Breaking News
Home / ರಾಜ್ಯ (page 606)

ರಾಜ್ಯ

ಪಿಎಸ್‌ಐ ಅಕ್ರಮದ ಪ್ರಮುಖ ಆರೋಪಿ ಪಾಟೀಲ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆ

ಅಫಜಲಪುರ (ಕಲಬುರಗಿ ಜಿಲ್ಲೆ): ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದಲ್ಲಿ ಸದ್ಯ ಜೈಲಿನಲ್ಲಿರುವ ಪ್ರಮುಖ ಕಿಂಗ್‌ಪಿನ್ ಆರ್.ಡಿ. ಪಾಟೀಲ ಜನಾರ್ದನರೆಡ್ಡಿ ನೇತೃತ್ವದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರ್ಪಡೆಯಾಗಲಿದ್ದು, ಆ ಪಕ್ಷದಿಂದಲೇ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಸಹೋದರ, ಕಾಂಗ್ರೆಸ್ ಮುಖಂಡರಾಗಿದ್ದ ಮಹಾಂತೇಶ ಪಾಟೀಲ ತಿಳಿಸಿದ್ದಾರೆ.   ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 10ರಂದು ಪಟ್ದಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಮಾವೇಶದಲ್ಲಿ …

Read More »

ಜೆಡಿಎಸ್‌ ಕುಟುಂಬ ರಾಜಕಾರಣದ ವಂಶವೃಕ್ಷ

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿಯ ‘ಆಪರೇಷನ್‌’ನಿಂದ ಪಕ್ಷವನ್ನು ಉಳಿಸಿಕೊಳ್ಳಲು ಜೆಡಿಎಸ್‌ ಆಯ್ದುಕೊಂಡಿದ್ದ ‘ಕುಟುಂಬ ರಾಜಕಾರಣ’ದ ಮಾದರಿಯೇ ಈಗ ಆ ಪಕ್ಷಕ್ಕೆ ಮುಳುವಾಗ ಲಾರಂಭಿಸಿದೆ. ಹಲವು ವಿಘಟನೆಗಳ ನಂತರವೂ ಕೆಲವು ಜಿಲ್ಲೆಗಳಲ್ಲಿ ಪಕ್ಷದ ಬಲ ಕುಗ್ಗದಂತೆ ತಡೆದಿದ್ದ ಸಹೋದರರೇ ಈಗ ಟಿಕೆಟ್‌ ಹಂಚಿಕೆಯಲ್ಲಿ ಜಟಾಪಟಿಗೆ ಇಳಿದಿರುವುದು ಈ ಚುನಾವಣೆಯ ಹೊಸ ಬೆಳವಣಿಗೆ.   ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಗಾಗಿ ಎಚ್‌.ಡಿ. ರೇವಣ್ಣ ಕುಟುಂಬ ಮತ್ತು ಎಚ್‌.ಡಿ. ಕುಮಾರಸ್ವಾಮಿ ಮಧ್ಯೆ ನಡೆಯುತ್ತಿರುವ …

Read More »

ದೆಹಲಿಯಲ್ಲಿ ಬೈರತಿ ಸುರೇಶ್‌ ಅವರಿಂದ ಮಾಧ್ಯಮ ಪ್ರತಿನಿಧಿ ಮೇಲೆ ಹಲ್ಲೆಗೆ ಯತ್ನ?

ನವದೆಹಲಿ: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಪಡೆಯುತ್ತಿದ್ದ ವೇಳೆ ಪತ್ರಕರ್ತರೊಬ್ಬರ ಮೇಲೆ ಹೆಬ್ಬಾಳ ಶಾಸಕ ಬೈರತಿ ಸುರೇಶ್‌ ಹಲ್ಲೆಗೆ ಯತ್ನಿಸಿದರು. ಇದಕ್ಕೆ ಪತ್ರಕರ್ತರು ಆಕ್ರೋಶವ್ಯಕ್ತಪಡಿಸಿದರು.   ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಪತ್ರಕರ್ತರು ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಳ್ಳುತ್ತಿದ್ದರು. ಪತ್ರಕರ್ತರ ಮೊಬೈಲ್‌ ತನ್ನ ಕುತ್ತಿಗೆಗೆ ತಾಗಿತು ಎಂದು ಕುಪಿತಗೊಂಡ ಬೈರತಿ ಏಕವಚನದಲ್ಲಿ ನಿಂದಿಸಿದರು. ಇದಕ್ಕೆ ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ‘ನಿನಗೇನು ತಲೆ ಸರಿ …

Read More »

ರಾಜ್ಯದ ಕಾಂಗ್ರೆಸ್‌ ನಾಯಕರನ್ನು ಬೆದರಿಸಲುಐಟಿ, ಇ.ಡಿ, ಸಿಬಿಐ ಛೂ ಬಿಡಲು ಬಿಜೆಪಿ ಸರ್ಕಾರ ರೆಡಿ: ಸಿದ್ದರಾಮಯ್ಯ

ಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜ್ಯದ ಕಾಂಗ್ರೆಸ್‌ ನಾಯಕರನ್ನು ಬೆದರಿಸಲು ಬಿಜೆಪಿ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿ ದೆಹಲಿಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಂಗಳವಾರ ಮಾಧ್ಯಮ ಹೇಳಿಕೆ ನೀಡಿದ್ದಾರೆ.   ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ. ಸುರ್ಜೇವಾಲಾ ಅವರು ಹೇಳಿದಂತೆ ಹಲವು ಹಾಲಿ …

