Breaking News
Home / ರಾಜ್ಯ (page 551)

ರಾಜ್ಯ

ಎಲೆಕ್ಷನ್, ಸೆಲೆಕ್ಷನ್, ಕರೆಕ್ಷನ್ ನಮ್ಮ ಸೂತ್ರ.. 110 ಕ್ಷೇತ್ರದಲ್ಲಿ ಪ್ರಜಾಕೀಯ ಸ್ಪರ್ಧೆ – ಉಪೇಂದ್ರ ಮಾಹಿತಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ರಂಗೇರಿದೆ. ಮೇ 10ರಂದು ಮತದಾನ ನಡೆಯಲಿದ್ದು, ರಾಜ್ಯದ ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ರಾಜ್ಯ ಚುನಾವಣೆಗೆ ಇನ್ನು 9 ದಿನ ಮಾತ್ರ ಬಾಕಿ ಇದೆ. ಈಗ ಬುದ್ಧಿವಂತ ನಟ ಹಾಗು ನಿರ್ದೇಶಕ ಉಪೇಂದ್ರ ತಮ್ಮ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಜೊತೆ ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ಮಾಧ್ಯಮಗೋಷ್ಟಿ ನಡೆಸಿದರು. ತಮ್ಮ ಉತ್ತಮ ಪ್ರಜಾಕೀಯ ಪಕ್ಷದ 110 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳನ್ನು ಪರಿಚಯಿಸಿದರು. ಪಕ್ಷವು …

Read More »

ರಾಮರಾಜ್ಯ ಕಟ್ಟಲು ರಾವಣನಿಗೆ ಬಿಜೆಪಿಯ ಟಿಕೆಟ್ ಎಂದು ಕಿಡಿ:ವಿವಾದ ಸೃಷ್ಟಿಸಿದ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ಎಲ್ಲೆ ಮೀರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರುವ ಬರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿವಾದ ಸೃಷ್ಟಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ ಖರ್ಗೆ, ಪ್ರಧಾನಿ ಮೋದಿ ಚುನಾವಣಾ ಪ್ರಚಾರ, ಬಂಜಾರಾ ಸಮುದಾಯದ ಮೀಸಲಾತಿ ವಿಚಾರದ ಬಗ್ಗೆ ಭಾಷಣ ಕುರಿತು ಪ್ರಸ್ತಾಪಿಸುತ್ತಾ ಪ್ರಧಾನಿ ಮೋದಿಯವರನ್ನು ನಾಲಾಯಕ್ ಎಂದು …

Read More »

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಉಚ್ಛಾಟನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಪ್ರಮುಖ ರಾಜಕೀಯ ಪಕ್ಷಗಳಿಂದ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ನಡುವೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿಯನ್ನು ಉಚ್ಛಾಟನೆ ಮಾಡಲಾಗಿದೆ. ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಆದೇಶ ಹೊರಡಿಸಿದೆ. ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ರಾಮಕೃಷ್ಣ ವಿರುದ್ಧ ವಿಪಕ್ಷ ನಾಯಕ …

Read More »

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿನ ಮಹತ್ವದ ಘೋಷಣೆ: ಸಿರಿಧಾನ್ಯ ಉತ್ಪಾದನೆಗೆ ಆದ್ಯತೆ ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ 5ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ BPL ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ಬಿಪಿಎಲ್ ಕುಟುಂಬಕ್ಕೆ ಉಚಿತ 3 …

Read More »

ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತ,ಗೃಹ ಬಳಕೆಯ ಅಡುಗೆ ಅನಿಲದಲ್ಲಿ ಪ್ರಸ್ತುತ ಯಾವುದೇ ಬದಲಾವಣೆಯಾಗಿಲ್ಲ.

ನವದೆಹಲಿ: ಕಮರ್ಷಿಯಲ್ ಸಿಲಿಂಡರ್ ದರ ಕಡಿಮೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರ ಕಡಿಮೆಯಾಗಿದ್ದು, ಹೊಸ ದರ ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ 171.50 ರೂ ನಷ್ಟು ಕಡಿತಗೊಳಿಸಲಾಗಿದೆ. ಇದು 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ಗೆ ಮಾತ್ರ ಅನ್ವಯವಾಗಲಿದೆ. 14.2 ಕೆಜಿಯ ಗೃಹ ಬಳಕೆಯ ಅಡುಗೆ ಅನಿಲದಲ್ಲಿ …

Read More »

ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ.

ಬೆಳಗಾವಿ: ಬೆಳಗಾವಿ ಗ್ರಾಮೀಣದಲ್ಲಿ ಏರ್ಪಡಿಸಲಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ದಿಢೀರ್ ರದ್ದಾಗಿದೆ. ನಟ ಕಿಚ್ಚ ಸುದೀಪ್ ಇಂದು ಬೆಳಗಾವಿಯ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಬೆಳಗಾವಿ ಗ್ರಾಮೀಣದ ರೋಡ್ ಶೋ ಕೊನೇ ಕ್ಷಣದಲ್ಲಿ ರದ್ದಾಗಿದೆ. ತಾರಿಹಾಳ ಗ್ರಾಮದಲ್ಲಿ ಯುವಕನ ಕೊಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾರಿಹಾಳ ಗ್ರಾಮದಲ್ಲಿ ನಿಗದಿಯಾಗಿದ್ದ ಕಿಚ್ಚ ಸುದೀಪ್ ರೋಡ್ ಶೋ ರದ್ದು ಮಾಡಲಾಗಿದೆ. ಬಿಜೆಪಿ …

