ಜುಗೂಳ(ಬೆಳಗಾವಿ ಜಿಲ್ಲೆ): ‘ಪ್ರವಾಹದಾಗ ಕೃಷ್ಣಾ ನದಿ ಉಕ್ಕಿ ಹರಿತಿರ್ತೇತಿ. ನೀರಿನ ಸೆಳವಿಗೆ ಸಿಕ್ಕು, ಒಮ್ಮಿಂದೊಮ್ಮೆ ದೋಣಿ ಅಲುಗಾಡಿದಂಗ್ ಆಗ್ತೇತಿ. ಒಂದು ವೇಳೆ ದೋಣಿ ಪಲ್ಟಿ ಆದ್ರ, ಗಂಡ್ಮಕ್ಳು ಹೆಂಗೋ ಈಜ್ಕೊಂತ ದಡ ಸೇರ್ತಿವಿ. ಆದ್ರ ಹೆಣ್ಮಕ್ಳು ಮತ್ತು ವಯಸ್ಸಾದಾವ್ರ ಇದ್ರ, ಅವರ ಕತಿ ಏನ್ರೀ…’ ಕಾಗವಾಡ ತಾಲ್ಲೂಕಿನ ಜುಗೂಳ ಗ್ರಾಮಸ್ಥ ದಯಾನಂದ ಮಿಣಚೆ ಅವರು ಸಂಕಷ್ಟ ತೋಡಿಕೊಂಡಿದ್ದು ಹೀಗೆ. ಜುಗೂಳ ಮತ್ತು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಖಿದ್ರಾಪುರ ಅಕ್ಕಪಕ್ಕದಲ್ಲಿವೆ. ಒಂದು …
Read More »ಅಂಗನವಾಡಿಗೆ ಸ್ನಾತಕೋತ್ತರ ಪದವೀಧರರು: ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು15 ಮಂದಿ ನೇಮಕ
ಬೆಳಗಾವಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಈ ವರ್ಷ 197 ಕಾರ್ಯಕರ್ತೆಯರು ನೇಮಕಗೊಂಡಿದ್ದಾರೆ. ಅವರಲ್ಲಿ 15 ಮಂದಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ 5,656 ಅಂಗನವಾಡಿ ಕೇಂದ್ರಗಳಿವೆ. 1,200ಕ್ಕೂ ಅಧಿಕ ಕೇಂದ್ರಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಜಿಲ್ಲೆಯಲ್ಲಿ 283 ಅಂಗನವಾಡಿ ಕಾರ್ಯಕರ್ತೆಯರ ನೇಮಕಕ್ಕೆ 2023ರ ಜೂನ್‌ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. …
Read More »ಚಿಕ್ಕೋಡಿಯಲ್ಲಿ ಮತ್ತೇ ಪ್ರವಾಹ ಭೀತಿ!
