Breaking News
Home / ರಾಜ್ಯ (page 644)

ರಾಜ್ಯ

ನಾಳೆಯಿಂದ ರಾಜ್ಯಾದ್ಯಂತ ಶಾಲೆಗಳು ಬಂದ್?

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಕರೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರಿ ಶಾಲಾ ಶಿಕ್ಷಕರು ಶಾಲೆಗಳಿಗೆ ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲಿಯೇ ಇದ್ದು ಮುಷ್ಕರದಲ್ಲಿ ಭಾಗಿಯಾಗುವಂತೆ ಷಡಕ್ಷರಿ …

Read More »

ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಿದ್ಧತೆ ಆರಂಭ

2023ರ ಡಿಸೆಂಬರ್ ತಿಂಗಳಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಮೈಸೂರು: 2023ರ ಡಿಸೆಂಬರ್ ತಿಂಗಳಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು

ಕಲಬುರಗಿ: ಬಹು ದಿನಗಳ ಬೇಡಿಕೆಯಾಗಿದ್ದ ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲಿಗೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸದ ಡಾ. ಉಮೇಶ ಜಾಧವ್ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.   ಸದ್ಯಕ್ಕೆ ಒಂದೇ ಡೆಮು ರೈಲು ಇದ್ದು, ನಿತ್ಯ ಎರಡು ಬಾರಿ ಸಂಚರಿಸುತ್ತದೆ. ಹೊಸದಾಗಿ ಆರಂಭವಾಗುವ ಡೆಮು ರೈಲು ನಿತ್ಯ ಬೆಳಿಗ್ಗೆ 7.30ಕ್ಕೆ ಕಲಬುರಗಿಯಿಂದ ಹೊರಟು ಬೆಳಿಗ್ಗೆ 10.15ಕ್ಕೆ ಬೀದರ್‌ …

Read More »

ಖಾನಾಪುರ: ಕ್ರೀಡಾ ವಿಜೇತರಿಗೆ ನಗದು ಬಹುಮಾನ

ಖಾನಾಪುರ: ಪಟ್ಟಣದಲ್ಲಿ ಆಯೋಜಿಸಿದ್ದ ಲಿಂಗನಮಠ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ನಲ್ಲಿ ವಿಜೇತ ತಂಡಗಳಿಗೆ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್‌ ಭಾನುವಾರ ನಗದು ಬಹುಮಾನ ವಿತರಿಸಿದರು. ಚಾಂಪಿಯನ್‌ ತಂಡಕ್ಕೆ ₹50 ಸಾವಿರ, ದ್ವಿತೀಯ ಸ್ನಾನ ಪಡೆದ ತಂಡಕ್ಕೆ ₹ 25 ಸಾವಿರ, ತೃತೀಯ ಸ್ಥಾನದ ಆಟಗಾರರಿಗೆ ₹ 10 ಸಾವಿರದ ಚೆಕ್‌ಗಳನ್ನು ಅವರು ನೀಡಿದರು.   ನಂತರ ಮಾತನಾಡಿ, ‘ಮುಂದಿನ ವರ್ಷದಿಂದ ಈ ನಗದು ಬಹುಮಾನ ಮೊತ್ತವನ್ನು ₹ 5 ಲಕ್ಷಕ್ಕೆ ಏರಿಸಲಾಗುವುದು. …

Read More »

ವಿದ್ಯಾರ್ಥಿಗಳಿಗೆ ವಿಎಸ್‍ಎಂ ಫೌಂಡೇಷನ್ ನೆರವು

ನಿಪ್ಪಾಣಿ: ಸ್ಥಳೀಯ ವಿದ್ಯಾ ಸಂವರ್ಧಕ ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅವರು ತಮ್ಮ ಸಂಸ್ಥೆಗಳಲ್ಲಿ ಓದುತ್ತಿರುವ, ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಡ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ತೆರಳಿ ಆರೋಗ್ಯ ವಿಚಾರಿಸಿ, ವಿಎಸ್‍ಎಂ ಫೌಂಡೇಷನ್‍ನಿಂದ ₹21 ಸಾವಿರ ಧನಸಹಾಯ ಮಾಡಿದರು.   5ನೇ ತರಗತಿಯ ಅಭಿಷೇಕ ವಿಕ್ರಮ ಕದಮ, 6ನೇ ತರಗತಿ ಆರ್ಯನ್ ಕುಂದನ್ ಖೋತ ಶಸ್ತ್ರಚಿಕಿತ್ಸೆಗೆ ಒಳಗಾದವರು.