Read More »

ಮೂರು ವರ್ಷದ ಬಾಲಕ 1 ರೂಪಾಯಿ ಸಿಹಿ ತಿನಿಸಿಗೆ ಬಲಿ.!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಮಕ್ಕಳ ಸಿಹಿ ತಿನಿಸು ಇರುವ ಹೆಬ್ಬೆರೆಳು ಗಾತ್ರದ ಗಾಜಿನ ಬಾಟಲಿಯು ಗಂಟಲಲ್ಲಿ‌ ಸಿಲುಕಿಕೊಂಡು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ 8 ನೇ ವಾರ್ಡಿನ ಮದೀನಾ ಗಲ್ಲಿಯ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಸಾವನ್ನಪ್ಪಿದ ಮಗು ಎಂದು ತಿಳಿದು ಬಂದಿದೆ. ಬಾಲಕ ಮಹ್ಮದ್ 1 ಅಂಗಡಿಯಲ್ಲಿ ಸಿಹಿ ತಿನಿಸಿದ್ದ ಬಾಟಲಿ ಕೊಂಡುಕೊಂಡಿದ್ದಾನೆ. ಅದರ ಮುಚ್ಚಳವನ್ನು ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ …

Read More »

ಹಳ್ಳ ದಾಟುತ್ತಿದ್ದ ಒಂದೇ ಕುಟುಂಬದ ಮೂವರು ನೀರುಪಾಲು.!

ಬೀದರ್ : ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಹಳ್ಳ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋದ ಘಟನೆ ನಡೆದಿದೆ. ಸುನಂಧಾ ಸಂಗಪ್ಪ ಲದ್ದೆ, ಮಗ ಸುಮಿತ್​ ಹಾಗೂ ಮಗಳು ಐಶ್ವರ್ಯ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಗಪ್ಪ ಲದ್ದೆ ಜೊತೆ ಹೊಲಕ್ಕೆ ಹೋಗಿ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಹಳ್ಳದಲ್ಲಿ ಏಕಾಏಕಿ ನೀರು ಹೆಚ್ಚಾಗಿದ್ದರಿಂದ ತಾಯಿ, ಮಕ್ಕಳು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸಂಗಪ್ಪ …

Read More »

ಬೆಳಗಾವಿ ಉತ್ತರಕ್ಕೇ ಯಾರಾಗ್ತಾರೆ ಅಧಿಪತಿ…?

ಬೆಳಗಾವಿ: ಸುಶಿಕ್ಷಿತ ಮತದಾರರೇ ಹೆಚ್ಚಿರುವ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರಯು ಸದ್ಯ ಬಿಜೆಪಿ‌ ವಶದಲ್ಲಿದ್ದು, ಕ್ಷೇತ್ರ ಮತ್ತೆ ವಶಕ್ಕೆ‌ ಪಡೆಯಲು ಕೇಸರಿ ಪಡೆ‌ ತೀವ್ರ ಕಸರತ್ತು ನಡೆಸುತ್ತಿದೆ. ಇದಕ್ಕೆ ತಡೆಯೊಡ್ಡಲು ಕಾಂಗ್ರೆಸ್, ಎಂಇಎಸ್ ಕೂಡ ರಣತಂತ್ರ ಹೆಣೆಯುತ್ತಿವೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ‌ ಬದಲು ಡಾ. ರವಿ ಪಾಟೀಲ್​ಗೆ ಬಿಜೆಪಿ ಟಿಕೆಟ್ ನೀಡಿದ್ದು, ಕಾಂಗ್ರೆಸ್​ನಿಂದ ಮಾಜಿ ಶಾಸಕ‌ ಫಿರೋಜ್ ಸೇಠ್ ಬದಲಾಗಿ ಅವರ ಸಹೋದರ‌ ರಾಜು ಸೇಠ್ …

Read More »

ಕಾಂಗ್ರೆಸ್ ಅಭ್ಯರ್ಥಿ ಮಹೇಂದ್ರ ತಮ್ಮಣ್ಣವರ್ ಪರ ಪ್ರಿಯಾಂಗಾ ಗಾಂಧಿ ಮತ ಯಾಚಿಸಿದರು.

ಚಿಕ್ಕೋಡಿ(ಬೆಳಗಾವಿ): ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ಕುಡಚಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಹೇಂದ್ರ ತಮ್ಮಣ್ಣವರ್ ಪರ ಭರ್ಜರಿ ರೋಡ್ ಶೋ ನಡೆಸಿ ಮಾತ ಯಾಚಿಸಿದರು. ಹಾರುಗೇರಿ ಪಟ್ಟಣದ ಅಥಣಿ-ಗೋಕಾಕ್ ರಸ್ತೆಯಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರೊಂದಿಗೆ ಪ್ರಿಯಾಂಕಾ ರೋಡ್ ಶೋ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಬೆಲೆ ಏರಿಕೆ ಯಾರು‌ ಮಾಡಿದ್ರು?, ರಾಜ್ಯವನ್ನು ಲೂಟಿ ಯಾರು ಮಾಡಿದರು? ಜಿಎಸ್​ಟಿ ಹೇರಿ ನಿಮ್ಮ ದುಡ್ಡನ್ನು …

Read More »