Breaking News

ರಾಜ್ಯ

ನೀರಜ್ ಚೋಪ್ರಾ ಮತ್ತು ಮನು ಭಾಕರ್ ಮದುವೆ?

ಮನು ಭಾಕರ್ ಮತ್ತು ನೀರಜ್ ಚೋಪ್ರಾ ಭಾರತದ ಹೆಮ್ಮೆಯ ಕ್ರೀಡಾಪಟುಗಳು. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮನು ಭಾಕೆರ್ ಎರಡು ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತದ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಕಳೆದ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಬಾರಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಮನು ಭಾಕರ್ ಶೂಟಿಂಗ್‌ನಲ್ಲಿ ಎರಡು ಪದಕ ಗೆದ್ದರೆ, ನೀರಜ್ …

Read More »

ಸಿದ್ದರಾಮೇಶ್ವರ ಅಜ್ಜ ನಿಧನ

ಹರಪನಹಳ್ಳಿ (ವಿಜಯನಗರ ಜಿಲ್ಲೆ): ಬಸವತತ್ವ ಪ್ರಚಾರಕ್ಕೆ ಲೋಕ ಸಂಚಾರ ಕೈಗೊಂಡು ಬಸವ ಕಲ್ಯಾಣದಲ್ಲಿ ನೆಲೆಸಿ, ಸ್ವಗ್ರಾಮ ತಾಲ್ಲೂಕಿನ ಮತ್ತಿಹಳ್ಳಿಗೆ ಮರಳಿದ್ದ ಶತಾಯುಷಿ ಶಿವರಾಮಪ್ಪ(104) ಸೋಮವಾರ ನಿಧನರಾದರು. ಅವರಿಗೆ ಮೂವರು ಪುತ್ರರು ಇದ್ದಾರೆ. 50 ವರ್ಷಗಳ ಹಿಂದೆ ಶಿವರಾಮಪ್ಪ ಅವರು ಬಸವ ತತ್ವ ಪ್ರಚಾರಕ್ಕಾಗಿ ಊರು ತೊರೆದು, ಬಸವಕಲ್ಯಾಣದಲ್ಲಿ ನೆಲೆಸಿ ‘ಸಿದ್ದರಾಮೇಶ್ವರ ಅಜ್ಜ’ ಎಂದು ಪ್ರಸಿದ್ಧಿ ಪಡೆದಿದ್ದರು. ಬಸವಕಲ್ಯಾಣದ ಅನುಭವ ಮಂಟಪದ ಸಂಚಾಲಕರಾಗಿದ್ದರು. ‘ಅಂತ್ಯಕ್ರಿಯೆ ಅವರ ಸ್ವಗ್ರಾಮ ಮತ್ತಿಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 12 …

Read More »

ಕೇಂದ್ರ ನಾಯಕರು ಮಧ್ಯಪ್ರವೇಶಿಸದಿದ್ದರೆ ಪಕ್ಷ ಎರಡಾಗುತ್ತದೆ: ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯ 12 ಜನ ಸಭೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದು ನನಗೆ ಆಘಾತವಾಗಿದೆ. ಇವರು ಸಂಘಟನೆಯಲ್ಲಿದ್ದವರು, ಪಕ್ಷವನ್ನು ಕಟ್ಟಿದ್ದಾರೆ. ಏನೇನು ನೋವು ಅನುಭವಿಸಿದ್ದಾರೆಂದು ಅವರು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆಂದು ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬೆಳಗಾವಿಯ ನಂತರ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅವರು ಪಾದಯಾತ್ರೆ …

Read More »

ಫೇಸ್‌ ಬುಕ್‌ ಗೆಳತಿಯನ್ನು ನಂಬಿ 11 ಲಕ್ಷ ಕಳೆದುಕೊಂಡ ಕಾರ್ಕಳದ ಮಹಿಳೆ

ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್‌ ಬುಕ್‌ ಮೂಲಕ ಮಾರ್ಕ್‌ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ …

Read More »

