Breaking News

ರಾಜ್ಯ

ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ್ ನಿಧನ

ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲೆನಾಡು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಶ್ರೀನಿವಾಸ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ಮತ್ತು ಕಾನೂನಿನ ಶಿಕ್ಷಣವನ್ನು ಮುಗಿಸಿದ ನಂತರ ಕಾನೂನು ವೃತ್ತಿಯನ್ನು ಪ್ರಾರಂಭಿಸಿದರು. ರಾಜಕೀಯಕ್ಕೆ ಬರುವ ಮುನ್ನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಶ್ರೀನಿವಾಸ ಅವರು ಮೈಸೂರು ವಿಧಾನಸಭೆಯ ಮಾಜಿ ಸದಸ್ಯರಾದ ಕಾನುಗೋಡು ಹರಿಯಪ್ಪನವರ್ …

Read More »

ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?

ಗದಗ: ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮೊದಲು ಅಪಘಾತದಂತೆ ಕಂಡು ಬಂದರೂ ಪತ್ನಿಯೇ ಹತ್ಯೆ ಮಾಡಿ ಆತನನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ ಎಂಬ ಆರೋಪ ಮಾಡಲಾಗಿದೆ. ಮಂಜುನಾಥ್ ಮೀಸಿ ಎಂಬಾತ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಶಾರದಮ್ಮ ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ(ಆ 29)ತಡರಾತ್ರಿ ಮನೆಯಲ್ಲೇ ಹತ್ಯೆ ಮಾಡಿ ಹೆದ್ದಾರಿಯಲ್ಲಿ ಬಿಸಾಕಿ ಅಪಘಾತದ ಕಥೆ ಸೃಷ್ಟಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮಂಜುನಾಥ್ ಕೋಟುಮಚಗಿಯಲ್ಲಿ …

Read More »

ಸೆ. 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್‌ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ

ಬೆಂಗಳೂರು ಆಗಸ್ಟ್‌ 30: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ …

Read More »

ಹಬ್ಬಕ್ಕೆ ಖಾಸಗಿ ಬಸ್‌ಗಳು ಪ್ರಯಾಣ ದರ ಹೆಚ್ಚಿಸಿದರೆ ಪರವಾನಗಿ ರದ್ದು :ರಾಮಲಿಂಗಾರೆಡ್ಡಿ

ಬೆಂಗಳೂರು,ಆ.30- ಗೌರಿ-ಗಣೇಶ ಸೇರಿದಂತೆ ಇತರ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್‌‍ಗಳ ರಹದಾರಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿರುವ ಸಚಿವರು, ಖಾಸಗಿ ಬಸ್‌‍ಗಳ ಪ್ರಯಾಣದರದಲ್ಲಿ ನಿಗಾ ವಹಿಸುವಂತೆ ತಾಕೀತು ಮಾಡಿದ್ದಾರೆ.   ಸಾಮಾನ್ಯವಾಗಿ ಖಾಸಗಿ ಬಸ್‌‍ಗಳು ಗೌರಿ-ಗಣೇಶ, ಯುಗಾದಿ, ನಾಗರಪಂಚಮಿ, ದೀಪಾವಳಿ, ಆಯುಧಪೂಜೆಯಂತಹ ಸಂದರ್ಭಗಳಲ್ಲಿ ಬಸ್‌‍ ಪ್ರಯಾಣ ದರಗಳನ್ನು ಮೂರರಿಂದ ನಾಲ್ಕು …

Read More »

ಸಿಎಂ ಬದಲಾವಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆಯುವ ಯತ್ನ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. …

Read More »

ಪೋಕ್ಸೊ’ ಕೇಸ್ ನಲ್ಲಿ ಮಾಜಿ ಸಿಎಂ `BSY’ಗೆ ಹೈಕೋರ್ಟ್ ಬಿಗ್ ರಿಲೀಫ್ : ಬಂಧಿಸದಂತೆ ನೀಡಿದ್ದ ಆದೇಶ ಮತ್ತೆ ವಿಸ್ತರಣೆ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶಿಸಿದೆ.   ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿತ್ತು. ಈ ಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ …

Read More »

ರೈತರ ಪಹಣಿ ಜೊತೆ ಆಧಾರ ಲಿಂಕ್, ಹಿಂಡಲಗಾ ಗ್ರಾಮ ಆಡಳಿತ ಅಧಿಕಾರಿ ಕಾರ್ಯಕ್ಕೆ ಗ್ರಾಮಸ್ಥರ ಶ್ಲಾಘನೆ…

ಬೆಳಗಾವಿ: ರಾಜ್ಯ ಸರಕಾರ ನೂತನ ವಾಗಿ ಪ್ರಾರಂಭ ಮಾ ಡಿರುವ ಪಹಣಿ ಜೊತೆ ಆಧಾರ ಲಿಂಕ ಮಾಡುವ ಯೋಜನೆಗೆ ರಾಜ್ಯದ ಎಲ್ಲ ಕಡೆ ಪ್ರಶಂಸೆ ಸಿಗುತ್ತಿದೆ ಅದೇರೀತಿ ಹಿಂಡಾಲಗಾ ಗ್ರಾಮ ಪಂಚಾಯತಿ ವ್ಯಾಪ್ತಿ ಯಲ್ಲಿ ಬರುವ ಗ್ರಾಮ ಗಳಾದ, ಹಿಂಡಲಗಾ, ಗಣೇಶ್ ಪುರ, ಬೆನಕನ ಹಳ್ಳಿ, ಸಾವ ಗಾಂವ, ಈ ಒಂದು ಗ್ರಾಮ ಗಳಲ್ಲಿ ಪಹಣಿ ಗೆ (ಉತಾರ) ಆಧಾರ ಕಾರ್ಡ್ ಜೋಡಣೆ ಕಾರ್ಯ ವೇಗ ದಿಂದ ಸಾಗಿ ದೆ, …

Read More »

ಮುಡಾ ನಿವೇಶನ ಹಂಚಿಕೆ : ಸ್ಫೋಟಕ ಆಡಿಯೋ ಬಿಡುಗಡೆ

ಬೆಂಗಳೂರು,ಆ.30- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಗಂಭೀರ ಆರೋಪ ಮಾಡಿದ್ದು, ಆಡಿಯೋ ಸಾಕ್ಷ್ಯವನ್ನು ಬಿಡುಗಡೆ ಮಾಡಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಹಲವಾರು ಮಾಹಿತಿಗಳನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡಿದರು. ಬಿಜೆಪಿ ಸರ್ಕಾರದಲ್ಲಿ ಹಾಗೂ ಮುಡಾದಲ್ಲಿ …

Read More »

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ವೈ.ವಿಜಯೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್‌ಐಆರ್ ಗೆ ತಡೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೋ ತುಣುಕೊಂದನ್ನು ಬಿಜೆಪಿ ರಾಜ್ಯ …

Read More »

ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತು ಹಾಗೂ ಕಾರು ಸಮೇತ ಪೊಲಿಸರು ಮೂವರನ್ನು ಬಂಧಿಸಿದ್ದಾರೆ. ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ …

Read More »