Read More »

ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ನೀಡಿದ ‘ಮಹಾ’ ಸರ್ಕಾರ

ಬೆಳಗಾವಿ: ‘ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ‘ಮಹಾತ್ಮ ಜ್ಯೋತಿರಾವ್‌ ಫುಲೆ ಜನಾರೋಗ್ಯ ಯೋಜನೆ’ ಜಾರಿ ಮಾಡಿ, ಮಹಾರಾಷ್ಟ್ರ ಸರ್ಕಾರ ಸೋಮವಾರ ಅದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆಕ್ಷೇಪ ಹಾಗೂ ಕೆಪಿಸಿಸಿ ಆಕ್ರೋಶವನ್ನೂ ನಿರ್ಲಕ್ಷ್ಯ ಮಾಡಿದ ‘ಮಹಾ’ ಮುಖ್ಯಮಂತ್ರಿ ಏಕನಾಥ ಶಿಂಧೆ ಈ ನಿರ್ಣಯ ಕೈಗೊಂಡಿದ್ದಾರೆ.   ಗಡಿ ತಂಟೆ ತೀರ್ಪು ಹೊರಬೀಳುವವರೆಗೂ ಎರಡೂ ರಾಜ್ಯಗಳು ಯಾವುದೇ ರೀತಿಯ ಹಸ್ತಕ್ಷೇಪ ಮಾಡಕೂಡದು’ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಸಂಧಾನ …

Read More »

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಹಾವೇರಿ: ಪ್ರಥಮ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ. ವಿನಾಯಕ ತಳವಾರ (17) ಮೃತ ವಿದ್ಯಾರ್ಥಿ.ಈತ ಮೃತ ಹಾವೇರಿ ನಗರದ ಹೊಸಮಠ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದ. ಎರಡು ವಿಷಯಗಳಲ್ಲಿ ಅನುತ್ತೀರ್ಣ ಆಗಿದ್ದರಿಂದ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಜಿಗುಪ್ಸೆಯಾಗಿ ತನ್ನ ವಾಸದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ …

Read More »

ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನ: ಓರ್ವ ವಶ

ಸಾಗರ: ತಾಲೂಕಿನ ಮುಂಬಾಳು ಗ್ರಾಮದ ಬೋರ್‌ವೆಲ್ ಕಂಟ್ರಾಕ್ಟರ್ ಲೋಕನಾಥ್ ಅವರ ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನಕ್ಕೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಮಾಲು ಸಹಿತ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಮುಂಬಾಳು ಗ್ರಾಮದ ಲೋಕನಾಥ್ ಅವರು ತಮ್ಮ ಖಾಲಿ ಜಾಗದಲ್ಲಿ ಸಂಗ್ರಹಿಸಿಟ್ಟಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್‌ಗಳು ಕಳ್ಳತನವಾಗಿರುವುದಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆಗೆ ಫೆ. 17ರಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು …

Read More »

ಆಯಾ ಮತಕ್ಷೇತ್ರಗಳಿಗೆ ಇವಿಎಂ ರವಾನೆ: ಜಿಲ್ಲಾಧಿಕಾರಿ ‌ನಿತೇಶ್ ಪಾಟೀಲ

ಬೆಳಗಾವಿ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ರ್ಯಾಂಡಮೈಜೇಷನ್(ಯಾದೃಚ್ಛಿಕ) ಪ್ರಕ್ರಿಯೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಏ.4) ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಪ್ರಥಮ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಿತು. ಜಿಲ್ಲೆಯ ಹದಿನೆಂಟು ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 4434 ಮತಗಟ್ಟೆಗಳಿವೆ. ಬ್ಯಾಲೆಟ್ ಯುನಿಟ್-5321(ಶೇ.120), 5321 ಕಂಟ್ರೋಲ್ ಯುನಿಟ್(ಶೇ.120) ಮತ್ತು 5765-ವಿವಿಪ್ಯಾಟ್ (ಶೇ.130)ಗಳನ್ನು …

Read More »

ಇಂದೇ ಬಿಡುಗಡೆಯಾಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ

ನವದೆಹಲಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದ್ದು, ಕೆಲ ಹೊತ್ತಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಯಾಗಲಿದೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮುಕ್ತಾಯವಾಗಿದ್ದು, ಸಭೆ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ. 40 ಕ್ಷೇತ್ರಗಳಿಗೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು …

Read More »

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮೊದಲ ಹಂತದ ಪಟ್ಟಿ, ಬೆಳಗಾವಿ ಉತ್ತರ- ಅನಿಲ್ ಬೆನಕೆ,ದಕ್ಷಿಣ- ಅಭಯ್ ಪಾಟೀಲ್ ?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಳಿಸಿದ್ದು, ಮೊದಲ ಹಂತದ ಪಟ್ಟಿ ಸಿದ್ಧಪಡಿಸಿದೆ. 50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿದ್ದು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿರುವ ರಾಜ್ಯ ಬಿಜೆಪಿ ಹೈಕಮಾಂಡ್ ಗೆ ರವಾನಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು: ನಿಪ್ಪಾಣಿ- ಶಶಿಕಲಾ ಜೊಲ್ಲೆ ಕುಡುಚಿ- ಪಿ ರಾಜೀವ್ ರಾಯಭಾಗ- …

Read More »