ಬೆಳಗಾವಿಯಲ್ಲಿ ನಡೆದಿದ್ದು ಬಿಜೆಪಿಯ ಗೌಪ್ಯ ಸಭೆಯಲ್ಲ: ಅರವಿಂದ್ ಬೆಲ್ಲದ್

ಧಾರವಾಡ: ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ ಜಾರಕಿಹೊಳಿ ಹಾಗೂ ಸಿದ್ದೇಶ್ವರ ಅವರು ಗೌಪ್ಯವಾಗಿ ಸಭೆ ಮಾಡಿಲ್ಲ. ಬದಲಾಗಿ ಬಹಿರಂಗವಾಗಿಯೇ ಮಾಡಿದ್ದಾರೆ. ಅದೇನು ಗೌಪ್ಯ ಸಭೆಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ವಿಚಾರದಲ್ಲಿ ಕೆಲವೊಂದಿಷ್ಟು ವಿಚಾರಗಳನ್ನು ಪಕ್ಷದೊಳಗೆ ಚರ್ಚೆ ಮಾಡಬೇಕಿದೆ. ಪಕ್ಷದೊಳಗೆ ಕುಳಿತು ಎಲ್ಲರೂ ಮಾತನಾಡುವ ಅವಶ್ಯಕತೆಯಿದೆ. ಅದನ್ನು ಮಾಧ್ಯಮಗಳ ಮುಂದೆ ಮಾತನಾಡುವುದು ಸರಿಯಲ್ಲ …

Read More »

‘ಚಿಲ್ಲರೆ’ ವಿಚಾರಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಕಂಡಕ್ಟರ್

ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಕಂಡಕ್ಟರ್ ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ. 5 ರೂ ಚಿಲ್ಲರೆ ಕೊಡುವ ವಿಚಾರಕ್ಕೆ ಕಂಡಕ್ಟರ್ ಅಭಿನವ್ ರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆಗಸ್ಟ್ 6 ರಂದು ಅಭಿನವ್ ರಾಜ್ ಮೇಲೆ ಹಲ್ಲೆ ನಡೆದಿತ್ತು, ನಂತರ ಅಭಿನವ್ ಬಿಎಂಟಿಸಿಗೆ …

Read More »

ತುಂಗಭದ್ರಾ ಜಲಾಶಯ ಅವಘಡ | ಹೆಕ್ಟರ್‌ಗೆ ₹ 50 ಸಾವಿರ ಪರಿಹಾರ ನೀಡಿ: ವಿಜಯೇಂದ್ರ

(ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮುರಿದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಇದಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಸೋಮವಾರ ಕೊಚ್ಚಿ‌ ಹೋದ ಗೇಟ್ ಸ್ಥಳ ಪರಿಶೀಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಲಾಶಯದಲ್ಲಿ ಆದ ಲೋಪದ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು. ರೈತರಿಗೆ …

Read More »

ಸತತ ಮಳೆಗೆ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಹಾನಿ

ನವಲಗುಂದ: ಈರುಳ್ಳಿ ಬಿತ್ತಿದ ರೈತರ ಮೊಗದಲ್ಲಿ ಈ ವರ್ಷ ಮಂದಹಾಸ ಮೂಡಿತ್ತು. ಬೆಳೆ ಚನ್ನಾಗಿ ಬರುತ್ತಿದೆ ಎಂದು ಯೋಜಿಸುತ್ತಿದ್ದರು. ಆ ವೇಳೆಗೆ ಮಳೆ ಸುರಿದ ಪರಿಣಾಮ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ಈರುಳ್ಳಿ ಬೆಳಿದಿದ್ದ ರೈತರು ಕಂಗಾಲಾಗಿದ್ದಾರೆ. ಕಳೆದ ಗುರುವಾರ ಸುರಿದ ಮಳೆಗೆ ತಾಲ್ಲೂಕಿನ ಯಮನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರಗೊಪ್ಪ ಹದ್ದಿನಲ್ಲಿರುವ ರೈತನ ಹೊಲದ ಈರುಳ್ಳಿ ಬೆಳೆ ಹೊಲದಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆಹಾನಿಗಿದೆ ಬಿತ್ತಿದ ದುಬಾರಿ ಬೀಜ, …

