Breaking News

ರಾಜ್ಯ

ವಿಶ್ವವಿಖ್ಯಾತ ದಸರಾ 2024 : ಇಂದು ಬೈಕ್ ರ್‍ಯಾಲಿ, ರಂಗೋಲಿ ಸ್ಪರ್ಧೆ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಗೆ ನಿನ್ನೆ ಸಾಹಿತಿ ಹಂ.ಪ ನಾಗರಾಜಯ್ಯ ವಿದ್ಯುಕ್ತವಾದಂತ ಚಾಲನೆ ನೀಡಿದ್ದರು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಿದ್ದರು. ಇಂದು ಈ ಒಂದು ದಸರಾ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.   ಇಂದಿನ ವಿಶ್ವ ವಿಖ್ಯಾತ ಮೈಸೂರು ದಸರಾದ ಎರಡನೇ ದಿನದ ಕಾರ್ಯಕ್ರಮದಲ್ಲಿ ಜಾವಾ ಬೈಕ್ ರ್‍ಯಾಲಿ ಆಯೋಜನೆ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ …

Read More »

ಮುಖೇಶ್ ಅಂಬಾನಿಗೆ ಶಾಕ್: ಒಂದೇ ದಿನದಲ್ಲಿ 77606 ಕೋಟಿ ರೂ. ಲಾಸ್

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಒಂದೇ ದಿನದಲ್ಲಿ ಸಂಘಟಿತ ಸಂಸ್ಥೆಯು 77,606 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದೆ. ವರದಿಗಳ ಪ್ರಕಾರ, ತೈಲ, ನೈಸರ್ಗಿಕ ಅನಿಲ, ಎಫ್‌ಎಂಸಿಜಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಲ್ಲಿ ಗುರುವಾರ ಕುಸಿತ ಕಂಡಿದೆ.   ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಸುಮಾರು 4 ಪ್ರತಿಶತದಷ್ಟು ಕುಸಿದಿದೆ, ಕಂಪನಿಯ ಮಾರುಕಟ್ಟೆ ಮೌಲ್ಯದಿಂದ 77,606.98 ಕೋಟಿ ರೂ.ಗಳ ಇಳಿಕೆ ಆಗಿದ್ದು, …

Read More »

ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ 14ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್., ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ. ಯುದ್ಧವಿಮಾನ, …

Read More »

‘ಶೀಘ್ರದಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ’

ಹುಬ್ಬಳ್ಳಿ, ಅಕ್ಟೋಬರ್‌ 04: ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ ಸನ್ನಿಹಿತವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಭ್ರಷ್ಟ ಸರ್ಕಾರವನ್ನು ತೊಲಗಿಸಲು ನಮ್ಮ ಹೋರಾಟ ಮುಂದುವರಿಯಲಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲೂ ಹೋರಾಟ ನಡೆಸುತ್ತೇವೆ. ಸರ್ಕಾರದ ತಪ್ಪುಗಳನ್ನು ಜನರಿಗೆ ತಿಳಿಸುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ. ಆ ಕೆಲಸ ನಿರಂತರವಾಗಿ ಇರಲಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ …

Read More »

ಇಂದಿನಿಂದ ಸಿಎಂ ಸಿದ್ದರಾಮಯ್ಯ 2 ದಿನ ರಾಯಚೂರು ಪ್ರವಾಸ : 1,635 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ರಾಯಚೂರು : ಮುಡಾ ಹಗರಣದ ಮಧ್ಯೆಯು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದಾದ ಬಳಿಕ ಇಂದಿನಿಂದ ಎರಡು ದಿನಗಳ ಕಾಲ ಅವರು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ.   ಹೌದು ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾಯಚೂರು, ಸಿಂಧನೂರು, ಮಾನ್ವಿಯಲ್ಲಿ …

Read More »

