Breaking News

ರಾಜ್ಯ

ಕರ್ನಾಟಕ ಸೇರಿ ಈ 7 ರಾಜ್ಯಗಳಲ್ಲಿ ಇಂದು ಭಾರೀ ಮಳೆ

ಬೆಂಗಳೂರು : ಕರ್ನಾಟ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಅಂದರೆ ಅಕ್ಟೋಬರ್ 12 ರಂದು ಭಾರೀ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಭಾರೀ ಮಳೆ ಇತ್ತೀಚಿನ ಮಾಹಿತಿ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ …

Read More »

43 ಕ್ರಿಮಿನಲ್ ಕೇಸ್‌ ವಾಪಸ್ ಗೆ ಸಚಿವ ಸಂಪುಟ ಸಭೆ ನಿರ್ಧಾರ: ಎಚ್‌.ಕೆ. ಪಾಟೀಲ

ಬೆಂಗಳೂರು: ರಾಜ್ಯದ ವಿವಿಧ ಠಾಣೆಗಳಲ್ಲಿ ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಕೆಲವು ಸ್ಥಳೀಯ ರಾಜಕೀಯ ಮುಖಂಡರ ವಿರುದ್ಧ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಸರಕಾರ ಹಿಂಪಡೆದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ 60 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪೈಕಿ ಕೂಲಂಕಷವಾಗಿ ಚರ್ಚಿಸಿ 43 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ …

Read More »

ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

ಕುಂದಾಪುರ: ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಆರಂಭವಾಗಲಿದ್ದು, ಆ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ ರೇಣಿಗುಂಟ ತಿರುಪತಿ ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರ ಆರಂಭಗೊಳ್ಳಲಿದೆ. ಈ ರೈಲು ಕೊಯಮತ್ತೂರು ಮೂಲಕವೂ ಓಡಲಿರುವುದರಿಂದ ಸದ್ಗುರು ಜಗ್ಗಿ ವಾಸುದೇವರ ಈಶ ಯೋಗ ಕೇಂದ್ರ ಮತ್ತು ಆದಿ ಯೋಗಿ ದರ್ಶನಕ್ಕೂ ಸಹಾಯವಾಗಲಿದೆ. ವೇಳಾಪಟ್ಟಿ ಮುರುಡೇಶ್ವರದಿಂದ ಬುಧವಾರ, ಶನಿವಾರ, ತಿರುಪತಿಯಿಂದ ಮಂಗಳವಾರ, ಶುಕ್ರವಾರ ಎಂದು ವಾರಕ್ಕೆರಡು ದಿನ …

Read More »

ವಿನಯ್‌ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಹಾಗೂ ಅತ್ಯಾಚಾರ ಸಂತ್ರಸ್ತೆ, ಖಾಸಗಿ ಸುದ್ದಿ ಸಂಸ್ಥೆಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ ವಿರುದ್ಧ ವಿನಯ್‌ ಕುಲಕರ್ಣಿ ದಾಖಲಿಸಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.   ಕುಲಕರ್ಣಿ ಬೆಂಗಳೂರು, ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಹಾವೇರಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ಅ. …

Read More »

ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

ವಿಜಯನಗರ(ಹೊಸಪೇಟೆ): ಯುವಕ ಹಾಗೂ ಯುವತಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಹೂವಿನಹಡಗಲಿ‌ ತಾಲೂಕಿನ ಮೈಲಾರದಲ್ಲಿ ಅ.11ರ ಶುಕ್ರವಾರ ನಡೆದಿದೆ. ಮೈಲಾರ ಗ್ರಾಮದ ನದಿ ತೀರದ ಮರವೊಂದಕ್ಕೆ ಒಂದೇ ಹಗ್ಗದಲ್ಲಿ‌ ಕೊರಳಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರಿಬ್ಬರೂ ಅ.10ರ ಗುರುವಾರ ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿಟಿ ನೀಡಿ ದೇವರ ದರ್ಶನ ಪಡೆದಿದ್ದರು. ಯುವಕನ ಶರ್ಟ್ ಜೇಬಿನಲ್ಲಿ ದೇವರ‌ ದರ್ಶನದ ಸಾಮಾನ್ಯ ಚೀಟಿ ಸಿಕ್ಕಿದೆ. ಬೆಳಿಗ್ಗೆಯಿಂದ ಸಂಜೆವರೆಗೆ ಗ್ರಾಮ ಹಾಗೂ ನದಿ ತೀರದಲ್ಲಿ …

