Breaking News
Home / ರಾಜ್ಯ (page 62)

ರಾಜ್ಯ

ಮತ್ತೊಮ್ಮೆ ಸ್ವಪಕ್ಷೀಯರ ವಿರುದ್ಧ ಅಸಮಾಧಾನ ಹೊರಹಾಕಿದ ಬಿ. ಶಿವರಾಂ

ಬೇಲೂರು: ‘ಎಲ್ಲ ಚುನಾವಣೆಯಲ್ಲೂ ಪಕ್ಷದ ಕಾರ್ಯಕ್ರಮಕ್ಕೆ ಬರದೇ ಇರುವ ಇನ್ನೊಂದು ಗುಂಪು ಕಲೆಕ್ಷನ್‌ಗೆ ಕಾಯುತ್ತಾ ಇರುತ್ತದೆ. ಅವರು ಕಲೆಕ್ಷನ್‌ಗೆ ಹೊರತು ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ‌ ಮಾಡಲು ಅಲ್ಲ. ಇಷ್ಟೊತ್ತಿಗೆ ಅವನು ಸರಿಯಿಲ್ಲ, ಇವನು ಸರಿಯಲ್ಲ. ನಾವು ನಿಮಗೆ ಕೆಲಸ ಮಾಡ್ತೀವಿ ಎಂದು ರೇವಣ್ಣ ಅವರ ಹತ್ತಿರ ಮಾತನಾಡಿಕೊಂಡು ಬಂದಿರುತ್ತಾರೆ’ ಎಂದು ಕಾಂಗ್ರೆಸ್‌ ಮುಖಂಡ ಬಿ. ಶಿವರಾಂ ಹೇಳಿರುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಜಿ …

Read More »

ಯುಗಾದಿ ವೇಳೆಗೆ ರಾಜ್ಯದಲ್ಲಿ ಭರ್ಜರಿ ಮಳೆ!

ಸುಡು ಬೇಸಿಗೆಯಿಂದ ಕಂಗಾಲಾಗಿರುವ ಕರ್ನಾಟಕ ಜನತೆಗೆ ಈ ಬಾರಿ ಯುಗಾದಿ ಡಬಲ್ ಖುಷಿ ತರಲಿದೆ. ಒಂದು ಕಡೆ ಹಬ್ಬದ ಸಂಭ್ರಮವಾದರೆ ಮತ್ತೊಂದು ಕಡೆ ರಾಜ್ಯದಲ್ಲಿ ಯುಗಾದಿ ವೇಳೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ ಕಾರ್ಯಾಚರಣೆಯ ವಿಸ್ತೃತ ಶ್ರೇಣಿಯ ಮುನ್ಸೂಚನೆ (IMD ERF) ಪ್ರಕಾರ ಮಾರ್ಚ್ ಅಂತ್ಯದ ವೇಳೆಗೆ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಏಪ್ರಿಲ್ 9ರಂದು ರಾಜ್ಯದಲ್ಲಿ ಯುಗಾದಿ ಹಬ್ಬದ …

Read More »

ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾ ಮಾ. 23ರ ವರೆಗೆ ಇಡಿ ವಶಕ್ಕೆ

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಶನಿವಾರ ದೆಹಲಿ ಕೋರ್ಟ್ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ. ನಿನ್ನೆ ಹೈದರಾಬಾದ್‌ನಲ್ಲಿರುವ ಬಿಆರ್ ಎಸ್ ಎಂಎಲ್ ಸಿ ಕೆ ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಇಡಿ ಅಧಿಕಾರಿಗಳು, ಕೆಲವು ಗಂಟೆಗಳ ನಂತರ ಕೆಸಿಆರ್ …

Read More »

ಪೋಕ್ಸೋ ಕೇಸ್: ಯಡಿಯೂರಪ್ಪ ತಪ್ಪು ಮಾಡಿದ್ರೆ ಶಿಕ್ಷೆ ಖಂಡಿತ – ಡಾ.ನಾಗಲಕ್ಷ್ಮೀ

ಚಿಕ್ಕಬಳ್ಳಾಪುರ:- ಪೋಕ್ಸೋ ಕೇಸ್ ಗೆ ಸಂಬಧಪಟ್ಟಂತೆ ಯಡಿಯೂರಪ್ಪ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಪ್ರಕರಣವನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ತನಿಖೆಯಲ್ಲಿ ಏನು ವರದಿ ಬರುತ್ತೆ ಅದು ಆಗೇ ಆಗುತ್ತೆ. ಸರಿ ಇದ್ದರೆ ಸರಿ, ತಪ್ಪಿದ್ದರೆ ತಪ್ಪು. ಅದಕ್ಕೆ ಯಾರೂ ಹೊರತಲ್ಲ. ತಪ್ಪಾಗಿದ್ದರೆ ಪೋಕ್ಸೋ ಅಡಿಯಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ತನಿಖಾ ವರದಿ ಬಂದ ಮೇಲೆ ಸತ್ಯ ಗೊತ್ತಾಗುತ್ತೆ …

