Breaking News
Home / ರಾಜ್ಯ (page 638)

ರಾಜ್ಯ

70 ಕ್ಷೇತ್ರಗಳಲ್ಲಿ ವೀರಶೈವರಿಗೆ ಟಿಕೆಟ್‌: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

ಬೆಂಗಳೂರು: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲೇಬೇಕೆಂದರೆ ವೀರಶೈವ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ. ಹೀಗಾಗಿ, ರಾಜ್ಯದ 224 ಕ್ಷೇತ್ರಗಳ ಪೈಕಿ 70ರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.   ‘ಲಿಂಗಾಯತ-ವೀರಶೈವ ಸಮುದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಪಕ್ಷ ಅಧಿಕಾರಕ್ಕೆ ಬರಲು ಈ ಸಮುದಾಯದ ಸಹಾಯ ಅವಶ್ಯಕ. ಲಿಂಗಾಯತರ …

Read More »

ಮಾರ್ಚ್ 9ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿದ ಕಾಂಗ್ರೆಸ್

ತುಮಕೂರು: ಮಾರ್ಚ್ ರಂದು ಕರ್ನಾಟಕದಾದ್ಯಂತ ಬಂದ್ಗೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಕರೆ ನೀಡಿದ್ದಾರೆ. ಅವರು ಇಂದು ಕೊರಟಗೆರೆಯಲ್ಲಿ ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ಗೆ (Karnataka Bandh) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ. …

Read More »

ಲೋಕಾಯುಕ್ತ’ ವರದಿ ಬಂದ ಬಳಿಕ ‘ಮಾಡಾಳ್ ವಿರೂಪಾಕ್ಷಪ್ಪ’ ವಿರುದ್ಧ ಕ್ರಮ : ಪ್ರಹ್ಲಾದ್ ಜೋಶಿ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರನ ಮನೆ ಮೇಲಿನ ಲೋಕಾಯುಕ್ತ ದಾಳಿ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದೆ. ಮಾಡಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಬಂದ ಬಳಿಕ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.   ಇನ್ನೂ, ಮಂಡ್ಯ ಸಂಸದೆ ಸುಮಲತಾ ( Sumalatha) ಬಿಜೆಪಿ …

Read More »

ನೂತನವಾಗಿ ಆರಂಭವಾದ ಚಿರಾಯು ಕ್ರಿಟಿಕಲ್ ಆಸ್ಪತ್ರೆಗೆ ಭೇಟಿ ನೀಡಿ ಶುಭ ಹಾರೈಸಿದ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು

ಗೋಕಾಕ: ಗೋಕಾಕ ನಗರದಲ್ಲಿ ಹೊಸದಾಗಿ ಪ್ರಾರಂಭ ವಾಗಿರುವ ಚಿರಾಯು ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಭೇಟಿ ನೀಡಿದರು. ಸದಾ ಕ್ರಿಯಾಶೀಲ ರಾಗಿರುವ ಸಂತೋಷ್ ಜಾರಕಿಹೊಳಿ ಅವರು ಯಾವುದಾದರೂ ಒಂದು ಕೆಲಸ ಕಾರ್ಯ ಗಳಲ್ಲಿ ಸದಾ ತಮ್ಮನ್ನ ತಾವು ತೊಡಗಿಸಿ ಕೊಂಡಿರುತ್ತಾರೆ. ಅವರು ಮಾಡಿದ ಕೆಲಸ ಗಳು ಕಣ್ಣಿಗೆ ಕಾಣುವುದು ಒಂದೋ ಅಥವಾ ಎರಡು ಆದ್ರೆ ಕಾಣದ ಕೆಲಸಗಳು ಸಾವಿರಾರು ಅಂತ ಈ ಒಂದು ಆಸ್ಪತ್ರೆಗೆ …

Read More »