Read More »

ನಿಪ್ಪಾಣಿ: ‘ನಿರ್ಲಕ್ಷಿತ ಗ್ರಾಮದಲ್ಲಿ ಅಭಿವೃದ್ಧಿ’

ನಿಪ್ಪಾಣಿ: ‘ರಾಜ್ಯದ ಕಟ್ಟಕಡೆಯ ಗಾಯಕವಾಡಿ ಗ್ರಾಮ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ನನ್ನ ಆಡಳಿತಾವಧಿಯಲ್ಲಿ ಗ್ರಾಮದಲ್ಲಿ ಈವರೆಗೆ ₹8.4 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.   ತಾಲ್ಲೂಕಿನ ಗಾಯಕವಾಡಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುಮೋದನೆಗೊಂಡ ₹ 85 ಲಕ್ಷ ಅನುದಾನದ ಗಾಯಕವಾಡಿ-ಕೋಡಣಿ ಗ್ರಾಮಗಳ ನಡುವಿನ ಹಳ್ಳದ ಬ್ರಿಜ್ ಕಂ ಬ್ಯಾರೇಜ್ ಮತ್ತು ಲೋಕೋಪಯೋಗಿ ಇಲಾಖೆಯಿಂದ ವಿವೇಕ ಶಾಲಾ ಯೋಜನೆಯಡಿ ಅನುಮೋದನೆಗೊಂಡ ₹15 …

Read More »

2023 | ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ಸಜ್ಜು

ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಪರ ಅಲೆ ಎಬ್ಬಿಸಲು ಬಿಜೆಪಿಯು ಮಾರ್ಚ್‌ 1 ರಿಂದ ‘ವಿಜಯ ಸಂಕಲ್ಪ ಯಾತ್ರೆ’ ಆರಂಭಿಸಲಿದೆ. ಮಾ.1 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾ. 2 ರಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿರುವ ಸಂಗೊಳ್ಳಿ ರಾಯಣ್ಣ ಸ್ಮಾರಕದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮಾ.3 ರಂದು ಬೀದರ್‌ ಜಿಲ್ಲೆ ಬಸವಕಲ್ಯಾಣ ಅನುಭಮಂಪಟದ ಸ್ಥಳದಿಂದ ಕೇಂದ್ರ ಗೃಹ ಸಚಿವ ಅಮಿತ್‌ …

Read More »

ಚಾಮುಂಡೇಶ್ವರಿ ಆಶೀರ್ವಾದ ಇದೆ, ಮತ್ತೆ ನಾನೇ ಮುಖ್ಯಮಂತ್ರಿ: H.D.K.

ಚನ್ನಪಟ್ಟಣ: ನಾಡಿನ ಅಧಿದೇವತೆ ಚಾಮುಂಡೇಶ್ವರಿ ಆಶೀರ್ವಾದವಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ನಾನೇ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.   ಬೊಂಬೆನಗರಿ ಚನ್ನಪಟ್ಟಣದಲ್ಲಿ ನಡೆದ ಬಮೂಲ್‌ ಉತ್ಸವದಲ್ಲಿ ಬೃಹತ್‌ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ತರುವ ಉದ್ದೇಶದಿಂದ ಈಗಾಗಲೇ ರಾಜ್ಯಾದ್ಯಂತ 73ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ 15ರಿಂದ 18 ಗಂಟೆಗಳ ಕಾಲ ನಿರಂತರ ಪಂಚರತ್ನ ಯಾತ್ರೆ …

Read More »

ನಿರ್ಮಾಣ ಹಂತದಲ್ಲೇ ಬೆಂಗಳೂರು-ಮೈಸೂರು ದಶಪಥ ಉದ್ಘಾಟನೆ?

ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್‌ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.

Read More »

ಬಿಎಸ್ ವೈ ಬಿಟ್ಟು ಚುನಾವಣೆ ಇಲ್ಲ ಎಂಬ ಸಂದೇಶ ನೀಡಿದರಾ ಮೋದಿ?

ಬೆಂಗಳೂರು: ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೆ ಹೊಗಳಿರುವುದು ಈಗ ರಾಜಕೀಯ ವಲಯದಲ್ಲಿ ಅದರಲ್ಲೂ ಮುಖ್ಯವಾಗಿ ಬಿಜೆಪಿಯಲ್ಲಿ ತೀವ್ರ ಅಚ್ಚರಿಗೆ ಕಾರಣವಾಗಿದೆ.   ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ‌ ಮೋದಿ ಈ ವೇದಿಕೆಯಲ್ಲಿ ಯಡಿಯೂರಪ್ಪ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. ಯಡಿಯೂರಪ್ಪ ಅವರ ರಾಜಕೀಯ ಕರ್ಮಭೂಮಿಯಲ್ಲಿ ಆಡಿದ ಈ ಹೊಗಳಿಕೆಯ ಮಾತುಗಳು ಚುನಾವಣಾ ಹೊತ್ತಿನಲ್ಲಿ ಪ್ರಬಲ ವೀರಶೈವ- …

Read More »