Breaking News
Home / ರಾಜ್ಯ (page 645)

ರಾಜ್ಯ

ನಿರ್ಮಾಣ ಹಂತದಲ್ಲೇ ಬೆಂಗಳೂರು-ಮೈಸೂರು ದಶಪಥ ಉದ್ಘಾಟನೆ?

ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್‌ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.

Read More »

ಬಿಎಸ್ ವೈ ಬಿಟ್ಟು ಚುನಾವಣೆ ಇಲ್ಲ ಎಂಬ ಸಂದೇಶ ನೀಡಿದರಾ ಮೋದಿ?

ಬೆಂಗಳೂರು: ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೆ ಹೊಗಳಿರುವುದು ಈಗ ರಾಜಕೀಯ ವಲಯದಲ್ಲಿ ಅದರಲ್ಲೂ ಮುಖ್ಯವಾಗಿ ಬಿಜೆಪಿಯಲ್ಲಿ ತೀವ್ರ ಅಚ್ಚರಿಗೆ ಕಾರಣವಾಗಿದೆ.   ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ‌ ಮೋದಿ ಈ ವೇದಿಕೆಯಲ್ಲಿ ಯಡಿಯೂರಪ್ಪ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. ಯಡಿಯೂರಪ್ಪ ಅವರ ರಾಜಕೀಯ ಕರ್ಮಭೂಮಿಯಲ್ಲಿ ಆಡಿದ ಈ ಹೊಗಳಿಕೆಯ ಮಾತುಗಳು ಚುನಾವಣಾ ಹೊತ್ತಿನಲ್ಲಿ ಪ್ರಬಲ ವೀರಶೈವ- …

Read More »

ಮೋದಿ- ಶಾ ಚುನಾವಣಾ ಏಜೆಂಟ್ ಗಳಾಗಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ವಿಚಾರದಲ್ಲಿ ಸುಳ್ಳು ಹೇಳಿರುವ ಮೋದಿಯವರು ಜನರ ಕ್ಷಮೆ ಕೇಳಬೇಕು. ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ನಮ್ಮ ರಾಜ್ಯದ ಜನರಿಂದ ದೋಚಿಕೊಂಡ ಸಂಪತ್ತನ್ನು ಪ್ರವಾಹ, ಬರ, ಕೋವಿಡ್ ನಂತಹ ಮಾರಕ ಕಾಯಿಲೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ, ಜನರ ಕಲ್ಯಾಣಕ್ಕೆ ಖರ್ಚು ಮಾಡುವ ಬದಲು ಚುನಾವಣಾ ಪ್ರಚಾರಗಳಿಗೆ ಖರ್ಚು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನಾನು ಮೋದಿಯವರು ರಾಜ್ಯಕ್ಕೆ ಬಂದಾಗಲೆಲ್ಲ ಕರ್ನಾಟಕದ ಜನರಿಂದ …

Read More »

ಹಿರಿಯ ನಾಯಕ ಖರ್ಗೆ ಅವರಿಗೆ ಹೀಗಾಗಬಾರದಿತ್ತು. ; ಬೆಳಗಾವಿಯಲ್ಲಿ ಪ್ರಧಾನಿ ಮೋದಿ

ಬೆಳಗಾವಿ : ಕಾಂಗ್ರೆಸ್ ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆ ರೀತಿ ನಡೆಸಿಕೊಳ್ಳಬಾರದಿತ್ತು..ನಿಮಗೆ ಈಗ ತಿಳಿಯಿತೇ, ಕಾಂಗ್ರೆಸ್ ಪಕ್ಷದ ರಿಮೋಟ್ ಯಾರ ಕೈಯಲ್ಲಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ್ದಾರೆ.   ಪ್ರಧಾನಿ ಮೋದಿ ಅವರು ಬೆಳಗಾವಿ ನಗರದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಸಿ ಮಾತನಾಡಿದರು. ”ನಾನು ಮಲ್ಲಿಕಾರ್ಜುನ ಖರ್ಗೆ …

Read More »

ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರ

ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ …

Read More »

ಯುವ ರಾಜಕುಮಾರ ಮೊದಲ ಸಿನಿಮಾಗೆ ನಾಯಕಿ ಫೈನಲ್ : ಯಾರು ಈ ಲಕ್ಕಿ ಗರ್ಲ್?