ಚಿಕ್ಕೋಡಿ: ಮಹಾ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದಲ್ಲಿ ಕೃಷ್ಣಾ ,ಉಪ ನದಿಗಳು ಭೋರ್ಗರೆಯುತ್ತಿವೆ. ಮಹಾರಾಷ್ಟ್ರದಲ್ಲಿ ಕೃಷ್ಣಾ ಹಾಗೂ ನದಿಗಳಿಗೆ ನಿರ್ಮಿಸಿದ ಅಣೆಕಟ್ಟೆಗಳು ಭಾಗಶಃ ಭರ್ತಿಯಾಗಿವೆ. ವಾಯುಭಾರ ಕುಸಿತದಿಂದ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮತ್ತೆ ಮಳೆಯಾದಲ್ಲಿ ಉಪ ವಿಭಾಗದ ನದಿ ತೀರದ ಗ್ರಾಮಗಳ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಲಿದೆ. ಮಹಾರಾಷ್ಟ್ರದ ಕೊಂಕಣದಲ್ಲಿ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಮಳೆ ಬೀಳುತ್ತಿದೆ. ಚಿಕ್ಕೋಡಿ …
Read More »ಸಹಕಾರದ ಸೇವೆಯಿಂದ ಆತ್ಮತೃಪ್ತಿ: ನ್ಯಾ ಸುಮಲತಾ ಬೆಣ್ಣಿಕಲ್ಲ
ಸವದತ್ತಿ: ಇಲ್ಲಿನ ನ್ಯಾಯಾಲಯದಲ್ಲಿನ ನ್ಯಾಯಾಧೀಶರು ಹಾಗೂ ವಕೀಲರ ಸಹಕಾರದಿಂದ ಸಲ್ಲಿಸಿದ ಸೇವೆ ಆತ್ಮತೃಪ್ತಿ ತಂದಿದೆ ಎಂದು ಪ್ರಧಾನ ದಿವಾಣಿ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಹೇಳಿದರು. ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಪದೋನ್ನತ್ತಿ ಹೊಂದಿ ವರ್ಗಾವಣೆ ಹೊಂದಿದ ಪ್ರಯುಕ್ತ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾಗರಿಕ ಸೇವೆಯಲ್ಲಿ ಪದೋನ್ನತ್ತಿ, ವರ್ಗಾವಣೆ ಅನಿವಾರ್ಯ. ಆದರೆ ಇಲ್ಲಿನವರೊಂದಿಗಿನ ಭಾಂದವ್ಯ ಅವಿಸ್ಮರಣೀಯ. ಸೇವೆಗೆ ನೇಮಕಗೊಂಡ ಆರಂಭದಲ್ಲಿ ಇಲ್ಲಿನ ಸೌಕರ್ಯಗಳ …
Read More »ಮಹಾತ್ಮರ ಚರಿತ್ರೆ ಕೇಳುವುದರಿಂದ ಪುಣ್ಯ ಪ್ರಾಪ್ತಿ: ಗುರುಸಿದ್ಧೇಶ್ವರ ಸ್ವಾಮೀಜಿ
ರಬಕವಿ ಬನಹಟ್ಟಿ: ‘ಧರ್ಮದ ಮಾರ್ಗಕ್ಕೆ ತೆಗೆದುಕೊಂಡು ಹೋಗುವ, ಮನಸ್ಸಿಗೆ ಶಾಂತಿ ನೀಡುವ, ಮನೋವಿಕಾಸ, ಆತ್ಮವಿಕಾಸದ ಮಾತುಗಳನ್ನು ಕೇಳುವುದು, ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರ ಕುರಿತು ಕೇಳುವುದೇ ಶ‍್ರಾವಣ ಮಾಸದ ಮಹತ್ವ’ ಎಂದು ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಶ್ರಾವಣ ಮಾಸದ ಅಂಗವಾಗಿ ನವಲಗುಂದದ ಅಜಾತ ನಾಗಲಿಂಗ ಶಿವಯೋಗಿಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಾತ್ಮರ ಚರಿತ್ರೆ ಕೇಳುವುದರಿಂದ …
Read More »ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಿ; ಆ.12ಕ್ಕೆ ಮುಧೋಳ ಬಂದ್ ಎಚ್ಚರಿಕೆ
ಮುಧೋಳ (ಬಾಗಲಕೋಟೆ ಜಿಲ್ಲೆ) : ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸದಿದ್ದರೆ ಆಗಸ್ಟ್ 12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವಾಹಕ್ಕೊಳಗಾದ ಸಂತ್ರಸ್ತರು , ರೈತರು ಒಮ್ಮತದ ನಿರ್ಧಾರ ಪ್ರಕಟಿಸಿದರು. ನಗರದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಂತ್ರಸ್ತರು ಹಾಗೂ ರೈತರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ ಪರಿಹಾರಕ್ಕಾಗಿ ಒತ್ತಾಯಿಸಿ ಆ.7ರಂದು …
