Breaking News
Home / ರಾಜ್ಯ (page 5)

ರಾಜ್ಯ

ಪ್ರಥಮ ಬಾರಿಗೆ 16 ಕೋಟಿ ನಿವ್ವಳ ಲಾಭ ಗಳಿಸಿದ ಓಯೋ

ನವದೆಹಲಿ: ಜಾಗತಿಕ ಟ್ರಾವೆಲ್ ಟೆಕ್ ಬ್ರಾಂಡ್ ಓಯೋ ಇದೇ ಮೊದಲ ಬಾರಿಗೆ ಲಾಭ ಗಳಿಸಿರುವುದಾಗಿ ವರದಿ ಮಾಡಿದೆ. 2024ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಮೊದಲ ಬಾರಿಗೆ ತೆರಿಗೆ ನಂತರ 16 ಕೋಟಿ ರೂ. ಲಾಭ ಮಾಡಿರುವುದಾಗಿ ಓಯೋ ಹೇಳಿದೆ. ಕಂಪನಿಯ ಉನ್ನತ ಆಡಳಿತ ಮಂಡಳಿಗೆ ಬರೆದ ಪತ್ರದಲ್ಲಿ, ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರು 2024 ರ ಎರಡನೇ ತ್ರೈಮಾಸಿಕವು ಕಂಪನಿಯ ಮೊದಲ ಲಾಭದಾಯಕ ತ್ರೈಮಾಸಿಕವಾಗಿದ್ದು, ತೆರಿಗೆ ನಂತರದ ಲಾಭವು …

Read More »

ಗೃಹಲಕ್ಷ್ಮೀ, ಗೃಹಜ್ಯೋತಿ ಜಾಹೀರಾತುಗಳಲ್ಲಿ ಸಿಎಂ, ಡಿಸಿಎಂ ಫೋಟೋ ಬಳಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜೋತಿ ಯೋಜನೆಗಳ ಜಾಹೀರಾತು ಮತ್ತು ಒಪ್ಪಿಗೆ ಆದೇಶಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮಂತ್ರಿಗಳ ಭಾವಚಿತ್ರ, ಹೆಸರು ಬಳಕೆಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.   ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ …

Read More »

ಕಾವೇರಿ ವಿಚಾರ ಬಂದ್ರೆ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿಲ್ಲ – ಹೆಚ್ ಡಿ ದೇವೇಗೌಡ ಬೇಸರ

ಹಾಸನ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ರಾಜ್ಯದಲ್ಲಿ ಇಂದು ಬಂದ್​​ಗೆ ಕರೆ ನೀಡಿದ್ದರೂ, ನಮ್ಮಲ್ಲಿ ಒಗ್ಗಟ್ಟಿಲ್ಲ. ಇದು ನಮ್ಮ ರಾಜ್ಯದಲ್ಲಿರುವ ಸ್ಥಿತಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದರು. ಕಾವೇರಿ ನೀರು ಬಿಡದಂತೆ ಬೆಂಗಳೂರು ಬಂದ್​ಗೆ ಸಂಬಂಧಿಸಿದಂತೆ ನಗರದ ಸಂಸದರ ನಿವಾಸದಲ್ಲಿ ಕರ್ನಾಟಕ ಬಂದ್ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಮಾತನಾಡಿದ ಅವರು, ಕೆಲವರು ಇಂದು ಬಂದ್ ಮಾಡಿದ್ದಾರೆ. ಇನ್ನೂ ಕೆಲವರು ಶುಕ್ರವಾರ ಮಾಡ್ತಾರಂತೆ ಮತ್ತೆ ಕೆಲವರು …

Read More »

ಬೆಂಗಳೂರು ಬಂದ್ : ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ಕೋಟಿ ನಷ್ಟ: ಎಫ್‌ಕೆಸಿಸಿಐ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್​ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್​​ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು, ಹೋಟೆಲ್​ಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು. ಬಂದ್ ಹಿನ್ನೆಲೆ ನಗರದಲ್ಲಿ …

Read More »

ಜನತಾ ದರ್ಶನಕ್ಕೆ ಜನಸಾಗರ: ಸಮಸ್ಯೆ ಆಲಿಸಿದ ಅಧಿಕಾರಿಗಳು, ಶಾಸಕರು

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು, ವೃದ್ಧರು, ಅಂಗವಿಕಲರು ಸೇರಿ ನೂರಾರು ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತೋಡಿಕೊಂಡರು. ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಆಲಿಸಿದರು. ವಿಠಲ ದೇಸಾಯಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಜಿಲ್ಲಾಡಳಿತದಿಂದ 8 ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಬಳಿಕ ವೇದಿಕೆಗೆ ಆಗಮಿಸಿದ ಜನರು, …

