Breaking News
Home / ರಾಜ್ಯ (page 659)

ರಾಜ್ಯ

ಜಲ ಜೀವನ ಮಿಷನ್‌ ಕಾಮಗಾರಿಗೆ ₹88.05 ಕೋಟಿ ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ‘ಆರ್‌ಡಿಪಿಆರ್‌ ಇಲಾಖೆಯಿಂದ ಅರಭಾವಿ ಮತಕ್ಷೇತ್ರದ ಜಲ ಜೀವನ್ ಮಿಷನ್‌ (ಜೆಜೆಎಂ) ಕಾಮಗಾರಿಗೆ ₹88.05 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮುನ್ಯಾಳ ತೋಟದಲ್ಲಿ ಜಲ ಜೀವನ ಮಿಷನ್‌ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮದಲಮಟ್ಟಿ, ಶಿವಾಪೂರ, ರಂಗಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ ತೋಟ, ಶಿವಾಪೂರ ತೋಟ, ಡೋಣಿ ತೋಟ, ಸ್ವಾಮಿ ತೋಟ ಮುನ್ಯಾಳ ಗ್ರಾಮದ ಸಾರ್ವಜನಿಕರಿಗೆ ಜೆಜೆಎಂ ಅಡಿಯಲ್ಲಿ …

Read More »

ಬಜೆಟ್ ನಲ್ಲಿ ಬೆಳಗಾವಿಗೆ ಹೇಳಿಕೊಳ್ಳುವ ಕೊಡುಗೆ ಯಾವವು ಇಲ್ಲ, ಹಳೆ ಯೋಜನೆಗಳನ್ನು ಮತ್ತೆ ಹೇಳಿದ ಸಿ ಎಂ..

ಬೆಳಗಾವಿ: ‘ಪ್ರಸಕ್ತ ಬಜೆಟ್‌ನಲ್ಲಿ ಕೂಡ ಬೆಳಗಾವಿ ಜಿಲ್ಲೆಗೆ ಹೇಳಿಕೊಳ್ಳುವಂಥ ಯಾವುದೇ ಕೊಡುಗೆ ನೀಡಿಲ್ಲ. ಹಳೆ ಪ್ರಸ್ತಾವಗಳನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಬಡಬಡಿಸಿದ್ದಾರೆ’ ಎಂದು ಜಿಲ್ಲೆಯ ಮುಖಂಡರು ವಿಶ್ಲೇಷಿಸಿದ್ದಾರೆ.   ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬಜೆಟ್‌ ನಿರಾಶಾದಾಯಕ ಎಂದು ಟೀಕಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹಾಗೂ ವಾಣಿಜ್ಯ ಸಂಘಟನೆಗಳ ಕೆಲ …

Read More »

ಸಂಕೇಶ್ವರ: ಶಿವಾಜಿ ಪ್ರತಿಮೆ ಬೃಹತ್‌ ಮೆರವಣಿಗೆ

ಸಂಕೇಶ್ವರ: ಪಟ್ಟಣದಲ್ಲಿ ಫೆ.19ರಂದು ಅನಾವರಣಗೊಳ್ಳಲಿರುವ ಅಶ್ವಾರೂಢ ಶಿವಾಜಿ ಮಹಾರಾಜರ ಪ್ರತಿಮೆಯ ಬೃಹತ್‌ ಮೆರವಣಿಗೆ ಹಾಗೂ ಶೋಭಾ ಯಾತ್ರೆಯು ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು. ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೋಡ ಪ್ರತಿಮೆಗೆ ಪಟ್ಟಣದ ಶಂಕರಾಚಾರ್ಯರ ಸಂಸ್ಥಾನ ಮಠದ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಭಾರತಿಯ ಸ್ವಾಮೀಜಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು.   ಡೊಳ್ಳು ಕುಣಿತ, ಜಾಂಜ ಪದಕ, ಡೋಲ್ ತಾಶ ಸೇರಿದಂತೆ ಅನೇಕ …

