Breaking News
Home / ರಾಜ್ಯ (page 540)

ರಾಜ್ಯ

ಮುಸ್ಲಿಂ ಕೋಟಾ ಬಗ್ಗೆ ರಾಜಕೀಯ ಹೇಳಿಕೆ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ಮೀಸಲಾತಿ ಕೋಟಾ ರದ್ದುಪಡಿಸಿರುವ ವಿಷಯ ಸದ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಕೆಲವರು ಈ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿರುವ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲಿ ಶೇಕಡಾ ನಾಲ್ಕರಷ್ಟು ಮುಸ್ಲಿಂ ಕೋಟಾವನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು. ಒಂದು ವಿಷಯದಲ್ಲಿ ನ್ಯಾಯಾಲಯದ ಆದೇಶವಿದ್ದಾಗ ಅದರ ಬಗ್ಗೆ ಒಂದಿಷ್ಟು ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ …

Read More »

ಕಾರ್‌ನ ಡಿಕ್ಕಿಯಲ್ಲಿತ್ತು 3 ಕೋಟಿ ರೂಪಾಯಿ, ಹಣ ಎಣಿಕೆ ಯಂತ್ರ: ಪುಣೆ ಪೊಲೀಸರಿಂದ ಜಪ್ತಿ

ಪುಣೆ (ಮಹಾರಾಷ್ಟ್ರ): ಪುಣೆ-ಸೊಲ್ಲಾಪುರ ಹೆದ್ದಾರಿಯ ಹಡಪ್ಸರ್ ಪ್ರದೇಶದಲ್ಲಿ 3 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಮಹತ್ವ ಪಡೆದಿದೆ. ಹಡಪ್ಸರ್ ಪ್ರದೇಶದ ದ್ರಾಕ್ಷಿ ಸಂಶೋಧನಾ ಕೇಂದ್ರದ ಬಳಿ ಅಪರಾಧ ವಿಭಾಗದ ಸಹಾಯದಿಂದ ಪೊಲೀಸರು 3 ಕೋಟಿ 42 ಲಕ್ಷಕ್ಕೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಹಣ ಎಣಿಕೆ ಯಂತ್ರಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಕಾರ್ ಚಾಲಕ ಪ್ರಶಾಂತ ಧನಪಾಲ್ ಗಾಂಧಿ …

Read More »

ನಾಳೆ ಪ್ರಜಾ ತೀರ್ಪು! ಗಡಿಭಾಗಗಳಲ್ಲಿ ಪೊಲೀಸರಿಂದ ಕಟ್ಟೆಚ್ಚರ, ನಕಲಿ ಮತದಾನಕ್ಕೆ ಅವಕಾಶವಿಲ್ಲ

ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ನಾಳೆ ರಾಜ್ಯದ ಗಡಿ ಭಾಗಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗುವುದು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.   ನಕಲಿ ಮತದಾನಕ್ಕೆ ಅವಕಾಶವಿಲ್ಲ: ಇಂದು ಮತ್ತು ನಾಳೆ ರಾಜ್ಯದ ಎಲ್ಲ ಚೆಕ್ ಪೋಸ್ಟ್​ಗಳಲ್ಲಿ ಭಾರಿ ಭದ್ರತೆ ಇರಲಿದ್ದು ಎಲ್ಲ ಎಸ್‌ಪಿ, ಕಮಿಷನರ್​ಗಳು ರಾತ್ರಿ ಗಸ್ತು ತಿರುಗಲಿದ್ದಾರೆ. ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರನ್ನು ಪರಿಶೀಲನೆ ನಡೆಸಿ ಪ್ರವೇಶಕ್ಕೆ ಅನುಮತಿ …

Read More »

ಮೇ 12ರವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇಂದು ಹಾಗೂ ನಾಳೆ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, …

Read More »

