Breaking News
Home / ರಾಜ್ಯ (page 510)

ರಾಜ್ಯ

ಬೆಂಗಳೂರಲ್ಲಿ ವೃದ್ಧೆಯ ಕೈಕಾಲು ಕಟ್ಟಿ ಹತ್ಯೆಗೈದು ದರೋಡೆ

ಬೆಂಗಳೂರು: ಒಂಟಿ ವೃದ್ಧೆಯ ಕೈಕಾಲು ಕಟ್ಟಿ ಬರ್ಬರವಾಗಿ ಹತ್ಯೆಗೈದು, ಮನೆಯಲ್ಲಿದ್ದ ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ‌ ಮಹಾಲಕ್ಷ್ಮಿ ಲೇಔಟಿನಲ್ಲಿ ನಡೆದಿದೆ. ಕಮಲಮ್ಮ (80) ಹತ್ಯೆಯಾದ ವೃದ್ಧೆ. ಮೃತಳ ಪತಿ ಆರು ತಿಂಗಳ ಹಿಂದೆಷ್ಟೇ ಸಾವನ್ನಪ್ಪಿದ್ದರು. ಮೂವರು ಮಕ್ಕಳಿದ್ದು, ಅವರು ಸಹ ಬೇರೆ ಬೇರೆ ಕಡೆ ವಾಸವಿದ್ದರಿಂದ ಕಮಲಮ್ಮ ಒಬ್ಬರೇ ವಾಸವಿದ್ದರು. ನಿನ್ನೆ(ಶನಿವಾರ) ಸಂಜೆ ಮನೆ ಪ್ರವೇಶಿಸಿರುವ ಹಂತಕರು‌ ವೃದ್ಧೆಯ ಕೈಕಾಲು‌ ಕಟ್ಟಿ, ಬಾಯಿಗೆ ಪ್ಲಾಸ್ಟರ್ ಅಂಟಿಸಿ …

Read More »

ನೀತಿ ಆಯೋಗದ ಸಭೆ ಬಹಿಷ್ಕರಿಸಿದ 7 ಸಿಎಂಗಳು

ನವದೆಹಲಿ, ಮೇ 27- ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಗೆ ದೇಶದ ಏಳು ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದಾರೆ.ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹಾಜರಾಗದಿರಲು ಆರೋಗ್ಯದ ಕಾರಣಗಳನ್ನು ಉಲ್ಲೇಖಿಸಿದ್ದರೆ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗೈರು ಹಾಜರಿಗೆ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಕೇಂದ್ರದ ಇತ್ತೀಚಿನ ಸುಗ್ರೀವಾಜ್ಞೆಗೆ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ ಮತ್ತು ದೇಶದಲ್ಲಿ …

Read More »

ಶಾಂತಿ ಕದಡುವ ಸಂಘಟನೆಯ ಮೇಲೆ ಕಠಿಣ ಕ್ರಮ : ಸಿಎಂ ವಾರ್ನಿಂಗ್

ಬೆಂಗಳೂರು, ಮೇ 27- ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ಇಂದು ವಿಧಾನಸೌಧದ ಬಳಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ. ಕಾನೂನು …

Read More »

ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ

ಬೆಂಗಳೂರು,ಮೇ 27- ಸಚಿವ ಸಂಪುಟದಲ್ಲಿ ಅವಕಾಶ ವಂಚಿತರು ಅಸಮಾಧಾನಗೊಂಡಿದ್ದು, ಹೈಕಮಾಂಡ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಚಿವಾಕಾಂಕ್ಷಿಗಳ ಬೆಂಬಲಿಗರು ಮೈಸೂರು ಸೇರಿಂತೆ ಕೆಲವು ಕಡೆ ರಸ್ತೆಗಿಳಿದು ಪ್ರತಿಭಟನೆಯನ್ನೂ ನಡೆಸಿದ್ದಾರೆ.ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸಂಪುಟದಲ್ಲಿರುವ ಎಲ್ಲಾ 34 ಸ್ಢಾನಗಳಿಗೂ ಸಚಿವರನ್ನು ನಿಯೋಜಿಸುವ ದಿಟ್ಟ ನಿರ್ಧಾರ ಕೈಗೊಂಡಿದೆ. ಸಚಿವ ಸ್ಥಾನದ ಮೇಲೆ ಸುಮಾರು 70ಕ್ಕೂ ಹೆಚ್ಚು ಮಂದಿ ಕಣ್ಣಿಟ್ಟಿದ್ದರು, ಅವರಲ್ಲಿ ಬಹುತೇಕರು ದೆಹಲಿಗೆ ತೆರಳಿ ಲಾಬಿ ನಡೆಸಿದ್ದರು. ಮುಖ್ಯಮಂತ್ರಿ …

Read More »

