Breaking News
Home / ರಾಜ್ಯ (page 512)

ರಾಜ್ಯ

ಕಪಾಟಿನಲ್ಲಿ ಅವಿತು ಕುಳಿತು ಭುಸುಗುಟ್ಟ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದೆ.

ಮೂಡಿಗೆರೆ: ಪಿರಿಯಾಪಟ್ಟಣದ ಬಸಲಾಪುರ ಶಾಲಾ ಸ್ವಚ್ಛತೆ ವೇಳೆ ನಾಗರ ಹಾವೊಂದು ಕಪಾಟಿನಲ್ಲಿ ಅವಿತು ಕುಳಿತು ಭುಸುಗುಟ್ಟ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದೆ. ಈ ಚಿತ್ರ ಕಂಡವರೆಲ್ಲ ಅಬ್ಬಬ್ಬಾ..! ಎಂದಿದ್ದಾರೆ. ಇದರ ಬೆನ್ನಿಗೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಮುಸ್ಲಿಂ ಯುವತಿಯೊಬ್ಬಳ ಮನೆಯ ಕಪಾಟಿನಲ್ಲಿ ಬಜರಂಗದಳದ ಕಾರ್ಯಕರ್ತನೊಬ್ಬ ಪ್ರತ್ಯಕ್ಷವಾಗಿರುವ ವಿಡಿಯೊ ವೈರಲ್ ಆಗಿದೆ ! ಈ ಮೂಲಕ ಇತ್ತೀಚೆಗೆ ಗ್ರಾಮದಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣ ಈಗ …

Read More »

ಪ್ರವೀಣ್ ನೆಟ್ಟಾರು ಪತ್ನಿ ಅವರ ನೇಮಕಾತಿಯನ್ನು ರದ್ದು ಮಾಡಿದ ಸರ್ಕಾರ.

ಬೆಂಗಳೂರು: ಬಿಜೆಪಿ ಮುಖಂಡ ದಿ. ಪ್ರವೀಣ್ ನೆಟ್ಟಾರು ಅವರ ನೇಮಕಾತಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಮ್ತ್ರಿಗಳ ವಿಶೇಷ ಅಧಿಕರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದೆ ಬಸವರಾಜ್ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಟಿಯಿಂದ 2022ರ ಸೆ.22ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ನೂತನ …

Read More »

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಒಲಿದ ಸಚಿವ ಸ್ಥಾನ: ಸವದಿ, ಅಶೋಕ್ ಪಟ್ಟಣ ಸೇರಿ ಇತರರಿಗೆ ನಿರಾಶೆ

ಬೆಳಗಾವಿ: ಘಟಾನುಘಟಿ ನಾಯಕರ ನಡುವೆ ಕಾಂಗ್ರೆಸ್​ನ 2ನೇ ಪಟ್ಟಿಯಲ್ಲಿ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಬಿಡುಗಡೆ ಮಾಡಿದ ಕಾಂಗ್ರೆಸ್ ಪಟ್ಟಿಯಲ್ಲಿ 24 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಗೆ ಮತ್ತೆರಡು ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಕೇವಲ ಒಂದೇ ಸ್ಥಾನ ಸಿಕ್ಕಿದ್ದು, ಅದು ಲಕ್ಷ್ಮೀ ಹೆಬ್ಬಾಳ್ಕರ್ ಪಾಲಾಗಿದೆ. ಬಿಜೆಪಿ ಬಿಟ್ಟು ಬಂದು ಕಾಂಗ್ರೆಸ್ ಸೇರಿ ಭಾರಿ …

Read More »

