Breaking News
Home / ರಾಜ್ಯ (page 520)

ರಾಜ್ಯ

ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಬಳ್ಳಾರಿಯಲ್ಲಿ ಲಾರಿ ಹಾಗು ಸರ್ಕಾರಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್-ಲಾರಿ ಅಪಘಾತಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.

Read More »

16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭ

ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ನೂತನ ಶಾಸಕರ ಪ್ರಮಾಣವಚನ, ಸ್ಪೀಕರ್ ಆಯ್ಕೆ ನಡೆಯಲಿದೆ. ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಣೆಯಲ್ಲಿ ಅಧಿವೇಶನ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವರುಣಾ ಕ್ಷೇತ್ರದ ಶಾಸಕರಾದ ಸಿಎಂ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನಕಪುರದ ಶಾಸಕರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾದರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ದೇವನಹಳ್ಳಿ …

Read More »

ರಾತ್ರೋರಾತ್ರಿ ಫೀಲ್ಡ್​ಗೆ ಇಳಿದ ಡಿಸಿಎಂ..! ಬಿಬಿಎಂಪಿ ವಿರುದ್ಧ ಕೇಸ್​ ಬುಕ್​..!

ಬೆಂಗಳೂರು ನಗರದಲ್ಲಿ ನಿನ್ನೆ ಸುರಿದ ಮಹಾಮಳೆಗೆ 22 ವರ್ಷದ ಯುವತಿ ಭಾನುರೇಖಾ ಬಲಿಯಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಇದೇ ರೀತಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿನ್ನೆ ಕೆಲವು ಗಂಟೆಗಳ ಕಾಲ ಸುರಿದ ಮಳೆಯ ಪ್ರಮಾಣ ಅತ್ಯಧಿಕವಾಗಿದೆ. ಬೆಂಗಳೂರು ನಗರದಲ್ಲಿ 30 ಮಿ.ಮೀ ಗಿಂತ ಹೆಚ್ಚಿನ ಮಳೆ ಸುರಿದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 8.6 ಮಿ.ಮೀ. HAL ಏರ್ಪೋರ್ಟ್​ನಲ್ಲಿ 25.1 …

Read More »

ಮಳೆ ಬಂದರೆ ಜನರು ಸಾಯಲೇಬೇಕೆ? H.D.K.

ಬೆಂಗಳೂರು : ನಗರದಲ್ಲಿ ಇಂದು ಸುರಿದ ಭಾರಿ ಮಳೆಯಿಂದ ಕೆ. ಆರ್. ವೃತ್ತದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು …

Read More »

ಹಾವೇರಿಯ ಕಾಂಗ್ರೆಸ್​ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಲಾಬಿ

ಹಾವೇರಿ : ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು 8 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಜಿಲ್ಲೆಯ ಬ್ಯಾಡಗಿ ಕ್ಷೇತ್ರದಿಂದ ಆಯ್ಕೆಯಾದ ಬಸವರಾಜ್ ಶಿವಣ್ಣನವರ್ ಮತ್ತು ಹಾವೇರಿ ಕ್ಷೇತ್ರದಿಂದ ಆಯ್ಕೆಯಾದ ರುದ್ರಪ್ಪ ಲಮಾಣಿ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಬಸವರಾಜ್ ಶಿವಣ್ಣನವರ್ …

Read More »

ಸಂಚಾರ ದಟ್ಟಣೆ: ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮಹಾನಗರದ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ತಮಗೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ. …

Read More »