ಅಂಡರ್‌ಪಾಸ್‌ನಲ್ಲಿ ಯುವತಿ ಸಾವು : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಬೆಂಗಳೂರು,ಮೇ.27- ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.ಕಳೆದ ಮೇ 21ರಂದು ಬೆಂಗಲೂರಿನಲ್ಲಿ ಸುರಿದ ರಭಸ ಮಳೆಗೆ ಕೆಆರ್ ಸರ್ಕಲ್ ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಇನ್ಫೋಸಿಸ್ ಭಾನುರೇಖ (23) ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿ ಜೂನ್ 5ರೊಳಗೆ ಪ್ರತಿಕ್ರಿಯೆ ನೀಡುವಂತೆ ಪೂರ್ವ ವಲಯದ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರು ಸೇರಿದಂತೆ ಎಂಟು ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸï.ಪಾಟೀಲ್ …

Read More »

ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಹರಿದಾಡುತ್ತಿರುವದು ಪಟ್ಟಿ ನಕಲಿ ಎಂದ

ಬೆಂಗಳೂರು: ಕಾಂಗ್ರೆಸ್ ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಈಗ ಹರಿದಾಡುತ್ತಿರುವ ಪಟ್ಟಿ ನಕಲಿ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈ ಕುರಿತು ಇದೀಗ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ …

Read More »

2022-23 ಆದಾಯ ತೆರಿಗೆ ಪಾವತಿ ವೇಳೆ ಈ ತಪ್ಪು ಬೇಡ!

ಬೆಂಗಳೂರು: ಕಳೆದ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿ ಮಾಡುವ ಸಮಯ ಬಂದಿದೆ. ಆದಾಯ ತೆರಿಗೆ ಇಲಾಖೆ ಈಗಾಗಲೇ ಪಾವತಿ ದಾಖಲಾತಿಗಳನ್ನು ಲಭ್ಯವಾಗುವಂತೆ ಮಾಡಿದೆ. ಈ ಹಿನ್ನಲೆ 2022-2023ರ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ತಪ್ಪುಗಳು ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅವಶ್ಯವಾಗಿದೆ. ಐಟಿ ಇಲಾಖೆಯ ಮಾಹಿತಿ ಅನುಸಾರ, ಜುಲೈ 31ರೊಳಗೆ ಲೆಕ್ಕ ಪರಿಶೋಧನೆಯ ಅಗತ್ಯವಿಲ್ಲದ ವ್ಯಕ್ತಿಗಳು ಜುಲೈ 31ರೊಳಗೆ ರಿಟರ್ನ್ಸ್ ಸಲ್ಲಿಸಬೇಕು. ಫಾರ್ಮ್​ 16 ಅನ್ನು ಈಗಾಗಲೇ ಕೆಲವು …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಗ್ರಾಮಗಳಲ್ಲಿ ನೀರಿನ ಕೊರತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಹೀಗಾಗಿ, ಅಂತರ್ಜಲ ಮಟ್ಟ ತಳ ತಲುಪಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗಿರುವ ಕಾರಣ ಕೆಲವೆಡೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಿ ದಾಹ ತೀರಿಸುವ ಪರಿಸ್ಥಿತಿ ಬಂದೊದಗಿದೆ. ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ಬೀಸಿಲಿನ ತಾಪಕ್ಕೆ ಜನ ನಿತ್ಯವೂ ಬಸವಳಿಯುತ್ತಿದ್ದಾರೆ. ಕಳೆದೆರಡು ದಿನದ ಹಿಂದೆ ಕೆಲ ಗಂಟೆಗಳ ಕಾಲ ಮಳೆ ಸುರಿದಿತ್ತಾದರೂ ಮತ್ತೆ …

Read More »

ಸಂಸತ್ ಭವನದ ಉದ್ಘಾಟನೆ ವಿವಾದ: ಸಿಎಂ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು

ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದ ಬಗ್ಗೆ ವಿವಾದ ಹೆಚ್ಚಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಈಗ ವಿವಾದಕ್ಕೆ ಸಿಲುಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಖರ್ಗೆ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ದೆಹಲಿಯ ಕೊನಾಟ್ …

Read More »

ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಯಾರಿಗೆ ಯಾವ ಖಾತೆ?*

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಖಾತೆ ಹಂಚಿಕೆ ಕೂಡ ಮಾಡಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿಯಲ್ಲಿಯೇ ಹಣಕಾಸು, ಸಂಪುಟ ವ್ಯವಹಾರ ಹಾಗೂ ಗುಪ್ತಚರ ಇಲಾಖೆ ಉಳಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಗುಪ್ತಚರ ಇಲಾಖೆ ಡಿಸಿಎಂ ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಡಾ.ಜಿ.ಪರಮೇಶ್ವರ್ – ಗೃಹ ಖಾತೆ ಹೆಚ್.ಕೆ.ಪಾಟೀಲ್ – ಕಾನೂನು ಮತ್ತು …

Read More »