ಮೇ 29 ರಿಂದ ಲಕ್ಷ್ಮೀದೇವಿ ನೂತನ ದೇವಸ್ಥಾನ ಉದ್ಘಾಟನೆ

ಮೂಡಲಗಿ: ಪಟ್ಟಣದ ಗಾಂಧಿ ಚೌಕ ಬಳಿಯ ಢವಳೇಶ್ವರ ಓಣಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ಮೇ 29ಮತ್ತು 30 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ. 29 ರಂದು ಬೆಳಗ್ಗೆ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಿಂದ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೂರ್ಣಕುಂಭ ಮೆರವಣಿಗೆ ನಡೆಯುವುದು. ನಂತರ ಹೋಮ-ಹವನದೊಂದಿಗೆ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರಾಣ …

Read More »

ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಲು ಶಾಸಕಿ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ

ನಿಪ್ಪಾಣಿ: ತಾಲೂಕಿನಲ್ಲಿ ಸ್ತವನಿಧಿ ಗ್ರಾಮವೊಂದು ಬಿಟ್ಟರೆ ಎಲ್ಲಿಯೂ ನೀರಿನ ತೊಂದರೆ ಇಲ್ಲ. ಸ್ತವನಿಧಿ ಗ್ರಾಮದಲ್ಲಿ ಶನಿವಾರದಿಂದ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲು ಸೂಚಿಸಲಾಗಿದೆ. ತಾಲೂಕಿನಲ್ಲಿ ಪ್ರವಾಹ, ಮಳೆಯಿಂದ ಹಾನಿಯಾದಲ್ಲಿ ಜಾಗೃತಿ ವಹಿಸಲು ತಾಲೂಕಾಡಳಿತಕ್ಕೆ ಸೂಚಿಸಲಾಗಿದೆ. ಒಪ್ಪಂದದ ಪ್ರಕಾರ ಮಹಾರಾಷ್ಟ್ರದಿಂದ ಇನ್ನೂ ನೀರು ಬರಬೇಕಾಗಿದ್ದು ಅದನ್ನು ಶೀಘ್ರದಲ್ಲೆ ಬಿಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ’ ಎಂದು ಶಾಸಕಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು …

Read More »

ಮಾರುಕಟ್ಟೆಯಲ್ಲಿ ತೊಗರಿ ಆವಕ ಕೊರತೆ: ಭಾರೀ ಡಿಮ್ಯಾಂಡ್​, ಕ್ವಿಂಟಾಲ್​ಗೆ 10 ಸಾವಿರ ರೂವರೆಗೆ ಏರಿಕೆ

ವಿಜಯಪುರ: ಅಕಾಲಿಕ ಮಳೆಯಿಂದ ತೊಗರಿ ಆವಕದ ಕೊರತೆ ಹಾಗೂ ನಿರೀಕ್ಷಿತ ಪ್ರಮಾಣದಲ್ಲಿ ತೊಗರಿ ಮಾರುಕಟ್ಟೆಗೆ ಬಾರದ ಹಿನ್ನೆಲೆ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಶುಕ್ರವಾರ ತೊಗರಿ ಬೆಲೆ ಏಕಾಏಕಿ ಕ್ವಿಂಟಾಲ್‌ಗೆ ನಾಲ್ಕು ಸಾವಿರದಿಂದ ಹತ್ತು ಸಾವಿರದವರೆಗೆ ಏರಿಕೆಯಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ವಿಜಯಪುರ ಭಾಗದ ರೈತರು ಹಿಂದಿನಂತೆ ಜೋಳವನ್ನು ಹೆಚ್ಚಾಗಿ ಬೆಳೆಯುವುದನ್ನು ಕೈಬಿಟ್ಟಿದ್ದಾರೆ. ಬದಲಾಗಿ ಕಳೆದ ಐದು ವರ್ಷಗಳಿಂದ ತೊಗರಿ ಬೆಳೆಗೆ ಆದ್ಯತೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 7 ಲಕ್ಷ …

Read More »

ರಾಜ್ಯದ ರೈತರ ಕೃಷಿ ಪಂಪ್​​ಸೆಟ್​ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ.

