ಕಿತ್ತೂರು: ನಾವೆಲ್ಲರೂ ಭಾರತವನ್ನು ಪ್ರೀತಿಸಬೇಕು. ದೇಶದ ಪ್ರತಿಯೊಬ್ಬ ಪ್ರಜೆ ಯಾವುದೇ ಜಾತಿ, ಧರ್ಮ, ಭಾಷೆಯವರಾಗಿದ್ದರೂ ಪ್ರೀತಿಸಬೇಕು. ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೇ ಹೊರತು ದ್ವೇಷ ಮಾಡಬಾರದು. ದ್ವೇಷದ ಬೀಜ ಬಿತ್ತುವವರನ್ನು ವಿರೋಧಿಸುವುದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿ ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ಕಿತ್ತೂರು ಉತ್ಸವ ಮತ್ತು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆಯ …
Read More »ಬೇಲೆಕೇರಿ ಅದಿರು; ಸತೀಶ್ ಸೈಲ್ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರರ ಶಿಕ್ಷೆಯ ಪ್ರಮಾಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರಕ್ಕೆ ಕಾಯ್ದಿರಿಸಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ 7 ಮಂದಿ ದೋಷಿಗಳು ಎಂದು ನ್ಯಾ| ಸಂತೋಷ್ ಗಜಾನನ ಭಟ್ ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ನ್ಯಾಯಾಲಯವು ಹೇಳಿತ್ತು. ಶುಕ್ರವಾರ ಮತ್ತೆ ವಾದ-ಪ್ರತಿವಾದ ನಡೆದ …
Read More »ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು
ರಬಕವಿ-ಬನಹಟ್ಟಿ: ತಾಲೂಕಿನ ಜಗದಾಳ ಗ್ರಾಮದ ರೈತರಾದ ಶ್ರೀನಾಥ ದೇವರಾಜ ರಾಠಿ ನಾಲ್ಕು ಎಕರೆ ತೋಟದಲ್ಲಿ ಬೆಳೆದ ಬಾಳೆ ಹಣ್ಣುಗಳು ಇಂದು ಇರಾನ ದೇಶಕ್ಕೆ ರಫ್ತಾಗುತ್ತಿವೆ. ಮುಂಬೈನಿಂದ ಬಂದ ಕಾರ್ಮಿಕರು ಬಾಳೆ ಹಣ್ಣಿನ ಗೊನೆಗಳನ್ನು ಕಡಿದು ತಂದು ಅವುಗಳನ್ನು ಶುಚಿಗೊಳಿಸಿ, ನಂತರ ಪ್ಲಾಸ್ಟಿಕ್ ಪೇಪರ್ ನಲ್ಲಿ ಪ್ಯಾಕ್ ಮಾಡಿ ವಾಹನಕ್ಕೆ ತುಂಬುವ ಕಾರ್ಯ ಮಾಡುತ್ತಿರುವುದು ಕಂಡು ಬಂತು. ದೇವರಾಜ ರಾಠಿಯವರ ಮಗ ಶ್ರೀನಾಥ ಕೃಷಿಯಲ್ಲಿ ಬಿ ಎಸ್ ಸಿ ಪದವಿಧರರು. ತಂದೆಯ …
Read More »ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ
ಪಣಜಿ:ಗೋವಾದ ಬಿಚೋಲಿ ತಾಲೂಕಿನ ಮಯೆಮ್ ನ ಹಳದಣವಾಡಿಯ 65 ವರ್ಷದ ಸುಧಾ ಚಂದ್ರಕಾಂತ ಚೋಡಣಕರ್ ಈ ವಯೋವೃದ್ಧ ಮಹಿಳೆ ಬಿಚೋಲಿ ಮಾರುಕಟ್ಟೆಯಲ್ಲಿ ಗುರುವಾರ (ಅ.24) ಇದ್ದಕ್ಕಿದ್ದತೆಯೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಈಕೆ ಹೃದಯಾಘಾತದಿಂದ ಸಾವನ್ನಪ್ಪಿರುವುದೆಂದು ಬಹುತೇಕ ಖಚಿತವಾಗಿದೆ. ಪಂಡರಪುರಕ್ಕೆ ತೆರಳಿ ವಿಠುರಾಯನ ದರ್ಶನ ಯಾತ್ರೆಗೆ ತೆರಳುವ ಸಿದ್ಧತೆಯಲ್ಲಿದ್ದ ವಯೋವೃದ್ದೆಯ ಕನಸು ಕೊನೆಗೂ ನನಸಾಗಲೇ ಇಲ್ಲ. ಸುಧಾ ಚೋಡಣಕರ್ ಈಕೆಯ ಪಾರ್ಥಿವ ಶರೀರವನ್ನು ಗುರುವಾರ ಸಂಜೆ ಅಂತ್ಯ …
Read More »ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಅಸ್ಪೃಶ್ಯತೆ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಕೋರ್ಟು ತೀರ್ಪು ಪ್ರಕರಣದ ಬೆನ್ನಲ್ಲೇ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತನಾದ ಅಪರಾಧಿಯನ್ನು ರಾಮಣ್ಣ ತಂದೆ ಲಕ್ಷ್ಮಣ ಭೋವಿ (30) ಎಂದು ಗುರುತಿಸಲಾಗಿದೆ. ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಪ್ರಕರಣದಲ್ಲಿ ರಾಮಣ್ಣ ಭೋವಿ ಮೇಲೂ ಆರೋಪ ಕೇಳಿ ಬಂದಿತ್ತು. ಈತನೂ ಸೇರಿದಂತೆ 117 ಜನರ ಮೇಲೆ …
Read More »ದಲಿತರ ಮೇಲೆ ದೌರ್ಜನ್ಯ ಪ್ರಕರಣ; ಒಂದೇ ಗ್ರಾಮದ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ! ಸುದ್ದಿ ತಿಳಿಯುತ್ತಿದಂತೆ ಓರ್ವ ಸಾವು!
