ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ ರದ್ದುಪಡಿಸುವಂತೆ ಹೊರಡಿಸಿದ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ. ಸೊರಬದಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಈ ಬಗ್ಗೆ ಒತ್ತಾಯಿಸಿದ್ದಾರೆ. ದಿನದ …
Read More »ಇನ್ನಷ್ಟು ಹೈಟೆಕ್ ಆಗಲಿವೆ ‘DL, RC’ : ಶೀಘ್ರವೇ ರಾಜ್ಯದಲ್ಲಿ ಹೊಸ `ಸ್ಮಾರ್ಟ್ ಕಾರ್ಡ್’ ಯೋಜನೆ ಅನುಷ್ಠಾನ!
ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಇ ಆಡಳಿತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. …
Read More »ಹಿರಿಯ ನಟ ಡೆಲ್ಲಿ ಗಣೇಶ್ ಇನ್ನಿಲ್ಲ
ಚೆನ್ನೈ: ಹಿರಿಯ ತಮಿಳು ನಟ ಡೆಲ್ಲಿ ಗಣೇಶ್ (Delhi Ganesh) ಅವರು ಶನಿವಾರ (ನ.09) ಚೆನ್ನೈನಲ್ಲಿ ಅಸುನೀಗಿದರು. 80 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಡೆಲ್ಲಿ ಗಣೇಶ್ ಅವರ ಸಾವಿನ ಬಗ್ಗೆ ಅವರ ಪುತ್ರ ಮಹದೇವನ್ ಸಾಮಾಜಿಕ ಜಾಲತಾಣದಲ್ಲಿ ಖಚಿತ ಪಡಿಸಿದ್ದಾರೆ. ಭಾರತೀಯ ವಾಯು ಸೇನೆಯಲ್ಲಿ ದಶಕದ ಕಾಲ ಕೆಲಸ ಮಾಡಿದ್ದ ಡೆಲ್ಲಿ ಗಣೇಶ್ ಅವರು ಬಳಿಕ ಚಿತ್ರರಂಗದಲ್ಲಿ ಮಿಂಚಿದ್ದರು. ಡೆಲ್ಲಿ ಗಣೇಶ್ ಅವರ ಅಂತಿಮ ಕ್ರಿಯೆಯು …
Read More »ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು. ಜಿಂದಾಲ್ ವಿದ್ಯಾನಗರದಲ್ಲಿ ಭಾನುವಾರ (ನ.10) ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳು ಗೆದ್ದಾಗ ಸಿಎಂ ನಿರಾಳವಾಗಿದ್ದರು. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಿಜೆಪಿ ಒಂದೊಂದು ಬಯಲಿಗೆ ಎಳೆಯುತ್ತಿದ್ದಂತೆ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ ಎಂದು ವಾಗ್ದಳಿ ನಡೆಸಿದರು. ರಾಜ್ಯದಲ್ಲಿ …
Read More »Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಡಿ.ವೈ. ಚಂದ್ರಚೂಡ್(Dhananjaya Yeshwant Chandrachud) ಅವರು ಶುಕ್ರವಾರ(ನ8) ಸುಪ್ರೀಂ ಕೋರ್ಟ್‌ಗೆ ಭಾವನಾತ್ಮಕ ವಿದಾಯ ಹೇಳಿದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ, ಡಿ.ವೈ. ಚಂದ್ರಚೂಡ್ ಅವರು ತಮ್ಮ ನ್ಯಾಯಾಂಗ ಪ್ರಯಾಣದ ವೈಯಕ್ತಿಕ ಘಟನೆಗಳನ್ನು ಹಂಚಿಕೊಂಡರು. ನ್ಯಾಯಾಂಗ ಸುಧಾರಣೆ ಪಾರದರ್ಶಕತೆ ಮತ್ತು ನ್ಯಾಯಕ್ಕೆ ಅಚಲವಾದ ಬದ್ಧತೆಯೊಂದಿಗೆ ಸಂಯೋಜಿಸಿದ್ದೇನೆ ಎಂದು ತಮ್ಮ ಎರಡು ವರ್ಷಗಳ ಸಿಜೆಐ ಅಧಿಕಾರಾವಧಿಯ ಬಗ್ಗೆ ಹೇಳಿಕೊಂಡರು. 64 ರ ಹರೆಯದ ಸಿಜೆಐ …
Read More »ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್ ಮಗ್ಗೊà ಎಂದು ಗುರುತಿಸಲಾಗಿದೆ. ನಿರ್ಬಂಧ ತೆಗೆಯಲು ವಿಜಯ್ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 …