“ಈಗಿನ ಜನರೇಷನ್‌ಗೆ ಲೈಂಗಿಕ ಕ್ರಿಯೆಗೂ ಸೋಮಾರಿತನ”: ಕಂಗನಾ ರನೌತ್

ಬಾಲಿವುಡ್ ಫೈರ್ ಬ್ರಾಂಡ್ ಕಂಗನಾ ರನೌತ್‌ ವಿವಾದಗಳನ್ನು ಸದಾ ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಪ್ರತಿದಿನ ಒಂದಲ್ಲ ಒಂದು ಟಾಪಿಕ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕಂಗನಾ ಕಾಮೆಂಟ್ಸ್ ಸದ್ದು ಮಾಡುತ್ತಿರುತ್ತದೆ. ಇದೀಗ ಮದುವೆ, ಲೈಂಗಿಕ ಕ್ರಿಯೆ ಬಗ್ಗೆ ಕಂಗನಾ ಹಾಕಿರುವ ಇನ್‌ಸ್ಟಾಗ್ರಾಂ ಪೋಸ್ಟ್ ವೈರಲ್ ಆಗ್ತಿದೆ. ಇತ್ತೀಚೆಗೆ ಶೃಂಗಾರಂ, ಮದುವೆಯ ಕಾಮೆಂಟ್ಸ್ ವೈರಲ್ ಆಗುತ್ತಿದೆ. ಬೋಲ್ಡ್ ಸ್ಟೇಟ್‌ಮೆಂಟ್ ಕೊಡುವುದರಲ್ಲಿ ಬಾಲಿವುಡ್ ಕ್ವೀನ್ ಸದಾ ಮುಂದಿರುತ್ತಾರೆ. ತಮ್ಮ ಕಾಮೆಂಟ್ ವಿವಾದ ಸೃಷ್ಟಿಸಿದರು ಅದನ್ನು ಧೈರ್ಯವಾಗಿ …

Read More »

ಕರ್ನಾಟಕ ಚುನಾವಣೆಗೆ ಮುಹೂರ್ತ ಫಿಕ್ಸ್​..! ಯಾವಾಗ ಚುನಾವಣೆ..?

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಜೆಡಿಎಸ್​ ಎಲ್ಲರಿಗಿಂತಲೂ ಮುಂದೆ ಎನ್ನುವಂತೆ ತಿಂಗಳ ಹಿಂದೆಯೇ ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್​, ಬಿಜೆಪಿ ಕೂಡ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಈಗಾಗಲೇ ಒಂದೊಂದು ರೌಂಡ್​ ಪ್ರಚಾರ ಮುಗಿಸಿದ್ದು, ಶೀಘ್ರದಲ್ಲೇ ಟಿಕೆಟ್​ ಘೋಷಣೆ ಮಾಡುವ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್​ ಆಗಲು ಮುಹೂರ್ತ ಕೂಡಿ …

Read More »

ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ ಮತ್ತೊಬ್ಬ ಸಚಿವ ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವ ನಾರಾಯಣಗೌಡ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಕೆ ಆರ್ ಪೇಟೆಯಲ್ಲಿ ಮಾತನಾಡಿದ್ದ ಸಚಿವ ನಾರಾಯಣಗೌಡ, ತಮಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ನಿಜ. ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದರು. ಇದೀಗ ಮತ್ತೊಬ್ಬ …

Read More »

BJP ಅಂದರೆ ಭ್ರಷ್ಟ ಜನತಾ ಪಾರ್ಟಿ: ಮಧು ಬಂಗಾರಪ್ಪ

ಶಿವಮೊಗ್ಗ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಲಂಚ ಪ್ರಕರಣ ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಶನಿವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಿಜೆಪಿ ಈವರೆಗೆ ಬ್ಯುಸಿನೆಸ್ (ವ್ಯವಹಾರ) ಜನತಾ ಪಕ್ಷವಾಗಿತ್ತು. ಈಗ ಭ್ರಷ್ಟ ಜನತಾ ಪಕ್ಷ ಎಂದು ಸಾಬೀತಾಗಿದೆ. ‘ನಾನು ತಿನ್ನುವುದಿಲ್ಲ; ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದರು. ಆದರೆ, …

Read More »

ಮಾಡಾಳ್‌ ಲಂಚ ಪ್ರಕರಣದಿಂದ‌ ಪಕ್ಷಕ್ಕೆ ಹಿನ್ನಡೆಯಿಲ್ಲ: ಶೆಟ್ಟರ್

ಕಲಬುರಗಿ: ಟೆಂಡರ್ ಅಂತಿಮಗೊಳಿಸಲು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚದ ಹಣ ಪಡೆದಿರುವ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗುವುದಿಲ್ಲ ‌ಎಂದು ಶಾಸಕ, ಬಿಜೆಪಿ ‌ವಿಜಯ ಸಂಕಲ್ಪ ಮೂರನೇ ತಂಡದ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು.   ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಅಪರಾಧಿಯಾಗಿದ್ದಾರೆ. ಆದ್ದರಿಂದಲೇ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ …

Read More »

ಮುಂದಿನ ಶೈಕ್ಷಣಿಕ ವರ್ಷ ಶಾಲಾರಂಭ ದಿನವೇ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ:

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು,ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ತಲುಪಿಸಲು ಸಿದ್ಧತೆ ನಡೆಸಿದೆ. ಹೌದು, ಕಳೆದ ವರ್ಷ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ಸಕಾಲಕ್ಕೆ ಪೂರೈಸದೇ ಟೀಕೆ ಎದುರಿಸಿದ್ದ ಶಿಕ್ಷಣ ಇಲಾಖೆ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲು ಮುಂದಾಗಿದೆ. 1 ರಿಂದ 10 ನೇ ತರಗತಿ ವಿದ್ಯರ್ಥಿಗಳಿಗೆ ಪೂರೈಸಬೇಕಿರುವ …

Read More »