Read More »

‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಬೆಳೆಯುತ್ತದೆ’:ಶಿಂದೊಗಿ ಮುಕ್ತಾನಂದ ಸ್ವಾಮೀಜಿ

ಯರಗಟ್ಟಿ: ‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಪೂಜಾ ಭಾವನೆ ಬೆಳೆಯುತ್ತದೆ’ ಎಂದು ಶಿಂದೊಗಿ ಮುಕ್ತಾನಂದ ಸ್ವಾಮೀಜಿ ಹೇಳಿದರು. ಸಮೀಪದ ರೈನಾಪೂರದಲ್ಲಿ ಗುರುವಾರ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ, ಟ್ರಸ್ಟ್ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಸಾಮೂಹಿ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ನಿವೃತ್ತ ಬಸವೇಶ್ವರ ಪೌಢ ಶಾಲೆ ಮುಖ್ಯ ಶಿಕ್ಷಕ ರಂಗಪ್ಪ ಜೂಗನವರ …

Read More »

ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಸ್ಪರ್ಧೆಗೆ A.A.P.ಸಿದ್ಧತೆ

ನವದೆಹಲಿ: ದೆಹಲಿ, ಪಂಜಾಬ್‌ನಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್‌ ಆದ್ಮಿ ಪಾರ್ಟಿಯು (ಎಎಪಿ), ಗುಜರಾತ್‌ ಹಾಗೂ ಗೋವಾದಲ್ಲಿಯೂ ಖಾತೆ ತೆರೆಯುವ ಮೂಲಕ ತನ್ನ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಶೇ 13ರಷ್ಟು ಮತಗಳನ್ನು ಪಡೆದ ಎಎಪಿ, 5 ಸ್ಥಾನಗಳಲ್ಲಿ ಗೆದ್ದಿದೆ. ಗೋವಾದಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಕಳೆದ ವರ್ಷ ನಡೆದ ಚುನಾವಣೆಗಳಲ್ಲಿ ತನ್ನ ಸಾಧನೆಯನ್ನು ಹೆಚ್ಚಿಸಿಕೊಂಡಿದೆ. ಈಗ, 2023ರಲ್ಲಿ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ …

Read More »

ನದಿಯಲ್ಲಿ ಶವ ಪತ್ತೆ- ಗುಂಡು ಹಾರಿಸಿ ಪರಾರಿಯಾಗಿದ್ದವ ಎಂಬ ಶಂಕೆ

ಹನೂರು: ತಾಲ್ಲೂಕಿನ ಗಡಿ ಭಾಗದ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಈತ ಕಳ್ಳ ಬೇಟೆಗಾರ ಆಗಿರಬಹುದು ಎಂದು ಶಂಕಿಸಲಾಗಿದೆ. ಕಾವೇರಿ ವನ್ಯಧಾಮದ ಗೋಪಿನಾಥಂ ವಲಯದ ಅಡಿಪಾಲರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ತಮಿಳುನಾಡಿನ ನಾಲ್ವರು ಬೇಟೆಗಾರರು ಜಿಂಕೆ ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ‌ ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಅರಣ್ಯ‌ ಇಲಾಖೆ ಅಧಿಕಾರಿಗಳು ಕೂಡ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಒಂದು ನಾಡ ಬಂದೂಕು …

Read More »

ಕಿಸಾನ್​ ಕಾರ್ಡ್​ ಹೊಂದಿರುವ ರೈತರಿಗೆ ಹೆಚ್ಚುವರಿ 10 ಸಾವಿರ ರೂ. ಸಹಾಯಧನ!