ಜಾರಕಿಹೊಳಿ ಕುಟುಂಬಕ್ಕೆ ಮತ್ತೆ ಪವರ್

ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ ಎನ್ನುವ ಹೆಸರು ಚಿರಪರಿಚಿತ. ಸರ್ಕಾರವನ್ನ ಹುಟ್ಟು ಹಾಕುವ, ಸರ್ಕಾರವನ್ನ ಬೀಳಿಸುವ ಶಕ್ತಿ ಈ ಕುಟುಂಬಕ್ಕಿದೆ ಎನ್ನುವುದದು ಎರಡು ಬಾರಿ ಸಾಬೀತಾಗಿದೆ. ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ (Jarkiholi Family) ಎನ್ನುವ ಹೆಸರು ಚಿರಪರಿಚಿತ. ಸರ್ಕಾರವನ್ನ ಹುಟ್ಟು ಹಾಕುವ, ಸರ್ಕಾರವನ್ನ ಬೀಳಿಸುವ ಶಕ್ತಿ ಈ ಕುಟುಂಬಕ್ಕಿದೆ ಎನ್ನುವುದದು ಎರಡು ಬಾರಿ ಸಾಬೀತಾಗಿದೆ. ಇಷ್ಟೊಂದು ಪವರ್ ಫುಲ್ ಇರುವ ಈ ಕುಟುಂಬ ಯಾವ ಪಕ್ಷ …

Read More »

ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ.. 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ಸೋಮವಾರದಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆ ಮೇ 22 ರಿಂದ 24ರ ವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.   ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ …

Read More »

ರಾಜಧಾನಿಯಲ್ಲಿ ಸುರಿದಿದ್ದು ಕೇವಲ ಒಂದೇ ಗಂಟೆ ಮಳೆಗೆ ಟೆಕ್ಕಿ ಬಲಿ; ಅವಾಂತರಗಳ ಮಾಹಿತಿ

ನಗರದಲ್ಲಿ ಮುಂದಿನ 2 ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ಭಾನುವಾರ ನಗರದಲ್ಲಿ ಮುಂದುವರಿದ ಗಾಳಿ ಸಹಿತ ಭಾರಿ ಮಳೆ ಅಬ್ಬರಕ್ಕೆ ಆಂಧ್ರಪ್ರದೇಶ ಮೂಲದ ಯುವತಿ ಮೃತಪಟ್ಟಿದ್ದಾರೆ. ಇದರಿಂದಾಗಿ ಮಳೆ ಅವಘಡಕ್ಕೆ ಪ್ರಸಕ್ತ ವರ್ಷದಲ್ಲಿ ಮೊದಲ ಸಾವು ಸಂಭವಿಸಿದ ಘಟನೆ ಇದಾಗಿದೆ. ನಗರದ ಹಲವು ಕಡೆಗಳಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಆಲಿಕಲ್ಲು ಮಳೆಗೆ ನೂರಾರು ಮರಗಳು ಧರೆಗುರುಳಿವೆ. ವರುಣನ ಆರ್ಭಟಕ್ಕೆ ಧರೆಗುರುಳಿದ …

Read More »

ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡು 29 ವರ್ಷ.. ಅವಿಸ್ಮರಣೀಯ ಕ್ಷಣ ನೆನಪಿಸಿಕೊಂಡ ಸುಶ್ಮಿತಾ ಸೇನ್‌

ಮುಂಬೈ(ಮಹಾರಾಷ್ಟ): 29 ವರ್ಷಗಳ ಹಿಂದೆ ಇದೇ ದಿನಾಂಕದಂದು ಮಿಸ್ ಯೂನಿವರ್ಸ್ ಕಿರೀಟ ಮುಡಿಗೇರಿಸಿಕೊಂಡಿದ್ದ ನಟಿ ಸುಶ್ಮಿತಾ ಸೇನ್ ಅವರ ಜೀವನದಲ್ಲಿ ಮೇ 21 ಬಹಳ ವಿಶೇಷವಾದ ದಿನವಾಗಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ, ನಟಿ ತಮ್ಮ ಅವಿಸ್ಮರಣೀಯ ಕ್ಷಣ ನೆನಪಿಸಿಕೊಂಡು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರ ಮೇಲೆ, ‘ಈ ಚಿತ್ರವು ಸರಿಯಾಗಿ 29 ವರ್ಷ ಹಳೆಯದು, ಛಾಯಾಗ್ರಾಹಕ ಪ್ರಬುದ್ಧ ದಾಸ್‌ಗುಪ್ತಾ ತೆಗೆದಿದ್ದಾರೆ. ಅವರು 18 ವರ್ಷದ ನನ್ನನ್ನು ಸುಂದರವಾಗಿ …

Read More »