Read More »

ಬೆಳಗಾವಿ: ಲಾರಿ-ಕ್ರೂಸರ್ ನಡುವೆ ಡಿಕ್ಕಿ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಬೆಳಗಾವಿ : ಸೆಪ್ಟೆಂಬರ್ 15ರಂದು ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದವರಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು. ಇವತ್ತು ಮತ್ತೆ ಬಸವರಾಜ್ ಗಿರಿಮಲ್ಲ ಆಜೂರ (32) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಆಜೂರ್ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಸ್ವ ಗ್ರಾಮಕ್ಕೆ ಆಗಮಿಸುವ ವೇಳೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿಯ ಕಡಪ-ಚಿತ್ತೂರು …

Read More »

ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್

ಗೋಕಾಕ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂದು ಸಂಜೆ ಇಬ್ಬರು ಯೋಧರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿತ್ತು ಎನ್ನಲಾಗಿದೆ. ಅವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಯೋಧರೊಬ್ಬರು ಮತ್ತೊಬ್ಬ ಯೋಧನ ಮೇಲೆ ಡಬಲ್ ರಿವಾಲ್ವಾರ ಗನ್ ನಿಂದ ಪೈರ್ ಮಾಡಿದ್ದಾರೆ. ಪೈರಿಂಗ್ ಮಾಡಿದ …

Read More »

ಹಿರಿಯ ನಟಿ ವಹೀದಾ ರೆಹಮಾನ್​ಗೆ ‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಘೋಷಣೆ

ಭಾರತೀಯ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್​ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದೆ. ಭಾರತೀಯ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್​ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಜೀವಮಾನ ಶ್ರೇಷ್ಠ ಸಾಧನೆಗೆ ಈ ಗೌರವ ನೀಡಲಾಗುತ್ತದೆ. ಅನುರಾಗ್ ಸಿಂಗ್ ಠಾಕೂರ್ ಟ್ವೀಟ್​: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ …

Read More »

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಅಭೂತ ಪೂರ್ವ ಸ್ಪಂದನೆ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಾಶ್ ಹುಕ್ಕೇರಿ ಹೇಳಿದರು. ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ನಡೆದ ಜನತಾ ದರ್ಶನಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ವೇದಿಕೆಗೆ ಆಗಮಿಸಿ ಅಹವಾಲುಗಳನ್ನು ಸಲ್ಲಿಸಿದರು. ಇದಲ್ಲದೇ ಸಭಾಭವನದಲ್ಲಿ ಸ್ಥಾಪಿಸಲಾಗಿದ್ದು ಎಂಟು ಕೌಂಟರ್ ಗಳಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು …

Read More »

ಬರ ಪರಿಹಾರಕ್ಕೆ ಸರ್ಕಾರಕ್ಕೆ ಬೆಳಗಾವಿಯ ಕಡೋಲಿ ರೈತರ ಆಗ್ರಹ

ಬೆಳಗಾವಿ: ಮುಂಗಾರು ಮಳೆ ಕೈ ಕೊಟ್ಟಿದ್ದು ಜಿಲ್ಲೆಯ ಅನ್ನದಾತರು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಆಲೂಗಡ್ಡೆ ಬೆಳೆದಿರುವ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ರೈತರು ಬೆಳೆ ಹಾನಿ ಭೀತಿಯಲ್ಲಿದ್ದು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಒಂದು ವರ್ಷ ಅತಿವೃಷ್ಟಿ, ಮತ್ತೊಂದು ವರ್ಷ ಅನಾವೃಷ್ಟಿ. ಇದು ರೈತರ ಜೀವನವನ್ನು ಕಂಗಾಲು ಮಾಡಿಬಿಟ್ಟಿದೆ. ಮಳೆ ನಂಬಿ ಸಾಲ ಮಾಡಿ ಬಿತ್ತಿದ್ದ ಆಲೂಗಡ್ಡೆ ಬೀಜಗಳು ಭೂಮಿಯಲ್ಲೇ ಕಮರಿವೆ. ಹಾಕಿದ ಗೊಬ್ಬರ ನೀರಿಲ್ಲದ್ದೇ ಮೇಲೆಯೇ ಇದೆ. ಇನ್ನೂ ಒಂದಿಷ್ಟು ಬೆಳೆದರೂ …

Read More »