Read More »ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
ಹೊಸದಿಲ್ಲಿ: ಉಪಮುಖ್ಯಮಂತ್ರಿ ವಿರುದ್ದದ ಆದಾಯ ಮೀರಿದ ಆಸ್ತಿ (Disproportionate assets) ಪ್ರಕರಣದ ಸಿಬಿಐ ತನಿಖೆಗೆ ಒಪ್ಪಿಗೆ ಹಿಂತೆಗೆದುಕೊಳ್ಳುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ನ8) ಕರ್ನಾಟಕ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ಉತ್ತರ ಕೋರಿದೆ. 2023 ನವೆಂಬರ್ 23 …
Read More »ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಉದ್ಯಮಿಯೊಬ್ಬರ ಕುಟುಂಬವೊಂದು ತಮ್ಮ ಬದುಕಿನಲ್ಲಿ ಅದೃಷ್ಟ ತಂದು ಕೊಟ್ಟ ಕಾರಿಗೆ ಅದ್ಧೂರಿ ಸಮಾಧಿ ಕಾರ್ಯಕ್ರಮವನ್ನು ನಡೆಸಿದ್ದು ಸದ್ಯ ಭಾರೀ ಸುದ್ದಿಯಾಗುತ್ತಿದೆ. ಲಾಠಿ ತಾಲೂಕಿನ ಪಾದರಶಿಂಗ ಗ್ರಾಮದಲ್ಲಿ ಗುರುವಾರ ಸಂಜಯ ಪೋಲಾರ್ ಮತ್ತು ಕುಟುಂಬ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಆಧ್ಯಾತ್ಮಿಕ ಮುಖಂಡರು ಸೇರಿದಂತೆ ಸುಮಾರು 1,500 ಜನರು ಭಾಗವಹಿಸಿದ್ದರು ಎನ್ನುವುದು ಗಮನಾರ್ಹ ಸಂಗತಿ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಚಿತ್ರವೂ , ವಿಶೇಷವೂ ಎನಿಸುವ ಸಮಾಧಿ …
Read More »ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
ಮಲ್ಪೆ: ಪ್ರವಾಸಿಗರ ಆಕರ್ಷಣೆಯಲ್ಲೊಂದಾಗಿ ರಾಜ್ಯದಲ್ಲೇ ಪ್ರಥಮ ಎಂಬಂತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್) 2021ರಲ್ಲಿ ಮಲ್ಪೆ ಬೀಚ್‌ನಲ್ಲಿ ಪ್ರಾರಂಭಗೊಂಡಿದ್ದು, ಈ ಬಾರಿ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆಕುತ್ತಿದೆ. ಸಂಜೆ ಹೊತ್ತಿಗೆ ತಣ್ಣಗಿನ ಗಾಳಿಯನ್ನು ಆಸ್ವಾದಿಸಲು ಸಮುದ್ರ ತೀರದತ್ತ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಮಲ್ಪೆ ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ ಈ ಸಂಖ್ಯೆ 10 ಸಾವಿರವನ್ನು ದಾಟುತ್ತಿದೆ. ಸುಮಾರು …
Read More »ಬಳ್ಳಾರಿಯಲ್ಲಿ ನಿಮ್ಮ ಅಟ್ಟಹಾಸ ಮುರಿದದ್ದು ಸಿದ್ದರಾಮಯ್ಯ ಅನ್ನೋದು ಮರೀಬೇಡಿ: ಸಿಎಂ
ಬಳ್ಳಾರಿ: ಶಾಸಕ ಜಿ.ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ, ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯ ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದು ಮರೀಬೇಡಿ ಎಂದು ಸಿಎಂ ಸಿದ್ದರಾಮಯ್ಯ ಶಾಸಕ ಜನಾರ್ದನರೆಡ್ಡಿಗೆ ಬಹಿರಂಗವಾಗಿಯೇ ನೇರಾ ನೇರ ಎಚ್ಚರಿಕೆ ನೀಡಿದರು. ಜಿಲ್ಲೆಯ ಸಂಡೂರಿನ ವಿಠಲಾಪುರದಲ್ಲಿ ಶನಿವಾರ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಮತಯಾಚಿಸಿ ಮಾತನಾಡಿ ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ …
Read More »
Laxmi News 24×7