Read More »

ತಾಯಿ ಚಾಮುಂಡೇಶ್ವರಿ ಕೃಪೆ ನನ್ನ ಮೇಲಿದೆ, ಅದಕ್ಕೆ ದೀರ್ಘಕಾಲದಿಂದ ರಾಜಕೀಯದಲ್ಲಿದ್ದೇನೆ:ಸಿಎಂ

ಮೈಸೂರು : ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ …

Read More »

ಗಣಿಗಾರಿಕೆ ಅಕ್ರಮಗಳ ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಬೆಂಗಳೂರು, ಅಕ್ಟೋಬರ್​ 10: ಗಣಿಗಾರಿಕೆ ಅಕ್ರಮಗಳ ಕುರಿತ ತನಿಖೆಯ ಎಸ್‌ಐಟಿ ಕಾರ್ಯಾವಧಿಯನ್ನು ಜುಲೈ 1ರಿಂದ ಒಂದು ವರ್ಷ ವಿಸ್ತರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ(Siddaramaiah)ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌​ಕೆ ಪಾಟೀಲ್​, ಗಣಿಗಾರಿಕೆ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಇದೀಗ ಅದರ ಅವಧಿ …

Read More »

ವಾರಾಂತ್ಯದ ರಜೆ: ರಸ್ತೆಗಳಲ್ಲಿ ದಟ್ಟಣೆ

ಬೆಂಗಳೂರು: ದಸರಾ ಮಹೋತ್ಸವ ಸಂದರ್ಭದಲ್ಲಿ ವಾರಾಂತ್ಯ ಮೂರು ದಿನಗಳು ರಜೆ ಇರುವುದರಿಂದ ಪ್ರವಾಸ, ಧಾರ್ಮಿಕ ಸ್ಥಳ ಹಾಗೂ ಊರಿಗೆ ತೆರಳುವರ ಸಂಖ್ಯೆ ಹೆಚ್ಚಾಗಿದ್ದು, ನಗರದ ಬಸ್‌ ನಿಲ್ದಾಣಗಳೆಲ್ಲ ಗುರುವಾರ ಪ್ರಯಾಣಿಕರಿಂದ ಭರ್ತಿಯಾಗಿದ್ದವು. ನಗರದಿಂದ ಹೊರಟ ಎಲ್ಲ ಬಸ್‌ಗಳು ಪ್ರಯಾಣಿಕರಿಂದ ತುಂಬಿದ್ದವು. ಬುಧವಾರ ರಾತ್ರಿಯಿಂದಲೇ ಜನರು ಊರಿನತ್ತ ತೆರಳಿದ್ದು ಕಂಡುಬಂತು. ಕೆಂಪೇಗೌಡ ಬಸ್‌ನಿಲ್ದಾಣ, ಯಶವಂತಪುರ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್‌ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣದಲ್ಲೂ ಪ್ರಯಾಣಿಕರ ದಟ್ಟಣೆಯಿತ್ತು. ಸುತ್ತಮುತ್ತಲಿನ ರಸ್ತೆಗಳಲ್ಲಿ …

Read More »

ದರ್ಶನ್‌ ಜಾಮೀನು ಅರ್ಜಿ: ಅ.14ಕ್ಕೆ ಆದೇಶ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಅಪಹರಣ, ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ 57ನೇ ಸಿಸಿಎಚ್‌ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತು. ಮುಂದುವರಿದ ವಾದ-ಪ್ರತಿವಾದವನ್ನು ಗುರುವಾರವೂ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅಕ್ಟೋಬರ್‌ 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಪ್ರಕಟಿಸುವುದಾಗಿ ಹೇಳಿದರು. ಅದೇ ದಿನವೇ, ದರ್ಶನ್ ಆಪ್ತರಾದ ಪವಿತ್ರಾಗೌಡ, ರವಿಶಂಕರ್, ನಾಗರಾಜ್‌, ಲಕ್ಷ್ಮಣ್‌ ಹಾಗೂ ದೀಪಕ್‌ ಅವರ ಜಾಮೀನು ಅರ್ಜಿ ಆದೇಶವೂ ಪ್ರಕಟ …

Read More »

9600 Bus: ರಸ್ತೆಗಳಿಯಲಿವೇ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌: ರಾಮಲಿಂಗಾ ರೆಡ್ಡಿ

ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ …

Read More »