Breaking News

ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ‘GPF’ ಹಿಂತೆಗೆದುಕೊಳ್ಳುವ ಮಿತಿ ಶೇ.90ಕ್ಕೆ ಹೆಚ್ಚಳ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಸರ್ಕಾರಿ ನೌಕರನ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಇರುವ ಉಳಿಕೆ ಮೊತ್ತದ ಗರಿಷ್ಠ 90% ಅನ್ನು ಮಂಜೂರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಶೇ.90ರಷ್ಟು GPF ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭವಿಷ್ಯ ನಿಧಿಗಳ …

Read More »

ಗಾಣಗಾಪುರ ದತ್ತಾತ್ರೇಯ ದೇವಾಲಯದಲ್ಲಿ ಹೊಡೆದಾಟ: ಅರ್ಚಕರ ವಿರುದ್ಧ ಎಫ್‌ಐಆರ್

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿಯೇ ಅರ್ಚಕರು ಹೊಡೆದಾಡಿಕೊಂಡಿದ್ದಾರೆ. ದತ್ತ ಮಂದಿರದ ಪ್ರಾಂಗಣದಲ್ಲಿ ವಲ್ಲಭ ಪೂಜಾರಿ ಮೇಲೆ ಗುಂಡು ಪೂಜಾರಿ, ಕಿರಣ್ ಪೂಜಾರಿ ಹಲ್ಲೆ ನಡೆಸಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡಿದೆ. ಈ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೇವಸ್ಥಾನದ ಪೂಜಾ ಕೈಂಕರ್ಯವನ್ನು ಪ್ರತಿ ವರ್ಷ ಒಂದೊಂದು ಕುಟುಂಬಕ್ಕೆ ವಹಿಸುವ ಪದ್ಧತಿ ಇದೆ. ಈ ವರ್ಷ ವಲ್ಲಭ ಪೂಜಾರಿ …

Read More »

ಮೈಸೂರಿನಲ್ಲಿ ನೇಣು ಬಿಗಿದುಕೊಂಡು `ಬೆಮೆಲ್ ಅಧಿಕಾರಿ’ ಆತ್ಮಹತ್ಯೆ!

ಮೈಸೂರು: ಮೈಸೂರಿನಲ್ಲಿ ಬೆಮೆಲ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ಬೆಮೆಲ್ ಅಧಿಕಾರಿ ಎಲ್. ಮೋಹನ್ ರಾವ್(54) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಮೋಹನ್ ರಾವ್ ಬೆಮಲ್ ಡಿಜಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಕರ್ತವ್ಯಕ್ಕೆ ತೆರಳುವುದಾಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಮಧ್ಯಾಹ್ನದವರೆಗೂ ಅವರು ಕುಟುಂಬದವರೊಂದಿಗೆ ಫೋನ್ ನಲ್ಲಿ ಅವರು ಮಾತನಾಡಿದ್ದು, ನಂತರ ಅವರ …

Read More »

ಮೂವರ ಬಲಿ ಪಡೆದ ಸ್ವಿಮ್ಮಿಂಗ್ ಪೂಲ್! ತನಿಖೆ ಮುಗಿಯೋವರೆಗೂ ರೆಸಾರ್ಟ್ ಕ್ಲೋಸ್

ಮಂಗಳೂರು: ನಗರದ ಹೊರವಲಯದಲ್ಲಿರುವ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ವೊಂದರ (Resort) ಈಜುಕೊಳದಲ್ಲಿ (Swimming Pool) ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ (Death) ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಈ ಪ್ರಕರಣದ ತನಿಖೆ ಮುಗಿಯುವವರೆಗೂ ರೆಸಾರ್ಟ್ ಸೀಲ್‌ಡೌನ್ ಮಾಡಲಾಗಿದೆ. ರೆಸಾರ್ಟ್‌ನ ಉದ್ದಿಮೆ ಪರವಾನಿಗೆ ರದ್ದು ರೆಸಾರ್ಟ್ ನಲ್ಲಿ ನ್ಯೂನ್ಯತೆಗಳು ಇರೋ‌ ಕಾರಣ ಸೀಲ್ ಡೌನ್‌ ಮಾಡಲಾಗಿದ್ದು, ರೆಸಾರ್ಟ್‌ನ ಉದ್ದಿಮೆ ಪರವಾನಿಗೆ ರದ್ದು ಪಡಿಸಿ ಉಳ್ಳಾಲ ಪುರಸಭೆ ಆದೇಶ ಹೊರಡಿಸಿದೆ. …

Read More »

ಹಾವೇರಿಯಲ್ಲಿ ಹೋರಿ ಬೆದರಿಸುವ ವೇಳೆ ಕಿತ್ತು ಬಂತು ಓರ್ವನ ಕಣ್ಣುಗುಡ್ಡೆ, 30 ಮಂದಿಗೆ ಗಾಯ!