ದೊಡ್ಮನೆ ಅಭಿಮಾನಿಗಳ ಪಾಲಿನ ಯುಗಾದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮ ದಿನದಂದೆ ಸೆಟ್ಟೇರಲಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರೋ ಸಂತೋಷ್ ಚಿತ್ರಕ್ಕೆ ಪವರ್ ಫುಲ್ ಟೈಟಲ್ ಫಿಕ್ಸ್ ಮಾಡಿಕೊಂಡಿದ್ದಾರೆ. ಜೊತೆಗೆ ನಾಯಕಿಯನ್ನು ಫಿಕ್ಸ್ ಮಾಡಿಕೊಂಡಿದ್ದಾರೆ. ಸಂತಸದ ವಿಷ್ಯ ಅಂದ್ರೆ ಸಂತೋಷ್ ಆನಂದ್ ರಾಮ್ ನುಡಿದಂತೆ ಕನ್ನಡತಿಯನ್ನೆ ಯುವಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡ್ಕೊಂಡಿದ್ದಾರೆ. ಹಾಗಾದ್ರೆ ಅಣ್ಣಾವ್ರ ಮೊಮ್ಮಗನ ಮೊದಲ ಚಿತ್ರದ ಅವಕಾಶ ಗಿಟ್ಟಿಸಿದ ಆ ಲಕ್ಕಿ ಹುಡುಗಿ …

Read More »

ಪ್ರಧಾನ್‌ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 13ನೇ ಕಂತು ಇಂದು ಬಿಡುಗಡೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ರಾಜ್ಯದ 49,96,924 ರೈತ ಕುಟುಂಬಗಳಿಗೆ ರೂ. 999.38 ಕೋಟಿ ರೂ.ಗಳನ್ನು ಆರ್ಥಿಕ ನೆರವಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತನ್ನು ನೇರವಾಗಿ ಡಿಬಿಟಿ ಮುಖಾಂತರ ಅವರುಗಳ ಖಾತೆಗಳಿಗೆ ಬಿಡುಗಡೆ ಮಾಡುವರು.   ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 2018 ಡಿಸೆಂಬರ್ ನಿಂದ ಅನ್ವಯ ವಾಗುವಂತೆ ಫೆಬ್ರವರಿ 2019 ರಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ …

Read More »

ಪ್ರಧಾನಿ ಮೋದಿಯವರು ಇಂದಿನ ವಿಶ್ವ ಮಾನವ: ಶಿವಮೊಗ್ಗದಲ್ಲಿ ಯಡಿಯೂರಪ್ಪ ಬಣ್ಣನೆ

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರು ಹೇಳಿದ ವಿಶ್ವಮಾನ ತತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಉದಾಹರಣೆ. ಪ್ರಧಾನಿ ಮೋದಿ ಅವರು ಇಂದಿನ ವಿಶ್ವಮಾನವ. ವಸುದೈವ ಕುಟುಂಬಿಕಂ ಆಶಯವನ್ನು ಈಡೇರಿಸುತ್ತಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಸಿದರು.   ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, “ನಿಮ್ಮ ಹುಟ್ಟುಹಬ್ಬದ ದಿನವೇ ವಿಮಾ ನಿಲ್ದಾಣ ಉದ್ಘಾಟನೆ ಮಾಡಬೇಕು. ಅಂದು ನಾನು ಬಂದೇ ಬರುತ್ತೇನೆ ಎಂದು …

Read More »

ಹಡಗಿನಾಳದಲ್ಲಿ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರ ಗುದ್ದಲಿ ಪೂಜೆ

ಗೋಕಾಕ : ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.   ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ ಪ್ರಸರಣ ನಿಗಮದಿಂದ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ಕೆ.ವ್ಹಿ ವಿದ್ಯುತ್ತ್ ಕೇಂದ್ರಕ್ಕೆ …

Read More »

ಬೆಳಗಾವಿಗೆ ಮದುವಣಗಿತ್ತಿಯ ಕಳೆ

ಬೆಳಗಾವಿ: ಕುಂದಾನಗರಿ ಬೆಳಗಾವಿಗೆ ಸೋಮವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಅವರ ಅಭೂತಪೂರ್ವ ಸ್ವಾಗತಕ್ಕೆ ಇಡೀ ಜಿಲ್ಲೆಯ ಜನರು ಕಾತುರದಿಂದ ಕಾಯುತ್ತಿದ್ದಾರೆ. ಕಮಲ ಪಾಳೆಯ ಹಬ್ಬೋಪಾದಿಯಲ್ಲಿ ಎಲ್ಲ ಸಿದ್ಧತೆ ಕೈಗೊಂಡಿದೆ. ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಮದುವಣಗಿತ್ತಿಯ ಕಳೆಬಂದಿದೆ. ಮಧ್ಯಾಹ್ನ 2 ಗಂಟೆಗೆ ನಗರಕ್ಕೆ ಆಗಮಿಸುವ ಪ್ರಧಾನಿ ಅವರು ಇದೇ ಪ್ರಥಮ ಬಾರಿಗೆ ನಗರದಲ್ಲಿ ಆಯೋಜಿಸಲಾಗಿರುವ 10.45 ಕಿ.ಮೀ. ರೋಡ್ ಶೋ ದಲ್ಲಿ ಭಾಗವಹಿಸಿ ಜನರ …

Read More »