Breaking News
Home / ರಾಜ್ಯ (page 541)

ರಾಜ್ಯ

ನಾಗರಬೆಟ್ಟದ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ನಾಗರಬೆಟ್ಟದ ಆಕ್ಸ್‌ಫರ್ಡ್‌ ಪಾಟೀಲ್ಸ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿ ಭೀಮನಗೌಡ ಹಣಮಂತಗೌಡ ಪಾಟೀಲ 625ಕ್ಕೆ 625 ಅಂಕ ಪಡೆದು ರಾಜ್ಯದ ಟಾಪರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿದ್ದಾನೆ.   ಮೂಲತಃ ಬಾಗಲಕೋಟ ಜಿಲ್ಲೆಯ ಬುದ್ನಿ ಗ್ರಾಮದ ರೈತ ಕುಟುಂಬದವನಾದ ಈತ 9 ಮತ್ತು 10 ನೇ ತರಗತಿಯನ್ನು ಆಕ್ಸಫರ್ಡ್ ಶಾಲೆಯಲ್ಲಿ ಕಲಿತಿದ್ದಾನೆ. 6-8 ತರಗತಿಯನ್ನು ಮುದ್ದೇನಹಳ್ಳಿಯ ಸಾಯಿ ಶಾಲೆಯಲ್ಲಿ, 1-5 ತರಗತಿಯನ್ನು ಬಾಗಲಕೋಟ ಜಿಲ್ಲೆ …

Read More »

ವಾಹನ ಚಾಲಕನ ಮಗ ರಾಜ್ಯಕ್ಕೆ ತೃತೀಯ; 625 ಕ್ಕೆ 623

ರಬಕವಿ-ಬನಹಟ್ಟಿ: ಚಿದಾನಂದ ಪ್ರಕಾಶ ಪಟ್ಟಣ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ತೃತೀಯ ಮತ್ತು ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ತಂದೆ ಪ್ರಕಾಶ ವಾಹನ ಚಾಲಕರಾಗಿದ್ದು, ತಾಯಿ ವೀಣಾ ಕೂಲಿ ನೇಕಾರ ಕಾರ್ಮಿರಾಗಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.   ಸೋಮವಾರ ಚಿದಾನಂದ ಪಟ್ಟಣರ ಮನೆಗೆ ಭೇಟಿ ನೀಡಿದಾಗ ತಂದೆ ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದರು. ಚಿಕ್ಕದಾದ ಮನೆಯಲ್ಲಿ ಸಹೋದರನೊಂದಿಗೆ ಫಲಿತಾಂಶವನ್ನು ನೋಡುತ್ತಿದ್ದರು.ಚಿದಾನಂದ …

Read More »

ಬಿಜೆಪಿ ನಾಯಕರು ದೇಶದ್ರೋಹಿಗಳು: ಸೇವ್ ಮಹದಾಯಿ ಸೇವ್ ಗೋವಾ ಸಮಿತಿ

ಪಣಜಿ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಹರಿಸುತ್ತಿರುವ ಬಿಜೆಪಿ ನಾಯಕರು ದೇಶದ್ರೋಹಿಗಳಾಗಿದ್ದು, ಕರ್ನಾಟಕಕ್ಕೆ ತೆರಳಿ ಚುನಾವಣಾ ಪ್ರಚಾರ ಮಾಡುತ್ತಿರುವವರನ್ನು ಖಂಡಿಸುತ್ತೇವೆ ಎಂದು ಸೇವ್ ಮಹದಾಯಿ ಸೇವ್ ಗೋವಾ ಸಮಿತಿಯ ಪ್ರಶಾಂತ್ ನಾಯ್ಕ್ ಕಿಡಿ ಕಾರಿದ್ದಾರೆ.   ಮಡಗಾಂವ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಇವೆಲ್ಲದರ ಸಂಚು ರೂಪಿಸಿದ್ದು, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರುಸಾಥೀದಾರರಾಗಿದ್ದಾರೆ. ಮಹದಾಯಿ ಮಾರಾಟ ಮಾಡಲು ಮುಂದಾಗಿರುವವರು ತಮ್ಮ ಘನತೆಯ ಜತೆಗೆ ಗೋವಾವನ್ನು ಅಪಾಯಕ್ಕೆ …

Read More »

ಶೇ. 100 ಅಂಕ ಗಳಿಸಿದ ಅನುಪಮಾ ಹಿರೇಹೊಳಿ ರಾಜ್ಯಕ್ಕೆ ಪ್ರಥಮ

ಸವದತ್ತಿ: ಸಾಧನೆಗೆ ಬಡತನ ಅಡ್ಡಿಯಲ್ಲ. ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ದೃಢ ಆತ್ಮವಿಶ್ವಾಸ ಇದ್ದರೆ ಏನನ್ನಾದರೂ ಸಾಧಿಸಬಹುದೆಂಬುವದಕ್ಕೆ ಇಲ್ಲಿನ ಅಕ್ಕಿ ಓಣಿಯ ಅನುಪಮಾ ಹಿರೇಹೊಳಿ ಸಾಕ್ಷಿಯಾಗಿದ್ದಾಳೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮುಂದಿನ ಪೀಳಿಗೆಗೆ ಮಾದರಿಯಾಗಿದ್ದಾಳೆ. ಬಡ ಕುಟುಂಬದಲ್ಲಿ ಜನಿಸಿದ ಈಕೆ ಎರಡು ವರ್ಷದ ಹಿಂದೆ ಅನಾರೋಗ್ಯದ ಕಾರಣ ತಂದೆ ಶ್ರೀಶೈಲ ಅವರನ್ನು ಕಳೆದುಕೊಂಡಳು. ತಾಯಿ ರಾಜೇಶ್ವರಿ ಮಗಳ ವಿದ್ಯಾಭ್ಯಾಸಕ್ಕೆ …