Read More »

ಜಿಲ್ಲೆಯಲ್ಲಿ ಶ್ವಾಸಕೋಶ ಕ್ಯಾನ್ಸರ್‌ ಪ್ರಮಾಣ ಏರಿಕೆ

ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ವರ್ಷ ದಾಖಲಾದ ಒಟ್ಟೂ ಕ್ಯಾನ್ಸರ್‌ ಪ್ರಕರಣಗಳಲ್ಲಿ ಶ್ವಾಸಕೋಶ ಕ್ಯಾನ್ಸರ್‌ ಪ್ರಕರಣ ಶೇ 5.9 ರಷ್ಟಿದೆ ಎಂಬುದು ಕಿದ್ವಾಯಿ ಸ್ವಾರಕ ಗಂಥಿ ಸಂಸ್ಥೆಯ ಮಾಹಿತಿ. ಅಂತೆಯೇ ಧಾರವಾಡ ಜಿಲ್ಲೆಯಲ್ಲೂ ಶ್ವಾಸಕೋಶ ಕ್ಯಾನ್ಸರ್‌ ಪ್ರಕರಣಗಳು ಏರುಗತಿಯಲ್ಲಿ ಸಾಗಿದೆ ಎಂಬುದನ್ನು ಕಿಮ್ಸ್‌ನ ಕ್ಯಾನ್ಸರ್‌ ಚಿಕಿತ್ಸಾ ವಿಭಾಗ ದೃಢೀಕರಿಸಿದೆ. 10 ವರ್ಷಗಳಲ್ಲಿ ಕಿಮ್ಸ್‌ನಲ್ಲಿ ದಾಖಲಾದ ಶ್ವಾಸಕೋಶ ಕ್ಯಾನ್ಸರ್‌ ರೋಗಿಗಳ ಅಂಕಿ-ಅಂಶ ಗಮನಿಸಿದರೆ, ಕೋವಿಡ್‌ ಅವಧಿಯಲ್ಲಿ ಹೆಚ್ಚು ರೋಗಿಗಳು ಚಿಕಿತ್ಸೆಗೆ ದಾಖಲಾಗಿದ್ದಾರೆ. ಸಾವಿನ …

Read More »

160ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕಾಳಜಿ ಕೇಂದ್ರಗಳಲ್ಲಿ ಆಶ್ರಯ

ಗೋಕಾಕ: ಇಲ್ಲಿನ ಹಳೆ ದನಗಳ ಪೇಟೆ, ದಾಳಂಬ್ರಿ ತೋಟ, ಮಟನ್ ಮಾರ್ಕೆಟ್, ಉಪ್ಪಾರ ಓಣಿ, ಬೋಜಗರ ಓಣಿ, ಕುಂಬಾರ ಓಣಿ, ಡೋರ ಗಲ್ಲಿ ಮುಂತಾದ ಪ್ರದೇಶಗಳ ಪ್ರತಿ ವರ್ಷ ಘಟಪ್ರಭೆ ಪ್ರವಾಹದಲ್ಲಿ ಮುಳುಗುತ್ತವೆ. ಮಹರ್ಷಿ ಭಗಿರಥ ಸರ್ಕಲ್‌ ಅಂತೂ ಮೊದಲ ಮಳೆಗೇ ಜಲಾವೃತವಾಗುತ್ತದೆ. ಮೂರು ತಲೆಮಾರುಗಳಿಂದಲೂ ಜನ ಒಂದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ನೆರೆ ಬಂದಾಗ ಜನಜೀವನ ಮಾತ್ರ ಅಸ್ತವ್ಯಸ್ತ ಆಗುವುದಿಲ್ಲ. ಇಲ್ಲಿನ ಶಾಲೆ- ಕಾಲೇಜು ಮಕ್ಕಳ ಶಿಕ್ಷಣದ ಮೇಲೂ …

Read More »