Read More »ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತ ಯಾದಗಿರಿ ಮೂಲದಕಾರ್ಮಿಕ ಸಾವು
ಬೆಂಗಳೂರು, ಆಗಸ್ಟ್ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೆಂಟ್ರಿಂಗ್ ಹಾಕಿ ಆರ್.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ …
Read More »9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ,
9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ, ಅಂತೂ ಉತ್ತರ ಪ್ರದೇಶ ಪೊಲೀಸರು 9 ಮಹಿಳೆಯರನ್ನು ಕೊಲೆ ಮಾಡಿದ್ದ ಸರಣಿ ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನ ಹುಡುಕಾಟಕ್ಕೆ 22 ಪೊಲೀಸ್ ತಂಡಗಳಿದ್ದವು, 1.5 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಲಾಗಿತ್ತು. 24 ಗಂಟೆಯೂ ಪೊಲೀಸರು ಈ ವಿಚಾರದ ಮೇಲೆ ನಿದ್ದೆಗೆಟ್ಟು ಕೆಲಸ ಮಾಡಿದ್ದರು, ಕೆಲ ಬರೇಲಿ ಜಿಲ್ಲೆಯಲ್ಲಿ 9 ಮಹಿಳೆಯರನ್ನು ಕತ್ತು ಹಿಸುಕಲು ಸೀರೆಗಳನ್ನು ಬಳಸುತ್ತಿದ್ದನು ಸೀರೆಯ ಗಂಟನ್ನು …
Read More »ಗೃಹಲಕ್ಷ್ಮೀ ಯೋಜನೆಯ ಹಣದಿಂದ ವಾಷಿಂಗ್ ಮಷಿನ್ ಖರೀದಿ
ಹಾವೇರಿ, ಆ.10: ಮಹಿಳೆಯರು ಕಾತರದಿಂದ ಕಾಯುತ್ತಿದ್ದ ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) 9 ನೇ ಕಂತು ಬಿಡುಗಡೆಯಾಗಿದ್ದು, ಅದೇ ಹಣದಿಂದ ಗೃಹಿಣಿಯೊಬ್ಬರು ಮನೆಗೆ ವಾಷಿಂಗ್ ಮಷಿನ್ ಖರೀದಿಸಿದ್ದಾರೆ. , ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಬೀಡಂ ಗ್ರಾಮದ ನಿವಾಸಿ ಚಂಪವಾತಿ ಕರೆವ್ವನವರ್ ಎಂಬ ಮಹಿಳೆ, ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಇದೇ ಖುಷಿಯಲ್ಲಿ ಮಾತನಾಡಿದ ಅವರು, ‘ಒತ್ತಡದಿಂದ ಕೆಲಸ ಮಾಡುತ್ತಿದ್ದೆ. ಇದೀಗ ವಾಷಿಂಗ್ ಮಷಿನ್ ಖರೀದಿಯಿಂದ ಕೆಲಸದ ಹೊರೆ …
Read More »ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?
ಶಾರುಖ್ ಖಾನ್ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ನಟಿಯರು ಕಣ್ಣು ಮುಚ್ಚಿಕೊಂಡು ಒಪ್ಪಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಇದೆ ಶಾರುಖ್ ಹವಾ. ಆದರೆ ನಟಿ ರವೀನಾ ಟಂಡನ್ ಅವರು ಈ ಮೊದಲು ಶಾರುಖ್ ಖಾನ್ ಜೊತೆಗಿನ ಒಂದು ಸಿನಿಮಾವನ್ನು ತಿರಸ್ಕರಿಸಿದ್ದರು. ಆ ಕುರಿತು ಅವರು ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಶಾರುಖ್ ಖಾನ್ ಮತ್ತು ರವೀನಾ ಟಂಡನ್ ಅವರು ಜೊತೆಯಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಒಂದು ಸಿನಿಮಾದಿಂದ ರವೀನಾ ಟಂಡನ್ ಅವರು …
Read More »
Laxmi News 24×7