Breaking News

ರಾಜ್ಯ

ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.   ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು. …

Read More »

ಯತ್ನಾಳ್ ವಿರುದ್ಧ ಕೇಸ್ ದಾಖಲು

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಇತರರ ವಿರುದ್ಧ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಮಹಾನಗರ ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. …

Read More »

3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್’ಗೆ ಗೆಲುವು: ಡಿಕೆ.ಶಿವಕುಮಾರ್ ವಿಶ್ವಾಸ

ಬೆಂಗಳೂರು: ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ಕಾಂಗ್ರೆಸ್ ಸಿದ್ಧವಿದ್ದು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವ ಸಾಧಿಸುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದರು.   ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಇದೇ ವೇಳೆ ಚನ್ನಪಟ್ಟಣ ವಿಧಾನಸಭಾ …

Read More »

ನ.13ರಂದು ಉಪ ಚುನಾವಣೆ: ಮೂವರು ಘಟಾನುಘಟಿಗಳಿಗೆ ಸತ್ವಪರೀಕ್ಷೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವ್ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಸುವುದಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಪ್ರಕಟಿಸಿದೆ. ಚುನಾವಣಾ ಫಲಿತಾಂಶವು ನವೆಂಬರ್ 23 ರಂದು ಪ್ರಕಟವಾಗಲಿದೆ. ಉಪಚುನಾವಣೆಗಳ ಫಲಿತಾಂಶವು ವಿಧಾನಸಭೆಯಲ್ಲಿನ ಸಮೀಕರಣಗಳನ್ನು ಬದಲಾಯಿಸುವುದಿಲ್ಲ ಅಥವಾ ಸರ್ಕಾರದ ಮೇಲೆ ನೇರ ಪ್ರಭಾವ ಬೀರುವುದಿಲ್ಲ, ಆದರೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೂರು ಪಕ್ಷಗಳ ಪ್ರಮುಖ ನಾಯಕರಿಗೆ ಈ ಸ್ಥಾನಗಳನ್ನು ಗೆಲ್ಲುವುದು …

Read More »

ಕೊನೆಗೂ ಜೈಲಿನಿಂದ ಹೊರಬಿದ್ದ ಶಾಸಕ ಮುನಿರತ್ನ

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುಪಾಲಾಗಿದ್ದ ಶಾಸಕ ಮುನಿರತ್ನ ನಾಯ್ಡು ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದೀಗ ಇಂದು ಬಿಡುಗಡೆಯಾಗಿದ್ದಾರೆ. ಮಂಗಳವಾರ ಜಾಮೀನು ಅರ್ಜಿ ತೀರ್ಪು ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.   ಅದರಂತೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಅವರು ಬಿಡುಗಡೆಯಾದರು. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು …

Read More »

ಇದೆಲ್ಲಾ ಇ.ಡಿ ಪಿತೂರಿ, ನನ್ನದೇನೂ ತಪ್ಪಿಲ್ಲ ಎಂದ ನಾಗೇಂದ್ರ.!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ಹಗರಣ ಪ್ರಕರಣಕ್ಕೆ ಸಂಬಂಧಸಿದಂತೆ ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಹೊರಬಂದ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿದೆ ಆ ಸರ್ಕಾರವನ್ನ ಅಸ್ಥಿರ ಗೊಳಿಸುವ ಷಡ್ಯಂತ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.   ಈ ಬಗ್ಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣದಲ್ಲಿ ಏನೂ ಪಾತ್ರವಿಲ್ಲದಿದ್ದರೂ ಏಕಾಏಕಿ ಬಂಧನ ಮಾಡಿ ಮೂರು ತಿಂಗಳಿಂದ ಇಡಿ ನನಗೆ ಸಾಕಷ್ಟು ಕಿರುಕುಳ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ …

Read More »

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ

ಮುಡಾ ನಿವೇಶನ ಹಂಚಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಮಧ್ಯೆ ಮುಡಾ ಹಗರಣ ಅಧ್ಯಕ್ಷ ಮರಿಗೌಡ ತಲೆದಂಡ ಮಾತು ಕೇಳಿಬಂದಿತ್ತು. ಇದೀಗ ಸಿಎಂ ಸೂಚನೆಯಂತೆ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ಇಂದು ರಾಜೀನಾಮೆ ನೀಡಿದ್ದಾರೆ. ಬೆಂಗಳೂರು, ಅಕ್ಟೋಬರ್ 16: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. …

Read More »

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ.. ದಾರುಣ ಸಾವು

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) ಮೃತ ಮಗು. ಭಾರಿ ಮಳೆ ಕಾರಣಕ್ಕೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಪಾಲಿಕೆಯವರು ಚರಂಡಿ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಮಗು ಚರಂಡಿ ಬಳಿ ಹೋಗಿ ಆಕಸ್ಮಿಕವಾಗಿ ಚಂಡಿಗೆ ಬಿದ್ದು ಸಾವನ್ನಪ್ಪಿದೆ. ದುರಂತಕ್ಕೆ ಪಾಲಿಕೆ ಅಧಿಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ. …

Read More »

ಕೆಎಚ್‌ಡಿಸಿ ಅವ್ಯವಹಾರ ತನಿಖೆ ನಡೆಸಿ: ಶಿವಲಿಂಗ ಟಿರಕಿ

ಗೋಕಾಕ: ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ (ಕೆಎಚ್‌ಡಿಸಿ)ದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು. ನೇಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬನಹಟ್ಟಿಯಿಂದ ಹುಬ್ಬಳ್ಳಿವರೆಗೆ ಹಮ್ಮಿಕೊಂಡ ಸ್ವಾಭಿಮಾನಿ ನೇಕಾರರ ಪಾದಯಾತ್ರೆಯ ನೇತ್ರತ್ವ ವಹಿಸಿ, ಇಲ್ಲಿನ ತಹಶೀಲ್ದಾರ್‌ ಕಚೇರಿಗೆ ಸೋಮವಾರ ಮನವಿ …

Read More »

ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ

ಖಾನಾಪುರ: ಪಟ್ಟಣ ಹೊರವಲಯದ ಶಾಂತಿನಿಕೇತನ ಪಿಯು ಕಾಲೇಜಿನ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು. ಆನಂತರ ಮಾತನಾಡಿದ ಅವರು, ‘ಈ ಭಾಗದ ಗ್ರಾಮೀಣ ಕ್ರೀಡೆಯಾದ ಕುಸ್ತಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದ್ದೇನೆ’ ಎಂದರು.   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ‘ಶಾಂತಿನಿಕೇತನ ಕಾಲೇಜು ಹಾಗೂ ತೋಪಿನಕಟ್ಟಿ …

Read More »