Read More »

ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್: ಬೆಳಗಾವಿಯಲ್ಲಿ ‘2 ಲಕ್ಷ ಸೀಜ್’

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತ್ರ, ಚುರುಕಾಗಿರೋ ಪೊಲೀಸರು ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪೊಲೀಸರು ಲೋಕಸಭಾ ಚುನಾವಣೆ ಘೋಷಣೆಯ ನಂತ್ರ, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮವಹಿಸಿದ್ದಾರೆ.   ಬೆಳಗಾವಿಯ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಆಲ್ಟೋ ಕಾರಿನಲ್ಲಿ ದಾಖಲೆಯಿಲ್ಲದೇ ಗೋಣಿಚೀಲದಲ್ಲಿ …

Read More »

ಕಾರಿಗೆ ಬೆಂಕಿ ಹಚ್ಚಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕ ಎಂದು ಹೇಳಲಾಗಿದ್ದು, ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಈ ಘಟನೆ ನಡೆದಿದೆ. ಆತ ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ …

Read More »

ಸ್ಪರ್ಧೆ ಖಚಿತ ಎಂದು ಪುನರುಚ್ಚರಿಸಿದ ಈಶ್ವರಪ್ಪ

ಸಾಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತೇವೆ ಎಂದು ಶುಕ್ರವಾರ ಘೋಷಣೆ ಮಾಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶನಿವಾರ ಸಾಗರಕ್ಕೆ ಭೇಟಿ ನೀಡಿ ಪ್ರಮುಖರ ಮನೆ ಹಾಗೂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು. ಶೃಂಗೇರಿ ಶಂಕರಮಠದಲ್ಲಿ ಪೂಜೆ ಸಲ್ಲಿಸಿ, ಬ್ರಾಹ್ಮಣ ಸಮಾಜದ ಪ್ರಮುಖರಾದ ಮ.ಸ.ನಂಜುಂಡಸ್ವಾಮಿ ಅವರ ಮನೆಗೆ ಭೇಟಿ ನೀಡಿ ಪ್ರಮುಖರ ಜೊತೆ ಮಾತುಕತೆ ನಡೆಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ನಂಜುಂಡಸ್ವಾಮಿ, ಬಿಜೆಪಿ ಪ್ರಮುಖರಾದ ಕೆ.ಎಸ್.ಈಶ್ವರಪ್ಪ ಅವರಿಗೆ …

Read More »

ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧ: ಪ್ರಧಾನಿ ಮೋದಿ

ಹೊಸದಿಲ್ಲಿ: ಚುನಾವಣ ಆಯೋಗ ಲೋಕಸಭಾ ಚುನಾವಣೆ ಮತದಾನ ದಿನಾಂಕ ಘೋಷಿಸಿದ ಬೆನ್ನಲ್ಲೇ ‘ಬಿಜೆಪಿ-ಎನ್ ಡಿಎ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಇದು ! ಚುನಾವಣ ಆಯೋಗ 2024 ರ ಲೋಕಸಭೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ. ನಾವು, ಬಿಜೆಪಿ-ಎನ್‌ಡಿಎ ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಆಡಳಿತ ಮತ್ತು ಕ್ಷೇತ್ರಗಳಾದ್ಯಂತ ಸೇವೆ ಸಲ್ಲಿಸಿರುವ ನಮ್ಮ ಟ್ರ್ಯಾಕ್ …

Read More »

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಚಿಕ್ಕೋಡಿ ಯ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಲಕ್ಷ್ಮಣರಾವ್ ಚಿಂಗಳೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈಗ ಪ್ರಾಧಿಕಾರದ ಅಧ್ಯಕ್ಷರಾಗುವ ಮೂಲಕ ಚಿಂಗಳೆ ಅವರು ಉಳಿದ ಆಕಾಂಕ್ಷಿಗಳಿಗೆ ದಾರಿಮಾಡಿಕೊಟ್ಡಿದ್ದಾರೆ.

Read More »

ಬೆಂಗ್ಳೂರಿನ ಐಪಿಎಲ್‌ ಪಂದ್ಯ ಸ್ಥಳಾಂತರ ಮಾಡಿದ್ರೆ ಕರ್ನಾಟಕ ಬಂದ್!

ಬೆಂಗಳೂರು: ನಗರದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ​ ಪಂದ್ಯಾವಳಿಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದ್ದು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ವಾಟಾಳ್​ ನಾಗರಾಜ್​ ಆಗ್ರಹಿಸಿದ್ದಾರೆ. ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರವಾಗುವ ಹಿನ್ನೆಲೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಮುಖ್ಯದ್ವಾರ ಬಳಿ ಕನ್ನಡ ಚಳವಳಿ ವಾಟಾಳ್​ ಪಕ್ಷ ನೇತೃತ್ವದ ಕನ್ನಡ ಹೋರಾಟಗಾರ ವಾಟಾಳ್​ …

Read More »