ಬೆಂಗಳೂರು, ನವೆಂಬರ್ 03: 69ನೇ ಕರ್ನಾಟಕ ರಾಜ್ಯೋತ್ಸವವನ್ನು ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ ‘ಸ್ಪೇನ್’ (Spain) ದೇಶದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಲ್ಲಿನ ರಚನಾತ್ಮಕ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಸ್ಪೇನ್ ದೇಶದ ರಾಯಭಾರಿ ಅವರು ಕನ್ನಡ ಚಟವಟಿಕೆಗಳಿಗೆ ಬೇಕಾದ ಸ್ಥಳಾವಕಾಶ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ಪರಿಷತ್ ಮಾಹಿತಿ ನೀಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದೇಶದಲ್ಲಿ ಕನ್ನಡ ಕಲರವವನ್ನು ಹಂಚುವ ತಮ್ಮ ಯೋಜನೆಯ ಅಂಗವಾಗಿ ಯುರೋಪ್ …
Read More »ವಕ್ಫ್ ಬೋರ್ಡ್ ವಿವಾದ: ಕಾಂಗ್ರೆಸ್ ಪ್ರಭಾವಿ ಸಚಿವರಿಂದ ಸ್ಫೋಟಕ ಹೇಳಿಕೆ!
ವಕ್ಫ್ ಬೋರ್ಡ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ವಾಕ್ಸಮರ ತೀವ್ರವಾಗುತ್ತಿದೆ. ಇದರ ಬೆನ್ನಲ್ಲೇ ವಕ್ಫ್ ಬೋರ್ಡ್ ಹಾಗೂ ವಿವಾದದ ಬಗ್ಗೆ ಪ್ರಭಾವಿ ಸಚಿವರೊಬ್ಬರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುವ ಸಂದರ್ಭದಲ್ಲೇ ವಕ್ಫ್ ಆಸ್ತಿ ವಿವಾದ ತೀವ್ರವಾಗಿದೆ. ಇದೀಗ ಕಾಂಗ್ರೆಸ್ ನಾಯಕರು ವಕ್ಫ್ ಬೋರ್ಡ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಡೆಯೇ ಬೊಟ್ಟು ಮಾಡಿದ್ದಾರೆ. …
Read More »ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವರವಾದ ‘ಗೃಹಲಕ್ಷ್ಮಿ’ ಯೋಜನೆ
ಬೆಳಗಾವಿ, ನವೆಂಬರ್ 03: ಕರ್ನಾಟಕದ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ‘ಗೃಹಲಕ್ಷ್ಮಿ’ ಯೋಜನೆಯೂ ಒಂದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದು ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿದೆ. ಯೋಜನೆಯ ನೆರವಿನೊಂದಿಗೆ ಹಲವು ಮಹಿಳೆಯರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಈಗ ಇಂತಹ ಯಶಸ್ಸಿನ ಸುದ್ದಿಯೊಂದು ಬೆಳಗಾವಿ ಜಿಲ್ಲೆಯಿಂದ ಬಂದಿದೆ. ಬೆಳಗಾವಿ ಜಿಲ್ಲೆಯ ಕುಕಡೊಳ್ಳಿ ಗ್ರಾಮದ ತಾಯವ್ವ ಕ ಲಕಮೋಜಿ ಎಂಬ ಮಹಿಳೆ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು, ಮಿರ್ಚಿ ಮಿಕ್ಸರ್ ಮೆಷಿನ್ …
Read More »ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಬಾಲಚಂದ್ರ ಜಾರಕಿಹೊಳಿ ತೀರ್ಥ ಕ್ಷೇತ್ರಗಳ ದರ್ಶನ
ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಬಾಲಚಂದ್ರ ಜಾರಕಿಹೊಳಿ ತೀರ್ಥ ಕ್ಷೇತ್ರಗಳ ದರ್ಶನ ಜೋಗುಳ ಭಾವಿ ಮತ್ತು ರೇಣುಕಾ ಯಲ್ಲಮ್ಮ ದೇಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ನಿಮಿತ್ತ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉತ್ತರ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮಗುಡ್ಡಕ್ಕೆ ತೆರಳಿ ಶ್ರೀ ಕ್ಷೇತ್ರದ …
Read More »ಜಮೀರ್ ಅಹ್ಮದ್ ಗಡಿಪಾರು ಮಾಡುವಂತೆ ಬಿ.ವೈ. ವಿಜಯೇಂದ್ರ ಆಗ್ರಹ
ಚಿತ್ರದುರ್ಗ: ಶಾಂತಿಯುತವಾದ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ರಿಂದ ಬೆಂಕಿ ಹಚ್ಚುವ ಕೆಲಸಗಳು ನಡೆಯುತ್ತಿವೆ. ಮೊದಲು ಜಮೀರ್ ಅಹ್ಮದ್ ರನ್ನು ಗಡಿಪಾರು ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಮೊದ್ಸಳೆ ಕಣ್ಣೀರು ಹಾಕುತ್ತಿದ್ದಾರೆ. ರೈತರಿಗೆ ನೀಡಿರುವ ವಕ್ಫ್ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ …
Read More »ಭಕ್ತರಿಗೆ ತಿಳಿಸದೇ ಮಠದ ಜಮೀನು ಮಾರಾಟ ಮಾಡಿದ ಆರೋಪ : ಸ್ವಾಮೀಜಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು!