ಹಾವೇರಿ: ಜಿಲ್ಲೆಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರಿ ತಿವಿದು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. ಅದರಲ್ಲೂ ಓರ್ವನಿಗೆ ಕಣ್ಣೇ ಕಿತ್ತುಬಂದು ಗಂಭೀರ ಗಾಯವಾಗಿದೆ. ಹಾವೇರಿ ಜಿಲ್ಲೆಯ ನಾಗೇಂದ್ರಮಟ್ಟಿಯಲ್ಲಿ ಭಾನುವಾರ ರಾಜ್ಯಮಟ್ಟದ ಹೋರಿ ಬೆದರಿಸುವಂತ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಹೋರಿ ಹಿಡಿಯೋದಕ್ಕೆ ಸ್ಪರ್ಧಿಗಳು ಆಗಮಿಸಿ ಭಾಗವಹಿಸಿದ್ದರು. ಇಂದು ನಡೆದಂತ ಹೋರಿ ಬೆದರಿಸುವಂತ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೋರಿಯೊಂದು ಕೊಂಬಿನಲ್ಲಿ ವ್ಯಕ್ತಿಯೊಬ್ಬರಿಗೆ ತಿವಿದ …

Read More »

ಚನ್ನಮ್ಮನ ಕಿತ್ತೂರು ಮನಗೆದ್ದ ಶಾಸ್ತ್ರೀಯ ಸಂಗೀತ ಕಛೇರಿ

ಚನ್ನಮ್ಮನ ಕಿತ್ತೂರು: ಖ್ಯಾತ ತಬಲಾ ವಾದಕರಾಗಿದ್ದ ಎಲ್ಲಪ್ಪ ಭಜಂತ್ರಿ ಅವರ ಪುಣ್ಯಸ್ಮರಣೆ ಅಂಗವಾಗಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಂಡಿತ ಅಶೋಕ ಹುಗ್ಗಣ್ಣವರ ಪ್ರಸ್ತುತ ಪಡಿಸಿದ ಶಾಸ್ತ್ರೀಯ ಗಾಯನ ಶ್ರೋತೃಗಳ ಮನಗೆದ್ದಿತು. ರಾಗ ಮಾಲಕೌಂಸದೊಂದಿಗೆ ಗಾಯನ ಆರಂಭಿಸಿದರು. ಗಾಯನಕ್ಕೆ ಮನಸೋತ ಪ್ರೇಕ್ಷಕರು ಮಧ್ಯೆದಲ್ಲಿ ಚಪ್ಪಾಳೆ ತಟ್ಟಿ ಸಂಭ್ರಮಪಟ್ಟರು. ಭೈರವಿ ರಾಗದಲ್ಲಿ ‘ಕಂಗಳಿದ್ಯಾತಕೋ ಕಾವೇರಿ ರಂಗನ ನೋಡದಾ’ ಗೀತೆ ಪ್ರಸ್ತುತ ಪಡಿಸಿ ಕೊನೆಗೊಳಿಸಿದರು. ಪಂ.ವಸಂತ ಭಜಂತ್ರಿ ಟ್ರಂಪೆಟ್ ನುಡಿಸಿ ರಂಜಿಸಿದರು. ಪಂಡಿತ ಅಲ್ಲಮಪ್ರಭು ಕಡಕೋಳ …

Read More »

