ಹಿರೇಬಾಗೇವಾಡಿ: ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಇಲ್ಲಿನ ಪಡಿಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರ ವಿವಿಧ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದರು. ಹಿರೇಬಾಗೇವಾಡಿ ಮಾರ್ಗವಾಗಿ ಧಾರವಾಡಕ್ಕೆ ಹೊಸ ರೈಲು ಮಾರ್ಗ ನಿರ್ಮಾಣ ಕಾರ್ಯದಲ್ಲಿ ಯಾವುದೇ ಅಡೆತಡೆಗಳಿಲ್ಲ. ರೈತರು ಜಮೀನು ನೀಡಲು ಮುಂದಾಗಿದ್ದು, ಅದರಿಂದ ಯಾವುದೇ ರೈತರಿಗೆ ಸಮಸ್ಯೆಗಳಾಗದಂತೆ ಕ್ರಮ ಕೈಗೊಳ್ಳಲಾಗುವುದು. ಭಕ್ತರ ಬೇಡಿಕೆಗನುಸಾರವಾಗಿ …
Read More »ಮನೆ ಹಾನಿಗೆ ತಕ್ಷಣ ಪರಿಹಾರ ಒದಗಿಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೆ ಒಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಬೇಕು. ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಿ ಪರಿಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಸಂಪೂರ್ಣ ಹಾನಿಗೀಡಾದ ಮನೆಗಳ ಮಾಹಿತಿ ಲಭ್ಯವಿದೆ. ಅಂಥ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು. ಈ …
Read More »ಹೆಸರುಕಾಳು ದರ ಕುಸಿತ ರೈತರು ಕಂಗಾಲ
ಬಾಗಲಕೋಟೆ: ಸತತ ಮಳೆ ಸುರಿಯುತ್ತಿರುವುದರಿಂದ ಹೆಸರುಕಾಳಿಗೆ ಹಳದಿ ರೋಗ ಕಾಡುತ್ತಿದ್ದು, ಬೆಲೆ ಕುಸಿದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬೆಂಬಲ ಬೆಲೆ ಘೋಷಿಸಿದ್ದರೂ ಖರೀದಿ ಕೇಂದ್ರಗಳು ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ, ಮಾರುಕಟ್ಟೆಯಲ್ಲಿ ಲಭ್ಯವಿರುವ ಬೆಲೆಗೆ ರೈತರಯ ಹೆಸರುಕಾಳು ಮಾರುವಂತಾಗಿದೆ. ಬಾಗಲಕೋಟೆ, ಗದಗ, ಯಾದಗಿರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆಸರುಕಾಳು ಪ್ರಮುಖ ಬೆಳೆಯಾಗಿದೆ. 2.50 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದೆ. ಬಾಗಲಕೋಟೆ, ಗದಗ, ಯಾದಗಿರಿ, ಹುಬ್ಬಳ್ಳಿ …
Read More »ಇಂದಿನಿಂದ ಗೇಟ್ ಅಳವಡಿಕೆ ಕೆಲಸ ಆರಂಭ,
ಬೆಂಗಳೂರು, ಆಗಸ್ಟ್ 14: ಕೊಪ್ಪಳದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಕಟ್ಟಾಗಿ ಕೊಚ್ಚಿ ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಯಿತು. ಈ ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಇಂದು ಬುಧವಾರದಿಂದ ಜಲಾಶಯಕ್ಕೆಂದೆ ಸಿದ್ದಪಡಿಸಲಾದ ಗೇಟ್‌ಗಳನ್ನು ಅಳವಡಿಸುವ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದರು. ತುಂಗಭದ್ರಾ ಜಲಾಶಯದ ಗೇಟ್ ಕೊಚ್ಚಿ ಹೋದ ಬಳಿಕ ಇತರ ಗೇಟ್‌ಗಳ ಮೇಲೆ …
Read More »ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ
ಬೆಂಗಳೂರು,ಆ.13- ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಹಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ ಸ್ಟೇಟ್ ಆರ್ಗನ್ …
Read More »ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!
ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ! ನವದೆಹಲಿ: ದೆಹಲಿಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಲಾಗಿದೆ. ರೂಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಇಬ್ಬರೂ ನಾಯಕರ ಕಸ್ಟಡಿಯನ್ನು ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್, ಕೆ ಕವಿತಾ ವಿಡಿಯೋ …
Read More »ಸ್ವಾತಂತ್ರೋತ್ಸವ ಸಂಭ್ರಮ : ಕರ್ನಾಟಕದ ಇಬ್ಬರು ವಿದ್ಯಾರ್ಥಿಗಗಳಿಗೆ ಪ್ರಧಾನಿ ಆಹ್ವಾನ
ನವದೆಹಲಿ,ಆ.13- ದೇಶದ 78ನೇಸ್ವಾತಂತ್ರೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳನ್ನು ಪ್ರಧಾನಿ ಕಾರ್ಯಾಲಯ ಅತಿಥಿಗಳನ್ನಾಗಿ ಆಹ್ವಾನಿಸಿದೆ. ಕರ್ನಾಟಕದ ಗದಗ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳಾದ ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಅವರನ್ನು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ. ಕೇಂದ್ರ ಸರ್ಕಾರದ ಮೇರಿ ಮಾಟಿ, ಮೇರಾ ದೇಶ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌ಎಸ್ ಘಟಕ ಯಶಸ್ವಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ, …
Read More »ಬಿಜೆಪಿ ಒಡೆದ ಮನೆಯಾಗಿದೆ.ವಿಜಯೇಂದ್ರ ಟೀಂ ಒಂದು ಕಡೆಯಾದರೆ ಯತ್ನಾಳ್ ರಮೇಶ್ ಜಾರಕಿಹೊಳಿ.ಬಣ ಮತ್ತೊಂದು ಕಡೆ.
ಬೆಂಗಳೂರು,ಆ.13- ಮನೆಯೊಂದು ಮೂರು ಬಾಗಿಲು! ಹೌದು, ಇದು ಸದ್ಯ ರಾಜ್ಯ ಬಿಜೆಪಿಯ ಪರಿಸ್ಥಿತಿ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ಹೋರಾಟದ ಉತ್ಸಾಹ ಕಮಲ ಪಾಳಯದಲ್ಲಿ ಮೇಲ್ನೋಟಕ್ಕೆ ಕಾಣಸಿಕ್ಕರೂ, ಆಂತರಿಕವಾಗಿ ಬಿಜೆಪಿ ಒಡೆದ ಮನೆಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಂ ಒಂದು ಕಡೆಯಾದರೆ, ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಮತ್ತೊಂದು ಕಡೆ. ಇದೆಲ್ಲವನ್ನೂ ಮೀರಿ ಸಂಘ ನಿಷ್ಠ ಅಥವಾ ಹೈಕಮಾಂಡ್ ನಿಷ್ಠ ಬಣ ಮಗದೊಂದು ಕಡೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …
Read More »ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್ ಸ್ಪರ್ಶ ನೀಡಲು ಮುಂದಾದ ಬಿಬಿಎಂಪಿ
ಬೆಂಗಳೂರು,ಆ.13- ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್ ಸ್ಪರ್ಶ ನೀಡಲು ಬಿಬಿಎಂಪಿ ಮುಂದಾಗಿದೆ.ಇನ್ನು ಮುಂದೆ ಟಚ್ ಸ್ಕ್ರೀನ್ ಮೂಲಕ ತಿಂಡಿ ಬುಕ್ಕಿಂಗ್ ಮಾಡಲು ಇಂದಿರಾ ಕ್ಯಾಂಟಿನ್‌ಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ರಾಜರಾಜೇಶ್ವರಿನಗರ ವಲಯದ 11 ಕ್ಯಾಂಟೀನ್‌ಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ. ಸಾಧಕ ಬಾಧಕ ಅಧ್ಯಯನದ ಬಳಿಕ 169 ಇಂದಿರಾ ಕ್ಯಾಂಟೀನ್ ಗೂ ಡಿಜಿಟಲ್ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಎಷ್ಟು ತಿಂಡಿ, ಎಷ್ಟು ಊಟ ಖರ್ಚಾಯ್ತು? ಗುಣಮಟ್ಟ …
Read More »ತುಂಗಭದ್ರಾ ಜಲಾಶಯದಲ್ಲಿ ಲೋಪ: ಯಾರ ಮೇಲೂ ಗೂಬೆ ಕೂರಿಸುವುದಿಲ್ಲ: C.M.
ಕೊಪ್ಪಳ: ತುಂಗಭದ್ರಾ ಮಂಡಳಿ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕವಾಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಜಲಾಶಯ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ಬಸಾಪುರ ಬಳಿ ಏರ್ ಸ್ಟ್ರೀಪ್ ನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ …
Read More »
Laxmi News 24×7