ತುಮಕೂರು : ಭಕ್ತರಿಗೆ ತಿಳಿಸದೆ ಮಠದ ಜಮೀನನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ತಾಲೂಕಿನ ಹೆಬ್ಬೂರು ಬಳಿಯಿರುವ ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಹೌದು ಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಶಿವ ಪಂಚಾಕ್ಷರಿ ಸ್ವಾಮೀಜಿ. ಮಠದಲ್ಲಿ ಏನೇ ನಿರ್ಧಾರ ಮಾಡಬೇಕೆಂದರೂ ಮಠದ ಭಕ್ತರು , ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಆದರೆ ಸ್ವಾಮೀಜಿ ಗ್ರಾಮಸ್ಥರಿಗೆ ತಿಳಿಯದಂತೆ ಮಠಕ್ಕೆ ಸೇರಿದ ಹತ್ತಾರು ಎಕರೆ ಜಮೀನು ಮಾರಾಟ ಮಾಡಿರುವ ಆರೋಪ …
Read More »ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು. ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. …
Read More »ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು:ಮುನೇನಕೊಪ್ಪ
ಹುಬ್ಬಳ್ಳಿ: ತುಷ್ಟೀಕರಣ ನೀತಿ ಮುಂದುವರಿದರೆ ಮತ್ತೊಂದು ರೈತರ ದಂಗೆ ನಡೆಯುವ ಸಾಧ್ಯೆತೆಯಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನವಲಗುಂದದ ರೈತರು ತಮ್ಮ ಜಮೀನು, ಮನೆ ಮತ್ತು ಖಾಲಿ ಆಸ್ತಿ ಸಂಬಂಧ ಅಧಿಕೃತ ದಾಖಲೆಗಳನ್ನು ಪಡೆಯುವಂತೆ ಅವರು ಒತ್ತಾಯಿಸಿದರು. ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು ಮಾಡುತ್ತಿದ್ದಾರೆ. ಸರಕಾರದ ಸುಗ್ರೀವಾಜ್ಞೆ ವಿರುದ್ಧ ನವಲಗುಂದದ ರೈತರು ಈ ಹಿಂದೆ ನಡೆಸಿದ …
Read More »ಸ್ಕೂಟರ್’ನಲ್ಲಿ ಸಾಗುತ್ತಾ ಪಟಾಕಿ ಹಚ್ಚಿ ಪುಂಡಾಟ: ಇಬ್ಬರ ಬಂಧನ
ಬೆಂಗಳೂರು: ಸ್ಕೂಟರ್ ನಲ್ಲಿ ಸಾಗುತ್ತಾ ಪಟಾಕಿ ಸಿಡಿಸಿ ಪುಂಡಾಟ ಪ್ರದರ್ಶಿಸಿದ ಇಬ್ಬರು ವ್ಯಕ್ತಿಗಳನ್ನು ಹೆಣ್ಣೂರು ಸಂಚಾರಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಸವಾರನನ್ನು ಕಾಡುಗೊಂಡನಹಳ್ಳಿ ನಿವಾಸಿ ಎಸ್ ಆದಿತ್ಯ ಮತ್ತು ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಿವಾಸಿ ವಿ ಅಕ್ಷಯ್ ಕುಮಾರ್ (18) ಎಂದು ಗುರುತಿಸಲಾಗಿದೆ. ಆದಿತ್ಯ ಪಿಯು ವಿದ್ಯಾರ್ಥಿಯಾಗಿದ್ದರೆ, ಅಕ್ಷಯ್ ಎಂಜಿನಿಯರಿಂಗ್ ವಿದ್ಯಾರ್ಥಿ. ಆದಿತ್ಯ ಸ್ಕೂಟರ್ ಓಡಿಸುತ್ತಿದ್ದು, ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ಅಕ್ಷಯ್ ಪಟಾಕಿಗಳನ್ನು ಸಿಡಿಸಿ ರಸ್ತೆಗೆ ಎಸೆದು ಪುಂಡಾಟ …
Read More »ವಕ್ಫ್ ವಿವಾದ: ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದು, ಪಹಣಿ ತಿದ್ದುಪಡಿ ರದ್ದು ಮಾಡಿ- ಸಿಎಂ ಖಡಕ್ ಸೂಚನೆ!
ಬೆಂಗಳೂರು: ವಕ್ಫ್ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು. ಈ ವೇಳೆ ವಕ್ಫ್ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು …
Read More »
Laxmi News 24×7