ರಾಷ್ಟ್ರೀಯ ಬಸವ ಪ್ರತಿಷ್ಠಾನದ ದಶಮಾನೋತ್ಸವ: ವಿದೇಶಗಳಲ್ಲಿ ವಚನ ಸಂಸ್ಕೃತಿ ಯಾತ್ರೆ

ಬೆಳಗಾವಿ: ರಾಷ್ಟ್ರೀಯ ಬಸವ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ಬಾಲಿ, ಮಲೇಷಿಯಾ ಹಾಗೂ ಥಾಯ್ಲೆಂಡ್‌ ದೇಶಗಳಲ್ಲಿ 11 ದಿನಗಳವರೆಗೆ ನಡೆಯಲಿರುವ ‘ಭಾರತ ವಚನ ಸಂಸ್ಕೃತಿ ಯಾತ್ರೆ’ಯಲ್ಲಿ ಪಾಲ್ಗೊಳ್ಳಲು ಬೆಳಗಾವಿಯಿಂದಲೂ ಒಂದು ತಂಡ ವಿದೇಶಕ್ಕೆ ತೆರಳಿದೆ. ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಈ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸಲಿದ್ದಾರೆ. ಸಾಣೇಹಳ್ಳಿ ಶ್ರೀಗಳ ನೇತೃತ್ವದಲ್ಲಿ ಹಿರಿಯರ ತಂಡವು ಬೆಂಗಳೂರು ವಿಮಾನ ನಿಲ್ದಾಣದಿಂದ ಭಾನುವಾರ ಸಂಜೆ ಪ್ರಯಾಣ …

Read More »

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

ದಾವಣಗೆರೆ: ‘ವಕ್ಫ್ ಆಸ್ತಿ ವಿಚಾರವಾಗಿ ಪ್ರತ್ಯೇಕವಾಗಿ ಪಾದಯಾತ್ರೆ ಹೊರಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದ ರಾಷ್ಟ್ರೀಯ ವರಿಷ್ಠರು ತಡೆಯಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ನಾವೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಚರ್ಚಿಸಿ ಪ್ರತ್ಯೇಕ ಪಾದಯಾತ್ರೆ ನಡೆಸಬೇಕಾಗುತ್ತದೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.   ಶನಿವಾರ (ನ16)ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇಣುಕಾಚಾರ್ಯ ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ರಾಜಕೀಯ ಏಳಿಗೆ ಸಹಿಸದ ಕೆಲವರು ತಮ್ಮ …

Read More »

‘ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ವಿವಿಧ ಮಠಾಧೀಶರು ಶನಿವಾರ ಹೊಸದಾಗಿ “ಕ್ರಾಂತಿವೀರ ಬ್ರಿಗೇಡ್” ಘೋಷಿಸಿದರು. ವಿಜಯಪುರ ತಾಲೂಕಿನ ಮಖಣಾಪುರ ಸೋಮನಾಥ ಸ್ವಾಮೀಜಿ ಅವರನ್ನು ಬ್ರಿಗೇಡ್‌ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಹಿಂದುಳಿದ ಮತ್ತು ದಲಿತರು ಸೇರಿ ಸಕಲ ಹಿಂದೂ ಧರ್ಮ ಸಮಾಜದ ಸಂಘಟನೆ ಮಾಡಬೇಕು ಎಂಬುವುದು ಎಲ್ಲ ಸ್ವಾಮೀಜಿಗಳ ಉದ್ದೇಶವಾಗಿದೆ. ಈ ಬ್ರಿಗೇಡ್ ಸ್ಥಾಪನೆಯು ಕಾಂತ್ರಿಕಾರಿ ನಿರ್ಧಾರ. ಬಸವನ ಬಾಗೇವಾಡಿಯಲ್ಲಿ ಫೆಬ್ರವರಿ 4ರ ರಥಸಪ್ತಮಿ ದಿನದಂದು ಇದರ ಉದ್ಘಾಟನೆ ನಡೆಯಲಿದೆ ಎಂದು …

Read More »

ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಕಿಚ್ಚ ಸುದೀಪ್‌ (Kiccha Suddep) ಈ ವಾರ ತಮ್ಮದೇ ಮಾತಿನ ಶೈಲಿಯಲ್ಲಿ ಸ್ಪರ್ಧಿಗಳಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಈ ವಾರ ನಡೆದ ಟಾಸ್ಕ್‌ ಹಾಗೂ ಇತರೆ ವಿಚಾರಗಳ ಕಿಚ್ಚ ಮಾತನಾಡಿದ್ದಾರೆ. ತಲೆ ತಿರುಗಿ ಬಿದ್ದಿದ್ದ ಚೈತ್ರಾ ಅವರು ಚಿಕಿತ್ಸೆ ಪಡೆದು ದೊಡ್ಮನೆಗೆ ಬಂದಿದ್ದಾರೆ. ಮನೆಗೆ ಬಂದ ಕೂಡಲೇ ಚೈತ್ರಾ ಅವರು ಹೊರಗಿನ ಕೆಲ ವಿಚಾರಗಳನ್ನು ಮಂಜು ಅವರ ಬಳಿ ಪಿಸು ದನಿಯಲ್ಲಿ ಹೇಳಿದ್ದಾರೆ. ವಿಕ್ಕಿ ಅಣ್ಣ ನಿಮಗೆ …

Read More »