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಕೃಷಿಕರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನೇಕ ಕೊಡುಗೆಗಳನ್ನು ನೀಡಿದ್ದು ಈ ವರ್ಷದಿಂದ ರೈತರಿಗೆ ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಹೆಚ್ಚುವರಿ 10 ಸಾವಿರ ರೂ. ಸಹಾಯಧನ ನೀಡುವ ಬಗ್ಗೆ ಘೋಷಿಸಲಾಗಿದೆ.   ಇನ್ನು ಪ್ರಮುಖವಾಗಿ, ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ ಘೋಷಿಸಲಾಗಿದ್ದು ರೈತರಿಗೆ 10 ಸಾವಿರ ಸಹಾಯಧನ ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ. ಇದರಿಂದ, ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲವಾಗಲಿದೆ. ಈ …

Read More »

2 ಗಂಟೆ 35 ನಿಮಿಷ ಬಜೆಟ್​ ಓದಿದ ಸಿಎಂ ಬೊಮ್ಮಾಯಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸರ್ಕಾರದ ಕೊನೆಯ ಹಾಗೂ ಸಿಎಂ ಆಗಿ ಎರಡನೇ ಬಜೆಟ್​ ಮಂಡನೆ ಮಾಡಿದರು. ಕೃಷಿ, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್​ನಲ್ಲಿ ಭರಪೂರ ಅನುದಾನ ಮೀಸಲಿಟ್ಟಿದ್ದಾರೆ.   ಬೆಳಗ್ಗೆ 10.15 ಬೆಜಟ್​ ಮಂಡನೆ ಆರಂಭಿಸಿದ ಸಿಎಂ ಬೊಮ್ಮಾಯಿ ಅವರು ಸುಮಾರು 2.35 ಗಂಟೆ ಬಜೆಟ್​ ಭಾಷಣವನ್ನು ಓದಿದರು. ಬಜೆಟ್​ ಮಂಡನೆ ಮುಗಿದ ಬಳಿಕ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು …

Read More »

ಬಜೆಟ್ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ ಸಿಎಂ!

ಬೆಂಗಳೂರು: ಬಿಜೆಪಿ ಅವಧಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು ಮುಖ್ಯಮಂತ್ರಿ ಬೊಮ್ಮಾಯಿಯ ಎರಡನೇ ಆಯವ್ಯಯ ಮಂಡನೆ ಇದಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇ ಬೇಕು ಎನ್ನುವ ಗುರಿ ಹೊತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಾರಿಯ ಬಜೆಟ್​ ಮೂಲಕವೂ ಎಲ್ಲಾ ವರ್ಗದ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.   ಕೃಷಿ: ಕೃಷಿಕರಿಗೆ ಅನುಕೂಲವಾಗಲಿ ಎಂದು ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯ ಅಡಿಯಲ್ಲಿ ರೈತರಿಗೆ 10 ಸಾವಿರ …

Read More »

ಖೈದಿಗಳ ಜೀವನ ಸುಧಾರಣೆಗೆ ಅಗತ್ಯ ಕ್ರಮ!

ಬೆಂಗಳೂರು: ಬಂದೀಖಾನೆ ಅಭಿವೃದ್ಧಿ ಮಂಡಳಿಯನ್ನು ರಚಿಸಲಾಗಿದ್ದು, ಖೈದಿಗಳ ಜೀವನ ಸುಧಾರಣೆಗೆ ಮತ್ತು ಶಿಕ್ಷೆಯ ಅವಧಿಯ ನಂತರ ಪುನರ್ವಸತಿಗೆ ಸಶಕೀರಣಗೊಳಿಸಲು ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವ ಯೋಜನೆಗಳನ್ನು ರೂಪಿಸಲಾಗಿದೆ. ಖೈದಿಗಳಿಗೆ ನೀಡುವ ಕೂಲಿ ದರಗಳನ್ನು ಕನಿಷ್ಠ ವೇತನ ಕಾಯಿದೆ ಅನ್ವಯ ಹೆಚ್ಚಿಸಲು ಕ್ರಮವಹಿಸಲಾಗಿದ್ದು, ಕಾರಾಗೃಹಗಳ ಆಸ್ಪತ್ರೆಗಳ ನಿರ್ವಹಣೆಯನ್ನು ಸುಧಾರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ವಿಜಯಪುರ, ಬೀದರ್, …

Read More »