ಕೊಪ್ಪಳ: ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ (Assault Case) ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಪ್ಪಳ ಜಿಲ್ಲೆಯ (Koppala) ಗಂಗಾವತಿ ತಾಲೂಕಿನ (Gangavathi) ಮರಕುಂಬಿ ಗ್ರಾಮದ ನಿವಾಸಿಗಳಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ನೀಡಿ ಆದೇಶ ನೀಡಿದೆ. 2014ರ ಆಗಸ್ಟ್ 28 ರಂದು ಘಟನೆ ನಡೆದಿತ್ತು. ಮಂಜುನಾಥ್ ಎನ್ನುವವರಿಗೆ ನಾಲ್ವರು ಯುವಕರು ಹಲ್ಲೆ ಮಾಡಿದ್ದರು. ಥಿಯೇಟರ್ನಿಂದ (Cinema Theatre) ಊರಿಗೆ ತೆರಳಿದ್ದ ಮಂಜುನಾಥ್ ಊರಿವರಿಗೆ ವಿಷಯ ಮುಟ್ಟಿಸಿದ್ದರು. …
Read More »ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಗೃಹ ಆರೋಗ್ಯ ಯೋಜನೆ’ಯಡಿ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ. ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯು …
Read More »ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಎಂಇಎಸ್ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕರಾಳ ದಿನಾಚರಣೆ ಆಚರಿಸಲು ಅನುಮತಿ ಕೋರಿ ಬರುವ ಎಂಇಎಸ್ ನಾಯಕರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಈ ಬಾರಿ ಯಾವುದೇ ಕಾರಣಕ್ಕೂ ಕದ್ದು ಮುಚ್ಚಿ ಕರಾಳ ದಿನಾಚರಣೆಗೆ ಅನುಮತಿ ನೀಡಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
Read More »ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ
ರಾಮನಗರ: ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಯೋಗೇಶ್ವರ್ ಕೊನೆ ಕ್ಷಣದಲ್ಲಿ ಕೈ ಹಿಡಿದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಮೈತ್ರಿ ಪಕ್ಷದ ನಾಯಕರು ಘೋಷಣೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಶಕ್ತಿಪ್ರದರ್ಶನಕ್ಕೆ ಜೆಡಿಎಸ್ ಸಿದ್ಧತೆ ಮಾಡಿಕೊಂಡಿದೆ. ಕೊನೆ ಕ್ಷಣದವರೆಗೂ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಜಯಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತಿತ್ತು. ಇಬ್ಬರೂ ಚುನಾವಣಾ ಧಿಕಾರಿ ಕಚೇರಿಯಿಂದ ನಾಮಪತ್ರ …
Read More »ಅಧಿಕಾರಿಗಳ ಗೈರು; ಗ್ರಾಮಸಭೆ ಮುಂದೂಡಿಕೆ
ಯಮಕನಮರಡಿ: ಗ್ರಾಮಸಭೆಗೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಲಿಖಿತವಾಗಿ ಪತ್ರ ನೀಡಿದರೂ ಗ್ರಾಮಸಭೆಗೆ ಬರದೇ ಇರುವುದು ದುರಾದೃಷ್ಟದ ಸಂಗತಿ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವಂತಹ ಗ್ರಾಮಸಭೆಗೆ ನೋಡಲ್ ಅಧಿಕಾರಿಗಳು ಗೈರು ಇರುವುದರಿಂದ ಸಭೆ ಮುಂದೂಡಿ ಎಂದು ಯಮಕನಮರಡಿ ವಾರ್ಡ್ 1 ಗ್ರಾ. ಪಂ ಸದಸ್ಯ ರವಿ ಹಂಜಿ ಆಗ್ರಹಿಸಿದರು. ಯಮಕನಮರಡಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಮಾತನಾಡಿದ ಅವರು, ವಿವಿಧ ಇಲಾಖೆಯ ಅಧಿಕಾರಿಗಳು ಇಲ್ಲದೇ ಸಭೆ ಮಾಡುವುದು ತಪ್ಪು. ಸಮಸ್ಯೆಗಳಿಗೆ ಆಯಾ ಇಲಾಖೆಯ …
Read More »
Laxmi News 24×7