲ್ಲಿಂದ ಅಂಗಡಿಯನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಬೀಗ ಜಡಿದು ಪ್ರತಿಭಟನೆ ನಡೆಸಿದರು.   ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೈನ್ಸ್‌ ಸ್ಥಳಾಂತರ ಮಾಡುವಂತೆ ಗ್ರಾಮದ ಮಹಿಳೆಯರು ಪಟ್ಟು ಹಿಡಿದು ಮದ್ಯ ಮಾರಾಟ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

Read More »

ಜುಲೈ 7ಕ್ಕೆ 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ.. ಪಂಚ ಗ್ಯಾರಂಟಿಗಾಗಿ ರಾಜಸ್ವ ಸಂಗ್ರಹದ ಟಾರ್ಗೆಟ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್​ ಅನ್ನು ಅಲ್ಪ ಪರಿಷ್ಕೃರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅಂದಾಜು 3.25 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 7ಕ್ಕೆ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈಗಾಗಾಲೇ ನಿರ್ಗಮಿತ ಬಿಜೆಪಿ ಸರ್ಕಾರ …

Read More »

ಊರಿಗೆ ತೆರಳಲು ನಿಲ್ಲಿಸದ ಬಸ್​ಗೆ ಕಲ್ಲೆಸೆದ ಮಹಿಳೆ.. 5000 ದಂಡ,

ಕೊಪ್ಪಳ: ತನ್ನ ಊರಿಗೆ ತೆರಳಲು ಯಾವುದೊಂದು ಬಸ್​ ನಿಲ್ಲಿಸದ ಕಾರಣ, ಕೊಪ್ಪಳದಿಂದ – ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್​ಗೆ ಮಹಿಳೆಯೊಬ್ಬರು ಕಲ್ಲೆಸೆದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳದ ಹೊಸಲಿಂಗಾಪುರ ಬಳಿ ಈ ಘಟನೆ ನಡೆದಿದೆ. ಇಲಕಲ್ಲ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬಾಕೆ ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಹುಲಿಗೆಮ್ಮನ ದರ್ಶನ ಪಡೆದು ಲಿಂಗಾಪುರ ಬಳಿ ಬಸ್​ಗಾಗಿ ಮಳೆಯಲ್ಲಿ ಕಾದು ಕುಳಿತಿದ್ದ ಲಕ್ಷ್ಮಿಗೆ ತನ್ನ ಊರಿಗೆ ತೆರಳಲು …

Read More »