ಜೈಲಲ್ಲಿ ರಾಜಾತಿಥ್ಯ ಪ್ರಕರಣ : ರೌಡಿಗಳಿಗೆ ದುಬಾರಿ ಮದ್ಯ ಪೂರೈಕೆ : ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಈ ವೇಳೆ ಅವರಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಎರಡು FIR ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಅಲ್ಲಿನ ವ್ಯವಸ್ಥೆ ನೋಡಿ ದಂಗಾಗಿದ್ದಾರೆ.   ಹೌದು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು, ಜೈಲಿನಲ್ಲಿ ನಟ ದರ್ಶನ್ ಒಂದು ಕೈಯಲ್ಲಿ ಕಾಫಿ ಕುಡಿಯುತ್ತಾ, ಮತ್ತೊಂದು ಕೈಯಲ್ಲಿ …

Read More »

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ.

ಬೆಳಗಾವಿ: ಭ್ರಷ್ಟಾಚಾರದ ಆರೋಪಗಳನ್ನು ಹೊತ್ತ ಜನಪ್ರತಿನಿಧಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆಯಾಗಿದೆ. ಯಾರೂ ಈ ರೀತಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿ ”ಈ ಹಿಂದೆ ಇದೇ ರೀತಿ ಆಪಾದನೆಗಳು ಬಂದಾಗ ಜನಪ್ರತಿನಿಧಿಗಳು ತತ್ ಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು. ಈಗ ಅಂತಹ ನೈತಿಕತೆ ಕಾಣುತ್ತಿಲ್ಲ. …

Read More »

ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಬಾಡಿಗೆ ಮನೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ.   ಚಿಕ್ಕೋಡಿ ತಾಲೂಕಿನ ಕುರ್ಲಿ ಗ್ರಾಮದ ಶ್ರೀಸಂಗಮ ಕೃಷ್ಣಾತ್ ನಿಕಾಡೆ(24) ಎಂಬ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ …

Read More »

CM ರಾಜೀನಾಮೆ ಕೇಳುವವರಿಗೆ ಚಾಮುಂಡೇಶ್ವರಿ ಒಳ್ಳೆ ಬುದ್ದಿ ಕೊಡಲಿ: ಜಿಟಿಡಿ ಟಾಂಗ್

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವಗೌಡ, ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ ಎಂದರು.   ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು. ‘ಮುಡಾ ಪ್ರಕರಣದಲ್ಲಿ ಯಾರೆಲ್ಲರ‌ ವಿರುದ್ಧ ಎಫ್‌ಐಆರ್ ದಾಖಲಾಗಿದೆಯೋ‌ ಎಲ್ಲರೂ ರಾಜೀನಾಮೆ‌ ಕೊಡಲಿ’ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಏಳುಬೀಳುಗಳನ್ನು‌ ಸ್ವಾರಸ್ಯಕರವಾಗಿ …

Read More »

ಕಾಂಗ್ರೆಸ್ ಹೈಕಮಾಂಡ್ ಹಲ್ಲು ಇಲ್ಲದ ಹೈಕಮಾಂಡ್: ಎನ್‌.ರವಿಕುಮಾರ್

ಕಲಬುರಗಿ: ‘ಕಾಂಗ್ರೆಸ್‌ ಹೈಕಮಾಂಡ್ ಹಲ್ಲು ಇಲ್ಲದ ಹೈಕಮಾಂಡ್ ಆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಲು ಆಗುತ್ತಿಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್‌.ರವಿಕುಮಾರ್ ಟೀಕಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ. ಬಿಜೆಪಿಯಲ್ಲಿ ಏನಾದರು ಸಣ್ಣ-ಪುಟ್ಟ ಬೆಳವಣಿಗೆ ನಡೆದರೆ ರಾಜೀನಾಮೆ ಕೇಳುತ್ತಾರೆ. ಅವರದ್ದೇ ಪಕ್ಷದ ಸಿದ್ದರಾಮಯ್ಯ ಅವರು ದೊಡ್ಡ …

Read More »