ಮತದಾರರನ್ನು ಸೆಳೆಯಲು, ವಿವಿಧ ರೀತಿಯ ಥೀಮ್ ಮತಗಟ್ಟೆಗಳನ್ನು ಸ್ಥಾಪಿಸಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದು ದಿನ ಬಾಕಿಯಿದ್ದು, ರಾಜ್ಯದ ಮತಗಟ್ಟೆಗಳಲ್ಲಿ ಕೊನೇ ಹಂತದ ತಯಾರಿ ನಡೆದಿದೆ. ಮತದಾರರನ್ನು ಸೆಳೆಯಲು, ಪ್ರತೋಹಿಸುವ ನಿಟ್ಟಿನಲ್ಲಿ ಈ ಬಾರಿ ಚುನಾವಣಾ ಆಯೋಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ರೀತಿಯ ಥೀಮ್ ಮತಗಟ್ಟೆಗಳನ್ನು ಸ್ಥಾಪಿಸಿದೆ. ಬೆಂಗಳೂರಿನಲ್ಲಿ ಹಲವು ರೀತಿಯ ಮತಗಟ್ಟೆಗಳನ್ನು ನಿರ್ಮಿಸಲಾಗಿದ್ದು, ಮತಗಟ್ಟೆ ಬೂತ್ ಗಳು ಮತದಾರರನ್ನು ಆಕರ್ಷಿಸುತ್ತಿವೆ. 28 ಕ್ಷೇತ್ರಗಳಲ್ಲಿ 264 ಥೀಮ್ ಮತಗಟ್ಟೆಗಳನ್ನು ಚುನಾವಣಾ ಆಯೋಗ ಸ್ಥಾಪಿಸಿದೆ. ಯುವ ಮತದಾರರನ್ನು ಪ್ರೋತ್ಸಾಹಿಸಲು ಯುವ ಮತಗಟ್ಟೆ, …

Read More »

ಚುನಾವಣಾ ಆಯೋಗದಿಂದ ಕಾಂಗ್ರೆಸ್ ಅಧ್ಯಕ್ಷ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಷೋಕಾಸ್ ನೋಟಿಸ್

ಬಿಜೆಪಿ ಹಾಗೂ ಕಾಂಗ್ರೆಸ್ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಪರಸ್ಪರ ದೂರು ನೀಡಿದ್ದು, ಚುನಾವಣಾ ಆಯೋಗ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಕಾರಣ ಕೇಳಿ ಷೋಕಾಸ್ ನೋಟಿಸ್ ಜಾರಿ ಮಾಡಿದೆ.   ಚುನಾವಣಾ ಆಯೋಗ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದ ಜಾಹೀರಾತು ವಿರುದ್ಧ ಕಾಂಗ್ರೆಸ್ ನಿಯೋಗ ನೀಡಿದ ಹಿನ್ನೆಲೆ ಚುನಾವಣಾ ಆಯೋಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ಗೆ ನೋಟಿಸ್ ನೀಡಿದ್ದಾರೆ. ಇತ್ತ ಬಿಜೆಪಿ ನಿಯೋಗ ಸೋನಿಯಾ ಗಾಂಧಿ …

Read More »

ಇಂದು ಮನೆ ಮನೆ ಪ್ರಚಾರ: ನಾಳೆ ವೋಟ್‌ ಮಾಡಲು ಮರೆಯದಿರಿ

ಬೆಂಗಳೂರು: ರಾಜ್ಯದ ಮೂರು ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮತದಾರರ ಮನಗೆಲ್ಲಲು ಇಂದು ಅಂತಿಮ ಕಸರತ್ತು ನಡೆಸಲಿದ್ದಾರೆ. ಮೇ 10ರ (ನಾಳೆ) ಚುನಾವಣಾ ಜಿದ್ದಾಜಿದ್ದಿನ ಬಹಿರಂಗ ಪ್ರಚಾರ ನಿನ್ನೆ (ಸೋಮವಾರ) ಸಂಜೆ 6 ಗಂಟೆಗೆ ಕೊನೆಗೊಂಡಿದೆ. ಆ ಮೂಲಕ 40 ದಿನಗಳ ಅಬ್ಬರದ ಪ್ರಚಾರ ಮುಕ್ತಾಯ ಕಂಡಿದೆ. ಇಂದು ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ನಾಳೆ ಮತದಾನ: ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರ …

Read More »

K.L.E. :೧೫ ಮೇ ೨೦೨೩ರಂದು ಬೆಳಗ್ಗೆ ೮.೩೦ರಿಂದ ಸಂಜೆ ೪.೩೦ರವರೆಗೆ ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ೨೩ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರ

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮಧುಮೇಹ ಕೇಂದ್ರವು ವಿಶ್ವ ತಾಯಿಂದಿರ ದಿನಾಚರಣೆ ಅಂಗವಾಗಿ ಇದೇ ದಿ. ೧೫ ಮೇ ೨೦೨೩ರಂದು ಬೆಳಗ್ಗೆ ೮.೩೦ರಿಂದ ಸಂಜೆ ೪.೩೦ರವರೆಗೆ ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ೨೩ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ. ಡಾ.ಎಂ.ವಿ.ಜಾಲಿ   ಔರಂಗಬಾದನ ಸಾರ್ದಾ ಡಯಾಬಿಟಿಸ್ ಕೇಂದ್ರ ಹಾಗೂ ಸೆಲ್ಫ ಕೇರನ ಡಾ. ಅರ್ಚನಾ ಸಾರ‍್ದಾ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. …

Read More »

ನಾಗರಬೆಟ್ಟದ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ನಾಗರಬೆಟ್ಟದ ಆಕ್ಸ್‌ಫರ್ಡ್‌ ಪಾಟೀಲ್ಸ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿ ಭೀಮನಗೌಡ ಹಣಮಂತಗೌಡ ಪಾಟೀಲ 625ಕ್ಕೆ 625 ಅಂಕ ಪಡೆದು ರಾಜ್ಯದ ಟಾಪರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿದ್ದಾನೆ.   ಮೂಲತಃ ಬಾಗಲಕೋಟ ಜಿಲ್ಲೆಯ ಬುದ್ನಿ ಗ್ರಾಮದ ರೈತ ಕುಟುಂಬದವನಾದ ಈತ 9 ಮತ್ತು 10 ನೇ ತರಗತಿಯನ್ನು ಆಕ್ಸಫರ್ಡ್ ಶಾಲೆಯಲ್ಲಿ ಕಲಿತಿದ್ದಾನೆ. 6-8 ತರಗತಿಯನ್ನು ಮುದ್ದೇನಹಳ್ಳಿಯ ಸಾಯಿ ಶಾಲೆಯಲ್ಲಿ, 1-5 ತರಗತಿಯನ್ನು ಬಾಗಲಕೋಟ ಜಿಲ್ಲೆ …

Read More »

ವಾಹನ ಚಾಲಕನ ಮಗ ರಾಜ್ಯಕ್ಕೆ ತೃತೀಯ; 625 ಕ್ಕೆ 623

ರಬಕವಿ-ಬನಹಟ್ಟಿ: ಚಿದಾನಂದ ಪ್ರಕಾಶ ಪಟ್ಟಣ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ತೃತೀಯ ಮತ್ತು ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ತಂದೆ ಪ್ರಕಾಶ ವಾಹನ ಚಾಲಕರಾಗಿದ್ದು, ತಾಯಿ ವೀಣಾ ಕೂಲಿ ನೇಕಾರ ಕಾರ್ಮಿರಾಗಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.   ಸೋಮವಾರ ಚಿದಾನಂದ ಪಟ್ಟಣರ ಮನೆಗೆ ಭೇಟಿ ನೀಡಿದಾಗ ತಂದೆ ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದರು. ಚಿಕ್ಕದಾದ ಮನೆಯಲ್ಲಿ ಸಹೋದರನೊಂದಿಗೆ ಫಲಿತಾಂಶವನ್ನು ನೋಡುತ್ತಿದ್ದರು.ಚಿದಾನಂದ …

Read More »