Read More »

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ: ಡಾ.ಎಂ.ಬಿ.ಬೋರಲಿಂಗಯ್ಯ

ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು. ಕೇಂದ್ರ ಮೀಸಲು ಪಡೆ, ಪೊಲೀಸ್ ಮೀಸಲು ಪಡೆ, ಗೃಹರಕ್ಷಕ ದಳ ಹಾಗೂ ನಾಗರಿಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. 4803 ನಾಗರಿಕ ಪೊಲೀಸ್, 1354 ಗೃಹರಕ್ಷಕ ದಳ ಸಿಬ್ಬಂದಿ, 19 ಕೆ.ಎಸ್.ಆರ್.ಪಿ. ತುಕಡಿ, 249 ಸಶಸ್ತ್ರ ಮೀಸಲು ಪಡೆ ಹಾಗೂ 53 ಕೇಂದ್ರೀಯ …

Read More »

ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ:ಬಾಲಚಂದ್ರ ಜಾರಕಿಹೊಳಿ

ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ ೨ನೇ ಸ್ಥಾನದವರ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಮೊದಲ ಸ್ಥಾನದಲ್ಲಿದ್ದವರಿಗೆ ಮತ್ತೊಮ್ಮೆ …

Read More »

ಹೈವೋಲ್ಟೇಜ್ ಬಹಿರಂಗ ಪ್ರಚಾರ ಇಂದೇ ಕೊನೆ,

ಮೇ 10 ರಂದು ನಡೆಯಲಿರುವ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ, ರೋಡ್‌ ಶೋ ಹಾಗೂ ಸಮಾವೇಶಗಳ ಮೂಲಕ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ನಡುವೆ ಹೈವೋಲ್ಟೇಜ್ ಮತಪ್ರಚಾರ ಇಂದು ಅಂತ್ಯಗೊಳ್ಳಲಿದೆ. ರಾಜ್ಯದ ಮೂರು ಪ್ರಮುಖ ರಾಜಕೀಯ …

Read More »

ವಿವಿದೆಡೆ ಮಾದಕವಸ್ತು ದಂಧೆಯಲ್ಲಿ ತೊಡಗಿದ್ದ ಸುಮಾರು 19 ಮಂದಿ ಮಾದಕ ದಂಧೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರು : ಮಾದಕ ದಂಧೆಕೋರರ ವಿರುದ್ಧ ಕಳೆದ ಒಂದು ತಿಂಗಳಿನಿಂದ ವಿಶೇಷ ಕಾರ್ಯಾಚರಣೆ ಕೈಗೊಂಡು ನೈಜೀರಿಯಾದ ಇಬ್ಬರು, ಐವರಿಕೋಸ್ಟ್ ದೇಶದ ಒಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದ ಓರ್ವ ಮತ್ತು ಬೆಂಗಳೂರಿನ ಇಬ್ಬರು ಡ್ರಗ್ ಪೆಡ್ಲರ್‌ಗಳ ಸಹಿತ ಒಟ್ಟು 19 ಜನ ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 7,06,00,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 6 ಕೆ.ಜಿ ಹ್ಯಾಶಿಶ್ ಆಯಿಲ್, 51.89 ಕೆ.ಜಿ …

Read More »

ವಿಧಾನಸಭಾ ಚುನಾವಣೆ: ಭದ್ರತೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಹಿರಂಗ ಪ್ರಚಾರಕ್ಕೆ ಇನ್ನೂ‌ ಕೆಲವೇ ಗಂಟೆಗಳು ಬಾಕಿಯಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಂತಿಮ ಹಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮೇ 10ರಂದು 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಶಕವಾಗಿ ಚುನಾವಣೆ ನಡೆಸಲು ಹಾಗೂ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮ ಕೈಗೊಂಡಿರುವ ರಾಜ್ಯ ಪೊಲೀಸ್ ಇಲಾಖೆಯು ಕೇಂದ್ರಿಯ ಪಡೆ, ಅನ್ಯ ರಾಜ್ಯಗಳ ಪೊಲೀಸರು ಸೇರಿದಂತೆ‌ ಒಟ್ಟು 1.56 ಲಕ್ಷ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿದೆ. …

Read More »

ಯುವ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಕಲಬುರಗಿ : ಯುವ ಪ್ರೇಮಿಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಮಲಾಪುರ್ ತಾಲೂಕಿನ ಡೊಂಗರಗಾಂವ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಕ್ಷತಾ ಭರಣಿ (19) ಹಾಗೂ ಪಾಂಡುರಂಗ್ ಕಿಣ್ಣಿ(20) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಯುವ ಪ್ರೇಮಿಗಳ ಸಾವಿಗೆ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಕುಟುಂಬಸ್ಥರ ವಿರೋಧದಿಂದ ಸಾವಿಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. …

Read More »