ದಾವಣಗೆರೆ: ಬಾಂಗ್ಲಾದಲ್ಲಿ ಅಷ್ಟೇ ಅಲ್ಲ ನಮ್ಮ ದೇಶದಲ್ಲೂ ಕೂಡ ಹಿಂದೂಗಳ ಪರಿಸ್ಥಿತಿ ಹೀನಾಯವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನಾ ತೀರ್ಥ ಶ್ರೀಗಳು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದುಗಳ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದರು. ಇದರ ಬಗ್ಗೆ ಕೇಂದ್ರ ಸರ್ಕಾರ ಕ್ರಮವನ್ನು ಕೈಗೊಳ್ಳಬೇಕು. ಹಿಂದೂಗಳ ಹೀನಾಯ ಸ್ಥಿತಿಯಲ್ಲಿ ಇರೋದು ಕೇವಲ ಬಾಂಗ್ಲಾದಲ್ಲಿ ಅಷ್ಟೇ ಅಲ್ಲ. ನಮ್ಮ ಭಾರತದಲ್ಲಿ ಕೂಡ ಹೀನಾಯ ಸ್ಥಿತಿಯಲ್ಲಿದ್ದಾರೆ ಎಂದು …
Read More »ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಭಗವಂತ ಖೂಬಾಗೆ ನೋಟಿಸ್
ಬೀದರ್: ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಕೇಂದ್ರ ಸಚಿವ ಭಗವಂತ ಖೂಬಾಗೆ ಎರಡು ನೋಟಿಸ್ ನೀಡಲಾಗಿದೆ. ಭಾಲ್ಕಿ ಠಾಣಾ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದೇ ಫೆ.25ಕ್ಕೆ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಕಾರ್ಯಾಲಯಕ್ಕೆ ನೋಟಿಸ್ ಅಂಟಿಸಿದ್ದರು. ಇದೀಗ ಮತ್ತೆ ಹೊಸ ನೋಟಿಸ್ ಅಂಟಿಸಿದ್ದು, ಫೆ.21ಕ್ಕೆ ಠಾಣೆಗೆ ಹಾಜರಾಗಿ ಹೇಳಿಕೆ ನೀಡಬೇಕು ಎಂದು ನೋಟಿಸ್ ನೀಡಿದ್ದಾರೆ. ಒಂದು ವೇಳೆ ವಿಚಾರಣೆ ಹಾಜರಾಗದಿದ್ದರೆ ಬಂಧನ ಮಾಡುತ್ತೇವೆ ಎಂದು …
Read More »ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ
ಬೆಂಗಳೂರು: ಬಾಗಲಕೋಟೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಗಳ ಬಳಿ ಚರ್ಚಿಸಿದ್ದು, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ …
Read More »ಕೃಷ್ಣಾ ತೀರದ ಭಾಗದ ಗ್ರಾಮಗಳಲ್ಲಿ ಶುದ್ದ ಕುಡಿಯೋ ನೀರು ಮರೀಚಿಕೆ
• ವಿಜಯಪುರ: ಹರಿಯುವ ನದಿಗಳ ನಡುವೆ ನೀರಿಗಾಗಿ ಹಾಹಾಕಾರ • ಕೃಷ್ಣಾ ತೀರದ ಗ್ರಾಮಗಳಲ್ಲಿ ಮರೀಚಿಕೆಯಾದ ಶುದ್ಧ ನೀರು • ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ನೀರಿನ ಘಟಕಗಳು ಬಂದ್ • ಅನುದಾನಕ್ಕಾಗಿ ಕಾಯುತ್ತಿದೆ ಕುಡಿಯುವ ನೀರು ಇಲಾಖೆ ಆ ಜಿಲ್ಲೆಯಲ್ಲಿ ಮೂರು ನದಿಗಳು ಹರಿಯುತ್ತವೆ. ಆದ್ರೆ ಗ್ರಾಮೀಣ ಭಾಗದ ಜನರಿಗೆ ಶುದ್ದ ಕುಡಿಯೋ ನೀರು ಸಿಗುತ್ತಿಲ್ಲಾ ಅನ್ನೊದು ದುರಂತ. ಸರ್ಕಾರ ಸಾವಿರಾರು ಕೋಟಿ ಯಾವುದ್ಯಾವುದೋ ಯೋಜನೆಗೆ ಖರ್ಚು ಮಾಡುತ್ತೆ. …
Read More »ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಸಕ್ಕರೆ ಕಾರ್ಖಾನೆಯಿಂದ ತಮಿಳುನಾಡಿಗೆ ಎಥಿನಾಲ್ ಸಾಗಿಸುತ್ತಿದ್ದ ಬೃಹತ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರ ಕ್ರಾಸ್ ಬಳಿ ಇಂದು ಮುಂಜಾನೆ 16 ಚಕ್ರದ ಬೃಹತ್ ಎಥಿನಾಲ್ ಲಾರಿ …
Read More »ಪುದುಚೇರಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಭ್ರಷ್ಟಾಚಾರದ ವಿರುದ್ಧ ಅಂಜಲಿ ನಿಂಬಾಳ್ಕರ್ ಗುಡುಗು; ಚುನಾವಣಾ ಸಿದ್ಧತಾ ಸಭೆಯಲ್ಲಿ ಭಾಗಿ!
ಪುದುಚೇರಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಭ್ರಷ್ಟಾಚಾರದ ವಿರುದ್ಧ ಅಂಜಲಿ ನಿಂಬಾಳ್ಕರ್ ಗುಡುಗು; ಚುನಾವಣಾ ಸಿದ್ಧತಾ ಸಭೆಯಲ್ಲಿ ಭಾಗಿ! ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಭ್ರಷ್ಟಾಚಾರ ಮುಕ್ತ ಪುದುಚೇರಿಗಾಗಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಮುಂಬರುವ ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಮಹತ್ವದ ಸಿದ್ಧತಾ ಸಭೆಯಲ್ಲೂ ಅವರು ಭಾಗವಹಿಸಿ ಸಂಘಟನಾತ್ಮಕ ಸಲಹೆಗಳನ್ನು ನೀಡಿದ್ದಾರೆ. ಪುದುಚೇರಿಯನ್ನು …
Read More »ವಡಗಾಂವನ ಶ್ರೀ ಮಲ್ಲಿಕಾರ್ಜುನ ಮಂದಿರದಲ್ಲಿ ಶಿವರಾತ್ರಿ ಸಂಭ್ರಮ: 20 ಸಾವಿರ ಭಕ್ತರಿಂದ ಮಹಾಪ್ರಸಾದ ಸ್ವೀಕಾರ
ವಡಗಾಂವನ ಶ್ರೀ ಮಲ್ಲಿಕಾರ್ಜುನನಿಗೆ ಶಿವರಾತ್ರಿಯ ಅದ್ಧೂರಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಮೆರವಣಿಗೆ 20 ಸಾವಿರ ಭಕ್ತರಿಂದ ಮಹಾಪ್ರಸಾದ ಸ್ವೀಕಾರ ಪೂಜೆ ಮತ್ತು ಪ್ರವಚನಗಳಿಂದ ಧಾರ್ಮಿಕ ಸಂಭ್ರಮ ಬೆಳಗಾವಿಯ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ಕಪಿಲೇಶ್ವರನಷ್ಟೇ ಜಾಗೃತವಾಗಿರುವ ವಡಗಾಂವನ ಶ್ರೀ ಮಲ್ಲಿಕಾರ್ಜುನ ಮಂದಿರದಲ್ಲಿ ಮಹಾಶಿವರಾತ್ರಿ ಉತ್ಸವವು ಅತ್ಯಂತ ವೈಭವದಿಂದ ಜರುಗಿತು. ಸತತ ಎಂಟು ದಿನಗಳ ಕಾಲ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಂಗಳವಾರ ಬೃಹತ್ ಮಹಾಪ್ರಸಾದದೊಂದಿಗೆ ತೆರೆಕಂಡವು. ಬೆಳಗಾವಿ …
Read More »ಭಾರತದಲ್ಲಿ ಬೆಳ್ಳಿ ದರ ಭರ್ಜರಿ ಕುಸಿತ! ಒಂದೇ ದಿನ 5000 ರೂ. ಇಳಿಕೆ
ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಭರ್ಜರಿ ಕುಸಿತ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹255 ರೂ. ಆಗಿದ್ದು, ನಿನ್ನೆ ₹260 ರೂ. ಇತ್ತು. ನಿನ್ನೆಗಿಂತ ಇಂದು ಪ್ರತೀ ಗ್ರಾಂನಲ್ಲಿ ₹5 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,040 ರೂ. ಆಗಿದ್ದು, ನಿನ್ನೆ ₹2,080 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹40 ರೂ. ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,550 ರೂ. …
Read More »ಆಡಳಿತದ ಪಕ್ಷಕ್ಕೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ: ಸಿ.ಟಿ.ರವಿ
ಬೆಂಗಳೂರು: ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ. ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಾ ಇದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ಶಾಸಕರ ಫಾರಿನ್ ಟ್ರಿಪ್‌ಗೆ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಲ್ಲಿರೋ ರಾಜಕೀಯ ನೇತೃತ್ವ, ಇಲ್ಲಿನ ವ್ಯವಸ್ಥೆ ನ್ಯಾಯ ಕೊಡೋಕೆ ಸಾಧ್ಯವಿಲ್ಲ ಅಂತ ಆಡಳಿತ ಪಕ್ಷದ ಶಾಸಕರಿಗೆ ಅನ್ನಿಸಿದೆ. ಇದಕ್ಕೆ ವಿದೇಶದಲ್ಲಿ ಪರಿಹಾರ ಸಿಗಬಹುದು ಎಂಬ ಆಶಾ ಭಾವನೆಯಲ್ಲಿ ಹೋಗ್ತಾ ಇದ್ದಾರೆ. …
Read More »ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ
ಕೊಪ್ಪಳ: ಹಂಪಿ ಬಳಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ನ್ಯಾಯಾಲಯವು, ಇದೇ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಫೆಬ್ರವರಿ 16)ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ …
Read More »
Laxmi News 24×7