ಬೆಳಗಾವಿ: ರಾಜ್ಯದ ರೈತರ ಕೃಷಿ ಪಂಪ್​​ಸೆಟ್​ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ. ಕೆಇಆರ್‌ಸಿ ಆದೇಶ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಒತ್ತಾಯಿಸಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 40 ಲಕ್ಷ ಕೃಷಿ ರೈತರು ಕೃಷಿ ಉತ್ಪನ್ನಗಳನ್ನು ಕಷ್ಟದಲ್ಲಿ ಬೆಳೆದು ನಷ್ಟ ಅನುಭವಿಸುತ್ತಿದ್ದಾರೆ ಎಂದರು. ಇಂತಹ ಸಂದರ್ಭದಲ್ಲಿ ಆಧಾರ್ ಲಿಂಕ್ ಮಾಡಿದರೆ ಸಬ್ಸಿಡಿ ನೀಡುವುದಾಗಿ, ಇಲ್ಲವೇ …

Read More »

ಸಾರ್ವಜನಿಕರ ಬಳಕೆಗಾಗಿ ಹೊಸ ರೂಪದಲ್ಲಿ ಬರಲಿದೆ ಟ್ರಿಣ್ ಟ್ರಿಣ್ ಸೈಕಲ್: ವಿಶೇಷತೆಗಳೇನು?

ಮೈಸೂರು : ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಟ್ರಿಣ್ ಟ್ರಿಣ್ ಪಬ್ಲಿಕ್ ಸೈಕಲ್​ ಷೇರಿಂಗ್ ಯೋಜನೆಯಡಿ ಕಳೆದ ಆರು ವರ್ಷಗಳ ಹಿಂದೆ ಮೈಸೂರಿನಲ್ಲಿ ಪರಿಚಯ ಮಾಡಲಾಯಿತು. ಅಂದು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಈ ಸೈಕಲ್ ಯೋಜನೆಗೆ ಚಾಲನೆ ನೀಡಿದ್ದರು. ಮೈಸೂರು ನಗರದಲ್ಲಿ ಈ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗಾ ಟ್ರಿಣ್ ಟ್ರಿಣ್ ಸೈಕಲ್ ಮತ್ತೇ ಹೊಸ ರೂಪದಲ್ಲಿ ರಸ್ತೆಗೆ ಇಳಿಯಲಿದ್ದು. ಈ ಸೈಕಲ್ ಗಳ ವಿಶೇಷತೆಗಳೇನು ಎಂಬ …

Read More »

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಗು ಸಾವು; 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಯಚೂರು: ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿ, 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ‌ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದ ಜನರು ಕಳೆದ ಎರಡು ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಘಟನೆಗೆ ಗ್ರಾ.ಪಂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ರಿಮ್ಸ್​ನಲ್ಲಿ ಅನಾರೋಗ್ಯಪೀಡಿತರು ದಾಖಲಾಗಿದ್ದಾರೆ. ರೇಕಲಮರಡಿ ಗ್ರಾಮದ …

Read More »

ಮಹಿಳಾ KAS ಅಧಿಕಾರಿಗೆ ಸಹೋದರನಿಂದಲೇ ಜೀವ ಬೆದರಿಕೆ: ಪ್ರಕರಣ ದಾಖಲು

ಬೆಂಗಳೂರು : ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಮಹಿಳಾ ಅಧಿಕಾರಿಗೆ ಸ್ವಂತ ಸಹೋದರನೇ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​​​ ಅಧಿಕಾರಿ ಡಾ. ಮೈತ್ರಿ ನೀಡಿರುವ ದೂರಿನನ್ವಯ ಅವರ ಸಹೋದರ ಡಾ.ಸಂಜಯ್ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜಯನಗರದಲ್ಲಿ ತಮ್ಮ ಕುಟುಂಬದೊಂದಿಗೆ ಡಾ. ಮೈತ್ರಿ ವಾಸವಿದ್ದು, ಸಹೋದರ ಡಾ. ಸಂಜಯ್ ಪ್ರತ್ಯೇಕವಾಗಿ ವಾಸವಿದ್ದರು. ಎರಡು ವರ್ಷಗಳಿಂದ ತಾನು …

Read More »